ರಾಷ್ಟ್ರೀಯ ನ್ಯೂಸ್

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 13. ದೆಹಲಿ ಹಾಗೂ ಕಾಶ್ಮೀರದ ದೋಡಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಮಧ್ಯಾಹ್ನ 1.30ರ ನಂತರ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಎಷ್ಟೇ ಎಚ್ಚರಿಸಿದರೂ ಕ್ಯಾರೇ ಎನ್ನದೇ ಸುಮದ್ರಕ್ಕಿಳಿದಿದ್ದ ಮೂವರ ಪೈಕಿ ಓರ್ವ ಮೃತಪಟ್ಟು, ಇನ್ನಿಬ್ಬರು ಸಮುದ್ರಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಮುಂಬೈನ ಜುಹು ಬೀಚ್ ನಲ್ಲಿ ನಡೆದಿದೆ. 12 ರಿಂದ 16 ವರ್ಷ ವಯಸ್ಸಿನ ಐದು ಹುಡುಗರ ಗುಂಪೊಂದು, ಜೀವರಕ್ಷಕ ದಳದವರ ಎಚ್ಚರಿಕೆಗೆ ಮಣಿಯದೇ ಸಮುದ್ರಕ್ಕಿಳಿದು, ನಂತರ ದಡದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ  ಇಬ್ಬರು ಬಾಲಕರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಓರ್ವ ಆಸ್ಪತ್ರೆಗೆ ಕರೆತಂದ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರ್ ಪೋರ್ಟ್ ಗೆ ತೆರಳುತ್ತಿದ್ದ ಕಾರು ಅಪಘಾತ ➤ ನಾಲ್ವರು ಹಜ್ ಯಾತ್ರಿಕರು ದುರ್ಮರಣ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಹಜ್ ಯಾತ್ರೆಗೆಂದು ತೆರಳುತ್ತಿದ್ದ ಕಾರು ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮುಂಬೈ-ನಾಗ್ಪುರ ಸಮೃದ್ಧಿ ಎಕ್ಸ್‌ಪ್ರೆಸ್‌ ವೇ ಯ ನಾಸಿಕ್ ಸ್ಟ್ರೆಚ್‌ ಎಂಬಲ್ಲಿ ನಡೆದಿದೆ. ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ ಪ್ರಕಾರ, ಮುಂಬೈನಿಂದ ಶಿರಡಿಗ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಟೊಯೊಟಾ ಕಾರಿನ ಟೈರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ

ಏರ್ ಪೋರ್ಟ್ ಗೆ ತೆರಳುತ್ತಿದ್ದ ಕಾರು ಅಪಘಾತ ➤ ನಾಲ್ವರು ಹಜ್ ಯಾತ್ರಿಕರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 12. ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುಣೆಯ ಐಟಿ ಕಂಪನಿ ಉದ್ಯೋಗಿಯೋರ್ವನನ್ನು ಮುಂಬೈ ಕ್ರೈಂ ಬಾಂಚ್, ಪುಣೆಯಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಸಾಗರ್ ಬರ್ವೆ(34) ಎಂದು ಗುರುತಿಸಲಾಗಿದೆ. ಈತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿ, ವಾಟ್ಸಾಪ್ ಮೂಲಕ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

NCP ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 09. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಶುಕ್ರವಾರ ಟ್ವಿಟರ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಪಕ್ಷದ ಮುಖಂಡರ ನಿಯೋಗವು ಪೊಲೀಸ್ ಕಮಿಷನರ್ ಕಛೇರಿಗೆ ಭೇಟಿ ನೀಡಿ ಬೆದರಿಕೆ ಹಾಕಿರುವ ಟ್ವಿಟರ್ ಖಾತೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿಂದೆಯೂ ಕೂಡಾ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪೊಲೀಸರು ಎನ್ ಸೋನಿ(45) ಎಂಬ ಆರೋಪಿಯನ್ನು ಬಂಧಿಸಿದ್ದರು.

NCP ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ. ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು

ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ Read More »

ರಾಷ್ಟ್ರೀಯ ನ್ಯೂಸ್

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್‌ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ. ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 09. ಹಳೆ ಸಾಮಗ್ರಿಗಳನ್ನು ಕಳವುಗೈದು ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ವ್ಯಾನ್ ಚಾಲಕನೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಲಪಾಡಿ ಕೆ .ಸಿ ರೋಡ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಂದ್ಯೋಡು ಪೇಟೆಯಲ್ಲಿನ ಅಂಗಡಿಯೊಂದನ್ನು ತೆರವುಗೊಳಿಸಲಾಗಿದ್ದು, ಈ ಅಂಗಡಿಯ ಶಟರ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಪಿಕಪ್ ವ್ಯಾನ್ ನಲ್ಲಿ ತುಂಬಿಸಿ ಸಾಗಾಟ ಮಾಡಿದ್ದು, ಇದರಿಂದ ಸಂಶಯಗೊಂಡ ಪರಿಸರದವರು ಮಾಲಕನಿಗೆ

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top