ಕರಾವಳಿ

ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಕೇಂದ್ರ ಸರ್ಕಾರದ ಬರಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” (FRUITS) ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. (FID) ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ  ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ (Electronic Consent Form) ನೀಡುವುದು ಕಡ್ಡಾಯವಾಗಿದೆ. […]

ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ Read More »

ಕರಾವಳಿ

ಹೊರಗಡೆ ತಿನ್ನುವ ಮುನ್ನ ಜೇಬು ನೋಡಿಕೊಳ್ಳಿ ವಾಣಿಜ್ಯ ಸಿಲಿಂಡರ್ ದರ ಏರಿಕೆ ಎಫೆಕ್ಟ್: ಹೋಟೆಲ್ ತಿನಿಸುಗಳ ಬೆಲೆ ಪರಿಷ್ಕರಣೆಗೆ ಮಾಲೀಕರ ಚಿಂತನೆ

(ನ್ಯೂಸ್‌ ಕಡಬ) newskadaba.com,  ಜೂ.03: ಮತ್ತೊಮ್ಮೆ ದರ ಏರಿಕೆ ಬಿಸಿ: ಹೋಟೆಲ್ ಊಟ, ತಿಂಡಿ ಪ್ರಿಯರ ಜೇಬಿಗೆ ಕತ್ತರಿ! ಬೆಂಗಳೂರು: ಹೊರಗಡೆ ಊಟ, ತಿಂಡಿ ಮಾಡುವ ಅಭ್ಯಾಸ ಇರುವವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ, ಹೋಟೆಲ್ ಮಾಲೀಕರು ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಎಳೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಹೋಟೆಲ್ ತಿನಿಸುಗಳ ದರ ಹೆಚ್ಚಿಸಲಾಗಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಬೆಲೆಗಳನ್ನು ಇನ್ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ಹೋಟೆಲ್

ಹೊರಗಡೆ ತಿನ್ನುವ ಮುನ್ನ ಜೇಬು ನೋಡಿಕೊಳ್ಳಿ ವಾಣಿಜ್ಯ ಸಿಲಿಂಡರ್ ದರ ಏರಿಕೆ ಎಫೆಕ್ಟ್: ಹೋಟೆಲ್ ತಿನಿಸುಗಳ ಬೆಲೆ ಪರಿಷ್ಕರಣೆಗೆ ಮಾಲೀಕರ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೂಪಾಯಿ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ಉಪನ್ಯಾಸ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಮಂಗಳೂರು ವಿಶ್ವವಿದ್ಯಾನಿಲಯ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ((The problem of the Rupee, Its contemporary Sifnificance) ಉಪನ್ಯಾಸ ಕಾರ್ಯಕ್ರಮ  ಜೂನ್ 3 ರಂದು 10:30 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.   ವಿಶ್ವವಿದ್ಯಾನಿಲಯದ

ರೂಪಾಯಿ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ಉಪನ್ಯಾಸ Read More »

ಕರಾವಳಿ

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03.  ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಜೂ. 03. ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್,

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

(ನ್ಯೂಸ್‌ ಕಡಬ) newskadaba.com,  ಜೂ.03: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://pilikula.karnataka.gov.inವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ

(ನ್ಯೂಸ್‌ ಕಡಬ) newskadaba.com,  ಜೂ.03: ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ…. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ

ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನೂತನ ನ್ಯಾಯಾಲಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02. ತಾಲೂಕು ಕೇಂದ್ರವಾಗಿ ರೂಪಗೊಂಡ ಬಳಿಕ ಕಡಬ ತಾಲೂಕಿನಲ್ಲಿ ನ್ಯಾಯಾಲಯ ಪ್ರಾರಂಭಿಸಬೇಕು ಎನ್ನುವ ಈ ಭಾಗದ ಬಹು ದಿನಗಳ ಬೇಡಿಕೆ ಈಡೇರಿದ್ದು, ಕಡಬದ ಗಣೇಶ್ ಬಿಲ್ಡಿಂಗ್‌ನಲ್ಲಿ ಖಾಸಗಿ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಸೋಮವಾರದಂದು ನ್ಯಾಯಾಲಯ ಪ್ರಾರಂಭಗೊಂಡಿತು. ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ದೀಪ ಬೆಳಗಿಸುವ ಮೂಲಕ ಕಡಬ ತಾಲೂಕಿನ ನ್ಯಾಯಾಲಯವನ್ನು ಉದ್ಘಾಟಿಸಿದರು. ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ, ನ್ಯಾಯಾಲಯ

ಕಡಬ: ನೂತನ ನ್ಯಾಯಾಲಯ ಉದ್ಘಾಟನೆ Read More »

ಕರಾವಳಿ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ!

(ನ್ಯೂಸ್‌ ಕಡಬ) newskadaba.com,  ಮೇ.31:  ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಶವಾಗಾರದ ಅಟೆಂಡರ್ ಆಗಿರುವ ಮುನೀರ್ ಅಹ್ಮದ್ ಎಂಬಾತ, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವೇಳೆ ಅನುಮತಿ ಇಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ಮೃತ ಮಹಿಳೆಯರ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top