ರಾಷ್ಟ್ರೀಯ ನ್ಯೂಸ್

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ […]

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ. ಕಡಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 01. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಕಡಿತವಾಗಿದೆ. ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ 1,680 ರೂ. ಆಗಿದೆ. ಇನ್ನೂ ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1852.50 ರೂ. ಆಗಿದ್ದು, ಕೋಲ್ಕತ್ತಾದಲ್ಲಿ 1820.50 ಹಾಗೂ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ. ಕಡಿತ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾರ್ಜಾಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ- ಕೆಲಕಾಲ ಭಯದ ವಾತಾವರಣ ಸೃಷ್ಟಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜು. 31. 154 ಪ್ರಯಾಣಿಕರನ್ನು ಹೊತ್ತಿದ್ದ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನವು ಎಕ್ಸ್ ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ನಿಲ್ದಾಣದಿಂದ ಬೆಳಗ್ಗೆ 10:45ಕ್ಕೆ ಶಾರ್ಜಾಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, 12.03ಕ್ಕೆ ವಿಮಾನವನ್ನು ತಿರುವನಂತಪುರಂ

ಶಾರ್ಜಾಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ- ಕೆಲಕಾಲ ಭಯದ ವಾತಾವರಣ ಸೃಷ್ಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ

(ನ್ಯೂಸ್ ಕಡಬ) newskadaba.com ನವದೆಹಲಿ,ಜು. 31. ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ ಗೆ ತಂಡಗಳು ಮಾತ್ರವಲ್ಲದೇ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ ಗಳು ಕೂಡ ಸಜ್ಜಾಗುತ್ತಿದ್ದು, ಇದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಅಧಿಕೃತ ತಂಪು ಪಾನೀಯದ ಪಾಲುದಾರನನ್ನು ಬಹಿರಂಗಪಡಿಸಲಾಗಿದೆ. ವಿಶ್ವದ ಪ್ರಮುಖ ಕೋಲಾ ಕಂಪನಿಯಾದ ಕೋಕಾ-ಕೋಲಾವನ್ನು ಕ್ರಿಕೆಟ್ ವಿಶ್ವಕಪ್‌ ನ ಅಧಿಕೃತ ಪಾಲುದಾರರನ್ನಾಗಿ ಮಾಡಲಾಗಿದೆ. ಮುಂಬರುವ ಕ್ರಿಕೆಟ್ ವಿಶ್ವಕಪ್‌ಗೆ ಕೋಕಾ-ಕೋಲಾವನ್ನು ಅಧಿಕೃತ ತಂಪು ಪಾನೀಯ ಪಾಲುದಾರ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಘೋಷಿಸಿದೆ. ಈ

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜು. 31. ಶ್ರೀಲಂಕಾ ಮೂಲದ 25 ವರ್ಷದ ಯುವತಿಯೊಬ್ಬಳು ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಆಂಧ್ರ ಪ್ರದೇಶಕ್ಕೆ ಬಂದಿರುವ ಕುರಿತು ವರದಿಯಾಗಿದೆ. ಲಕ್ಷ್ಮಣ್‌(28) ಎನ್ನುವ ಯುವಕನಿಗೆ 2017 ರಲ್ಲಿ ಫೇಸ್‌ ಬುಕ್‌ ಮೂಲಕ ಪರಿಚಯವಾಗಿ ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾಗಿದ್ದು, ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು ಎನ್ನಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಯುವತಿಯು ಶ್ರೀಲಂಕಾದಿಂದ ಆಂಧ್ರಕ್ಕೆ ಪ್ರವಾಸಿ ವೀಸಾದೊಂದಿಗೆ ಬಂದಿದ್ದು, ಇಬ್ಬರ ನಡುವಿನ ಪ್ರೀತಿಯ

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ- ರೈಲ್ವೇ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಸಹಿತ 4 ಮಂದಿ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ, ಜು. 31. ಜೈಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮುಂಬೈ ಸೆಂಟ್ರಲ್ ಎಕ್ಸ್‌ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದು ನಾಲ್ವರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಫಾಲ್ಗರ್ ಬಳಿ ಸೋಮವಾರ ಮುಂಜಾನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೈಪುರ-ಮುಂಬೈ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ರೈಲಿನಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆರೋಪಿ, ಆರ್‌ಪಿಎಫ್ ಕಾನ್ಸ್‌ ಟೇಬಲ್ ಚೇತನ್ ಸಿಂಗ್

ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ- ರೈಲ್ವೇ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಸಹಿತ 4 ಮಂದಿ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನುಸುಳುಕೋರನನ್ನು ಹತ್ಯೆಗೈದ ಬಿಎಸ್‌ ‌ಎಫ್

(ನ್ಯೂಸ್ ಕಡಬ) newskadaba.com ಜಮ್ಮು, ಜು. 31. ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಒಳ ನುಸುಳಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಬಿಎಸ್‌‌ಎಫ್ ಪಡೆ ಹೊಡೆದುರುಳಿಸಿರುವ ಘಟನೆ ವರದಿಯಾಗಿದೆ. ಅರ್ನಿಯಾ ಸೆಕ್ಟರ್‌ ನ ಜಬೋವಾಲ್ ಗಡಿ ಹೊರಠಾಣೆಯ ಬಳಿ ಉಗ್ರನೋರ್ವ ಒಳನುಸುಳಲು ಯತ್ನಿಸಿದ ವೇಳೆ ಗಡಿ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದು, ಇದರ ಹೊರತಾಗಿಯೂ ಒಳನುಸುಳಲು ಯತ್ನಿಸಿದ ವೇಳೆ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ

ನುಸುಳುಕೋರನನ್ನು ಹತ್ಯೆಗೈದ ಬಿಎಸ್‌ ‌ಎಫ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು, ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top