ರಾಷ್ಟ್ರೀಯ ನ್ಯೂಸ್

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು    ➤  ಬಂಟ್ವಾಳದ ಐವರು NIA ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.06.  ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ತಂಡಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ […]

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು    ➤  ಬಂಟ್ವಾಳದ ಐವರು NIA ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕೋವಿಡ್ ಬಳಿಕ ಮತ್ತೊಂದು ವೈರಸ್ ಹಾವಳಿ   ➤  ದೇಶಾದ್ಯಂತ ಹೈಅಲರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಕೋವಿಡ್ ಬಳಿಕ ಮತ್ತೊಂದು ವೈರಸ್ ಹಾವಳಿ ಶುರುವಾದ ಕಾರಣ ಭಾರತೀಯ ವೈದ್ಯಕೀಯ ಸಂಘವು(IMA) ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಶುರುವಾಯ್ತಾ ಎಚ್3ಎನ್2 ಭೀತಿ ಶುರುವಾಗುತ್ತಿದೆ ಎಂಬ ಕಾರಣಕ್ಕೆ ಆರೋಗ್ಯ ಇಲಾಖೆ ಹೊಸ ವೈರಸ್ ಬಗ್ಗೆ ನಿಗಾ ವಹಿಸುತ್ತಿದೆ. ಸದ್ಯಕ್ಕೆ ಯಾರಲ್ಲು ಕಾಣಿಸಿಕೊಂಡಿಲ್ಲ. ಆದ್ರೆ, ಐಎಲ್’ಎ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೇಗ ಹೊಸ ವೈರಸ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ಸಮಸ್ಯೆಯಿಂದ ಬಳಲುತ್ತಿರುವ ವರು ಎಚ್ಚರದಿಂದಿರಲು ಸಲಹೆ ನೀಡಿದೆ.  

ಕೋವಿಡ್ ಬಳಿಕ ಮತ್ತೊಂದು ವೈರಸ್ ಹಾವಳಿ   ➤  ದೇಶಾದ್ಯಂತ ಹೈಅಲರ್ಟ್ Read More »

ರಾಷ್ಟ್ರೀಯ ನ್ಯೂಸ್

3 ದಿನದಲ್ಲಿ 40 ಜನರ ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ಹಣ ನಾಪತ್ತೆ !       

(ನ್ಯೂಸ್ ಕಡಬ)newskadaba.com ಮುಂಬೈ, ಮಾ.06. ಕಳೆದ 3 ದಿನದಲ್ಲಿ ಕೆವೈಸಿ ಮತ್ತು ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡುತ್ತೇವೆ ಎಂದು ಎಸ್ಎಂಎಸ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ಕನಿಷ್ಠ 40 ಜನರು ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಕಳವಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಪೋಲೀಸರು ಸಾರ್ವಜನಿಕರಿಗೆ ಮೊಬೈಲ್ ನಲ್ಲಿ ಬರುವ ಮಾಹಿತಿ ಕೋರಿದ ಎಸ್ ಎಂಎಸ್ ಲಿಂಕ್ ಕ್ಲಿಕ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.  

3 ದಿನದಲ್ಲಿ 40 ಜನರ ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ಹಣ ನಾಪತ್ತೆ !        Read More »

ರಾಷ್ಟ್ರೀಯ ನ್ಯೂಸ್

ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ 

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ,06. ಅಪರಿಚಿತ ಬಂದೂಕುಧಾರಿಗಳಿಂದ ಭಾರತಕ್ಕೆ ಬೇಕಾಗಿದ್ದ 4 ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಇದರಿಂದ ಪಾಕ್ ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರಲ್ಲಿ ನಡುಕ ಶುರುವಾಗಿದೆ. ಸೈಯದ್ ನೂರ್ ಶಲೋಬರ್, ಸೈಯದ್ ಖಾಲಿದ್ ರಜಾ, ಐಜಾಜ್ ಅಹ್ಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಮತ್ತು ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಎಂಬ ಉಗ್ರರು ಹತ್ಯೆಯಾಗಿದ್ದಾರೆ.  

ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ  Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಬೇರ್ಪಟ್ಟ ಬೋಗಿಗಳು!    ➤  ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.06. ಮಂಗಳೂರಿನಿಂದ ಪಾಲಕ್ಕಾಡ್‌ ಕಡೆ ಚಲಿಸುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳು ಬೇರ್ಪಟ್ಟಿದ್ದು, ಭಾರೀ ಅನಾಹುತವೊಂದು ತಪ್ಪಿದೆ ಎಂದು ವರದಿ ತಿಳಿಸಿದೆ. ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಚಂದೇರಾದಲ್ಲಿ ಸಾಗುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳು ದಿಢೀರನೆ ಬೇರ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಚಂದೇರಾ ರೈಲ್ವೇ ನಿಲ್ದಾಣ ಸಮೀಪಿಸುತ್ತಿದ್ದಂತೆ ಏಳನೇ ಬೋಗಿಯು ಸಂಪರ್ಕ ಕಳೆದುಕೊಂಡಿದೆ. ರೈಲನ್ನು ಹಿಂದಕ್ಕೆ ಚಲಾಯಿಸುವ ಮೂಲಕ ಒಂದೂವರೆ ಗಂಟೆಗಳ ಸುದೀರ್ಘ ಪ್ರಯತ್ನದ ನಂತರ ಬೋಗಿಗಳನ್ನು ಸರಿಪಡಿಸಲಾಯಿತು.    

ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಬೇರ್ಪಟ್ಟ ಬೋಗಿಗಳು!    ➤  ತಪ್ಪಿದ ಭಾರೀ ಅನಾಹುತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.06. ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾತೂರ್‌ನಲ್ಲಿ ನಡೆದಿದೆ. ಎಲ್ಲಾ ಆರು ಜನರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಟೆಂಪೋ ಕೂಡ ಪಲ್ಟಿಯಾಗಿದ್ದು, ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೀರ್ಘ ಜ್ವರ & ಕೆಮ್ಮು, ರಾಜ್ಯದಲ್ಲಿ ಹೆಚ್ಚಿದ H3N2 ವೈರಸ್ ಭೀತಿ !        

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.06. ಭಾರತದಲ್ಲಿ H3N2 ವೈರಸ್ ಆತಂಕ ಮೂಡಿಸಿದ್ದು, ಈ ಕುರಿತು ಮುಂಜಾಗೃತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ. ಈ ಕುರಿತು ಇಂದು ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಲಿದೆ ಎನ್ನಲಾಗಿದೆ. ದೀರ್ಘ ಕಾಲದ ಕೆಮ್ಮು ಈ ವೈರಸ್‌ನ ಪ್ರಮುಖ ಗುಣಲಕ್ಷಣ ಎಂದು ಪ್ರಾರಂಭಿಕ ಪ್ರಕರಣದಲ್ಲಿ ತಿಳಿದು ಬಂದಿದೆ. ಇದನ್ನು ಹೊರತುಪಡಿಸಿ ವಾಕರಿಕೆ, ವಾಂತಿ, ಗಂಟಲು ನೋವು,ಸ್ನಾಯು ಸೆಳೆತ ಜ್ವರ ಸಮಸ್ಯೆಗಳು ಕಾಡಲಿದೆ ಎನ್ನಲಾಗಿದೆ.  

ದೀರ್ಘ ಜ್ವರ & ಕೆಮ್ಮು, ರಾಜ್ಯದಲ್ಲಿ ಹೆಚ್ಚಿದ H3N2 ವೈರಸ್ ಭೀತಿ !         Read More »

ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಶಿಶ್ನವನ್ನು ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು !

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.06. ಶಿಶ್ನದಲ್ಲಿ ಗೆಡ್ಡೆ ಇದೆ ಎಂದು ವೈದ್ಯರು ರೋಗಿಯೊಬ್ಬನ ಶಿಶ್ನವನ್ನು ಕತ್ತರಿಸಿರುವ ಘಟನೆ ವರದಿಯಾಗಿದೆ. ಅರೆಝೋದಲ್ಲಿನ ಸ್ಯಾನ್ ಡೊನಾಟೊ ಆಸ್ಪತ್ರೆಯಲ್ಲಿ 60 ವರ್ಷದ ರೋಗಿಯ ಶಿಶ್ನವನ್ನು ವೈದ್ಯರು ಗೆಡ್ಡೆ ಇದೆ ಎಂದು ತಪ್ಪಾಗಿ ಗ್ರಹಿಸಿ ಕತ್ತರಿಸಿದ್ದಾರೆ. ಬಳಿಕ ತಪ್ಪಿನ ಅರಿವಾಗಿ ಪುನಃ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ರೋಗಿಯ ಜೀವಕ್ಕೆ ಅಪಾಯ ಇಲ್ಲವಾದರೂ ಜೀವನ ಪೂರ್ತಿ ನೋವಿನಲ್ಲಿಯೇ ಇರುವ ಸ್ಥಿತಿ ಉಂಟಾಗಿದೆ.  

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಶಿಶ್ನವನ್ನು ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು ! Read More »

ರಾಷ್ಟ್ರೀಯ ನ್ಯೂಸ್

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4. ಉಮೇಶ್ ಯಾದವ್ ಅವರ ತಂದೆ ತಿಲಕ್ ಯಾದವ್ ಅವರು  ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ತಂದೆಯ ನಿಧನದ ದುಃಖದ ನಡುವೆಯೇ ಇಂದೋರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಉಮೇಶ್ ಯಾದವ್ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟು ಮೂರು ವಿಕೆಟ್‌ಗಳನ್ನು ಈ ಪಂದ್ಯದಲ್ಲಿ ಪಡೆದುಕೊಂಡಿದ್ದರು. ಇನ್ನು ಉಮೇಶ್ ಯಾದವ್ ಅವರ ತಂದೆಯ ನಿಧನಕ್ಕೆ ಪತ್ರ ಮುಖೇನ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ನಿಮ್ಮ ಕ್ರಿಕೆಟ್ ಜೀವನದ ಪಯಣದಲ್ಲಿ

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ    ➤ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.04. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್  ಆದೇಶ ನೀಡಿದೆ. ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು.

ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ    ➤ ನ್ಯಾಯಾಲಯ ಆದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top