ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ

(ನ್ಯೂಸ್‌ ಕಡಬ) newskadaba.com,  ಜ.16 : ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಈ ಮೂಲಕ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವ ಟ್ರಂಪ್ ಅವರ ಬಹುದಿನಗಳ ಹೆಬ್ಬಯಕೆ ಈಡೇರಿದಂತಾಗಿದೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಬಳಿಕ ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ ಅವರು, “ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಲಾಗಿದೆ. ವೆನೆಜುವೆಲಾದ […]

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

(ನ್ಯೂಸ್‌ ಕಡಬ) newskadaba.com: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನ ಇತ್ತೀಚಿನ ಹೇಳಿಕೆಗಳನ್ನು ನೋಡಿದಾಗ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತಿದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇರಾನ್‌: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು

(ನ್ಯೂಸ್‌ ಕಡಬ) newskadaba.com ,ಜ.10 :  ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದೀಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ರಾಜಧಾನಿ ಟೆಹ್ರಾನ್ ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದುಬಂದಿದೆ. ಅಲ್ಲದೇ ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ ಸಮೂಹದ ಮೇಲೆ ಏಕಾಏಕಿ ಗುಂಡು

ಇರಾನ್‌: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು

(ನ್ಯೂಸ್‌ ಕಡಬ) newskadaba.com, ಜ.05 ಸೌದಿ ಅರೇಬಿಯಾ: ಮದೀನಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಮಲಯಾಳಿ ಕುಟುಂಬದ 4 ಜನ ಸದಸ್ಯರು ಮೃತಪಟ್ಟಿದ್ದಾರೆ. ಜೆಡ್ಡಾದಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ಜಲೀಲ್ ಹಾಗೂ ಅವರ ಕುಟುಂಬ ಮದೀನಾಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತರನ್ನು ಮಂಜೇರಿ ವೆಲ್ಲಿಲ ನಿವಾಸಿ ಅಬ್ದುಲ್ ಜಲೀಲ್ (52), ಅವರ ಪತ್ನಿ ತಸ್ನಾ ತೋಡೆಂಗಲ್ (40), ಪುತ್ರ ಆದಿಲ್ (14) ಮತ್ತು ಜಲೀಲ್ ಅವರ ತಾಯಿ ಮೈಮುನಾಥ್ ಕಕ್ಕೆಂಗಲ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್

(ನ್ಯೂಸ್‌ ಕಡಬ) newskadaba.com,ಡಿ.31: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯು ಬಾಂಗ್ಲಾದ ಢಾಕಾದಲ್ಲಿ ಡಿಸೆಂಬರ್ ೩೧ರಂದು ನಡೆಯಲಿದ್ದು, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಎಸ್. ಜೈಶಂಕರ್ ನಾಳೆ ಭಾಗವಹಿಸಲಿದ್ದಾರೆ. ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದ್ದು, ಅವರ ಪತಿ ಮತ್ತು ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಖಲೀದಾ ಜಿಯಾ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ನಾಯಕಿ ಮತ್ತು

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ

(ನ್ಯೂಸ್‌ ಕಡಬ) newskadaba.com,ಡಿ.29:  ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ಮುಖ್ಯಸ್ಥೆ,ದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಗೌರವಹೊಂದಿದ್ದ ಖಲೀದಾ ಜಿಯಾ(80) ನಿಧನರಾಗಿದ್ದಾರೆ.ತಮ ಬದ್ಧ ವೈರಿ ಶೇಖ್‌ ಹಸೀನಾ ಜೊತೆಗೆ ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿದ್ದ ಜಿಯಾ ಮೂರು ಬಾರಿ ಪ್ರಧಾನಿಯಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಜಾನೆ ಢಾಕಾದಲ್ಲಿ ನಿಧನರಾಗಿದ್ದಾರೆ. 1975 ರಲ್ಲಿ ಅರೆ-ಮಿಲಿಟರಿ ಆಡಳಿತದ ನಂತರ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವಲ್ಲಿ ಅವರ ಪಾತ್ರಕ್ಕಾಗಿ ಅವರ ಬೆಂಬಲಿಗರು ಅವರನ್ನು ಮೆಚ್ಚುತ್ತಾರೆ. 1990 ರ

ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ನ್ಯೂಝಿಲೆಂಡ್ ಆಲ್‌ರೌಂಡರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ

(ನ್ಯೂಸ್‌ ಕಡಬ) newskadaba.com,ಡಿ.29: ನ್ಯೂಝಿಲೆಂಡ್ ತಂಡದ ಅನುಭವಿ ಆಲ್‌ರೌಂಡರ್ ಡೌಗ್ ಬ್ರೇಸ್‌ವೆಲ್ 18 ವರ್ಷದ ಕ್ರಿಕೆಟ್‌ ಕರಿಯರ್‌ಗೆ ಅಂತ್ಯ ಹೇಳಿ, ಎಲ್ಲಾ ಮಾದರಿಯ ಕ್ರಿಕೆಟ್‌ದಿಂದ ವಿದಾಯ ಘೋಷಿಸಿದ್ದಾರೆ. ಬ್ರೇಸ್‌ವೆಲ್ ನ್ಯೂಝಿಲೆಂಡ್ ಪರ 28 ಟೆಸ್ಟ್, 21 ಏಕದಿನ ಹಾಗೂ 20 ಟಿ20 ಪಂದ್ಯಗಳಲ್ಲಿ ಭಾಗಿಯಾಗಿದ್ದರು. ಟೆಸ್ಟ್‌ಗಳಲ್ಲಿ ಅವರು 568 ರನ್‌ಗಳೊಂದಿಗೆ 74 ವಿಕೆಟ್‌ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ 221 ರನ್ ಹಾಗೂ 26 ವಿಕೆಟ್, ಟಿ20ಗಳಲ್ಲಿ 126 ರನ್ ಮತ್ತು 20 ವಿಕೆಟ್‌ ಪಡೆದು ಗಮನ ಸೆಳೆದವರು.

ನ್ಯೂಝಿಲೆಂಡ್ ಆಲ್‌ರೌಂಡರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, ಹಲವರು ಗಂಭೀರ

(ನ್ಯೂಸ್‌ ಕಡಬ) newskadaba.com,ಡಿ.29: ದಕ್ಷಿಣ ಮೆಕ್ಸಿಕೋದಲ್ಲಿ ಇಂಟರ್‌ಓಷಿಯಾನಿಕ್ ರೈಲು ಹಳಿ ತಪ್ಪಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಪರಿಣಾಮವಾಗಿ ಪೆಸಿಫಿಕ್ ಮಹಾಸಾಗರವನ್ನು ಮೆಕ್ಸಿಕೋ ಕೊಲ್ಲಿಯೊಂದಿಗೆ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರೈಲು ನಿಜಾಂಡಾ ಪಟ್ಟಣದ ಬಳಿ ಹಾದುಹೋಗುವಾಗ ಹಳಿ ತಪ್ಪಿರುವುದು ತಿಳಿದು ಬಂದಿದೆ. ಈ ರೈಲು ಅಪಘಾತವು ಓಕ್ಸಾಕಾ ಮತ್ತು ವೆರಾಕ್ರೂಜ್ ನಡುವಿನ ಮಾರ್ಗದಲ್ಲಿ ಸಂಭವಿಸಿದೆ. ಅಪಘಾತದ ವೇಳೆಯಲ್ಲಿ 241

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, ಹಲವರು ಗಂಭೀರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ; ಟ್ರಂಪ್

(ನ್ಯೂಸ್‌ ಕಡಬ) newskadaba.com,ಡಿ.29:  ರಷ್ಯಾ ಉಕ್ರೇನ್‌ ನಡುವಿನ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ.ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್‌ ಝೆಲೆನ್ಸ್ಕಿ ಅವರೊಂದಿಗೆ ತನ್ನ ಖಾಸಗಿ ನಿವಾಸ ಫ್ಲೋರಿಡಾದ ಮಾರ್‌-ಎ-ಲಾಗೊದಲ್ಲಿ ಟ್ರಂಪ್‌ ಮಹತ್ವದ ಸಭೆ ನಡೆಸಿದರು.ಎರಡು ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ನಾವು ಎರಡೂ ಕಡೆಯವರೊಂದಿಗೆ ಬಹಳ ಹತ್ತಿರವಾಗಿದ್ದೇವೆ ಎಂದರು. ಯುದ್ಧವನ್ನು ಕೊನೆಗೊಳಿಸುವ ಕರಡು ಒಪ್ಪಂದ ಬಹುತೇಕ ಪೂರ್ಣಗೊಂಡಿದೆ. ಎರಡೂ ಕಡೆಯವರು ಆ ಯುದ್ಧವನ್ನು ಕೊನೆಗೊಳಿಸುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ

ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ; ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್

(ನ್ಯೂಸ್‌ ಕಡಬ) newskadaba.com,ಡಿ.29 ಚೆನ್ನೈ: ತಮಿಳು ಚಿತ್ರರಂಗದ  ದಳಪತಿ ವಿಜಯ್ ಅಧಿಕೃತವಾಗಿ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಸುಮಾರು 33 ವರ್ಷಗಳ ಕಾಲ ನಾಯಕನಾಗಿ ಸಿನಿಪಯಣ ನಡೆಸಿದ ವಿಜಯ್, ಅಭಿಮಾನಿಗಳ ಭಾರೀ ಬೆಂಬಲದ ನಡುವೆ ಈ ನಿರ್ಧಾರ ಪ್ರಕಟಿಸಿ ಭಾವುಕರಾದರು. 51 ವರ್ಷದ ನಟ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸಲಿದ್ದಾರೆ.ಮಲೇಷ್ಯಾದಲ್ಲಿ ನಡೆದ ‘ಜನ ನಾಯಗನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ಈ ಚಿತ್ರದ ನಂತರ ನಟನೆಯಿಂದ ದೂರ ಸರಿಯುವುದಾಗಿ ಘೋಷಿಸಿದರು. “ಜನರು ನನಗಾಗಿ

ನಟನೆಗೆ ಗುಡ್ ಬೈ ಹೇಳಿದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top