ರಾಷ್ಟ್ರೀಯ ನ್ಯೂಸ್

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ ಬಾಂಗ್ಲಾದೇಶ ಸೇನೆ ವಶಕ್ಕೆ                           

(ನ್ಯೂಸ್ ಕಡಬ)newskadaba.com ಢಾಕಾ, ಆ.06. ನೆರೆಯ ಬಾಂಗ್ಲಾದೇಶದಲ್ಲಿನ ಹಿಂಸಾಚಾರ, ಪ್ರಕ್ಷುಬ್ಧತೆಗೆ ಬೆದರಿದ ಶೇಕ್ ಹಸೀನಾ ಜೀವ ಭಯದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪರಾರಿಯಾದ ನಂತರ ಸೇನೆಯು ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಿದೆ ಎಂದು ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಘೋಷಿಸಿದ್ದಾರೆ. ರಾಜೀನಾಮೆಗೆ ಒತ್ತಡ ಹೆಚ್ಚಾದ ನಂತರ ಶೇಕ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ದೇಶದಿಂದ ಪರಾರಿಯಾಗಿದ್ದಾರೆ. ಢಾಕಾ ತೊರೆದ ನಂತರ ಅವರು ಸಿ -130 ಸೇನಾ ವಿಮಾನದಲ್ಲಿ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ.

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ ಬಾಂಗ್ಲಾದೇಶ ಸೇನೆ ವಶಕ್ಕೆ                            Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                      

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೆ ಅಪಕೀರ್ತಿ ಮೂಡಿಸುವುದಕ್ಕೆ ಸುಳ್ಳು ಪ್ರಚಾರ ನಡೆದಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಣೆಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗ ಇದು ಸುಳ್ಳು ಪ್ರಚಾರ ಎಂದು ಹೇಳಿದೆ. ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆರಂಭದಲ್ಲಿ ಘೋಷಿಸಿದ್ದ ಮತದಾನದ ಪ್ರಮಾಣಕ್ಕೂ ಅಂತಿಮವಾಗಿ ಘೋಷಣೆ ಮಾಡಿದ್ದ ಮತದಾನದ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂದು ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಿಸಿತ್ತು.    

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                       Read More »

ರಾಷ್ಟ್ರೀಯ ನ್ಯೂಸ್

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಭಾರಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಶಿಮ್ಲಾ, ಆ.05. ಉತ್ತರಾಖಂಡ ಬೆನ್ನಲ್ಲೇ ಇದೀಗ ಹಿಮಾಚಲ ಪ್ರದೇಶದಲ್ಲೂ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೀಕರ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಶಿಮ್ಲಾದ ರಾಂಪುರ ಬಳಿಯ ಪ್ರವಾಹ ಪೀಡಿತ ಸಮೇಜ್ ಗ್ರಾಮದಲ್ಲಿ ಪ್ರಸ್ತುತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಮೇಘಸ್ಫೋಟದ ಬಳಿಕ ಸುರಿದ ಭಾರಿಮಳೆಯಿಂದಾಗಿ ಪ್ರವಾಹ ಏರ್ಪಟ್ಟಿದ್ದು, ಇಲ್ಲಿನ ಸಮೇಜ್ ಗ್ರಾಮ ಸೇರಿದಂತೆ ಹಲವು ಗಿರಿಧಾಮಗಳು ಮುಳುಗಡೆಯಾಗಿವೆ.

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಭಾರಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ Read More »

ರಾಷ್ಟ್ರೀಯ ನ್ಯೂಸ್

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ             Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಢಾಕಾ, ಆ.05. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಭಾರತೀಯರು ಮನೆಯಿಂದ ಆಚೆ ಬಾರದಂತೆ ಹಾಗೂ ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ 

(ನ್ಯೂಸ್ ಕಡಬ) newskadaba.comಬೆಂಗಳೂರು, ಆ.03. ಸಮಾಜದಲ್ಲಿ ಜೀವ ಉಳಿಸಲು ಅಗತ್ಯವಾದ ಅಂಗಗಳು ಮತ್ತು ಅಂಗಾಂಶಗಳ ತೀವ್ರ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಂಗಾಂಗ ದತ್ತು ಸ್ವೀಕರಿಸುವವರು ಮೂತ್ರಪಿಂಡಕ್ಕೆ ಮತ್ತು 2,199 ಯಕೃತ್ತಿಗೆ ನೋಂದಾಯಿಸಿದ್ದಾರೆ. ಒಬ್ಬ ದಾನಿಯು ಹೃದಯ, ಮೂತ್ರಪಿಂಡಗಳು, ಯಕೃತ್ತು, ಮೇದೋಜೀರಕ ಗ್ರಂಥಿ, ಸಣ್ಣ ಕರುಳು ಮತ್ತು ಶ್ವಾಸಕೋಶಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮ, ಮೂಳೆಗಳು, ಅಸ್ಥಿರಜ್ಜುಗಳು, ಹೃದಯ ಕವಾಟಗಳು ಸೇರಿದಂತೆ ಅಂಗಾಂಶ ದಾನಗಳ ಮೂಲಕ 50 ಕ್ಕೂ ಹೆಚ್ಚು ಜನರ ಜೀವನವನ್ನು ಹೆಚ್ಚಿಸಬಹುದು

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ  Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                 

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.03. ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ ರೂ. ಪರಿಹಾರ ಕೊಡುತ್ತಾರೆ ಅಂತಾ ಅವರೇ ಮನೆ ಕೆಡವಿಕೊಂಡರು. ಆದರೆ ಈ ಬಾರಿ ಮನೆ ಬಿದ್ದವರಿಗೆ ಪೂರ್ತಿ ಮನೆ ಕಟ್ಟಿ ಕೊಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ವಾಲ್ಮೀಕಿ ನಿಗಮ ಹಗರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,

‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                  Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ             

(ನ್ಯೂಸ್ ಕಡಬ) newskadaba.com ಹರಿಯಾಣ, ಆ.03.  ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಬಳಸಿತ್ತಿದ್ದ ಮೊಬೈಲ್ ಡೇಟಾ ಖಾಲಿಯಾದಾಗ ಆತನ ಪತ್ನಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಹೇಳಿದ್ದಾನೆ. ಆದರೆ ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿ ತನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ ಎಂದು ಹೇಳಿದ್ದಾಳೆ.

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಸಹಯೋಗದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಇಬ್ಬರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಇಸ್ರೋ  ಬಹಿರಂಗಪಡಿಸಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿದೆ ಎನ್ನಲಾಗಿರುವ ಪ್ರವಾಸ ಸಂಬಂಧ ಇಸ್ರೋ ಮತ್ತು ಅಮೆರಿಕದ ಆ್ಯಕ್ಸಿಯೋಂ ಸ್ಪೇಸ್‌ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದ ಅನ್ವಯ ಆ್ಯಕ್ಸಿಯೋಂ ಸ್ಪೇಸ್ ಕಂಪನಿ ‘ಆ್ಯಕ್ಸಿಯೋಂ-4’ ಮಿಷನ್‌ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದೆ.

ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ..! Read More »

ರಾಷ್ಟ್ರೀಯ ನ್ಯೂಸ್

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top