ಕರಾವಳಿ

ಉಪ್ಪಿನಂಗಡಿ ಪೊಲೀಸರ ಬರ್ಬರ ಲಾಠಿ ಚಾರ್ಜ್ ಖಂಡಿಸಿ ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರ ನಡೆಯನ್ನು ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಭೀಕರ ಲಾಠಿ ಪ್ರಹಾರದ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸಿರಾಜ್ ಮಂಗಳೂರು, ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರ ನಡೆಯನ್ನು […]

ಉಪ್ಪಿನಂಗಡಿ ಪೊಲೀಸರ ಬರ್ಬರ ಲಾಠಿ ಚಾರ್ಜ್ ಖಂಡಿಸಿ ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಲ್ಲಿನ ಕಾಳುಮೆಣಸಿನ ಕೊಯ್ಯಲೆಂದು ಬಳಸಿದ್ದ ಏಣಿಯು ಪಕ್ಕದಲ್ಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರೋರ್ವರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ ➤ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ. ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನೆಲೆ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ

ಕಡಬ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ ➤ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್ Read More »

ಕರಾವಳಿ, ಕರ್ನಾಟಕ

ಪುತ್ತೂರು: 156 ವರ್ಷದ ಪ್ರಾಚೀನ ಕಟ್ಟಡ ನೆಲಸಮ ➤ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರ, ಡಿ. 15. ಡಾ. ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ ಸುಮಾರು 156 ವರ್ಷಗಳ ಹಿಂದಿನ ಪುರಾತನ ಕಟ್ಟಡವನ್ನು ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದ.ಕ ಜಿಲ್ಲಾಧಿಕಾರಿ ಡಿಡಿಪಿಐ ಹಾಗೂ ಜಿ.ಪಂ ಸಿಇಒ ಗೆ ಸೂಚನೆ ನೀಡಿದ್ದಾರೆ. ಪುತ್ತೂರಿನ ಹೃದಯಭಾಗದಲ್ಲಿರುವ ಈ ಪ್ರಾಚೀನ ಕಟ್ಟಡವು 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ಆರಂಭಿಸಿದ ಲಂಡನ್ ಥಿಯೇಟರ್ ಮಾದರಿಯ ಶಾಲೆಯಾಗಿತ್ತು, ಅಲ್ಲದೇ ಪುತ್ತೂರು ಹಾಗೂ ಅಕ್ಕಪಕ್ಕದ ತಾಲೂಕುಗಳಲ್ಲಿ

ಪುತ್ತೂರು: 156 ವರ್ಷದ ಪ್ರಾಚೀನ ಕಟ್ಟಡ ನೆಲಸಮ ➤ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 15. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ ಮತ್ತು ಗರ್ಡಾಡಿ ಗ್ರಾಮದ ಶೇಖರ್ ಎಂದು ಗುರುತಿಸಲಾಗಿದೆ. ಪೊಲೀಸರುಗರ್ಡಾಡಿ ಪೇಟೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿಯ ಎಸ್.ಐ ಕಡಬ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಮಡಿಕೇರಿಯಲ್ಲಿ ಎಸ್.ಐ ಆಗಿರುವ ಸುಳ್ಯ ತಾಲೂಕಿನ ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ(59) ಅವರು ಬುಧವಾರದಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ನವೆಂಬರ್ ತಿಂಗಳಿನಲ್ಲಿ ಎಸ್ಐ ಆಗಿ ಭಡ್ತಿ ಹೊಂದಿದ್ದು, ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದು, ಈ ಹಿನ್ನೆಲೆ ರಜೆ ಪಡೆದು ಮನೆಯಲ್ಲೇ ಇದ್ದು ಆರೋಗ್ಯವಾಗಿದ್ದರು. ಇಂದು ಮುಂಜಾನೆ ಹಠಾತ್ ಆಗಿ ಅಸ್ವಸ್ಥಗೊಂಡಿದ್ದು, ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತರುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಪತ್ನಿ

ಮಡಿಕೇರಿಯ ಎಸ್.ಐ ಕಡಬ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ಪಲ್ಟಿಯಾದ ಘಟನೆ ಅರಂತೋಡಿನ ಉದಯನಗರ ತಿರುವಿನಲ್ಲಿ ನಡೆದಿದೆ. ಇದು ಬಜ್ಪೆಯಿಂದ ಪ್ರವಾಸಕ್ಕೆಂದು ಹೊರಟ ವಾಹನವಾಗಿದ್ದು, ಮುಂಜಾನೆ 4 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಶುಭ ಕಾರ್ಯಗಳಿಗೆ ಪಾಲ್ಗೊಳ್ಳುವ ಅವಕಾಶ ನಿಮಗೆ ದೊರೆಯುತ್ತದೆ. ಈ ದಿನ ನಿಮ್ಮ ಗುರುಗಳ ಆಶೀರ್ವಾದ ಪಡೆದರೆ ತುಂಬಾ ಒಳ್ಳೆಯದು. ಈ ದಿನ ನಿಮಗೆ ನುತ್ರಣ ಮಿತ್ರರ

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ವಿಧಾನಪರಿಷತ್ ಚುನಾವಣೆ ➤ ದ.ಕ. ಜಿಲ್ಲೆಯಲ್ಲಿ ಶ್ರೀನಿವಾಸ್ ಪೂಜಾರಿ ಹಾಗೂ ಮಂಜುನಾಥ್ ಭಂಡಾರಿಗೆ ಜಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 14. ಡಿ. 10ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಸಾಧಿಸಿದ್ದಾರೆ.   ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ, ಎಸ್ಡಿಪಿಐನಿಂದ ಶಾಫಿ ಬೆಳ್ಳಾರೆ ಸ್ಪರ್ಧಿಸಿದ್ದರು.ಪ್ರಥಮ ಪ್ರಶಸ್ತ್ಯದ ಮತಗಳಲ್ಲಿ ಎರಡು ಪಕ್ಷಗಳಿಗೆ ಜಯ ಲಭಿಸಿದೆ. ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 3,672 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿಗೆ 2,079 ಮತಗಳು

ವಿಧಾನಪರಿಷತ್ ಚುನಾವಣೆ ➤ ದ.ಕ. ಜಿಲ್ಲೆಯಲ್ಲಿ ಶ್ರೀನಿವಾಸ್ ಪೂಜಾರಿ ಹಾಗೂ ಮಂಜುನಾಥ್ ಭಂಡಾರಿಗೆ ಜಯ Read More »

ಕರಾವಳಿ, ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 14. ಜಾಗದ 9/11 ವಿಚಾರವಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಾಲಾಡಿ ಪಂ.ಅಭಿವೃದ್ಧಿ ಅಧಿಕಾರಿ ರವಿ ಎಂಬವರು ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ವ್ಯಕ್ತಿಯೋರ್ವರಿಂದ ಜಾಗದ 9/11 ಒದಗಿಸಲು 15,000 ರೂ. ಲಂಚ ಪಡೆಯುತ್ತಿದ್ದ ವೇಳೆ ದ.ಕ. ಭ್ರಷ್ಟಾಚಾರ ನಿಗ್ರಹದಳದ ತಂಡ ಸೋಮವಾರ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.      

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top