ರಾಷ್ಟ್ರೀಯ ನ್ಯೂಸ್

15 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಮೇ.16. ಶಹಜಾನ್‌ಪುರದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಿ-ಸೆಕೆಂಡರಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕರೊಬ್ಬರು 15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹಮ್ಮದ್ ಅಲಿ ಎಂದು ಗುರುತಿಸಲಾದ ಶಿಕ್ಷಕ ಹಲವಾರು ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಮತ್ತು ಅನೇಕ ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಶಿಕ್ಷಕಿ ಕೂಡಲೇ ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

15 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.16. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 58 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರಿನ ಮುಹಮ್ಮದ್ ಹಾರಿಸ್ (30) ಮತ್ತು ಬಂದ್ಯೋಡು ಇಚ್ಲಂಗೋಡಿನ ಇಬ್ರಾಹಿಂ ಬಾತಿಷ್ (30) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ವಾಮಂಜೂರು ಬಳಿ ವಾಹನ ತಪಾಸಣೆ ನಡೆಸಿದಾಗ ಕಾರಲ್ಲಿದ್ದ ಇಬ್ಬರು ಪರಾರಿಯಾಗಲೆತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾದರು.

ಕಾಸರಗೋಡು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ಗೊತ್ತಿಲ್ಲ ➤ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.16. ಕರ್ನಾಟಕ ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಐಟಿಸಿ ಮೌರ್ಯ ಹೋಟೆಲ್​ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹೈಕಮಾಂಡ್​ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್​ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಆಯ್ಕೆ ವಿಚಾರ

ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ಗೊತ್ತಿಲ್ಲ ➤ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ ➤ 26 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಮೆಕ್ಸಿಕೋ, ಮೇ.16. ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್‌ ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಮೃತಪಟ್ಟಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ  26 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಟ್ರಕ್ ಚಾಲಕ ಕೂಡ ಸಾವನ್ನಪ್ಪಿದ್ದಾನೆಯೇ ಅಥವಾ ಅವನು ಪರಾರಿಯಾಗಿದ್ದಾನೆಯೇ ಎಂಬುದು ಖಚಿತವಾಗಿಲ್ಲ.  

ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ ➤ 26 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಲೈಕ್ಸ್‌, ವೀವ್ಸ್‌ ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯಾ, ಮೇ.16. ಯೂಟ್ಯೂಬ್‌ ನಲ್ಲಿ ಲೈಕ್ಸ್‌, ವೀವ್ಸ್‌ ಗಾಗಿ ಯುವಕನೊಬ್ಬ ಮಾಡಿದ ಸಾಹಸದಿಂದ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಯೂಟ್ಯೂಬ್‌ ನಲ್ಲಿ ಸಬ್‌ ಸ್ಕೈಬರ್ಸ್‌ ನ್ನು ಹೊಂದಿರುವ ಕ್ಯಾಲಿಫೋರ್ನಿಯಾದ ಲೊಂಪೊಕ್‌ನ ಟ್ರೆವರ್ ಡೇನಿಯಲ್ ಜಾಕೋಬ್ (29) ಎಂಬಾತ ಹೆಚ್ಚು ಲೈಕ್ಸ್‌ ಹಾಗೂ ವೀವ್ಸ್‌ ತನ್ನ ವಿಮಾನವನ್ನು ಉದ್ದೇಶಪೂರ್ವಕವಾಗಿ ಪತನ ಮಾಡಲು ಹೊರಟಿದ್ದಾರೆ.  

ಲೈಕ್ಸ್‌, ವೀವ್ಸ್‌ ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್ Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್‌ ಅವಘಡ…! ➤ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.16. ಕೋಲ್ಕತ್ತಾದ ಎಕ್ಬಾಲ್ಪೋರ್ ಪ್ರದೇಶದಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಝರ್ ಅಖ್ತರ್ ಎಂಬಾತ ಗೋಡೆಯೊಂದರ ಮೇಲೆ ಹಾಯ್ದು ಹೋಗಿರುವ ಲೋಹದ ತಂತಿಯಲ್ಲಿ ತನ್ನ ಒದ್ದೆ ಬಟ್ಟೆಯನ್ನು ಒಣಗಿಸಲು ಹೋಗಿದ್ದ ವೇಳೆ  ತೂಗುಹಾಕಿದ್ದ ಲೋಹದ ತಂತಿಯ ಮೂಲಕ ವಿದ್ಯುತ್ ಹರಿದಿದೆ.  

ವಿದ್ಯುತ್‌ ಅವಘಡ…! ➤ ಒಂದೇ ಕುಟುಂಬದ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.!

(ನ್ಯೂಸ್ ಕಡಬ) newskadaba.com  ಕೇರಳ,ಮೇ.15 ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಿರುವನಂತಪುರಂನ ಮುಸ್ಲಿಂ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಮಪಲ್ಲಿ ಮೂಲದ 17 ವರ್ಷದ ಬಾಲಕಿ ಶನಿವಾರ ಬಲರಾಮಪುರಂನಲ್ಲಿರುವ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳು ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೇರಳ,ಮೇ.15 ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿರೋ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ.ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುರವಿಲಂಗಾಡ್ ಮೂಲದ ಜೋಬಿ ಜಾರ್ಜ್ ಎಂದು ಗುರುತಿಸಲಾಗಿದೆ. ರಾಮಪುರಂನ ಬಸ್ ಡಿಪೋ ಬಳಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಜೂಜಾಟದ ಗ್ಯಾಂಗ್ ಇದೆ ಎಂಬ ಮಾಹಿತಿಯ ಮೇರೆಗೆ ಜಾರ್ಜ್ ಕಟ್ಟಡಕ್ಕೆ ಆಗಮಿಸಿದ್ದರು. ಆದರೆ ಅಧಿಕಾರಿ ಕಾರಿಡಾರ್ ನಲ್ಲಿ ಜಾರಿದ ಪರಿಣಾಮ

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಲಾರಿಗೆ ತೂಫಾನ್ ವಾಹನ ಡಿಕ್ಕಿ.!➤ ಏಳು ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಪ,ಮೇ.15 ಲಾರಿಗೆ ತೂಫಾನ್ ವಾಹನ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿರುವ ಭೀಕರ ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರಲ್ಲಿ ಒಂದು ಮಗು, ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದ್ದಾರೆ. ಇನ್ನು ಐವರು ಗಾಯಗೊಂಡಿದ್ದು, ಸ್ಥಳಕ್ಕೆ ಧಾವಿಸಿದ್ದಾರೆ ಪೊಲೀಸರು ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ತಾಡಿಪತ್ರಿ ಮೂಲದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಪ ಜಿಲ್ಲೆಯ ಕೊಂಡಪುರಂ

ಲಾರಿಗೆ ತೂಫಾನ್ ವಾಹನ ಡಿಕ್ಕಿ.!➤ ಏಳು ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ Read More »

ರಾಷ್ಟ್ರೀಯ ನ್ಯೂಸ್

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಎಚ್ಚರಿಕೆ ವಹಿಸುವುದು ಅಗತ್ಯ.!➤ ಸುಪ್ರೀಂಕೋರ್ಟ್ *

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.15 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಆರೋಪಿ ಮೇಲೆ ಗಂಭೀರ ಪರಿಣಾಮ ಬೀರುವಂಥದ್ದಾಗಿದೆ. ಹೀಗಾಗಿ, ಯಾವುದೇ ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸದೇ ಯಾಂತ್ರಿಕವಾಗಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್‌ ಪೊಲೀಸರಿಗೆ ಸೂಚಿಸಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರಿದ್ದ ನ್ಯಾಯಪೀಠ, ‘ತಮ್ಮ ಮುಂದಿರುವ ಪ್ರಕರಣಕ್ಕೆ ಕಾಯ್ದೆಯ ನಿಬಂಧನೆಗಳು ಮೇಲ್ನೋಟಕ್ಕೆ ಅನ್ವಯವಾಗುತ್ತವೆ ಎಂಬುದು ಸಂಬಂಧಪಟ್ಟ ಅಧಿಕಾರಿಗೆ ಮನದಟ್ಟಾಗಬೇಕು’ ಎಂದು ಹೇಳಿದೆ.  

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಎಚ್ಚರಿಕೆ ವಹಿಸುವುದು ಅಗತ್ಯ.!➤ ಸುಪ್ರೀಂಕೋರ್ಟ್ * Read More »

ರಾಷ್ಟ್ರೀಯ ನ್ಯೂಸ್
Scroll to Top