ಕರಾವಳಿ

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರೆಡ್ಮಿ ಮೊಬೈಲ್ ಸ್ಪೋಟ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 20. ಇಲ್ಲಿನ ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ‘ರೆಡ್ಮಿ ಆಂಡ್ರಾಯ್ಡ್’ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೊಬೈಲ್ಸ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ ಮಾಲಕ […]

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರೆಡ್ಮಿ ಮೊಬೈಲ್ ಸ್ಪೋಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಇದೀಗ ಕಡಬದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿನಿ ಮನೆಗೆ ಬಾರದೆ ಕಾಣೆಯಾಗಿದ್ದಳು. ಈ ಕುರಿತಂತೆ ಆಕೆಯ ಚಿಕ್ಕಮ್ಮ ವಿಟ್ಲ ಠಾಣೆಗೆ ನೀಡಿದ ದೂರಿನನ್ವಯ ವಿಟ್ಲ ಪೋಲೀಸರ ತಂಡವು ವಿದ್ಯಾರ್ಥಿನಿಯನ್ನು ಕಡಬದಲ್ಲಿ ಪತ್ತೆ ಹಚ್ಚಿ ಸುರಕ್ಷಿತವಾಗಿ ಮನೆಯವರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮೂಲತಃ ಕಡಬ ನಿವಾಸಿಯಾಗಿರುವ ಈಕೆ ವಿದ್ಯಾಭ್ಯಾಸಕ್ಕಾಗಿ ತನ್ನ ಚಿಕ್ಕಮನ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿರುವ ಈಕೆ

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಭಜರಂಗದಳ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ..!!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಾನುವಾರದಂದು ಸಾಲೆತ್ತೂರಿನಲ್ಲಿ ನಡೆದಿದೆ.     ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12 ಜನರ ತಂಡವು ಚಂದ್ರಹಾಸ್ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ವಿಟ್ಲ: ಭಜರಂಗದಳ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಬಕಾರಿ ಡಿವೈಎಸ್ಪಿಯಾಗಿ ಗಾಯತ್ರಿ ಸಿ.ಹೆಚ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 19. ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಗಾಯತ್ರಿ ಸಿ.ಎಚ್.ರವರು ಅಬಕಾರಿ ಇಲಾಖೆಯ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಬಾಳೆಕಲ್ಲು ಮನೆತನದ ರಾಮಣ್ಣ ಪೂಜಾರಿ ಮತ್ತು ರತ್ನಾವತಿ ದಂಪತಿಯ ಪುತ್ರಿಯಾಗಿರುವ ಇವರು, ಮಂಗಳೂರಿನ ಬೆಸೆಂಟ್ ಕಾಲೇಜಿನಲ್ಲಿ‌ ಬಿಎ ಪದವಿ ಪಡೆದು ಬಳಿಕ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ LLB ಪದವಿ ಪಡೆದಿದ್ದರು. ನಂತರ ಸಕಲೇಶಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಇವರು, ಕೆಎಎಸ್ ಪರೀಕ್ಷೆಯಲ್ಲಿ

ಅಬಕಾರಿ ಡಿವೈಎಸ್ಪಿಯಾಗಿ ಗಾಯತ್ರಿ ಸಿ.ಹೆಚ್ ನೇಮಕ Read More »

ಕರಾವಳಿ, ಕರ್ನಾಟಕ

ಪುತ್ತೂರು ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ➤ ಆನೆದಂತ ಸಹಿತ 6 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 19. ಅರಣ್ಯ ಇಲಾಖೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ವಲಯದಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಬಂಧಿಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ಮಹಾವೀರ ಆಸ್ಪತ್ರೆಗೆ ತಿರುಗುವ ಜಂಕ್ಷನ್ ಬಳಿ ನಡೆದಿದೆ.   ಬಂಧಿತ ಆರೋಪಿಗಳನ್ನು ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ ಕುಮಾರ್ ಹಾಗೂ ರತೀಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ಆನೆ ದಂತ ಮತ್ತು ಒಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು

ಪುತ್ತೂರು ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ➤ ಆನೆದಂತ ಸಹಿತ 6 ಮಂದಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19. ಉಜಿರೆ ಪಿಯು ಕಾಲೇಜು ಹಿಂಭಾಗದಲ್ಲಿರುವ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ.   ಶ್ರೀ ದುರ್ಗಾ ನಿಲಯ ಎಂದು ಹೆಸರಿರುವ ಮನೆಯ ಬಾವಿಯೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಆದರೆ ಈ ಮನೆಯವರು ಮೈಸೂರಿನಲ್ಲಿ ವಾಸವಾಗಿದ್ದ ಹಿನ್ನೆಲೆ ಮನೆಗೆ ಬೀಗ ಹಾಕಲಾಗಿತ್ತು. ವಾರದ ಹಿಂದೆ ಮನೆಯವರು ಬಂದಾಗ ಬಾವಿಯನ್ನು ಗಮನಿಸಿದ್ದು, ಆದರೆ ಇವರು ಮೃತದೇಹದ ತಲೆಯನ್ನು ತೆಂಗಿನಕಾಯಿ ಎಂದುಕೊಂಡು ವಾಪಾಸ್ ಆಗಿದ್ದರು ಎನ್ನಲಾಗಿದೆ.

ಬೆಳ್ತಂಗಡಿ: ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಶೈಲಜಾ ಅಮರನಾಥ್ ಮನೆಗೆ ಯುವಕರ ತಂಡ ದಾಳಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 18. ಕಾಂಗ್ರೆಸ್‌ ಐಟಿ ಸೆಲ್‌ ಕಾಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥರವರ ಬಪ್ಪಳಿಗೆಯ ಮನೆಗೆ ಯುವಕರ ತಂಡವೊಂದು ದಾಳಿ ನಡೆಸಿದ ಘಟನೆ ಶನಿವಾರದಂದು ಸಂಜೆ ನಡೆದಿದೆ. ಶೈಲಜಾ ರವರು ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ ನಲ್ಲಿ ನಡೆದ ಚರ್ಚಾಕೂಟವೊಂದರಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್‌, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಇದರ

ಪುತ್ತೂರು: ಶೈಲಜಾ ಅಮರನಾಥ್ ಮನೆಗೆ ಯುವಕರ ತಂಡ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ- ಟಿಪ್ಪರ್ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 18. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಪೆರ್ನೆಯಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಪುತ್ತೂರು ಹಾರಾಡಿಯಲ್ಲಿನ ಪ್ರಜ್ವಲ್ ಸ್ಟೋರ್ಸ್ ನ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಅವರ ಪತ್ನಿ ಪೂರ್ಣಿಮಾ(47) ಎಂದು ಗುರುತಿಸಲಾಗಿದೆ. ದಂಪತಿಗಳು ಇಂದು ಬೆಳಗ್ಗೆ ಪೆರ್ನೆಯಲ್ಲಿರುವ ತಮ್ಮ ತೋಟಕ್ಕೆ ತೆರಳಿ, ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಟಿಪ್ಪರ್ ವೊಂದು ಟಿಪ್ಪರ್ ಡಿಕ್ಕಿಯಾಗಿದೆ. ಡಿಕ್ಕಿಯ

ದ್ವಿಚಕ್ರ ವಾಹನ- ಟಿಪ್ಪರ್ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡದಿಂದ ವ್ಯಕ್ತಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 18. ವ್ಯಕ್ತಿಯೋರ್ವನನ್ನು ತಂಡವೊಂದು ಕಾರಿನಲ್ಲಿ ಕರೆದೊಯ್ದು ತೀವ್ರ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೊಕ್ಕಡ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೂ.17 ಶುಕ್ರವಾರದಂದು ಸಂಜೆ ಬೋಳ ಪರಿಸರದ ಮೂರು ಮಂದಿ ತನ್ನನ್ನು ಕಾರಿನಲ್ಲಿ ಬರುವಂತೆ ಒತ್ತಾಯಿಸಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಮೊಬೈಲ್‌ ಫೋನ್ ಒಡೆದು ಹಾಕಿರುವುದಾಗಿ ಹಲ್ಲೆಗೊಳಗಾದ ಸಮೀರ್ ಆರೋಪಿಸಿದ್ದಾರೆ.

ಕೊಕ್ಕಡ: ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡದಿಂದ ವ್ಯಕ್ತಿಗೆ ಹಲ್ಲೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಹಿತ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಖಾಸಗಿ ಆಸ್ಪತ್ರೆಯಲ್ಲಿನ ಬ್ಯಾಟರಿ ಕದ್ದೊಯ್ದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.   ಇಲ್ಲಿನ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಗೆ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಬಂದು ಕದ್ದೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಸ್ಪತ್ರೆಯಲ್ಲಿ ಕರೆಂಟ್ ಹೋದ ಸಂದರ್ಭ ಜನರೇಟರ್ ಚಾಲು ಆಗದೇ ಇದ್ದು, ಪರಿಶೀಲನೆ ನಡೆಸಿದಾಗ ಬ್ಯಾಟರಿ ಕಳವಾದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪುತ್ತೂರು ಠಾಣೆಯಲ್ಲಿ ಪ್ರಕರಣ

ಪುತ್ತೂರು: ಹಿತ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ
Scroll to Top