ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿಕೊಂಡು ಪ್ರಯಾಣಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಗುವಾಹಟಿ, ಏ.11. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿ ದೆಹಲಿಗೆ ತೆರಳುತ್ತಿದ್ದ ನಾರ್ತ್ ಈಸ್ಟ್ ಎಕ್ಸ್ ಪ್ರೆಸ್‌ನ ಪ್ರಯಾಣಿಕನೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ರೈಲಿನ ಸಾಮಾನ್ಯ ಕಂಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಯಾಣಿಕನ ಬಳಿ ಟಿಕೆಟ್ ಅಥವಾ ಇತರ ಯಾವುದೇ ದಾಖಲೆಗಳಿಲ್ಲ. ನಾವು ಅವರ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಎನ್‌ಎಫ್‌ಆರ್ ವಕ್ತಾರ ಸಬ್ಯಸಾಚಿ […]

ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿಕೊಂಡು ಪ್ರಯಾಣಿಕ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ನಿಂತ ಬೆನ್ನಲ್ಲೆ  ಯೆಲ್ಲೋ ಫೀವರ್ ಆರ್ಭಟ ಶುರು..!   ➤ ಲಸಿಕೆ ಕಡ್ಡಾಯಗೊಳಿಸಿದ ಕೇಂದ್ರ ಆರೋಗ್ಯ ಇಲಾಖೆ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.11 ಕೊರೊನಾ ಆತಂಕ ನಿಂತ ಬೆನ್ನಲ್ಲೆ ಹೊಸ ಆತಂಕ ಶುರುವಾಗಿದ್ದು, ಇದೀಗ ಯೆಲ್ಲೋ ಫೀವರ್ ಆರ್ಭಟ ಶುರುವಾಗಿದ್ದು, ಲಸಿಕೆ ಕಡ್ಡಾಯಗೊಳಿಸಿದ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯ ದೇಶದಲ್ಲಿ ಕೋವಿಡ್ ಕಡಿಮೆಯಾಗುತ್ತಿದ್ದಂತೆ ಕೋವಿಡ್‌ನಿಂದ ಬಲುತ್ತಿದ್ದ ಜನರಿಗೆ ಹಳದಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಇದೀಗ ಯೆಲ್ಲೋ ಫೀವರ್ ನಿಯಂತ್ರಕ್ಕೆ ವಿದೇಶಕ್ಕೆ ತೆರಳುವ ಪ್ರತಿಯೊಬ್ಬರು ಹಳದಿ ಜ್ವರಕ್ಕೆ ಲಸಿಕೆ ಹಾಕಿಸಿಕೊಳ್ಳೋದು ಕಡ್ಡಾಯವಾಗಿದೆ.  

ಕೊರೊನಾ ನಿಂತ ಬೆನ್ನಲ್ಲೆ  ಯೆಲ್ಲೋ ಫೀವರ್ ಆರ್ಭಟ ಶುರು..!   ➤ ಲಸಿಕೆ ಕಡ್ಡಾಯಗೊಳಿಸಿದ ಕೇಂದ್ರ ಆರೋಗ್ಯ ಇಲಾಖೆ.! Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 ಕಿಮೀ ದೂರದಲ್ಲಿರುವ ಥಾಣೆ ಜಿಲ್ಲೆಯ

ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಖಾಲಿಸ್ತಾನ ನಾಯಕ ಅಮೃತ್‌ಪಾಲ್‌ ಸಿಂಗ್‌ ಸಹಚರ ಅರೆಸ್ಟ್

(ನ್ಯೂಸ್ ಕಡಬ)newskadaba.com ಚಂಢೀಗಡ, ಏ.11. ಖಾಲಿಸ್ತಾನ ನಾಯಕ, ಸಿಖ್‌ ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ನ ಸಹಚರ ಪಪಲ್​ಪ್ರೀತ್ ಸಿಂಗ್​ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಪಲ್​ಪ್ರೀತ್ ಸಿಂಗ್‌ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದು, ಇದೀಗ ಆತನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಅಮೃತ್​ಪಾಲ್​ ಸಿಂಗ್ ಕೆಲ ದಿನಗಳಲ್ಲಿ ಬಂಧನವಾಗಬಹುದು ಎಂದು ಪಂಜಾಬ್‌ ಪೊಲೀಸರು ಹೇಳಿದ್ದಾರೆ. ಇನ್ನು ಅಮೃತಪಾಲ್ ಮತ್ತು ಪಪಲ್​ಪ್ರೀತ್ ಸಿಂಗ್‌ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು

ಖಾಲಿಸ್ತಾನ ನಾಯಕ ಅಮೃತ್‌ಪಾಲ್‌ ಸಿಂಗ್‌ ಸಹಚರ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಯಿಂದ ಕಾರ್ಯಾಚರಣೆ ➤ ಲಷ್ಕರ್ ಸಂಘಟನೆಯ ಇಬ್ಬರು ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.11. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಗುರುತಿಸಲಾಗಿದೆ. ಇನ್ನು ಬಾರಾಮುಲ್ಲಾ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.

ಭಾರತೀಯ ಸೇನೆಯಿಂದ ಕಾರ್ಯಾಚರಣೆ ➤ ಲಷ್ಕರ್ ಸಂಘಟನೆಯ ಇಬ್ಬರು ಉಗ್ರರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.11. ಕಾರ್‌ ಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಇಂದೋರ್‌ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರೊಳಗಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ಯಾರೇಜ್ ನಡೆಸುತ್ತಿರುವ ಇರ್ಷಾದ್ ಖಾನ್ ಮತ್ತು ಅವರ ಸಹೋದ್ಯೋಗಿ ಹಲೀಂ ಖಾನ್ ಅವರು ಮಹೀಂದ್ರ ಸ್ಕಾರ್ಪಿಯೊವನ್ನು ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಡ್ಯಾಶ್‌ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ, ಟೆಸ್ಟ್ ಡ್ರೈವ್‌ನಲ್ಲಿ ಕಾರಿನಿಂದ ಹೊಗೆ ಬರಲಾರಂಭಿಸಿತು. ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.  

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೋಷಕರು ಮೊಬೈಲ್ ಕಸಿದು ಕೊಂಡರೆಂಬ ಕ್ಷುಲಕ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಹೆಚ್ಚು ಮೊಬೈಲ್‌ ಬಳಸುತ್ತಿದ್ದು, ಇದರಿಂದ ಬಾಲಕಿಗೆ ಪೋಷಕರು ಬುದ್ದಿ ಮಾತನ್ನು ಹೇಳಿದ್ದರು. ಆದರೂ, ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್‌ ಕಸಿದುಕೊಂಡಿದ್ದಾರೆ. ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.  

ಸಲ್ಮಾನ್ ಖಾನ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ Read More »

ರಾಷ್ಟ್ರೀಯ ನ್ಯೂಸ್

2 ಲಕ್ಷ ಕುಟುಂಬಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್.!   ➤ಜನರಿಗೆ ಅಗ್ಗದ ದರದಲ್ಲಿ ಪಡಿತರ ಲಭ್ಯ.!

(ನ್ಯೂಸ್ ಕಡಬ)Newskadaba.com ಹರಿಯಾಣ,ಏ.11 ಪಡಿತರ ಚೀಟಿಯನ್ನು ಪ್ರಮುಖ ದಾಖಲೆಗಳಲ್ಲಿ ಸೇರಿಸಲಾಗಿದೆ. ಪಡಿತರ ಚೀಟಿ ಮೂಲಕ ಜನರಿಗೆ ಅಗ್ಗದ ದರದಲ್ಲಿ ಪಡಿತರ ದೊರೆಯುತ್ತದೆ. ರಾಜ್ಯ ಸರ್ಕಾರದ ಮೂಲಕ ವಿವಿಧ ರಾಜ್ಯಗಳ ನಿವಾಸಿಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ.ಸರ್ಕಾರ ನೀಡುವ ಪಡಿತರವು, ಬಡವರಿಗೆ ಉಚಿತವಾಗಿ ಅಥವಾ ಕೈಗೆಟುಕುವ ಬೆಲೆಯಲ್ಲಿ ಪಡಿತರ ಚೀಟಿಗಳ ಮೂಲಕ ಲಭ್ಯವಾಗುತ್ತದೆ.      

2 ಲಕ್ಷ ಕುಟುಂಬಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್.!   ➤ಜನರಿಗೆ ಅಗ್ಗದ ದರದಲ್ಲಿ ಪಡಿತರ ಲಭ್ಯ.! Read More »

ರಾಷ್ಟ್ರೀಯ ನ್ಯೂಸ್

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top