ಕರಾವಳಿ

ಮಂಗಳೂರು: ಸೆಣಬು ಉತ್ಪನ್ನಗಳ ತಯಾರಿಕೆ ತರಬೇತಿ ಹಾಗೂ ಮಾರಾಟ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ನಗರದ ಹೊರ ವಲಯದ ಪಿಲಿಕುಳ ಕರಕುಶಲ ಗ್ರಾಮದಲ್ಲಿ ಸೆಣಬು ಉತ್ಪನ್ನ ತಯಾರಿಕೆ ಕುರಿತ ತರಬೇತಿ ಹಾಗೂ ಮಾರಾಟ ಕೇಂದ್ರವೊಂದನ್ನು ತೆರೆಯುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಬುಧವಾರ ನಗರದ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಕೇಂದ್ರ ಟೆಕ್ಸ್ ಟೈಲ್ ಸಚಿವಾಲಯದ ವತಿಯಿಂದ ಸೆಣಬು ಬೋರ್ಡ್ ಆಯೋಜಿಸಿದ ಸೆಣಬು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. ಸೆಣಬು […]

ಮಂಗಳೂರು: ಸೆಣಬು ಉತ್ಪನ್ನಗಳ ತಯಾರಿಕೆ ತರಬೇತಿ ಹಾಗೂ ಮಾರಾಟ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಚಿಂತನೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗೆ ಅವಕಾಶವಿಲ್ಲ ➤ ಎರಡು ಡೋಸ್ ಪಡೆದ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 06. ದೇಶದಾದ್ಯಂತ ಹರಡುತ್ತಿರುವ ಕೊರೋನಾ ರೂಪಾಂತರಿ ತಳಿ ಒಮಿಕ್ರಾನ್ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆ ಪ್ರಸಿದ್ದ ದೇವಸ್ಥಾನ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದ.ಕ ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಜ. 06ರಿಂದ ಮುಂದಿನ ಆದೇಶದವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಎರಡು ಡೋಸ್ ಪಡೆದ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುವುದಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ. ಒಂದು ಬಾರಿಗೆ 50 ಮಂದಿಗೆ ಮಾತ್ರ ದೇವರ ದರ್ಶನಕ್ಕೆ

ಇಂದಿನಿಂದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗೆ ಅವಕಾಶವಿಲ್ಲ ➤ ಎರಡು ಡೋಸ್ ಪಡೆದ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ..! Read More »

ಕರಾವಳಿ, ಕರ್ನಾಟಕ

ಕಡಬ: ವಿಕಲಚೇತನರ ವೈದ್ಯಕೀಯ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 06. ಇಲ್ಲಿನ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ವಿಕಲಚೇತನರ ವೈದ್ಯಕೀಯ ಶಿಬಿರವು ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್‌ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಸುಳ್ಯ ಸರಕಾರಿ ಆಸ್ಪತ್ರೆಯ ಎಲುಬು ತಜ್ಞ ಪದ್ಮನಾಭ ಎನ್., ಕಣ್ಣಿನ ತಜ್ಞೆ ಅರ್ಚನಾ, ಪುತ್ತೂರು ಸರಕಾರಿ ಆಸ್ಪತ್ರೆಯ ಇ.ಎನ್.ಟಿ ತಜ್ಞ ಯೈನಬ್ ಸುನು ಅಲಿರವರು ತಪಾಸಣೆ ನಡೆಸಿ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿದರು. ಇದೇ ವೇಳೆ ಶಿಬಿರ ನಡೆಯಲು ಸಹಕರಿಸಿದ ಜಿ.ಪಂ.ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರನ್ನು ಸನ್ಮಾನಿಸಿ

ಕಡಬ: ವಿಕಲಚೇತನರ ವೈದ್ಯಕೀಯ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಕಡಬ, ಜ.05. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಬುಧವಾರದಂದು ನಡೆದಿದೆ‌‌. ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದೆ‌.

ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ- ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 05. ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪೆರಾಜೆ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮದೆ ಗ್ರಾಮದಲ್ಲಿನ ತೋಟವೊಂದಕ್ಕೆ ಕೆಲಸದ ನಿಮಿತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ- ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ರಾಜ್ಯದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲೊಂದಾದ ಮಂಗಳೂರು ವಿಶ್ವವಿದ್ಯಾಲಯವು ದಿನ ಕಳೆದಂತೆ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ. ಹಲವಾರು ಸಮಸ್ಯೆಗಳ ಆಗರವಾಗಿ ಪರಿಣಮಿಸುತ್ತಿದೆ. ದೇಶ, ವಿದೇಶಗಳಿಂದ ಹಲವಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಅವ್ಯವಸ್ಥೆಗಳ ಬಗ್ಗೆ ರಾಜ್ಯಪಾಲರು ಕುಲಪತಿಗಳ ಸಭೆಯಲ್ಲಿ ಪ್ರಶ್ನಿಸಿ ಸಮಸ್ಯೆಯನ್ನು ಸರಿಪಡಿಸಲು ಸೂಚಿಸಿದ ಘಟನೆ ನಡೆದಿದೆ. ಇವುಗಳಿಗೆಲ್ಲ ಯಾವುದೇ ರೀತಿಯ ಅಭಿವೃದ್ಧಿ ಬಗ್ಗೆ ಗಮನ ಹರಿಸದ ಸಿಂಡಿಕೇಟ್ ಸದಸ್ಯರು ಮತ್ತು ಕುಲಪತಿ ಇದಕ್ಕೆ ನೇರ ಹೊಣೆಯಾಗಿದ್ದಾರೆ. ಅವ್ಯವಹಾರ

ಮಂಗಳೂರು ವಿವಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ ➤ ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶಕ್ತಿ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಾಮೂಹಿಕ ಸೂರ್ಯ ನಮಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಶಕ್ತಿನಗರದ ಶಕ್ತಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಸರ್ಕಾರದ ಆದೇಶದ ಪ್ರಕಾರ ಸಾಮೂಹಿಕ ಸೂರ್ಯ ನಮಸ್ಕಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ. ಮಾತನಾಡಿ, ಸೂರ್ಯ ನಮಸ್ಕಾರವು ಯೋಗದ ಒಂದು ಅಂಗ. ಭಾರತವು ಯೋಗವನ್ನು ಜಗತ್ತಿಗೆ ಪರಿಚಯಿಸಿ ಕೊಟ್ಟಿದೆ. ಈ ಹಿನ್ನಲೆಯಲ್ಲಿ ಜಗತ್ತು ಯೋಗ ದಿನಾಚರಣೆಯನ್ನು ಆಚರಿಸುತ್ತಿದೆ. ಸೂರ್ಯ ನಮಸ್ಕಾರದಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿವೆ. ಇದನ್ನು ಪ್ರತಿದಿನ ಮುಂಜಾನೆ

ಮಂಗಳೂರು: ಶಕ್ತಿ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಾಮೂಹಿಕ ಸೂರ್ಯ ನಮಸ್ಕಾರ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮೆಸ್ಕಾಂನ ವಿವಿಧ ಕಾಮಗಾರಿಗಳ ಉದ್ಘಾಟನೆ ➤ ರೈತ, ಗ್ರಾಹಕ, ಉದ್ಯಮ ಪೂರಕ ಸೌಲಭ್ಯಕ್ಕೆ ಯೋಜನೆ- ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 05. ರೈತರಿಗೆ, ಗ್ರಾಹಕರಿಗೆ, ಉದ್ಯಮಗಳಿಗೆ, ಕಾರ್ಖಾನೆಗಳಿಗೆ ಇಂಧನ ಇಲಾಖೆಯಿಂದ ಉತ್ತಮ ರೀತಿಯ ಸೌಲಭ್ಯ ಸಹಕಾರ ನೀಡುವಂತಹ ಮೂರು ಆಯಾಮಗಳಲ್ಲಿ ಮುಂದಿನ ಒಂದೂವರೆ ವರ್ಷಗಳಲ್ಲಿ ಈ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಅರಣ್ಯ ಪ್ರದೇಶಗಳಿರುವಲ್ಲಿ ಇಂಧನ ಇಲಾಖೆಯ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇಂದು ರಾಜ್ಯ, ಕೇಂದ್ರ ಸರಕಾರದ ಪ್ರಯತ್ನದಿಂದ ಅರಣ್ಯ ಇಲಾಖೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿಕೊಂಡು ಅಭಿವೃದ್ಧಿ ಕೆಲಸ ಚಟುವಟಿಕೆಗಳಿಗೆ ಅರಣ್ಯ ಇಲಾಖೆ ತೊಂದರೆ ಮಾಡಬಾರದು ಎಂಬ ಆಕಾಂಕ್ಷೆ ಇಟ್ಟುಕೊಂಡು

ಸುಬ್ರಹ್ಮಣ್ಯ: ಮೆಸ್ಕಾಂನ ವಿವಿಧ ಕಾಮಗಾರಿಗಳ ಉದ್ಘಾಟನೆ ➤ ರೈತ, ಗ್ರಾಹಕ, ಉದ್ಯಮ ಪೂರಕ ಸೌಲಭ್ಯಕ್ಕೆ ಯೋಜನೆ- ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ಕಡಬ ಘಟಕದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರಿಗೆ ಪದೋನ್ನತಿ

(ನ್ಯೂಸ್ ಕಡಬ) newskadaba.com ಕಡಬ, ಜ. 05. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಡಬ ಘಟಕದ ಪ್ರಭಾರ ಘಟಕಾಧಿಕಾರಿಯಾದ (ಸಾರ್ಜೆಂಟ್) ತೀರ್ಥೇಶ್ ಅಮೈ, ಮೆಟಲ್ ನಂ 489, ಇವರು ಪ್ರಭಾರ ಘಟಕಾಧಿಕಾರಿಯಾಗಿದ್ದು, ಗೃಹರಕ್ಷಕದಳದಲ್ಲಿ1997 ರಲ್ಲಿ ಸೇವೆಗೆ ಸೇರಿದ್ದು, ಸುಮಾರು 24 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಕೇಂದ್ರ ಕಛೇರಿಯಿಂದ ಲೀಡರ್ ಶಿಪ್ ತರಬೇತಿ, ರೈಫಲ್, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ತರಬೇತಿ ಹಾಗೂ ಮಂಗಳೂರಿನಲ್ಲಿ ನಡೆದ ಪ್ರಥಮ ಚಿಕಿತ್ಸೆ ತರಬೇತಿ, ಮೂಲ ಅಗ್ನಿ ಶಮನ ತರಬೇತಿ, ಪ್ರವಾಹ ರಕ್ಷಣಾ ತರಬೇತಿಗಳನ್ನು ಪಡೆದಿರುತ್ತಾರೆ.

ಕಡಬ ಘಟಕದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರಿಗೆ ಪದೋನ್ನತಿ Read More »

ಕರಾವಳಿ, ಕರ್ನಾಟಕ

ಅಕ್ರಮ ಮರಳು ಸಾಗಾಟ ತಡೆಗಟ್ಟಲು ನಿಗ್ರಹ ದಳ ಸ್ಥಾಪನೆ ➤ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ನಿಗ್ರಹ ದಳದ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ. ಈ ದಳದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಮಾಜಿ ಸೈನಿಕರು 2022ರ ಜ.10ರ ಸೋಮವಾರ ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ರಮ ಮರಳು ಸಾಗಾಟ ತಡೆಗಟ್ಟಲು ನಿಗ್ರಹ ದಳ ಸ್ಥಾಪನೆ ➤ ಆಸಕ್ತರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top