ರಾಷ್ಟ್ರೀಯ ನ್ಯೂಸ್

ಪ್ಯಾರಾಲಿಂಪಿಕ್ಸ್- 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 30. ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖರಾ ಭಾಗವಹಿಸಿ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಸತತವಾಗಿ ಪ್ಯಾರಾಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಎರಡನೇ ಭಾರತೀಯ ಪ್ಯಾರಾ-ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಅವನಿ ಲೇಖರಾ ಅವರು ಶುಕ್ರವಾರದಂದು 249.7 ನೊಂದಿಗೆ ಮೂರು ವರ್ಷಗಳ ಹಿಂದೆ ಸ್ಥಾಪಿಸಿದ್ದ 249.6 ರ ಪ್ಯಾರಾಲಿಂಪಿಕ್ಸ್ ದಾಖಲೆಯನ್ನು ಮುರಿದಿದ್ದಾರೆ.

ಪ್ಯಾರಾಲಿಂಪಿಕ್ಸ್- 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ದೆಹಲಿ, ಆ. 30. ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಓರ್ವ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೂ ಕೆಲ ನಿಮಿಷಗಳ ಮುಂಚೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ ಆಗಿ

ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಕಠಿಣ ಶಿಕ್ಷೆಯನ್ನು ಕೋರಿ ಎರಡನೇ ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 30.  ಅತ್ಯಾಚಾರ-ಕೊಲೆಯಂತಹ ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಮತ್ತು ಅನುಕರಣೀಯ ಶಿಕ್ಷೆಯನ್ನು ಕೋರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಚಾರಣಾ ಅಧಿಕಾರಿಗಳಿಂದ ಸಕಾಲಿಕ ಪ್ರಕರಣವನ್ನು ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯ ನಿಬಂಧನೆಗಳಿಗೆ ಅವರು ಕರೆ ನೀಡಿದ್ದಾರೆ ಮತ್ತು ಅವರ ಹಿಂದಿನ ಪತ್ರಕ್ಕೆ ಪ್ರತಿಕ್ರಿಯೆಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್

ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಕಠಿಣ ಶಿಕ್ಷೆಯನ್ನು ಕೋರಿ ಎರಡನೇ ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                     

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು

ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                      Read More »

ರಾಷ್ಟ್ರೀಯ ನ್ಯೂಸ್

ಚಂಡಮಾರುತ ತೀವ್ರವಾಗಿದ್ದು ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ಮುಂಗಾರು ಮಳೆ ಋತುವಿನ ಈ ಆಗಸ್ಟ್‌ ತಿಂಗಳಲ್ಲಿ ಅಪರೂಪದ ಹವಾಮಾನ ವಿದ್ಯಮಾನದಲ್ಲಿ, ಗುಜರಾತ್‌ನ ಸೌರಾಷ್ಟ್ರ-ಕಚ್ ಪ್ರದೇಶದ ಮೇಲೆ ಚಂಡಮಾರುತವು ತೀವ್ರವಾಗಿದ್ದು, ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಹೊರಡಿಸಿದ ರಾಷ್ಟ್ರೀಯ ಬುಲೆಟಿನ್ ಸೌರಾಷ್ಟ್ರ ಮತ್ತು ಕಛ್ ಮೇಲೆ ಆಳವಾದ ವಾಯುಭಾರ ಕುಸಿತವು ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಕಚ್ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯ ಈಶಾನ್ಯ ಅರೇಬಿಯನ್ ಸಮುದ್ರದ

ಚಂಡಮಾರುತ ತೀವ್ರವಾಗಿದ್ದು ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್  

(ನ್ಯೂಸ್ ಕಡಬ) newskadaba.com ಮುಂಬೈ, ಆ. 30.  ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್   Read More »

ರಾಷ್ಟ್ರೀಯ ನ್ಯೂಸ್

ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಶ್ರೀರಾಂಪುರದ ಹುಡುಗಿ ಅನುಷ್ಕಾ ಸರ್ಕಾರ್ ಸತತ ನಾಲ್ಕು ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಪಶ್ಚಿಮ ಬಂಗಾಳದವರಾದ ಅನುಷ್ಕಾ ಚಿಕ್ಕ ವಯಸ್ಸಿನಲ್ಲೇ ಸಾರ್ವಜನಿಕ ಸೇವೆಯ ಆಸಕ್ತಿ ಹೊಂದಿದ್ದರು. ಮೂಲತಃ ಹೂಗ್ಲಿಯ ಶ್ರೀರಾಂಪುರದವರಾದ ಅನುಷ್ಕಾ, ದೃಢಸಂಕಲ್ಪ ಮತ್ತು ಪರಿಶ್ರಮದಿಂದ ತಾನು ಅಂದುಕೊಂಡಿದ್ದನ್ನು ಸಾಧಿಸಿದರು. ತಮ್ಮ ಶೈಕ್ಷಣಿಕ ಪ್ರಯಾಣವನ್ನು ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾರಂಭಿಸಿದರು ಮತ್ತು ನಂತರ ಲೇಡಿ ಬ್ರಬೋರ್ನ್ ಕಾಲೇಜಿನಲ್ಲಿ ಭೂಗೋಳಶಾಸ್ತ್ರದಲ್ಲಿ ಪದವಿ ಪಡೆದರು.

ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್ Read More »

ರಾಷ್ಟ್ರೀಯ ನ್ಯೂಸ್

150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ರಜೆ ನೀಡಿ ಕಳುಹಿಸಿದೆ. ಹಣಕಾಸು ಸೇರಿದಂತೆ ಕಾನೂನು ಗುತ್ತಿಗೆದಾರರ ಸಮಸ್ಯೆಗಳನ್ನು ಸ್ಪೈಸ್ ಜೆಟ್ ಎದುರಿಸುತ್ತಿದೆ. ಈ ಹಿನ್ನಲೆ ವಿಮಾನಗಳು ಕಡಿಮೆ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆರ್ಥಿಕ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳವರೆಗೆ ವೇತನವಿಲ್ಲದೆ ರಜೆಯ ಮೇಲೆ ಕಳುಹಿಸಲಾಗುವುದು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.    

150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ Read More »

ರಾಷ್ಟ್ರೀಯ ನ್ಯೂಸ್

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

(ನ್ಯೂಸ್ ಕಡಬ) newskadaba.com ಗುವಾಹಟಿ, ಆ. 29. ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನೋಂದಾಯಿಸುವ ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ ಅಂಗೀಕರಿಸಿದೆ ಎಂದು ವರದಿಯಾಗಿದೆ. ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ – 1935 ರದ್ದುಗೊಳಿಸುವ ಮಸೂದೆ ಮತ್ತು ರದ್ದುಗೊಳಿಸುವ ಸುಗ್ರೀವಾಜ್ಞೆ 2024 ಅನ್ನು ವಿಧಾನಸಭೆಯಲ್ಲಿ ಆಗಸ್ಟ್ 22 ರಂದು ಮಂಡಿಸಿದ್ದರು. ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಹಿಮಂತ

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ Read More »

ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಆರೆಸ್ಟ್

(ನ್ಯೂಸ್ ಕಡಬ) newskadaba.com ಥಾಣೆ, ಆ. 29.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಶಿಕ್ಷಕ ತನ್ನ ಮೊಬೈಲ್ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದು, ಈ ವಿಚಾರವನ್ನು ಬಾಲಕಿಯೊಬ್ಬಳು ತನ್ನ ಪೋಷಕರಿಗೆ ತಿಳಿಸಿದ್ದರಿಂದ ಆತನ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

ಶಾಲೆಯಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಆರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top