ಅಂತರ್ರಾಷ್ಟ್ರೀಯ ನ್ಯೂಸ್

ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಮ್‌ ಘಟನೆಯ ನಂತರ ಉಗ್ರರ ವಿರುದ್ದ ಕಾರ್ಯಾಚಾರಣೆ ನಡೆಸಲು ಸೇನಾ ಪಡೆಗಳಿಗೆ ಮುಕ್ತ ಸ್ವತಂತ್ರ್ಯ ನೀಡಿರುವ ಬೆನ್ನಲ್ಲೇ, ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತ ತೆಗೆದುಕೊಂಡಿರುವ ಕೆಲವು ಬಿಗಿಯಾದ ಕ್ರಮಗಳಿಂದ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. […]

ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com , ಮಾ.28.: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. “ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದು AI Summit ನಲ್ಲಿ ಪ್ರಧಾನಿ ಮೋದಿ ಭಾಗಿ; ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಪ್ರವಾಸಕ್ಕೆ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ಗೆ ಆಗಮಿಸಿದ್ದಾರೆ. ಇಂದು ಪ್ಯಾರಿಸ್ ನಲ್ಲಿ ನಡೆಯಲಿರುವ ಎಐ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸುವ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ಫ್ಲಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ ಕೋರಿದ್ದಾರೆ. ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ಯಾರಿಸ್‌ನಲ್ಲಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಭೇಟಿ

ಇಂದು AI Summit ನಲ್ಲಿ ಪ್ರಧಾನಿ ಮೋದಿ ಭಾಗಿ; ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಜ.28: ಅಮೆರಿಕಕ್ಕೆ ಹಾನಿ ಉಂಟುಮಾಡುವ ದೇಶಗಳ ಮೇಲೆ ಅಮೆರಿಕ ಸುಂಕ ವಿಧಿಸಲಿದೆ ಎಂದು ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.ಈ ನಡುವೆ ಚೀನಾ, ಭಾರತ ಮತ್ತು ಬ್ರೆಜಿಲ್‌ ಹೆಚ್ಚಿನ ಸುಂಕದ ದೇಶಗಳೆಂದು ಘೋಷಿಸಿದ್ದಾರೆ. ನಾವು ಹೊರಗಿನ ದೇಶಗಳು ಮತ್ತು ಹೊರಗಿನ ಜನರ ಮೇಲೆ ಸುಂಕ ವಿಧಿಸಲಿದ್ದೇವೆ ,ಅದು ನಮಗೆ ನಿಜವಾಗಿಯೂ ಹಾನಿಯನ್ನುಂಟುಮಾಡುತ್ತದೆ ಸರಿ, ಅವರು ನಮಗೆ ಹಾನಿಯನ್ನುಂಟು ಮಾಡುತ್ತಾರೆ, ಆದರೆ ಅವರು ಮೂಲತಃ ತಮ ದೇಶವನ್ನು ಒಳ್ಳೆಯದಾಗಿಸಲು ಬಯಸುತ್ತಾರೆ ಎಂದು ಟ್ರಂಪ್‌ ಕಳೆದ ವಾರ

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಜ.20: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್‌ ಅವರು ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್‌ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ ಜಾನ್‌ ರಾಬರ್ಟ್‌್ಸ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್‌

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ಪ್ರಮಾಣವಚನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ. 11. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದು, ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್​ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ. ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ

ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ) newskadaba.com . 10. ಕೇರಳದ ನೂರಾರು ನರ್ಸ್‌ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ನೀಡಿದ ದೂರುಗಳ ನಂತರ ಕೇರಳದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡರು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ

(ನ್ಯೂಸ್ ಕಡಬ) newskadaba.com ನ. 29. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಅಂಗೀಕರಿಸಿದೆ. ಮಸೂದೆಯನ್ನು ಉಭಯಪಕ್ಷೀಯ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.  

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

6 ಜನರಿದ್ದ ವಿಮಾನ ಕೋಸ್ಟರಿಕಾ ರಾಜಧಾನಿಯ ಆಗ್ನೇಯಕ್ಕೆ ಅಪಘಾತ

(ನ್ಯೂಸ್ ಕಡಬ) newskadaba.com ಕೋಸ್ಟರಿಕಾ, ನ. 26. ಆರು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವು ಸೋಮವಾರ ಕೋಸ್ಟರಿಕಾದ ರಾಜಧಾನಿಯ ಆಗ್ನೇಯಕ್ಕೆ ಅಪಘಾತಕ್ಕೀಡಾಯಿತು, ಆದರೆ ವಿಮಾನದಲ್ಲಿದ್ದ ಪ್ರಯಾಣಿಕರ ಬಗ್ಗೆ ಗುರುತು ಪತ್ತೆಯಾಗಿಲ್ಲ. ಹುಡುಕಾಟ ಮತ್ತು ರಕ್ಷಣಾ ಅಧಿಕಾರಿಗಳು ಪರ್ವತದ ಮೇಲೆ ಅವಶೇಷಗಳನ್ನು ಪತ್ತೆ ಮಾಡಿದ್ದಾರೆ, ಆದರೆ ಪ್ರಯಾಣಿಕರ ಸ್ಥಿತಿ ಅಥವಾ ಅವರ ಗುರುತುಗಳ ಬಗ್ಗೆ ವಿವರಗಳನ್ನು ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಕೋಸ್ಟರಿಕಾದ ಉತ್ತರ ಕೆರಿಬಿಯನ್ ಕರಾವಳಿಯಲ್ಲಿರುವ ಟೋರ್ಟುಗುರೊದಿಂದ ವಿಮಾನವು ಹೊರಟು ಸ್ಯಾನ್ ಜೋಸ್‌ಗೆ ತೆರಳುತ್ತಿತ್ತು. ಮಧ್ಯಾಹ್ನ 3

6 ಜನರಿದ್ದ ವಿಮಾನ ಕೋಸ್ಟರಿಕಾ ರಾಜಧಾನಿಯ ಆಗ್ನೇಯಕ್ಕೆ ಅಪಘಾತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ನ.25. ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ಆಟೋಗ್ರಾಫ್ ಹೊಂದಿರುವ ಎಲೆಕ್ಟ್ರಿಕ್ ಗಿಟಾರ್‌ಗಳಿಗೆ ವಿಶೇಷ ಬೆಲೆ ನಿಗದಿಪಡಿಸಲಾಗಿದೆ. ಟ್ರಂಪ್ ಸಹಿ ಮಾಡಿರುವ ಗಿಟಾರ್ ಗಳ ಬೆಲೆ 10 ಸಾವಿರ ಡಾಲರ್ (8.45 ಲಕ್ಷ ರೂ.) ಎಂದು ಘೋಷಿಸಲಾಗಿದ್ದು, ಸಹಿ ಹಾಕಿದ ಗಿಟಾರ್​ ಕೇವಲ 275

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top