ಅಂತರ್ರಾಷ್ಟ್ರೀಯ ನ್ಯೂಸ್

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..!

(ನ್ಯೂಸ್ ಕಡಬ) newskadaba.c0m ಲಖನೌ, ಆ. 27.  ಉತ್ತರ ಪ್ರದೇಶದ ಇಂಡೋ-ನೇಪಾಳ ಗಡಿ ಜಿಲ್ಲೆ ಬಹ್ರೈಚ್‌ ನ ಮಹಾಸಿ ಬ್ಲಾಕ್‌ನ 30 ಗ್ರಾಮಗಳಲ್ಲಿ ತೋಳಗಳ ಗುಂಪು ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು 26 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆಯು ತೋಳಗಳನ್ನು ಸೆರೆ ಹಿಡಿಯಲು ಒಂಬತ್ತು ಜನರ ತಂಡವನ್ನು ನಿಯೋಜಿಸಿದೆ. ತೋಳಗಳ ಗ್ರಾಮಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದು, ಕಳೆದ ಒಂದು ತಿಂಗಳಿಂದ ಈ ಪ್ರದೇಶದ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿವೆ. […]

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 27.  ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮನಿಕಂಟ್ರೋಲ್‌ ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ದುಷ್ಕರ್ಮಿಗಳು ತಮ್ಮ ಕಾನೂನು ಬಾಹಿರ ಚುಟುವಟಿಕೆಗಳನ್ನು ನಡೆಸಲು ಟೆಲಿಗ್ರಾಂ ವೇದಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ

ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                        

(ನ್ಯೂಸ್ ಕಡಬ) newskadaba.c0m ಸುಡಾನ್, ಆ. 27.  ಯುದ್ಧ ಪೀಡಿತ ಸುಡಾನ್‌ ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದ್ದು, 20 ಕ್ಕೂ ಹೆಚ್ಚು ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರು ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ. ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಪೋರ್ಟ್ ಸುಡಾನ್‌ ನ

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                         Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಆ. 26. ಭಾರತೀಯ ಮೂಲದ ಖ್ಯಾತ ವೈದ್ಯರೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಕುರಿತು ಅಮೇರಿಕಾದಿಂದ ವರದಿಯಾಗಿದೆ. ಹತ್ಯೆಗೊಳಗಾದವರನ್ನು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾದ ಡಾ. ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ರವರು ಕ್ರಿಮ್ಸನ್ ನೆಟ್‌ ವರ್ಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಗುಂಪಿನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಅಲಬಾಮಾದ ಟಸ್ಕಲೂಸಾ ಎಂಬ ನಗರದಲ್ಲಿ ಭಾರತೀಯ ಮೂಲದ ವೈದ್ಯರ ಮೇಲೆ ಅಮೆರಿಕದಲ್ಲಿ ಗುಂಡು ಹಾರಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ದೇವಾಸ್ಥಾನದ ವಿಗ್ರಹ ವಿರೂಪ..! 12 ಮನೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!   

(ನ್ಯೂಸ್ ಕಡಬ) newskadaba.c0m ಅಗರ್ತಲಾ, ಆ. 26.  ಪಶ್ಚಿಮ ತ್ರಿಪುರಾದ ರಾಣೀರ್ ಬಜಾರ್ ಪ್ರದೇಶದ ದೇವಸ್ಥಾನವೊಂದರಲ್ಲಿ ವಿಗ್ರಹವನ್ನು ವಿರೂಪಗೊಳಿಸಿರುವ ವಿಚಾರ ತಿಳಿದ ನಂತರ ಅಪರಿಚಿತ ವ್ಯಕ್ತಿಗಳು ಕನಿಷ್ಠ 12 ಮನೆಗಳು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಮತ್ತು ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. “ಕೈತೂರ್ಬಾರಿಯಲ್ಲಿ ಕಾಳಿ ದೇವಿಯ ವಿಗ್ರಹವು ವಿರೂಪಗೊಂಡಿರುವುದು ಕಂಡುಬಂದ ನಂತರ

ದೇವಾಸ್ಥಾನದ ವಿಗ್ರಹ ವಿರೂಪ..! 12 ಮನೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!    Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 26.  ಟೆಲಿಗ್ರಾಮ್ ಪ್ಲಾಟ್‌ ಫಾರ್ಮ್ ಗೆ ಸಂಬಂಧಪಟ್ಟ ಅಪರಾಧಗಳಿಗೆ ಸಂಬಂಧಿಸಿದ ವಾರಂಟ್ ಅಡಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅವರನ್ನು ಫ್ರೆಂಚ್ ಅಧಿಕಾರಿಗಳು ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ಮೂಲಗಳು ಮಾಹಿತಿ ನೀಡಿದ್ದಾರೆ. ದುರೋವ್ ಅವರ ಬಂಧನದ ಸುದ್ದಿ ಕೇಳಿ ಕೆಲವು ರಷ್ಯಾದ ರಾಜಕಾರಣಿಗಳು ಮತ್ತು ರಾಜತಾಂತ್ರಿಕರು ಫ್ರಾನ್ಸ್ ನ ಕ್ರಮವನ್ನು ಖಂಡಿಸಿದ್ದಾರೆ. ವಿಶ್ವಾದ್ಯಂತ ಫ್ರೆಂಚ್ ರಾಯಭಾರ ಕಚೇರಿಗಳಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸುಮಾರು 900 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..! Read More »

ಅಂತರ್ರಾಷ್ಟ್ರೀಯ ನ್ಯೂಸ್

’ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ’  ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.c0m ಕೈವ್, ಆ. 24.  ಮೊದಲಿನಿಂದಲೂ ನಾವು ಶಾಂತಿ ಸ್ಥಾಪನೆಗೆ ಕರೆ ನೀಡಿದ್ದೇವೆ, ಭಾರತ ತಟಸ್ಥವಲ್ಲ. ನಾವು ಬುದ್ಧನ ಭೂಮಿಯಿಂದ ಬಂದಿದ್ದೇವೆ. ಅಲ್ಲಿ ಯುದ್ಧಕ್ಕೆ ಸ್ಥಳವಿಲ್ಲ. ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೊತೆಗಿನ ಸಂಭಾಷಣಾ ಸಮಯದಲ್ಲಿ ಈ ಹೇಳಿಕೆ ನೋಡಿದ್ದಾರೆ. ಐರೋಪ್ಯ ದೇಶಕ್ಕೆ ಸ್ವಾತಂತ್ರ್ಯ ದೊರೆತ

’ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ’  ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..!

(ನ್ಯೂಸ್ ಕಡಬ) newskadaba.c0m ಕಠ್ಮಂಡು, ಆ. 23.  ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಭಾರತೀಯ-ನೋಂದಾಯಿತ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದು ಬಂದಿದೆ. ತನಾಹುನ್ ಜಿಲ್ಲೆಯ ಐನಾ ಪಹಾರಾದಲ್ಲಿ ಹೆದ್ದಾರಿ ಮೂಲಕ ರೆಸಾರ್ಟ್ ಪಟ್ಟಣವಾದ ಪೊಖರಾದಿಂದ ರಾಜಧಾನಿ ಕಠ್ಮಂಡು ಕಡೆಗೆ ಹೋಗುತ್ತಿತ್ತು. UP 53 FT 7623 ನಂಬರ್ ಪ್ಲೇಟ್ ಹೊಂದಿರುವ ಬಸ್‌ನಿಂದ ಕನಿಷ್ಠ 29 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

“ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ”- ಪ್ರಧಾನಿ ನರೇಂದ್ರ ಮೋದಿ   

(ನ್ಯೂಸ್ ಕಡಬ) newskadaba.c0m ಪಾರ್ಸಾ, ಆ. 23.  “ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತವು ದೃಢವಾಗಿ ನಂಬುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ಅವರು ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವಾಗ, ಈ ಹೇಳಿಕೆ ನೀಡಿದ್ದಾರೆ. ಮತ್ತು ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕುರಿತು ಪ್ರಸ್ತಾಪಿಸಿದ್ದಾರೆ.      

“ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ”- ಪ್ರಧಾನಿ ನರೇಂದ್ರ ಮೋದಿ    Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ  ಕೆಎಲ್ ರಾಹುಲ್ ನಿವೃತ್ತಿ ಘೋಷಣೆ      ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ KL Rahul ನಿವೃತ್ತಿ ಘೋಷಿಸಿರುವ ಸುದ್ದಿಯೊಂದು ಕಾಡ್ಗಿಚ್ಚಿನಂತೆ ಹಬ್ಬಿದ್ದು, ವ್ಯಾಪಕ ವೈರಲ್ ಆಗುತ್ತಿದೆ. ಕೆಎಲ್ ರಾಹುಲ್ ವೃತ್ತಿಪರ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ರಾಹುಲ್ ಅವರ ಇನ್‌ ಸ್ಟಾಗ್ರಾಮ್ ಖಾತೆಯಿಂದ ಅಪ್ಲೋಡ್ ಆಗಿದೆ ಎಂದು ಹೇಳಲಾಗುತ್ತಿರುವ ಸ್ಟೋರಿಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಹರಿದಾಡುತ್ತಿದೆ.      

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ  ಕೆಎಲ್ ರಾಹುಲ್ ನಿವೃತ್ತಿ ಘೋಷಣೆ      ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top