ರಾಷ್ಟ್ರೀಯ ನ್ಯೂಸ್

ಇಂದು (ಎ.16) ಕಡಬದಲ್ಲಿ ಹಾಫಿಳ್ ಸಿರಾಜುದ್ದೀನ್ ಖಾಸಿಮಿಯವರಿಂದ ಮತ ಪ್ರಭಾಷಣ

(ನ್ಯೂಸ್ ಕಡಬ) newskadaba.com ಕಡಬ, ಎ.16. ಇಸ್ಲಾಮಿಕ್ ಪ್ರಭಾಷಣ ಲೋಕದ ಅಂತರರಾಷ್ಟ್ರೀಯ ತಾರೆ, ಬಹುಬೇಡಿಕೆಯ ವಾಗ್ಮಿ ಅಲ್-ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಪತ್ತಾನಪುರಂ ಕೇರಳ ಅವರು ಇಂದು ರಾತ್ರಿ ಕಡಬಕ್ಕೆ ಆಗಮಿಸಲಿದ್ದಾರೆ. ಸಿರಾಜುಲ್ ಹುದಾ ಮದರಸ ಪೊರಂತ್, ಕಡಬ ಹಾಗೂ ಅಲ್-ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಪೊರಂತ್ ನಲ್ಲಿ ಇಂದು ಸಂಜೆ (ಎಪ್ರಿಲ್ 16) ರಾತ್ರಿ 8 ಗಂಟೆಗೆ ಮತಪ್ರಭಾಷಣ ನಡೆಸಲಿದ್ದಾರೆ. ದೀನೀ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ತಿಳಿಸಿದ್ದಾರೆ.

ಇಂದು (ಎ.16) ಕಡಬದಲ್ಲಿ ಹಾಫಿಳ್ ಸಿರಾಜುದ್ದೀನ್ ಖಾಸಿಮಿಯವರಿಂದ ಮತ ಪ್ರಭಾಷಣ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.14. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋಗೆ ಕ್ಷಣ ಗಣನೆ ಆರಂಭವಾಗಿದೆ. ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶ ಮುಗಿಸಿ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು ನೇರವಾಗಿ ಲೇಡಿಹಿಲ್‌ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ರಾತ್ರಿ 7.45ಕ್ಕೆ ರೋಡ್‌ ಶೋ ಆರಂಭವಾಗಲಿದ್ದು, ಈಗಾಗಲೇ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌,ಪಿವಿಎಸ್‌ ಮೂಲಕ ಸಾಗುವ ರೋಡ್‌ಶೋ

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ – ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.16. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರದಂದು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 26 ರಂದು ಮೊದಲ ಹಂತ ಮತ್ತು ಮೇ 7 ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ – ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ Read More »

ರಾಷ್ಟ್ರೀಯ ನ್ಯೂಸ್

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

2ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ – ರಾಜ್ಯ ಸರಕಾರದ ಕಾನೂನಿಗೆ ಸುಪ್ರೀಂ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 29. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುವುದಿಲ್ಲ ಎಂಬ ರಾಜಸ್ಥಾನ ಸರಕಾರದ ಕಾನೂನನ್ನು ಸುಪ್ರೀಂ ಕೋರ್ಟ್‌ ಅನುಮೋದಿಸಿದೆ. ಹೀಗಾಗಿ ಇನ್ನುಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಇದು ರಾಜ್ಯದ 1989 ರ ಕಾನೂನಾಗಿದ್ದು, ಈ ಕಾನೂನಿಗೆ ಸುಪ್ರೀಂ ಕೋರ್ಟ್‌ನ ಅನುಮೋದನೆಯ ಮುದ್ರೆ ಸಿಕ್ಕಿದೆ. ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ, ಈ ನಿಯಮವು ತಾರತಮ್ಯ ರಹಿತವಾಗಿದೆ

2ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ – ರಾಜ್ಯ ಸರಕಾರದ ಕಾನೂನಿಗೆ ಸುಪ್ರೀಂ ಗ್ರೀನ್ ಸಿಗ್ನಲ್ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಪರ ಅಡ್ಡ ಮತದಾನ – ಆರು ಮಂದಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್‌

(ನ್ಯೂಸ್ ಕಡಬ) newskadaba.com ಶಿಮ್ಲಾ, ಫೆ. 29. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ-ಮತದಾನ ಮಾಡಿದ್ದ ಆರು ಮಂದಿ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ರಾಜ್ಯ ವಿಧಾನಸಭೆಯ ಸ್ಪೀಕರ್‌ ಘೋಷಿಸಿದ್ದಾರೆ. ಕಾಂಗ್ರೆಸ್ ಚಿಹ್ನಯಡಿ ಸ್ಫರ್ಧಿಸಿದ್ದ ಈ ಆರು ಶಾಸಕರನ್ನು ಪಕ್ಷಾಂತರ ನಿಗ್ರಹ ಕಾನೂನಿನನ್ವಯ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್‌ ಕುಲದೀಪ್‌ ಸಿಂಗ್‌ ಪಥಾನಿಯನ್‌ ಘೋಷಿಸಿದ್ದಾರೆ.

ಬಿಜೆಪಿ ಪರ ಅಡ್ಡ ಮತದಾನ – ಆರು ಮಂದಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 27. ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಪೋಟ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 24. ಬೆಂಕಿ ಬಿದ್ದ ಪರಿಣಾಮ ನಾಲ್ವರು ಬಾಲಕಿಯರು ಸಜೀವ ದಹನಗೊಂಡ ದಾರುಣ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಗ್ನಿ ಅವಘಡದಲ್ಲಿ ಪ್ರಿಯಾಂಶಿ, ಮಾನ್ವಿ ಮತ್ತು ನೈನಾ ಎಂದು ಗುರುತಿಸಲಾಗಿದೆ. ಇನ್ನು ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೀತು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top