ಕರಾವಳಿ

ಮಂಗಳೂರಿನಿಂದ ಬಾದಾಮಿಗೆ ಪ್ರಯಾಣಕ್ಕೆ ಮುಂದಾದ ಅನ್ಯಕೋಮಿನ ಜೋಡಿ..! ➤ ಬಜರಂಗದಳ ಕಾರ್ಯಕರ್ತರ ದಾಳಿ- ಜೋಡಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ‌. 29. ಮಂಗಳೂರಿನಿಂದ ಬಾದಾಮಿಗೆ ಕೋಚ್ ಬಸ್ ನಲ್ಲಿ ತೆರಳಲು ಹೊರಟಿದ್ದ ಅನ್ಯಕೋಮಿನ ಜೋಡಿಯೊಂದನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಲತಃ ಬಾದಾಮಿ ಯುವತಿ ಇನೋಳಿಯಲ್ಲಿರುವ BIT ಕಾಲೇಜಿಗೆ ಸೇರ್ಪಡೆಯಾಗಲು ಬಂದಿದ್ದು, ಆಕೆಯ ಮನೆಯವರಿಗೆ ತನ್ನನ್ನು ಹಿಂದೂ ಎಂದು ನಂಬಿಸಿದ್ದ ಅನ್ಯಕೋಮಿನ ಯುವಕನೊಂದಿಗೆ ಯುವತಿಯನ್ನು ಕಳುಹಿಸಲು ಮನೆಯವರು ಒಪ್ಪಿದ್ದಾರೆ. ಬಳಿಕ ವಿದ್ಯಾರ್ಥಿನಿಗೆ ಗೊತ್ತಿಲ್ಲದೇ ಯುವಕ ಒಂದೇ ಕ್ಯಾಬಿನ್ ಲ್ಲಿ ಸ್ಲೀಪರ್ ಕೋಚ್ ಸೀಟ್ ಬುಕ್ ಮಾಡಿದ್ದಾನೆ. ಇದನ್ನರಿತು […]

ಮಂಗಳೂರಿನಿಂದ ಬಾದಾಮಿಗೆ ಪ್ರಯಾಣಕ್ಕೆ ಮುಂದಾದ ಅನ್ಯಕೋಮಿನ ಜೋಡಿ..! ➤ ಬಜರಂಗದಳ ಕಾರ್ಯಕರ್ತರ ದಾಳಿ- ಜೋಡಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಟೋರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ ➤ ಮೂವರು ಗಂಭೀರ..

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29. ರಿಕ್ಷಾ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕೆಯ್ಯೂರು ನೆಟ್ಟಾಲ ಎಂಬಲ್ಲಿ ನಡೆದಿದೆ. ಕೆಯ್ಯೂರು ನೆಟ್ಟಾಲ ಎಂಬಲ್ಲಿದ್ದ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಜೀಪಿನ ನಡುವೆ ಢಿಕ್ಕಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಆಟೋರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ ➤ ಮೂವರು ಗಂಭೀರ.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿ ಪ್ರಾಣಬಿಟ್ಟ ಯುವಕ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 29. ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಯುವಕ ಮೃತಪಟ್ಟ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೆ ಯತ್ನಿಸಿದ ಕೋಟೆಕಾರು ನಿವಾಸಿ ಅಶ್ವಿತಾ ಫೆರಾವೊ ಎಂಬಾಕೆಯನ್ನು ರಕ್ಷಿಸಲು ಹೋಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿ ಪ್ರಾಣಬಿಟ್ಟ ಯುವಕ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೀವನದಲ್ಲಿ ಬರುವ ಕಷ್ಟಗಳನ್ನು ನೀವೇ ಹೇಗೆ ಸರಿ ಮಾಡಿಕೊಳ್ಳುವುದು ಎಂದು ತಿಳಿಯಿರಿ..!!

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಬರುವ ಕಷ್ಟಗಳನ್ನು ನೀವು ಹೀಗೆ ಸರಿ ಮಾಡಿಕೊಳ್ಳಬೇಕು. ವಿಶೇಷವಾಗಿ ಮೊದಲು ಕ್ರೋಧವನ್ನು ಕಡಿಮೆ ಮಾಡಿಕೊಂಡು ತಾಳ್ಮೆಯಿಂದ ಕುಳಿತುಕೊಂಡು ನಿಧಾನಕ್ಕೆ ಯೋಚನೆ ಮಾಡಿದರೆ ಪರಿಹಾರ ನಿಮ್ಮ ಹತ್ತಿರ ಇರುತ್ತದೆ.ಯಾವುದೇ

ಜೀವನದಲ್ಲಿ ಬರುವ ಕಷ್ಟಗಳನ್ನು ನೀವೇ ಹೇಗೆ ಸರಿ ಮಾಡಿಕೊಳ್ಳುವುದು ಎಂದು ತಿಳಿಯಿರಿ..!! Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 28. ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ರುದ್ರಮಜಲು ನಿವಾಸಿ ನಂದಕುಮಾರ್(19) ಎಂದು ಗುರುತಿಸಲಾಗಿದೆ. ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ಈತ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಎರಡು ದಿನಗಳ ಹಿಂದೆ ದಿಢೀರನೇ ತೀವ್ರ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಆಲ್ಟೋ ಕಾರು ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 28. ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ 34ನೇ ನೆಕ್ಕಿಲಾಡಿ ಎಂಬಲ್ಲಿ ಶುಕ್ರವಾರದಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಆಲ್ಟೋ ಕಾರಿನ ನಡುವೆ ಪರಸ್ಪರ ಅಪಘಾತ ಸಂಭವಿಸಿದ್ದು, ಪರಿಣಾಮ ರಿಕ್ಷಾ ಕಂದಕಕ್ಕೆ ಉರುಳಿದೆ. ಗಾಯಗೊಂಡ ಇಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಉಪ್ಪಿನಂಗಡಿ: ಆಲ್ಟೋ ಕಾರು ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಕಡಬ: ಕಳಾರ ಸಮೀಪ ಬೆಂಕಿ ಆಕಸ್ಮಿಕ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜ. 28. ಇಲ್ಲಿನ ಕಳಾರ ಸಮೀಪ ರಸ್ತೆ ಬದಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಮತಟ್ಟು ಪ್ರದೇಶ ಉರಿದಿದ್ದು ಕಡಬ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆ ಟ್ರಾನ್ಸ್ ಫಾರ್ಮರಿನಿಂದ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುತ್ತ ಮುತ್ತಲಿನ ಹುಲ್ಲು ತುಂಬಿದ ಪ್ರದೇಶಕ್ಕೆ ಬೆಂಕಿ ಹಬ್ಬಿತ್ತು. ಈ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ತೆರಳಿದ ಎಸ್.ಐ ರುಕ್ಮ ನಾಯ್ಕ್, ಎ.ಎಸ್.ಐ ಚಂದ್ರಶೇಖರ್, ಹೆಡ್ ಕಾನ್ಸ್ಟೇಬಲ್

ಕಡಬ: ಕಳಾರ ಸಮೀಪ ಬೆಂಕಿ ಆಕಸ್ಮಿಕ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟ ರಕ್ಷಿತ್ ಸಹಿತ ‘ಗಟ್ಟಿಮೇಳ’ ತಂಡದ 7 ಮಂದಿಯ ವಿರುದ್ದ ಎಫ್ಐಆರ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 28. ಹೋಟೆಲ್ ನಲ್ಲಿ ಕುಡಿದು ಗಲಾಟೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಗಟ್ಟಿಮೇಳ ಧಾರವಾಹಿ ತಂಡದ ಏಳು ಮಂದಿಯ ವಿರುದ್ದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಟ್ಟಿಮೇಳೆ ತಂಡದಿಂದ ನಾಗರಬಾವಿ ಸಮೀಪ ಶೂಟಿಂಗ್ ನಡೆಯುತ್ತಿದ್ದು, ನಟ ರಕ್ಷಿತ್ ಹಾಗೂ ಇತರ ಸದಸ್ಯರು ಹೋಟೆಲ್ ನಲ್ಲಿ ರಾತ್ರಿ ಒಂದು ಗಂಟೆಯ ವೇಳೆಗೆ ಕುಡಿದ ಮತ್ತಿನಲ್ಲಿ ಸ್ಥಳೀಯರಿಗೆ ಕಿರಿಕ್ ಮಾಡಿದ್ದಾರೆ. ಈ ಮಾಹಿತಿಯನ್ನು ಪಡೆದ ಹೊಯ್ಸಳ ಪೊಲೀಸರು ಸ್ಥಳಕ್ಕಾಗಮಿಸಿ ವಿಚಾರಿಸಿದಾಗ ರಕ್ಷಿತ್, ನಾವು

ನಟ ರಕ್ಷಿತ್ ಸಹಿತ ‘ಗಟ್ಟಿಮೇಳ’ ತಂಡದ 7 ಮಂದಿಯ ವಿರುದ್ದ ಎಫ್ಐಆರ್…! Read More »

ಕರಾವಳಿ

ಮಗುಚಿಬಿದ್ದ ಮೀನುಗಾರಿಕಾ ದೋಣಿ- 6 ಮಂದಿಯ ರಕ್ಷಣೆ ➤ 15 ಲಕ್ಷ ರೂ. ನಷ್ಟ…!

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಮಿನುಗಾರಿಕೆಗೆ ತೆರಳಿದ್ದ ಶ್ರೀಮಹಾದೇವು 370 ಹೆಸರಿನ ದೋಣಿಯೊಂದು ಮಗುಚಿ ಬಿದ್ದ ಘಟನೆ ವರದಿಯಾಗಿದೆ.       ಮಲ್ಪೆ ಬಂದರಿನಿಂದ ಹೊರಟಿದ್ದ ದೋಣಿಯು ದಡದಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯ ಕೆಳಭಾಗಕ್ಕೆ ಏನೋ ಬಡಿದ ಪರಿಣಾಮ ಮಗುಚಿಬಿದ್ದಿದೆ. ತಕ್ಷಣವೇ ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ರಾಮದೂತ್ ಬೋಟಿನ ಮೀನುಗಾರರು ರಕ್ಷಣೆಗೆ ಮುಂದಾಗಿದ್ದು ಆರು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ದೋಣಿಯನ್ನು ದಡಕ್ಕೆ ಎಳೆಯಲು ಹರಸಾಹಸಪಟ್ಟರಾದರೂ ದೋಣಿಗೆ ನೀರು ನುಗ್ಗಿದ್ದರಿಂದ

ಮಗುಚಿಬಿದ್ದ ಮೀನುಗಾರಿಕಾ ದೋಣಿ- 6 ಮಂದಿಯ ರಕ್ಷಣೆ ➤ 15 ಲಕ್ಷ ರೂ. ನಷ್ಟ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಪ್ಪೆಪದವು, ಜ. 28. ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿ ನಾಗರಾಜ್ ರಾವ್ ಎಂದು ಗುರುತಿಸಲಾಗಿದೆ. ಇವರು ಬ್ಯಾಂಕ್ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಗುರುವಾರದಂದು ರಾತ್ರಿ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನ್ನು ಕಂಡು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಗಳೂರು

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top