ಕರಾವಳಿ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಕಿಡ್ನಿ ಫೈಲ್ಯೂರ್ ➤ ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮೇ. 31. ಎರಡೂ ಕಿಡ್ನಿ ವಿಫಲಗೊಂಡಿದ್ದ ಯುವತಿಯೋರ್ವಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿ ತಲುಪುತ್ತಿದ್ದಂತೆಯೇ ದಾರಿ ಮಧ್ಯೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳು ತೇಜಸ್ವಿನಿ(15) ಎಂದು ಗುರುತಿಸಲಾಗಿದೆ. ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಗೆ ಡಯಾಲಿಸಿಸ್ ನಡೆಸಲಾಗುತ್ತಿದ್ದು ಅಲ್ಲದೇ […]

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಕಿಡ್ನಿ ಫೈಲ್ಯೂರ್ ➤ ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 31. ರವಿವಾರದಂದು ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ಹಿನ್ನೆಲೆ ಕುಟುಂಬದ ಅನುಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆಯು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದೆ. ಚೆನ್ನೈನ ತಂಡವು ಖಾಸಗಿ ವಿಮಾನ್ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ..!

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯೋರ್ವಳಿಗೆ ಸ್ಕಾರ್ಫಿಯೋ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಕೆಮ್ಮಾರ ಬಡ್ಡಮೆ ನಿವಾಸಿ ಮುನಾಝ್ ಎಂಬವರ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿ ರಿಝಾ ಫಾತಿಮಾ ಎಂದು ಗುರುತಿಸಲಾಗಿದೆ. ಈಕೆ ಮುಂಜಾನೆ ಮದ್ರಸಾಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ

ಕಡಬ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂರು ಕಾರುಗಳ ನಡುವೆ ಸರಣಿ ಅಪಘಾತ ➤ ಚಾಲಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.29. ಸ್ವಿಫ್ಟ್, ಮಾರುತಿ 800 ಹಾಗೂ ಸ್ವಿಫ್ಟ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಚಾಲಕರು ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ ಎಂಬಲ್ಲಿ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಮೂರು ಕಾರುಗಳೂ ಜಖಂಗೊಂಡಿದ್ದು, ಅತಿಯಾದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಕಾರುಗಳ ನಡುವೆ ಸರಣಿ ಅಪಘಾತ ➤ ಚಾಲಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ ಜನತೆಯ ಜ್ಞಾನ ದೇಗುಲ ಸೈಂಟ್ ಜೋಕಿಮ್ಸ್ ವಿದ್ಯಾಲಯ ➤ 2022-23ನೇ ಸಾಲಿಗೆ ಪಿಯುಸಿ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿರುವ ಕಡಬದ ಸೈಂಟ್ ಜೋಕಿಮ್ಸ್ ಸಮೂಹ ವಿದ್ಯಾ ಸಂಸ್ಥೆಯಲ್ಲಿ ವಿವಿಧ ಕೋರ್ಸ್ ಗಳಿಗೆ ಈಗಾಗಲೇ ದಾಖಲಾತಿ ಆರಂಭಗೊಂಡಿದ್ದು, ಸೀಮಿತ ಸೀಟುಗಳು ಬಾಕಿಯಾಗಿವೆ. ಕ್ಯಾಥೊಲಿಕ್ ಬೋರ್ಡ್ ಆಫ್ ಎಜುಕೇಶನ್ ನ ಅಧೀನದಲ್ಲಿ ಕಳೆದ ಹಲವು ದಶಕಗಳಿಂದ ಕಡಬದಲ್ಲಿ ಕಾರ್ಯಾಚರಿಸುತ್ತಿರುವ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ನೀಡಲಾಗುತ್ತಿದ್ದು, ಸೈಂಟ್ ಆನ್ಸ್ ವಿದ್ಯಾ ಸಂಸ್ಥೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ನೀಡಲಾಗುತ್ತಿದೆ.

ಕಡಬದ ಜನತೆಯ ಜ್ಞಾನ ದೇಗುಲ ಸೈಂಟ್ ಜೋಕಿಮ್ಸ್ ವಿದ್ಯಾಲಯ ➤ 2022-23ನೇ ಸಾಲಿಗೆ ಪಿಯುಸಿ ದಾಖಲಾತಿ ಆರಂಭ Read More »

ಕರಾವಳಿ

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.    

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಗೊಂಡು ಮೃತ್ಯು ➤ ಹೃದಯಾಘಾತ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.18. ಒಂಭತ್ತನೆಯ ತರಗತಿಯ ವಿದ್ಯಾರ್ಥಿನಿಯೋರ್ವಳು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಮಂಗಳವಾರದಂದು ವಿಟ್ಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿಟ್ಲದ ಅಳಿಕೆ ಗ್ರಾಮದ ಚಂದಾಡಿ ನಿವಾಸಿ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಏಕೈಕ ಪುತ್ರಿ, ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಭತ್ತನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ವಿತ ಹೆಗ್ಡೆ ಎಂದು ಗುರುತಿಸಲಾಗಿದೆ. ಮಂಗಳವಾರದಂದು ದಿಢೀರ್ ಅಸ್ವಸ್ತಗೊಂಡು ಮೃತಪಟ್ಟಿದ್ದು, ಹೃದಯಾಘಾತದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.    

ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಗೊಂಡು ಮೃತ್ಯು ➤ ಹೃದಯಾಘಾತ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ 5 ದಿನ ಭಾರೀ ಗಾಳಿ ಮಳೆ ➤ ಮೇ 18 ರಂದು ರೆಡ್ ಅಲೆರ್ಟ್ | ಮೇ 17 & 19 ರಂದು ಆರೆಂಜ್ ಅಲೆರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.16. ರಾಜ್ಯದ ಕರಾವಳಿಯಲ್ಲಿ ಮುಂದಿನ ಐದು ದಿನಗಳ‌ ಕಾಲ ಭಾರೀ ಮಳೆಯಾಗಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.18 ರಂದು ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 17 ಮತ್ತು 19 ರಂದು ಭಾರೀ ಗಾಳಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 18 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕರು ಮತ್ತು ಮೀನುಗಾರರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ

ಕರಾವಳಿಯಲ್ಲಿ 5 ದಿನ ಭಾರೀ ಗಾಳಿ ಮಳೆ ➤ ಮೇ 18 ರಂದು ರೆಡ್ ಅಲೆರ್ಟ್ | ಮೇ 17 & 19 ರಂದು ಆರೆಂಜ್ ಅಲೆರ್ಟ್ Read More »

ಕರಾವಳಿ

ಮಂಗಳೂರು: ಸಿಲಿಂಡರ್ ಸಾಗಾಟದ ಟ್ರಕ್ ಗೆ ಬೆಂಕಿ ➤ ಸ್ಥಳೀಯರ ಸಹಕಾರದಿಂದ ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 13. ಮಂಗಳೂರಿನಿಂದ ಉಡುಪಿಗೆ ಹೆಚ್ ಪಿ ಅಡುಗೆ ಅನಿಲದ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಟ್ರಕ್ ವೊಂದರಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರದಂದು ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಟ್ರಕ್ ಚಾಲಕನು ಟ್ರಕ್ ನ್ನು ಟೋಲ್ ಪ್ಲಾಜಾ ಬಳಿ ನಿಲ್ಲಿಸಿ ಟೀ ಕುಡಿಯಲೆಂದು ಸಮೀಪದ ಸ್ಟಾಲ್ ಗೆ ತೆರಳಿದ್ದು, ಈ ವೇಳೆ ಚಾಲಕನ ಸೀಟಿನ ಕೆಳಗಡೆ ಆಕಸ್ಮಿಕವಾಗಿ ಬೆಂಕಿ  ಹೊತ್ತಿಕೊಂಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸಮೀಪದ ಅಂಗಡಿ ಸಿಬ್ಬಂದಿಗಳು

ಮಂಗಳೂರು: ಸಿಲಿಂಡರ್ ಸಾಗಾಟದ ಟ್ರಕ್ ಗೆ ಬೆಂಕಿ ➤ ಸ್ಥಳೀಯರ ಸಹಕಾರದಿಂದ ತಪ್ಪಿದ ದುರಂತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಚಲಿಸುತ್ತಿದ್ದ ರಿಕ್ಷಾದ ಟಯರ್ ಗೆ ಸಿಲುಕಿದ ಚೂಡಿದಾರ್ ಶಾಲು ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.10. ಚೂಡಿದಾರದ ಶಾಲು ಆಕಸ್ಮಿಕವಾಗಿ ರಿಕ್ಷಾದ ಟಯರ್ ಗೆ ಸಿಲುಕಿದ ಪರಿಣಾಮ ಮಹಿಳೆ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿರುವ ಘಟನೆ ಸೋಮವಾರದಂದು ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ನೆಲ್ಯಾಡಿ ಗ್ರಾಮ ಪಂಚಾಯತ್ ಸಿಬ್ಬಂದಿ, ಕೊಣಾಲು ಕಲಾಯಿ ನಿವಾಸಿ ಲೀಲಾವತಿ(33) ಎಂದು ಗುರಿತಿಸಲಾತ. ಲೀಲಾವತಿಯವರು ಸೋಮವಾರ ಸಂಜೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಪುತ್ತೂರಿಗೆ ಬಂದಿದ್ದು, ರಿಕ್ಷಾದಲ್ಲಿ ಸಂಚರಿಸುತ್ತಿದ್ದ ವೇಳೆ ಲೀಲಾವತಿಯವರ ಚೂಡಿದಾರದ ಶಾಲು ಆಕಸ್ಮಿಕವಾಗಿ ರಿಕ್ಷಾದ ಟಯರ್ ಗೆ ಸಿಲುಕಿದೆ ಎನ್ನಲಾಗಿದೆ. ಪರಿಣಾಮ ರಿಕ್ಷಾದಿಂದ

ನೆಲ್ಯಾಡಿ: ಚಲಿಸುತ್ತಿದ್ದ ರಿಕ್ಷಾದ ಟಯರ್ ಗೆ ಸಿಲುಕಿದ ಚೂಡಿದಾರ್ ಶಾಲು ➤ ಮಹಿಳೆಗೆ ಗಾಯ Read More »

ಕರಾವಳಿ
Scroll to Top