ರಾಷ್ಟ್ರೀಯ ನ್ಯೂಸ್

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ

(ನ್ಯೂಸ್ ಕಡಬ)newskadaba.com ನವದೆಹಲಿ, ಸೆ.02. ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ ಎನ್ನಲಾಗಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್ 1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ […]

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ Read More »

ರಾಷ್ಟ್ರೀಯ ನ್ಯೂಸ್

ಲಂಚ ಪಡೆದ ಆರೋಪ- ಇಡಿ ಅಧಿಕಾರಿ ಸಿಬಿಐ ಬಲೆಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಐದು ಕೋಟಿ ರೂ, ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಇಡಿ ಅಧಿಕಾರಿಯನ್ನು ಸಿಬಿಐ ಬಂಧಿಸಿರುವ ಕುರಿತು ವರದಿಯಾಗಿದೆ. ಅಬಕಾರಿ ನೀತಿ ಪ್ರಕರಣದ ಆರೋಪಿ ಅಮನ್‌ದೀಪ್ ಸಿಂಗ್ ಧಲ್ ಅವರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಇಡಿ ಸಹಾಯಕ ನಿರ್ದೇಶಕ ಪವನ್ ಖತ್ರಿ ಎಂಬ ಅಧಿಕಾರಿಯನ್ನು ಬಂಧಿಸಿ, ಜಾರಿ ನಿರ್ದೇಶನಾಲಯದ ಕೋರಿಕೆಯ ಮೇರೆಗೆ ಪವನ್ ಖತ್ರಿ ಮತ್ತು ಕ್ಲರ್ಕ್ ನಿತೇಶ್ ಕೊಹರ್ ವಿರುದ್ದ

ಲಂಚ ಪಡೆದ ಆರೋಪ- ಇಡಿ ಅಧಿಕಾರಿ ಸಿಬಿಐ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

14 ಭಯೋತ್ಪಾದಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸ್ ಕ್ರಮ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕಿಸ್ತಾನ ಮೂಲದ 14 ಉಗ್ರರ ಆಸ್ತಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಈಗಾಗಲೇ ಮುಟ್ಟುಗೋಲು ಹಾಕಲಾಗಿದ್ದು, ಅಲ್ಲದೇ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಎಲ್ಲಾ ಉಗ್ರಗಾಮಿಗಳ ಆಸ್ತಿಗಳನ್ನು ಶೀಘ್ರದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

14 ಭಯೋತ್ಪಾದಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸ್ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದಿಸಿದ್ದಾರೆ. “ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ. ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರದಂದಜ ನಡೆದ ಪುರುಷರ

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 27. ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅಸ್ಸಾಂ, ಆ. 27. ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಮೃತದೇಹವೊಂದು ಕುತ್ತಿಗೆಗೆ ಬಟ್ಟೆ ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಧೋಲೈ ಪ್ರದೇಶದವರಾದ ಬಾಲಕನ ತಾಯಿ ಸಿಲ್ಚಾರ್‌ ನಲ್ಲಿರುವ ಬಿಜೆಪಿ ನಾಯಕನ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮನೆ ಕೆಲಸದಾಕೆಯ ಮಗ ನೇಣು ಬಿಗಿದುಕೊಂಡಿರುವ ಕುರಿತು

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಣ್ಣ ಎಲ್ಇಡಿ ಬಲ್ಬ್ ನುಂಗಿದ ಒಂಬತ್ತು ತಿಂಗಳ ಮಗು

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್‌, ಆ. 27. 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಾ, ಅದರ ಆಂಟೆನಾದಲ್ಲಿರುವ ಎಲ್​ಇಡಿ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು. ನಂತರ ಮಗುವಿಗೆ ಉಸಿರಾಟದ ತೊಂದರೆ ಉಂಟಾಗಿ, ಆಗ ಪೋಷಕರು ಮಗುವಿಗೆ ಏನೋ ಆಗಿದೆ ಎಂದು ಭಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಕ್ಷಣವೇ ವೈದ್ಯರು ಮಗುವನ್ನು ಎಕ್ಸ್ ರೇ ಮಾಡಿದ್ದು, ಮಗು

ಸಣ್ಣ ಎಲ್ಇಡಿ ಬಲ್ಬ್ ನುಂಗಿದ ಒಂಬತ್ತು ತಿಂಗಳ ಮಗು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 24. ಪತಿಯೊಬ್ಬ ಯೂಟ್ಯೂಬ್‌ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಎಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭ ಪತಿ ಮಾದೇಶ್ ಯೂಟ್ಯೂಬ್‌ ನೋಡಿಕೊಂಡು ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದು, ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕರುಳು ಬಳ್ಳಿಯನ್ನು

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವ ಚೆಸ್‌ ಪಂದ್ಯ- ಭಾರತದ ಆರ್‌. ಪ್ರಜ್ಞಾನಂದಗೆ ಸೋಲು

(ನ್ಯೂಸ್ ಕಡಬ) newskadaba.com ಬಾಕು, ಆ. 24. ಗುರುವಾರದಂದು ನಡೆದ ವಿಶ್ವಕಪ್ ಚೆಸ್‌ ಪಂದ್ಯಾವಳಿಯ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆದ್ದಿದ್ದಾರೆ. ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಿದ್ದು, ಎರಡರಲ್ಲೂ ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದ ಭರವಸೆಯ ಪ್ರತಿಭೆ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋತಿದ್ದಾರೆ. ಇನ್ನು ಮಂಗಳವಾರದಂದು ನಡೆದ ಮೊದಲ ಸುತ್ತು

ವಿಶ್ವ ಚೆಸ್‌ ಪಂದ್ಯ- ಭಾರತದ ಆರ್‌. ಪ್ರಜ್ಞಾನಂದಗೆ ಸೋಲು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 24.69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ʼ777 ಚಾರ್ಲಿʼ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದರೆ, ‘ಉಪ್ಪೇನ’ ಮತ್ತು ‘ಹೋಮ್’ ತೆಲುಗು ಮತ್ತು ಮಲಯಾಳಂನ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ‘ಪುಷ್ಪ: ದಿ ರೈಸ್’ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top