ಕರಾವಳಿ

ತೆಂಗಿನ ಸಿಪ್ಪೆಯಲ್ಲಿದ್ದ ಹಾವು ಕಚ್ಚಿ ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 04. ಹಾವು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕುಕ್ಕಾಜೆ ನಿವಾಸಿ ಕೆ.ಗಿರಿಯಪ್ಪ ಪೂಜಾರಿ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯ ಹಿಂಬದಿಯಲ್ಲಿದ್ದ ಶೆಡ್ ನಲ್ಲಿ ತೆಂಗಿನ ಸಿಪ್ಪೆ ತುಂಬಿಸಿಟ್ಟಿದ್ದ ಗೋಣಿಚೀಲಕ್ಕೆ ಕೈಹಾಕಿದ್ದರು. ಈ ಸಂದರ್ಭ ವಾರಿಜರವರು ಎಡಕೈಯ ಹೆಬ್ಬೆರಳಿನ ಹತ್ತಿರ ಯಾವುದೋ ಹಾವು ಕಚ್ಚಿದೆ ಎಂದು ಜೋರಾಗಿ ಕಿರುಚಾಡಿದ್ದು ತಕ್ಷಣ ಅವರ […]

ತೆಂಗಿನ ಸಿಪ್ಪೆಯಲ್ಲಿದ್ದ ಹಾವು ಕಚ್ಚಿ ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ರೆಡ್ ಮಿ ಮೊಬೈಲ್ ಸ್ಫೋಟ ➤ ಅದೃಷ್ಟವಶಾತ್ ಪಾರಾದ ಯುವತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 03. ಇಲ್ಲಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ಮೊಬೈಲ್ ಸ್ಫೋಟಗೊಂಡು ಯುವತಿ ಅದೃಷ್ಟವಶಾತ್ ಪಾರಾದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಇಲ್ಲಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯು ಎರಡು ವರ್ಷದ ಹಿಂದೆ ಆನ್ ಲೈನ್ ನಲ್ಲಿ ರೆಡ್ ಮಿ ನೋಟ್ 8 ಮೊಬೈಲ್ ಖರೀದಿಸಿದ್ದರು. ಎರಡು ದಿನಗಳ ಹಿಂದೆ ಮೊಬೈಲ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅದನ್ನು ಮೊಬೈಲ್ ಶಾಪ್ ಒಂದರಲ್ಲಿ ರಿಪೇರಿ ಮಾಡಿಸಿಕೊಂಡಿದ್ದರು. ಗುರುವಾರದಂದು ಮಧ್ಯಾಹ್ನ ಯುವತಿಯು ಹೋಟೆಲ್ ಗೆ ಊಟಕ್ಕೆಂದು

ಬೆಳ್ಳಾರೆ: ರೆಡ್ ಮಿ ಮೊಬೈಲ್ ಸ್ಫೋಟ ➤ ಅದೃಷ್ಟವಶಾತ್ ಪಾರಾದ ಯುವತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಹಿಂದೂ ವ್ಯಕ್ತಿಯ ಮನೆಯಲ್ಲಿ ಮುಸ್ಲಿಂ ಮಹಿಳೆ..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 03. ಕೊಡಿಪ್ಪಾಡಿ ಸಮೀಪವಿರುವ ಹಿಂದೂ ವ್ಯಕ್ತಿಗೆ ಸೇರಿದ ಮನೆಯೊಂದರಲ್ಲಿ ಮುಸ್ಲಿಂ ಮಹಿಳೆಯಿರುವ ಮಾಹಿತಿ ಹರಿದಾಡುತ್ತಿದ್ದಂತೆ ಘಟನಾ ಸ್ಥಳದಲ್ಲಿ ಎರಡೂ ಕೋಮಿನವರು ಜಮಾಯಿಸಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಆದರೆ ಪೊಲೀಸ್ ಇಲಾಖೆ ಅಂತಹ ಘಟನೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಆಟೋ ಚಾಲಕರೋರ್ವರು ಮನೆಯ ಎದುರಿನಿಂದ ಬೀಗ ಹಾಕಿ ಹಿಂಬಾಗಿಲ ಮೂಲಕ ಮನೆಯಲ್ಲಿ ಮುಸ್ಲಿಂ ಮಹಿಳೆಯನ್ನು ಇರಿಸಿಕೊಂಡಿದ್ದಾರೆಂದು ಸುದ್ದಿ ಹರಿದಾಡುತ್ತು. ಮನೆಯ ಮುಂದೆ ನೂರಾರು ಜನ ಜಮಾಯಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ

ಪುತ್ತೂರು: ಹಿಂದೂ ವ್ಯಕ್ತಿಯ ಮನೆಯಲ್ಲಿ ಮುಸ್ಲಿಂ ಮಹಿಳೆ..!! Read More »

ಕರಾವಳಿ, ಕರ್ನಾಟಕ

ಕಡಬ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನ ➤ ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲಕ್ಕೆತ್ತಿದ ಅಗ್ನಿಶಾಮಕ ದಳ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಬಾವಿಗೆ ಬಿದ್ದ ದನವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮೇಲಕ್ಕೆತ್ತಿ ಬದುಕಿಸಿದ ಘಟನೆ ಕಡಬ ಸಮೀಪದ ಮರ್ಧಾಳ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮರ್ಧಾಳ ಶಿವಾಜಿನಗರ ನಿವಾಸಿ ಹೈದರ್ ಕೊಹಿನೂರ್ ಎಂಬವರ ಮನೆ ಸಮೀಪದ ಬಾವಿಗೆ ಖತೀಜಮ್ಮ ಎಂಬವರ ದನ ಬಿದ್ದಿದ್ದು, ವಿಷಯ ತಿಳಿದ ಸ್ಥಳೀಯರು ದನವನ್ನು ಮೇಲೆತ್ತಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಪುತ್ತೂರಿನಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಿದ್ದಾರೆ‌.

ಕಡಬ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನ ➤ ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲಕ್ಕೆತ್ತಿದ ಅಗ್ನಿಶಾಮಕ ದಳ Read More »

ಕರಾವಳಿ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 03. ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಪ್ರಥಮವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1 ರಂದು ಎಲ್ ಕೆ ಜಿ ತರಗತಿ ಉದ್ಘಾಟನೆಗೊಂಡಿತು. ಎಲ್ ಕೆಜಿ ತರಗತಿ ಕೊಠಡಿಯನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ಯು.ಕೆ.ಶೀತಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಉಳುವಾರು ವಹಿಸಿದರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸೌತಡ್ಕ ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ➤ ಆರೋಪಿ ಮಹಿಳೆ ಅಂದರ್..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಶ್ರೀಕ್ಷೇತ್ರ ಸೌತಡ್ಕ ದೇವಸ್ಥಾನಕ್ಕೆ ದೇವರ ದರ್ಶನಕ್ಕೆಂದು ಬಂದಿದ್ದ ಮಹಿಳೆಯೋರ್ವರ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಕೆಯಿಂದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಗದಗ ಬೆಟಗೇರಿ ನಿವಾಸಿ ಭೀಮವ್ವ ಯಾನೆ ನಾಗಮ್ಮ (63) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶ್ರೀಕ್ಷೇತ್ರ ಸೌತಡ್ಕಕ್ಕೆ ದೇವರ ದರ್ಶನ ಪಡೆಯಲು ಕುಟುಂಬ ಸಮೇತರಾಗಿ ಬಂದ ಬೆಳ್ತಂಗಡಿ ಮೂಲದ ಮುಂಬೈ ನಿವಾಸಿ ಬಾಲಚಂದ್ರ ಡಿ ಎಂಬವರು

ಸೌತಡ್ಕ ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ➤ ಆರೋಪಿ ಮಹಿಳೆ ಅಂದರ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ➤ ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 03. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳ ಪೈಕಿ ಓರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ಬೋಳಂತೂರು ಗ್ರಾಮದ ನಾರ್ಶ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಅಬೂಬಕ್ಕರ್ ಬಿ, ನಾರ್ಶ ನಿವಾಸಿ ಹಮೀದ್ ನಾರ್ಶ ಎಂದು ಗುರುತಿಸಲಾಗಿದೆ. ವಿಟ್ಲ ಹೋಬಳಿಯ ಬೋಳಂತೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿ ನಾರ್ಶದಿಂದ ಬೋಳಂತೂರು ಕಡೆಗೆ ಲಾರಿಯಲ್ಲಿ ಅಕ್ಕಿ ಸಾಗಿಸುತ್ತಿದ್ದ ಮಾಹಿತಿ

ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ➤ ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹಿಜಾಬ್ ವಿಚಾರದಲ್ಲಿ ವರದಿಗೆ ತೆರಳಿದ್ದ ಪತ್ರಕರ್ತನಿಗೆ ದಿಗ್ಬಂಧನ ಆರೋಪ ➤ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು.02. ಹಿಜಾಬ್ ವಿಚಾರದಲ್ಲಿ ವರದಿಗೆಂದು ತೆರಳಿದ್ದ ಪತ್ರಕರ್ತರೋರ್ವರನ್ನು ಕೂಡಿ ಹಾಕಿ ವೀಡಿಯೋ ಡಿಲೀಟ್ ಮಾಡಿಸಿದ್ದ ಆರೋಪದಲ್ಲಿ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪುತ್ತೂರು ಡಿವೈಎಸ್ಪಿ ಗಾನ ಪಿ. ಕುಮಾರ್ ಮೂಲಕ ದ.ಕ. ಜಿಲ್ಲಾ ಎಸ್ಪಿಯವರಿಗೆ ಹಾಗೂ ಕಡಬ ತಹಶಿಲ್ದಾರ್ ಅನಂತ ಶಂಕರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ

ಉಪ್ಪಿನಂಗಡಿ: ಹಿಜಾಬ್ ವಿಚಾರದಲ್ಲಿ ವರದಿಗೆ ತೆರಳಿದ್ದ ಪತ್ರಕರ್ತನಿಗೆ ದಿಗ್ಬಂಧನ ಆರೋಪ ➤ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ Read More »

ಕರಾವಳಿ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಕಿಡ್ನಿ ಫೈಲ್ಯೂರ್ ➤ ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮೇ. 31. ಎರಡೂ ಕಿಡ್ನಿ ವಿಫಲಗೊಂಡಿದ್ದ ಯುವತಿಯೋರ್ವಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿ ತಲುಪುತ್ತಿದ್ದಂತೆಯೇ ದಾರಿ ಮಧ್ಯೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳು ತೇಜಸ್ವಿನಿ(15) ಎಂದು ಗುರುತಿಸಲಾಗಿದೆ. ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಗೆ ಡಯಾಲಿಸಿಸ್ ನಡೆಸಲಾಗುತ್ತಿದ್ದು ಅಲ್ಲದೇ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಕಿಡ್ನಿ ಫೈಲ್ಯೂರ್ ➤ ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 31. ರವಿವಾರದಂದು ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ಹಿನ್ನೆಲೆ ಕುಟುಂಬದ ಅನುಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆಯು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದೆ. ಚೆನ್ನೈನ ತಂಡವು ಖಾಸಗಿ ವಿಮಾನ್ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top