ದ.ಕ ಜಿಲ್ಲೆ: 5ಕ್ಕಿಂತ ಮೇಲ್ಪಟ್ಟ ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ಸ್ಥಗಿತಗೊಳಿಸಿ ➤ ಜಿಲ್ಲಾಧಿಕಾರಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆಯನ್ನು ನೀಡಿದ್ದಾರೆ. ಸದ್ಯದ ಪರಿಸ್ಥಿತಿಗೆ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದ್ದು, ಈ ಕಾರಣದಿಂದ ಯಾವ ಶಾಲೆಗಳಲ್ಲಿ […]






