ದೇವಾಲಯದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಗರ್ಭಗುಡಿ ಸೇರಿದಂತೆ ದೇವಾಲಯದೊಳಗೆ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣವನ್ನು ತಡೆಯುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ದರ್ಶನದ ಸಂದರ್ಭದಲ್ಲಿ ಭಕ್ತರು ಮೊಬೈಲ್ ಅಥವಾ ಕ್ಯಾಮೆರಾ ಬಳಸುವುದರಿಂದ ಸಮಯ ವ್ಯರ್ಥವಾಗುವುದರ ಜೊತೆಗೆ ಇತರ ಭಕ್ತರ ದರ್ಶನಕ್ಕೂ ಅಡ್ಡಿಯಾಗಬಹುದು. ಸೆಲೆಬ್ರಿಟಿಗಳು ಹಾಗೂ ವಿಐಪಿಗಳು ದೇವಾಲಯಕ್ಕೆ ಭೇಟಿ ನೀಡುವ ಸಂದರ್ಭದಲ್ಲೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣದ ಮೇಲೆ ನಿರ್ಬಂಧ ಇರಲಿದೆ. ವಿಐಪಿ ಭೇಟಿಯ ಮಾಹಿತಿ ಮುಂಚಿತವಾಗಿ ನೀಡುವಂತೆ ಸೂಚಿಸಲಾಗಿದೆ.
ಭಕ್ತರ ಅನುಕೂಲಕ್ಕಾಗಿ ದೇವಾಲಯದ ಪ್ರಮುಖ ಗೋಪುರಗಳ ಬಳಿ ವಿಶೇಷ ಮೊಬೈಲ್ ಭದ್ರತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಭಕ್ತರು ಪ್ರತಿ ಮೊಬೈಲ್ ಫೋನ್‌ಗೆ ರೂ.5 ಶುಲ್ಕ ಪಾವತಿಸಿ ಟೋಕನ್ ಪಡೆದು ತಮ್ಮ ಫೋನ್ ಅನ್ನು ಭದ್ರತಾ ಕೇಂದ್ರದಲ್ಲಿ ಹಸ್ತಾಂತರಿಸಬಹುದು. ದರ್ಶನ ಮುಗಿದ ಬಳಿಕ ಟೋಕನ್ ತೋರಿಸಿ ಮೊಬೈಲ್‌ನ್ನು ಮರಳಿ ಪಡೆಯಬಹುದು.
ದೇವಾಲಯದ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ಇರಿಸಲಾಗುತ್ತದೆ. ನಿಷೇಧದ ನಡುವೆಯೂ ಮೊಬೈಲ್ ಫೋನ್‌ನ್ನು ದೇವಾಲಯದೊಳಗೆ ಕೊಂಡೊಯ್ದು ಬಳಸುವುದು ಕಂಡುಬಂದರೆ, ಫೋನ್‌ನ್ನು ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಗುವುದು.. ಸೆಪ್ಟೆಂಬರ್ 1ರಿಂದ ಜಾರಿಯಾಗಲಿರುವ ಈ ಹೊಸ ನಿಯಮದಿಂದ ದೇವಾಲಯದ ಪಾವಿತ್ರ್ಯ ಹಾಗೂ ಶಿಸ್ತು ಕಾಪಾಡುವ ಜೊತೆಗೆ ಭಕ್ತರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
]]>ಅವರು ದುಬೈಯ ಶೇಕ್ ಜಾಯೇದ್ ರಸ್ತೆಯಲ್ಲಿರುವ ಕಾರು ಶೋರೂಮ್‌ನಲ್ಲಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಸ್ಫೋಟ ಸಂಭವಿಸಿದೆ. ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಪೌಲ್ ಅವರು ಮೃತಪಟ್ಟಿರುವುದನ್ನು ದುಬೈಯ ಭಾರತೀಯ ದೂತವಾಸ ಕಚೇರಿ ದೃಢಪಡಿಸಿದೆ.
ದುಬೈಯ ಸರಕಾರದ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಈ ಸ್ಫೋಟದಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ದುಬೈ ನಾಗರಿಕ ರಕ್ಷಣಾ ತಂಡಗಳು ಈ ಘಟನೆಗೆ ತತ್‌ಕ್ಷಣವೇ ಸ್ಪಂದಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ಅಲ್ಲದೆ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
]]>SDF ದರ: ಶೇ. 5.00, MSF ಮತ್ತು ಬ್ಯಾಂಕ್ ದರ: ಶೇ. 5.50ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ FY27 ರ ಚಿಲ್ಲರೆ ಹಣದುಬ್ಬರ ಅಂದಾಜನ್ನು ಶೇ. 5.1 ರಿಂದ ಶೇ. 5.0 ಕ್ಕೆ ಇಳಿಸಲಾಗಿದೆ.
]]>೨೦೧೯ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಶೋಕ್ ನಾರಾಯಣ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದಲೂ ಈತ ಬಂಧನದಿಂದ ತಪ್ಪಿಸಿಕೊಳ್ಳಲು ವಿಳಾಸ ಬದಲಾಯಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ನಾಪತ್ತೆ ಆರೋಪಪಟ್ಟಿ ಕೂಡ ಸಲ್ಲಿಕೆಯಾಗಿತ್ತು.ತನಿಖೆಯ ವೇಳೆ ಆರೋಪಿ ವಿದೇಶಕ್ಕೆ ಪರಾರಿಯಾಗಿರುವುದು ತಿಳಿದುಬಂದಿತ್ತು. ತಕ್ಷಣ ಜಾಗೃತರಾದ ಪೊಲೀಸರು, ಆತನ ಪಾಸ್‌ಪೋರ್ಟ್ ವಿವರಗಳನ್ನು ಸಂಗ್ರಹಿಸಿ ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ‘ಲುಕ್ ಔಟ್ ಸರ್ಕ್ಯುಲರ್’ ಹೊರಡಿಸಿದ್ದರು.
ಆಗಸ್ಟ್ ೧ರಂದು ಆರೋಪಿ ವಿದೇಶದಿಂದ ಭಾರತಕ್ಕೆ ಆಗಮಿಸುತ್ತಿದ್ದಂತೆ ಮುಂಬೈ ವಿಮಾನ ನಿಲ್ದಾಣದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದರು. ಬಳಿಕ ಆಗಸ್ಟ್ ೨ರಂದು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಎಎಸ್‌ಐ ಜಗದೀಶ್ ಹಾಗೂ ಸಿಬ್ಬಂದಿ ರವಿಕುಮಾರ್ ಅವರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು, ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
]]>AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನವು ಏಕಾಏಕಿ ಸುಮಾರು 300 ಅಡಿ ಕುಸಿದಿದೆ. ಈ ಘಟನೆಗೆ ಕ್ಲಿಯರ್ ಏರ್ ಟರ್ಬುಲೆನ್ಸ್ ಅಥವಾ ಅಪ್‌ಡ್ರಾಫ್ಟ್/ಡೌನ್‌ಡ್ರಾಫ್ಟ್ (ಗಾಳಿಯ ಮೇಲ್ಮುಖ ಹಾಗೂ ಕೆಳಮುಖ ಹರಿವು) ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಟರ್ಬುಲೆನ್ಸ್‌ನಿಂದ ಕೆಲ ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದರೂ, ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ಏರ್ ಇಂಡಿಯಾ ತಿಳಿಸಿದೆ.
ಏರ್ ಇಂಡಿಯಾ ಪ್ರಕಟಣೆಯಲ್ಲಿ, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ಸಂಸ್ಥೆಯ ಮೊದಲ ಆದ್ಯತೆಯಾಗಿದ್ದು, ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ನೀಡಲಾಗಿದೆ ಎಂದು ತಿಳಿಸಿದೆ. ವಿಮಾನದಲ್ಲಿ ಉಂಟಾದ ಈ ಟರ್ಬುಲೆನ್ಸ್ ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಆದರೆ, ವಿಮಾನವು ಯಾವುದೇ ಅಪಾಯವಿಲ್ಲದೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ಎಲ್ಲಾ 134 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
]]>ನೀತಿ ಆಯೋಗದ ’ಅಟಲ್ ಇನ್ನೋವೇಶನ್ ಮಿಷನ್ ’ (AIM) ಅಡಿಯಲ್ಲಿ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026’ ಗೌರವಕ್ಕೆ ಭಾಜನರಾದ ಅಕ್ಷಯ್ ಮಾಶೇಲ್ಕರ್ (ಎಕ್ಸ್‌ಪರಿಮೈಂಡ್ ಲ್ಯಾಬ್ಸ್ ಪ್ರೈ. ಲಿ.), ಅನುಷಾ ಪ್ರಜ್ವಲ್ (ಮಾವೇದಾಸ್ ಫುಡ್ಸ್ ಆಂಡ್ ಸಿರಿಯಲ್ಸ್ ಪ್ರೈ. ಲಿ.) ಹಾಗೂ ರತ್ನಾಕರ ನಾಯಕ್ (ಡಬ್ಲ್ಯೂ.ಡಬ್ಲ್ಯೂ.ಆರ್. ಇನ್ನೋವೇಶನ್ಸ್ ಪ್ರೈ. ಲಿ.) ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ಅಭಿನಂದಿಸಿ ಮಾತನಾಡಿದರು.
ಸಂಸದರಿಂದ ಅಭಿನಂದನೆ ಸ್ವೀಕರಿಸಿದ ಜಿಲ್ಲೆಯ ಮೂವರು ಇನ್ನೋವೇಟರ್ಸ್ ತಮ್ಮ ಆವಿಷ್ಕಾರದ ಪಯಣವನ್ನು ಹಂಚಿಕೊಂಡರು. ತಮ್ಮ ತಂತ್ರಜ್ಞಾನ ಹಾಗೂ ಹೊಸ ಆಲೋಚನೆಗಳು ಗ್ರಾಮೀಣ ಮತ್ತು ತಳಮಟ್ಟದಲ್ಲಿ ಹೇಗೆ ಸಕಾರಾತ್ಮಕ ಬದಲಾವಣೆ ತರುತ್ತಿವೆ ಎಂಬುದನ್ನು ವಿವರಿಸಿದರು.
ಇದೇ ವೇಳೆ ದೇಶಾದ್ಯಂತ ಆಯ್ಕೆಯಾದ 26 ನವೋದ್ಯಮಿಗಳ ಪೈಕಿ ದಕ್ಷಿಣ ಕನ್ನಡಕ್ಕೆ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತಂದ ಈ ಮೂವರು ಸ್ಟಾರ್ಟ್ ಅಪ್ ಗಳ ಸಂಸ್ಥಾಪಕರ ಸಾಧನೆಯನ್ನು ಸಂಸದರು ಮುಕ್ತಕಂಠದಿಂದ ಶ್ಲಾಘಿಸಿದರು. ನೈಜ ಜಗತ್ತಿನ ಸವಾಲುಗಳಿಗೆ ತಂತ್ರಜ್ಞಾನ ಹಾಗೂ ಆವಿಷ್ಕಾರಗಳ ಮೂಲಕ ಪರಿಹಾರ ಮೂಲಕ ಸಮಾಜಕ್ಕೆ ಉಪಯುಕ್ತವಾಗುವಂತಹ ಇನ್ನಷ್ಟು ಹೊಸ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು ನೀಡಿದರು. ಅಲ್ಲದೆ, ಕರಾವಳಿ ಭಾಗದಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
“ಸ್ಥಳೀಯ ಸಂಶೋಧನೆಗಳು ಮತ್ತು ಸ್ವಾವಲಂಬನೆಯು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ವಿಕಸಿತ ಭಾರತ 2047 ಗುರಿಯನ್ನು ತಲುಪಲು ಅಡಿಪಾಯವಾಗಿದೆ. ತಂತ್ರಜ್ಞಾನ, ಕೃಷಿ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸ್ಥಳೀಯ ಆವಿಷ್ಕಾರಗಳು ದೇಶವನ್ನು ಆರ್ಥಿಕವಾಗಿ ಬಲಪಡಿಸುತ್ತಿವೆ. ನಮ್ಮ ದಕ್ಷಿಣ ಕನ್ನಡದ ಯುವ ಉದ್ಯಮಿಗಳು ಹಾಗೂ ಆವಿಷ್ಕಾರಕರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಸ್ಥಳೀಯ ಸವಾಲುಗಳಿಗೆ ಜಾಗತಿಕ ಮಟ್ಟದ ಪರಿಹಾರ ಕಂಡುಕೊಳ್ಳುವ ನಮ್ಮ ಕರಾವಳಿಯ ಪ್ರತಿಭೆಗಳಿಗೆ ಬೇಕಾದ ಅಗತ್ಯ ಪ್ರೋತ್ಸಾಹ ನೀಡಲು ಬದ್ಧ” – ಕ್ಯಾ. ಬ್ರಿಜೇಶ್ ಚೌಟ
]]>ಮೃತಪಟ್ಟವರನ್ನು ಇಡುಕ್ಕಿಯ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಎಂದು ಗುರುತಿಸಲಾಗಿದೆ. ಅವಶೇಷಗಳಡಿಯಿಂದ ಅವರ ಮೃತದೇಹವನ್ನು ಹೊರೆತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತ್ಯೇಕ ಘಟನೆಯಲ್ಲಿ, ಅಡೂರ್ಮಲಾ ಎಂಬಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಮಣ್ಣು ಮತ್ತು ಅವಶೇಷಗಳಡಿಯಲ್ಲಿ ವ್ಯಕ್ತಿಯೋರ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವೆಡೆ ಹಾನಿಯಾಗಿದ್ದು, ಕೊಚ್ಚಿ–ಧನುಷ್ಕೋಡಿ ರಾಷ್ಟ್ರೀಯ ಹೆದ್ದಾರಿಯ ಆದಿಮಲಿಯ ಮಾಚಿಪ್ಲಾವು ಸಮೀಪ ಭೂಕುಸಿತ ಸಂಭವಿಸಿದೆ. ಭೂಕುಸಿತದ ವೇಳೆ ಕಾರು ಹಾಗೂ ಲಾರಿ ಮಣ್ಣಿನಡಿ ಸಿಲುಕಿರುವ ಬಗ್ಗೆ ವರದಿಯಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
]]>ಕೃತಕ ಬುದ್ಧಿಮತ್ತೆ ಆಧಾರಿತ ಕಂಟೆಂಟ್ ಮಾಡರೇಶನ್ ವ್ಯವಸ್ಥೆಯಲ್ಲಾದ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ ಮೆಟಾ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ಷಮೆಯಾಚಿಸಿದೆ.ಮೆಟಾ ಸಂಸ್ಥೆಯ ಕ್ಷಮೆಯಾಚನೆಯನ್ನು ಸ್ವೀಕರಿಸಿದರೂ, “ತಾಂತ್ರಿಕ ದೋಷ” ಎಂಬ ಕಾರಣಕ್ಕೆ ಸರ್ಕಾರ ತೃಪ್ತಿ ವ್ಯಕ್ತಪಡಿಸಿಲ್ಲ. ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್ ಅವರು ಎಐ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.
ವಿವಿಐಪಿ ಖಾತೆಗಳ ಪೋಸ್ಟ್‌ಗಳನ್ನು ಬ್ಲಾಕ್ ಮಾಡುವ ಮೊದಲು ಕನಿಷ್ಠ ಇಬ್ಬರು ಹಿರಿಯ ಅಧಿಕಾರಿಗಳು ಪರಿಶೀಲಿಸುವ ವ್ಯವಸ್ಥೆ ಹಾಗೂ ಹೆಚ್ಚುವರಿ ಭದ್ರತೆ ನೀಡುವುದಾಗಿ ಮೆಟಾ ಭರವಸೆ ನೀಡಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಮುಖಾಮುಖಿ ವಿಚಾರಣೆಗಾಗಿ ಮೆಟಾ ಮತ್ತು ಇನ್‌ಸ್ಟಾಗ್ರಾಮ್‌ನ ಜಾಗತಿಕ ಮುಖ್ಯಸ್ಥರಿಗೆ ಸಮನ್ಸ್ ನೀಡಿದ್ದು, ಉನ್ನತ ಮಟ್ಟದ ಸಭೆ ನಡೆಯುವ ಸಾಧ್ಯತೆ ಇದೆ.
]]>ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರು ಮಿತಿಮೀರಿದ ಬಲಪ್ರಯೋಗ ನಡೆಸಿದ್ದರೆ ಅದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕಾಗುತ್ತದೆ. ಜೊತೆಗೆ, ಇಂತಹ ಸನ್ನಿವೇಶಗಳನ್ನು ನಿರ್ವಹಿಸಲು ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲೂ ಏಕರೂಪದ ಪೊಲೀಸ್ ಶಿಷ್ಟಾಚಾರ ಜಾರಿಗೆ ತರುವುದು ಅತ್ಯಗತ್ಯ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಯ ಕುಟುಂಬಗಳ ಪರ ವಕೀಲರಿಗೂ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನೀಡಿತು. “ವಿದ್ಯಾರ್ಥಿಗಳಾಗಲಿ ಅಥವಾ ಪೊಲೀಸರಾಗಲಿ, ಯಾರಿಗೇ ಗಾಯಗಳಾದರೂ ಅದು ಸಮಾನ ಕಾಳಜಿಯ ವಿಷಯ” ಎಂದ ನ್ಯಾಯಪೀಠ, ಪ್ರತಿಭಟನೆ ವೇಳೆ ಪೊಲೀಸರ ರಕ್ಷಣೆಗೆ ಅಗತ್ಯವಿರುವ ಹೆಲ್ಮೆಟ್ ಹಾಗೂ ಉಪಕರಣಗಳನ್ನು ಏಕೆ ಒದಗಿಸಿಲ್ಲ ಎಂಬ ಬಗ್ಗೆ ರಾಜ್ಯ ಸರ್ಕಾರಗಳಿಂದ ಉತ್ತರ ಕೇಳಲಾಗುವುದು ಎಂದು ತಿಳಿಸಿತು.
]]>
ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ವಿಪಕ್ಷಗಳ ತೀವ್ರ ಆಕ್ರೋಶ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಅಭಿಯಾನದ ಪ್ರಮುಖ ಆಗ್ರಹವಾಗಿತ್ತು.
ದೇಶದ ಏಕತೆ ಕಾಪಾಡಲು, ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದತ್ತ ಗಮನಹರಿಸಲು ಅನುವು ಮಾಡಿಕೊಡಲು ಪ್ರಧಾನಮಂತ್ರಿಗೆ ರಾಜೀನಾಮೆ ನೀಡಿರುವುದಾಗಿ ಪ್ರಧಾನ್ ತಿಳಿಸಿದ್ದಾರೆ.
]]>