ಕರಾವಳಿ

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ!

(ನ್ಯೂಸ್‌ ಕಡಬ) newskadaba.com, ಜೂ.04: ಹೆತ್ತ ತಾಯಿಯನ್ನೇ ಕಾಡಿನಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಪುತ್ರ ಕಾಡಿನ ಮಧ್ಯೆ ಬಿಟ್ಟು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ಸಮಯೋಚಿತ ನೆರವಿನಿಂದ ಮಹಿಳೆ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಗೋಕಾಕ್ ಮೂಲದ ಸಂತೋಷ್ ಕಟ್ಟಿ ಎಂಬಾತ ಜೂನ್ 2ರಂದು ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ಅರಣ್ಯ ಪ್ರದೇಶಕ್ಕೆ ತನ್ನ ತಾಯಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅಲ್ಲಿಯೇ ಬಿಟ್ಟು ಬಂದಿದ್ದಾನೆ […]

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.04: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜೂ. 04. ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ Read More »

ಕರಾವಳಿ

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಸ್ವಾಯತ್ತತೆ), ಮಂಗಳೂರು ಇಲ್ಲಿ 2026-27ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ ಸೇವೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ  ವರ್ಕಿಂಗ್ ಪ್ರೊಫೆಶನಲ್ಸ್  ಡಿಪ್ಲೊಮಾ ಕೋರ್ಸ್‍ಗಳಿಗೆ

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ Read More »

ಕರಾವಳಿ

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ

(ನ್ಯೂಸ್‌ ಕಡಬ) newskadaba.com ಜೂ. 03. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.   ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ ಪಡೆದಿರುವ ಬಂದೂಕು ಪರವಾನಗಿಯ ನವೀಕರಣ ಅರ್ಜಿಗಳನ್ನು ಕಠಿಣ ನಿಯಮಗಳ ನೆಪವೊಡ್ಡಿ ಅಧಿಕಾರಿಗಳು ವ್ಯವಸ್ಥಿತವಾಗಿ ತಿರಸ್ಕರಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.  ಇದರಿಂದ ಕೃಷಿಕರು ಅದರಲ್ಲೂ ಕಾಡಿನಂಚಿನಲ್ಲಿರುವವರು  ನಾನಾ ರೀತಿಯ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆ ವಾಡಿಕೆಯಂತೆ, ಈ ಬೆಳೆ ರಕ್ಷಣಾ ಪರವಾನಗಿಗಳನ್ನು ವಾರ್ಷಿಕ ನವೀಕರಣ ಪ್ರಕ್ರಿಯೆಗೆ ಒಳಪಡಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಂದೂಕು ನವೀಕರಣ ಪ್ರಕ್ರಿಯೆಗಳಿಗೆ ತಡೆಯೊಡ್ಡುತ್ತಿರುವುದು ರೈತರನ್ನು ಅಸಹಾಯಕರನ್ನಾಗಿಸುತ್ತಿದೆ.  ಹೀಗಾಗಿ ಈ ಸಮಸ್ಯೆಗೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಸಂಸದರು ಪತ್ರದಲ್ಲಿ ಒತ್ತಾಯಿಸಿದ್ದಾರೆ.   ನಮ್ಮ ಭಾಗದ ರೈತರು ಕಷ್ಟಪಟ್ಟು ದುಡಿದ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಹಲವು ದಶಕಗಳಿಂದ ಈ ಕೋವಿ ಪರವಾನಗಿ ಸೌಲಭ್ಯವನ್ನು ಅವಲಂಬಿಸಿದ್ದು, ಕಳೆದೊಂದು ವರ್ಷದಲ್ಲಿ ’ಕೃಷಿ ಭೂಮಿಗೆ ವನ್ಯಜೀವಿಗಳು ನುಗ್ಗಿಲ್ಲ ಅಥವಾ ಹಾನಿ ಮಾಡಿಲ್ಲ’ ಎಂಬ  ಕಾರಣ ನೀಡಿ ನೊಂದ ರೈತರ ಅರ್ಜಿಗಳನ್ನುತಿರಸ್ಕರಿಸಲಾಗುತ್ತಿರುವ ಬಗ್ಗೆ ಸಂತ್ರಸ್ತರು ನನ್ನ ಗಮನಕ್ಕೆ ತಂದಿದ್ದಾರೆ. ಆದರೆ, ರೈತರ ಬಳಿ ಪರವಾನಗಿ ಹೊಂದಿದ ಬಂದೂಕು ಇರುವುದೇ ವನ್ಯಜೀವಿಗಳು ಕೃಷಿ ಭೂಮಿಗೆ ನುಗ್ಗದಂತೆ ತಡೆಯುವ ಪ್ರಮುಖ ಪ್ರತಿಬಂಧಕ ಶಕ್ತಿಯಾಗಿರುತ್ತದೆ. ಕಾಡುಪ್ರಾಣಿಗಳ ದಾಳಿಯು ತೀರಾ ಅನಿರೀಕ್ಷಿತವಾಗಿದ್ದು, ಅದನ್ನು ಮುಂಚಿತವಾಗಿ ಊಹಿಸುವುದು ಅಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ಬಂದೂಕು ಪರವಾನಗಿ ಇಲ್ಲದೆ ರೈತನು ಅಸಹಾಯಕನಾಗಿ ಕೈಕಟ್ಟಿ ಕುಳಿತರೆ, ಕಣ್ಣೆದುರೇ ಇಡೀ ಕೃಷಿ ನಾಶವಾಗಿ ಆತನ ಜೀವನೋಪಾಯವೇ ಬೀದಿಗೆ ಬೀಳುವ ಆತಂಕ ಎದುರಾಗುತ್ತದೆ ಎಂಬುವುದನ್ನು ಪತ್ರದಲ್ಲಿ ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿದ್ದಾರೆ.   ಕಾನೂನು ಪಾಲಿಸುವ ಮತ್ತು ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ಕೃಷಿಕರು ಕೇವಲ ತಮ್ಮ ಆತ್ಮರಕ್ಷಣೆ ಹಾಗೂ ಬೆಳೆ ರಕ್ಷಣೆಗಾಗಿ ಮಾತ್ರ ಬಂದೂಕು ಹೊಂದಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಿರುವಾಗ ರೈತರ ಮೇಲೆ ಕಠಿಣ ನಿಬಂಧನೆಗಳನ್ನು ಹೇರದೆ, ಜಿಲ್ಲಾಡಳಿತವು ವಾಸ್ತವಿಕ ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಠಿಣ ನಿಯಮಗಳನ್ನು ಮರುಪರಿಶೀಲಿಸುವ ಜೊತೆಗೆ ಸರಳೀಕೃತಗೊಳಿಸಬೇಕು.  ಗನ್ ಲೈಸನ್ಸ್ ನಿಯಮಗಳನ್ನು ಪಾಲಿಸುತ್ತಿರುವ ಅರ್ಹ ರೈತರ ಅರ್ಜಿಗಳನ್ನು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ನವೀಕರಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಆದೇಶಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿಗಳನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಜೊತೆಗೆ ರೈತರ ಈ ಗಂಭೀರ ಸಮಸ್ಯೆಯನ್ನ ಡಿಜಿಪಿ, ಪಶ್ಚಿಮ ವಲಯ ಐಜಿಪಿ, ದ.ಕ. ಎಸ್ಪಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ಗಮನಕ್ಕೂ ತಂದಿದ್ದಾರೆ.

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ Read More »

ಕರಾವಳಿ

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯುಟಿ ಖಾದರ್, ಕೆಜೆ ಜಾರ್ಜ್ ಸೇರಿದಂತೆ 14 ಮಂದಿ ಪ್ರಮಾಣವಚನ

(ನ್ಯೂಸ್‌ ಕಡಬ) newskadaba.com,  ಜೂ.03: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ  14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಪ್ರಮುಖ ರಾಜಕೀಯ ಕಾರ್ಯಕ್ರಮಕ್ಕಾಗಿ ಬರುವ ನಿರೀಕ್ಷೆಯಿರುವ ಲೋಕ ಭವನದಲ್ಲಿ ನಿಗದಿಯಾಗಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಈ ಅನುಮೋದನೆಗಳು

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯುಟಿ ಖಾದರ್, ಕೆಜೆ ಜಾರ್ಜ್ ಸೇರಿದಂತೆ 14 ಮಂದಿ ಪ್ರಮಾಣವಚನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ!

(ನ್ಯೂಸ್‌ ಕಡಬ) newskadaba.com,  ಜೂ.03 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

(ನ್ಯೂಸ್‌ ಕಡಬ) newskadaba.com,  ಜೂ.03 ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ನೇಮಕ ಮಾಡಿದೆ. CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ. ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್‌ ಪ್ರಮೋಷನ್ ನೀಡಿದೆ.

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಜೂ.03 ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಲೋಕಭವನಕ್ಕೆ ತೆರಳಿ ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾದ ಯು.ಟಿ. ಖಾದರ್, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸ್ಪೀಕರ್ ಆಗಿ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಟ್ರಯಲ್ ರನ್ ದಿಢೀರ್ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಇಂದು ಅದ್ದೂರಿಯಾಗಿ ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದ್ದು, ಈ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೇ ವಲಯವು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿದೆ. ಕಳೆದ ವಾರವಷ್ಟೇ ರೈಲ್ವೇ ಹಿರಿಯ ಅಧಿಕಾರಿಗಳು ವಂದೇ ಭಾರತ್ ರೈಲು ಸಂಚಾರದ ಕುರಿತು ಅಧಿಕೃತ ಪ್ರಸ್ತಾವನೆ ಸಿದ್ಧಪಡಿಸಿರುವ ಮಾಹಿತಿ ಹೊರಬಿದ್ದಿತ್ತು. ಈ ಪ್ರಾಯೋಗಿಕ ಓಡಾಟದ ಸುದ್ದಿ ಕೇಳಿ ಕರಾವಳಿ ಪ್ರಯಾಣಿಕರು ಸಂತಸಗೊಂಡಿದ್ದರು. ಆದರೆ, ಈಗ ದಿಢೀರನೆ

ಇಂದು ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಟ್ರಯಲ್ ರನ್ ದಿಢೀರ್ ರದ್ದು Read More »

ಕರಾವಳಿ, ಕರ್ನಾಟಕ
Scroll to Top