ರಾಷ್ಟ್ರೀಯ ನ್ಯೂಸ್

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜೂ. 22. ಲಿಂಗ ಬದಲಾವಣೆಗೆ ನಿರ್ಧರಿಸಿರುವ  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಎಂಬವರು “ಟ್ರಾನ್ಸ್ ಮ್ಯಾನ್” ಆಗಿ ಬದಲಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇತ್ತೀಚೆಗೆ LGBTQ ಸಮುದಾಯದ ಜೀವನೋಪಾಯದ ಕುರಿತಂತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಅವರು, ನಾನು ದೈಹಿಕವಾಗಿ ಪುರುಷನಾಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.        

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು

 (ನ್ಯೂಸ್ ಕಡಬ) newskadaba.com ಜೈಪುರ, ಜೂ. 21. ಹ್ಯಾಂಡ್‌ ಪಂಪ್‌ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ಪೈಪ್ ತಗುಲಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲೋಕೇಶ್ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ರಾಮ್‌ ವೀರ್, ಥಾನ್ ಸಿಂಗ್, ಹರಿ ಸಿಂಗ್ ಹಾಗೂ ಶಿಮ್ಲಾ ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಹ್ಯಾಂಡ್ ಪಂಪ್ ದುರಸ್ತಿ ಕಾರ್ಯ

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನಿಗೂಢ ಶಂಕೆ ➤ ದಂಪತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ತೆಲಂಗಾಣ, ಜೂ. 20. ದಂಪತಿಯನ್ನು ಮರಕ್ಕೆ ನೇತು ಹಾಕಿ ಗ್ರಾಮಸ್ಥರು ಬೆತ್ತದಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ತೆಲಂಗಾಣ ರಾಜ್ದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ದಂಪತಿಯನ್ನು ಶ್ಯಾಮಮ್ಮ ಮತ್ತು ಯಾದಯ್ಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಂಗಾರೆಡ್ಡಿ ಜಿಲ್ಲೆಯ ಕೊಲ್ಕೂರು ಗ್ರಾಮದಲ್ಲಿ ನಿಗೂಢ ಕಲೆಗಳನ್ನು ಅಭ್ಯಾಸ ಮಾಡುತ್ತಿದ್ದಾರೆಂಬ ಶಂಕೆಯಿಂದ ಗ್ರಾಮದ ಜನರು ದಂಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ವಿಚಾರಣೆ ನಡೆಸಿ

ನಿಗೂಢ ಶಂಕೆ ➤ ದಂಪತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಷ್ಯನ್ ಎಮರ್ಜಿಂಗ್ ಕ್ರಿಕೆಟ್ ಟೂರ್ನಿ ➤ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ

(ನ್ಯೂಸ್ ಕಡಬ) newskadaba.com ಹಾಂಕಾಂಗ್‌, ಜೂ. 20. ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್‌ ಎಮರ್ಜಿಂಗ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡವು ಫೈನಲ್‌ ಪ್ರವೇಶಿಸಿದೆ. ಭಾರತವು ಸೆಮಿಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಬೇಕಾಗಿತ್ತು. ಆದರೆ, ಮಳೆಯ ಕಾರಣದಿಂದ ಈ ಪಂದ್ಯ ರದ್ದಾಗಿದೆ. ಎ ಬಣದಲ್ಲಿ ಸ್ಥಾನ ಪಡೆದಿದ್ದ ಭಾರತ ಅಲ್ಲಿ ಗ್ರೂಪ್‌ ನಲ್ಲಿ ಅಗ್ರಸ್ಥಾನ ಪಡೆದಿತ್ತು. ಶ್ರೀಲಂಕಾ ಬಿ ಬಣದಲ್ಲಿ 2ನೇ ಸ್ಥಾನಿಯಾಗಿತ್ತು. ಗ್ರೂಪ್‌ ಹಂತದ ಅಗ್ರಸ್ಥಾನವನ್ನು ಭಾರತ ಪಡೆದಿದ್ದರಿಂದ ಭಾರತ ಫೈನಲ್‌ಗೆ ಪ್ರವೇಶ ಪಡೆದಿದೆ.

ಏಷ್ಯನ್ ಎಮರ್ಜಿಂಗ್ ಕ್ರಿಕೆಟ್ ಟೂರ್ನಿ ➤ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

RAW ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 18. ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ RAW ನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ತಿಳಿಸಿದೆ. ರವಿ ಸಿನ್ಹಾ ಅವರು ಛತ್ತೀಸ್ ಗಢ ಕೇಡರ್ ನ 1988ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್ ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ ಕಾರ್ಯದರ್ಶಿಯಾಗಿ ರವಿ ಸಿನ್ಹಾ

RAW ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ Read More »

ರಾಷ್ಟ್ರೀಯ ನ್ಯೂಸ್

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ. 19. ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆಇದೀಗ ಲಕ್ಷಾಂತರ ರೂಪಾಯಿಯ ವಂಚನೆಯಾಗಿರುವ ಕುರಿತು ವರದಿಯಾಗಿದೆ. ನಟಿ ರಶ್ಮಿಕಾ ಮಂದಣ್ಣ ಅವರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ. ಇನ್ನು ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದು, ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಛತ್ತೀಸ್‌ಗಢ, ಜೂ  . 19  .  ವೇಗವಾಗಿ ಬಂದ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ  26 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ನಡೆದಿದೆ, ಫೋನ್‌ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವ ಸಂಧರ್ಭದಲ್ಲಿ  ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಜೂ. 19. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಕನಿಷ್ಠ 30 ಮಂದಿ ಗಾಯಗೊಂಡ ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಡೀಸೆಲ್ ಸಾಗಾಟದ ಲಾರಿಯೊಂದು ಮನೆ ಮೇಲೆ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಘಾಟಿ ರಸ್ತೆಯಲ್ಲಿ ಸಂಭವಿಸಿದೆ‌ ಘಟನೆಯಿಂದ ಮನೆಗೆ ಹಾನಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಾಗಿದೆ.

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜೂ . 17 . ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top