ಕರಾವಳಿ

ಅಕ್ರಮ ಗೋಸಾಗಾಟ…!! ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 08. ಅಕ್ರಮ ಗೋಸಾಗಾಟವನ್ನು ತಡೆಹಿಡಿದ ಭಜರಂಗದಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಮನೆಗಳಿಂದ ಗುಜರಿ ಸಾಗಾಟದ ನೆಪದಲ್ಲಿ ದನಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯ ವೇಳೆ ದನಸಾಗಾಟ ಮಾಡುತ್ತಿದ್ದ ಯಾವುದೇ ದಾಖಲೆಗಳಿಲ್ಲದ ಪಿಕಪ್ ವಾಹನ ಹಾಗೂ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಅಕ್ರಮ ಗೋಸಾಗಾಟ…!! ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮುಪ್ಪೇರ್ಯ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾಧವ ಎಂದು ಗುರುತಿಸಲಾಗಿದೆ. ಇವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟದಲ್ಲಿ ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೆಳ್ಳಾರೆ

ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲಗುವುದಾಗಿ ಹೇಳಿ ಕೋಣೆಗೆ ತೆರಳಿದ ಯುವಕ ನೇಣುಬಿಗಿದು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 07. ಜಾತ್ರಾ ಮಹೋತ್ಸವಕ್ಕೆಂದು ದೊಡ್ಡಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮಲಗುವುದಾಗಿ ಕೋಣೆಗೆ ತೆರಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪಡೀಲು ನಿವಾಸಿ ಸೌರವ್ ಎಂದು ಗುರುತಿಸಲಾಗಿದೆ. ಈತ ರವಿವಾರದಂದು ನಡೆದ ಪಿಲಾರು ಜಾತ್ರಾ ಮಹೋತ್ಸವಕ್ಕೆಂದು ಬಂದು ತನ್ನ ತಾಯಿಯ ಅಕ್ಕ ಪ್ರಕಾಶ್ ನಗರದ ಸುಜಾತ ಎಂಬವರ ಮನೆಗೆ ತೆರಳಿದ್ದು, ಮಧ್ಯಾಹ್ನ ಊಟದ ಬಳಿಕ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ

ಮಲಗುವುದಾಗಿ ಹೇಳಿ ಕೋಣೆಗೆ ತೆರಳಿದ ಯುವಕ ನೇಣುಬಿಗಿದು ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣ ➤ ಆರೋಪಿಗೆ ಶರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಕಡಬ ತಾಲೂಕಿನ ಮಹಿಳೆಯೋರ್ವರ ಮೊಬೈಲ್ ಗೆ ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ರಂಝೀನ್ ಅವರಿಗೆ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ, ಮಹಿಳೆಯೊರ್ವರ ಮೊಬೈಲ್ ನಂಬರ್ ಪಡೆದುಕೊಂಡು, ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವುದಲ್ಲದೇ ಬೇರೆಯವರ ಶರೀರಕ್ಕೆ ಮಹಿಳೆಯ ಮುಖವನ್ನು ಎಡಿಟ್ ಮಾಡಿ ಇದನ್ನು ಪ್ರಚಾರ ಪಡಿಸುವುದಾಗಿ ಬೆದರಿಕೆಯೊಡ್ಡಿದ

ಕಡಬ: ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣ ➤ ಆರೋಪಿಗೆ ಶರತ್ತುಬದ್ದ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪುರಭವನ ಬಳಿಯಿರುವ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ..! ➤ ಸ್ಥಳೀಯರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ನಗರದ ಪುರಭವನದ ಬಳಿಯಲ್ಲಿರುವ ಮರವೊಂದರ ಬುಡಕ್ಕೆ ಯಾರೋ ದುಷ್ಕರ್ಮಿಗಳು ಬೆಂಕಿಯಿಟ್ಟ ಘಟನೆ ನಡೆದಿದೆ. ಇದೀಗ ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂತಹ ಸಮಾಜಘಾತುಕ ಕೃತ್ಯವನ್ನು ಎಸಗಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ನಗರಪಾಲಿಕೆ ಮತ್ತು ಪೊಲೀಸರು ಈ ಬಗ್ಗೆ ಗಮನಹರಿಸಿ ಇಂತಹ ಸಮಾಜಘಾತುಕ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಂದ ಧಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮಂಗಳೂರು: ಪುರಭವನ ಬಳಿಯಿರುವ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ..! ➤ ಸ್ಥಳೀಯರಿಂದ ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 07. ಆಸ್ತಿ ವೈಷಮ್ಯಕ್ಕೆ ತನ್ನ ಒಡಹುಟ್ಟಿದ ಅಣ್ಣನನ್ನೇ ತಮ್ಮ ಚೂರಿಯಿಂದ ಇರಿದು ಕೊಲೆಮಾಡಿದ ಮನಕಲುಕುವ ಘಟನೆ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಶೇಖರ್ ಎಂದು ಗುರುತಿಸಲಾಗಿದೆ. ಸಹೋದರ ರಾಜು ಕೊಲೆಗೈದ ಆರೋಪಿ. ತಾಯಿಗೆ ಮಂಜುರಾದ ಭೂಮಿಯಲ್ಲಿ ಅಣ್ಣ ಶೇಖರ ವಾಸವಾಗಿದ್ದರೆ, ಅಣ್ಣನೊಂದಿಗಿರುವ ವೈಮನಸ್ಸಿನಿಂದ ರಾಜು ಪ್ರತ್ಯೇಕ ಶೆಡ್ ಮಾಡಿ ವಾಸವಾಗಿದ್ದನು. ರವಿವಾರದಂದು ಶೇಖರ್ ಮನೆಯ ಅಂಗಳದಲ್ಲಿ ಇತರ ಮೂವರು ಕೆಲಸಗಾರರೊಂದಿಗೆ ಜಲ್ಲಿಯನ್ನು ಹೊತ್ತು ತರುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ

ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 07. ಸ್ನೇಹಿತರ ಜೊತೆ ಸಮುದ್ರಕ್ಕೆ ತೆರಳಿದ ಯುವಕನೋರ್ವ ನೀರುಪಾಲಾದ ಘಟನೆ ತಾಲೂಕಿನ ಸೋಮೇಶ್ವರ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಬೈಂದೂರು ಬಿಜು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ ಎಂದು ಗುರುತಿಸಲಾಗಿದೆ. ಈತ ತನ್ನ ನಾಲ್ವರು ಸ್ನೇಹಿತರೊಂದಿಗೆ ಮೀನುಹಿಡಿಯಲು ತೆರಳಿದ್ದು, ಈ ಸಂದರ್ಭ ಅಲೆಗಳ ರಭಸಕ್ಕೆ ಸಿಲುಕಿ ನೀರುಪಾಲಾಗಿದ್ದಾನೆ. ತಕ್ಷಣವೇ ಮೀನುಗಾರರು ಹಾಗೂ ಸ್ನೇಹಿತರು ರಕ್ಷಣೆಗೆ ಮುಂದಾದರಾದರೂ ಶಶಿಧರ್ ಅವರನ್ನು ರಕ್ಷಣೆ ಸಾಧ್ಯವಾಗಿಲ್ಲ. ಮಗನನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ.

ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ..! ➤ ಫೋಕ್ಸೋ ಪ್ರಕರಣದಡಿ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಆರೋಪಿಯನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ಐವರ್ನಾಡು ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದು, ವಿಷಯ ಯುವತಿಯ ಮನೆಯವರಿಗೆ ತಿಳಿದು ಆತನಿಗೆ ಬುದ್ದಿವಾದ ಹೇಳಿದ್ದರು. ಅಲ್ಲದೇ ಬಾಲಕಿಯ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ..! ➤ ಫೋಕ್ಸೋ ಪ್ರಕರಣದಡಿ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಟೆಂಪೋ ಅಡ್ಡಗಟ್ಟಿ ನಗದು ದರೋಡೆ ➤ ವ್ಯಕ್ತಿಗೆ ತಲವಾರಿನಿಂದ ಹಲ್ಲೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 04. ರಿಟ್ಝ್ ಕಾರಿನಲ್ಲಿ ಬಂದ ಮುಸುಕುಧಾರಿಗಳ ತಂಡವೊಂದು ಮೀನು ಸಾಗಾಟದ ಟೆಂಪೋವನ್ನು ತಡೆದು ನಿಲ್ಲಿಸಿ ಎರಡು ಲಕ್ಷ ರೂ ದರೋಡೆ ಮಾಡಿ ವ್ಯಾಪಾರಿಗೆ ಹಲ್ಲೆಗೈದು ಪರಾರಿಯಾದ ಘಟನೆ ರಾ.ಹೆ. 66ರ ಆಡಂಕುದ್ರು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಫಾ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತನ್ನ ಟೆಂಪೊದಲ್ಲಿ ಮೀನು ತರಲೆಂದು ಮಂಗಳೂರಿನ ದಕ್ಕೆಗೆ ತೆರಳಿದ್ದು, ಟೆಂಪೋ‌ ಆಡಂಕುದ್ರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ರಿಟ್ಝ್ ಕಾರೊಂದು

ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಟೆಂಪೋ ಅಡ್ಡಗಟ್ಟಿ ನಗದು ದರೋಡೆ ➤ ವ್ಯಕ್ತಿಗೆ ತಲವಾರಿನಿಂದ ಹಲ್ಲೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು…!!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 04. ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿ ಮೀನುಗಾರ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಆಳ್ವಗದ್ದೆ ನಿವಾಸಿ ನಾಗರಾಜ ಮೊಗೇರ ಎಂದು ಗುರುತಿಸಲಾಗಿದೆ. ಈತ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಮೀನಿನ ಬಲೆ ಸಿಲುಕಿದ ಪರಿಣಾಮ ಆಯತಪ್ಪಿ ಸಮುದ್ರ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಬೋಟ್ ಮೂಲಕ ಮೇಲಕ್ಕೆತ್ತಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top