ರಾಷ್ಟ್ರೀಯ ನ್ಯೂಸ್

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ದೆಹಲಿ .  ಫೆ.28. ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ  ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ […]

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು..

(ನ್ಯೂಸ್ ಕಡಬ) newskadaba.com. ತೆಲಂಗಾಣ .  ಫೆ.28. ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಯುವಕ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವನೆಂದು ತಿಳಿದುಬಂದಿದೆ. ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೈದರಾಬಾದ್​ನಿಂದ 200 ಕಿ.ಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ.

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2023 ಐಸಿಸಿ ಮಹಿಳಾ ಟಿ20 ವಿಶ್ವಕಪ್ ➤ ಟೀಂ ಇಂಡಿಯಾದಿಂದ ಓರ್ವ ಆಟಗಾರ್ತಿಯ ಆಯ್ಕೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.27. 2023ರ ಮಹಿಳಾ ಟಿ20 ವಿಶ್ವಕಪ್​ಗೆ ಅದ್ಧೂರಿ ತೆರೆಬಿದ್ದಿದೆ. ಕಳೆದ ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ಚಾಂಪಿಯನ್ ಆಗುವ ಮೂಲಕ ಟಿ20 ಚಾಂಪಿಯನ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 16 ರನ್​ಗಳಿಂದ ಮಣಿಸಿದ ಆಸೀಸ್ ವನಿತಾ ತಂಡ 6ನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಈ ಮೂಲಕ ಟೂರ್ನಿಗೂ ತೆರೆ ಬಿದ್ದಿತ್ತು. ಇದೀಗ ಐಸಿಸಿ ಅತ್ಯುತ್ತಮ ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಟೀಂ ಇಂಡಿಯಾದ ಓರ್ವ

2023 ಐಸಿಸಿ ಮಹಿಳಾ ಟಿ20 ವಿಶ್ವಕಪ್ ➤ ಟೀಂ ಇಂಡಿಯಾದಿಂದ ಓರ್ವ ಆಟಗಾರ್ತಿಯ ಆಯ್ಕೆ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ..

(ನ್ಯೂಸ್ ಕಡಬ) newskadaba.com. ಬೆಳಗಾವಿ ಫೆ.27.  ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ  ಮೋದಿ  ರೋಡ್ ಶೋ ನಲ್ಲಿ ಪಾಲ್ಗೊಂಡರು. ರಸ್ತೆಯ ತುಂಬ ಸೇರಿದ್ದ ಜನಸಾಗರ ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಟ್ಟಡಗಳ ಮೇಲೇರಿದ ಜನರು, ಬಿಜೆಪಿ ಭಾವುಟ ಪ್ರದರ್ಶಿಸುತ್ತಾ, ಮೋದಿ ಪರ ಜೈಕಾರ ಹಾಕಿ ಹರ್ಷೋದ್ಗಾರ ಮಾಡಿದರು.

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ.. Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ಅಧ್ಯಯನ ಪ್ರವಾಸಕ್ಕೆಂದು ಇಸ್ರೇಲ್ ಗೆ ತೆರಳಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್

(ನ್ಯೂಸ್ ಕಡಬ) newskadaba.com. ನವದೆಹಲಿ ಫೆ.27.  ಅಧ್ಯಯನ ಪ್ರವಾಸಕ್ಕೆಂದು ಕೇರಳದಿಂದ ಇಸ್ರೇಲ್ ಗೆ ತೆರಳಿದ್ದ ಕೃಷಿಕರೊಬ್ಬರು ನಾಪತ್ತೆಯಾಗಿದ್ದು, ಕೆಲ ದಿನಗಳ ಬಳಿಕ ಮತ್ತೆ ಭಾರತಕ್ಕೆ ವಾಪಾಸಾಗಿದ್ದಾರೆ. ಸರ್ಕಾರಿ ಪ್ರಾಯೋಜಿತ ಪ್ರವಾಸದ ಭಾಗವಾಗಿ ಇಸ್ರೇಲ್ ಗೆ ತೆರಳಿದ್ದ ತಂಡದ ಪೈಕಿ ರೈತ ಬಿಜು ಕುರಿಯನ್  ನಾಪತ್ತೆಯಾಗಿದ್ದರು. ಅಧ್ಯಯನ ಪೂರ್ಣಗೊಳಿಸಿ ಫೆ.17 ಕ್ಕೆ ಭಾರತಕ್ಕೆ ಹಿಂದಿರುಗಬೇಕಿತ್ತು. ಆದರೆ ಈ ಮಧ್ಯೆ ಬಿಜು ಕುರಿಯನ್  ನಾಪತ್ತೆಯಾಗಿದ್ದು,  ಇದೀಗ ಸ್ಥಳೀಯರ ನೆರವಿನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂದಿರುಗಿದ್ದಾರೆ.

➤ ಅಧ್ಯಯನ ಪ್ರವಾಸಕ್ಕೆಂದು ಇಸ್ರೇಲ್ ಗೆ ತೆರಳಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ!

(ನ್ಯೂಸ್ ಕಡಬ) newskadaba.com. ನವದೆಹಲಿ ಫೆ.27. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಮಧ್ಯ ಹಗರಣ ಕೇಸ್ ಗೆ ಸಂಬಂಧಿಸಿ ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮನೀಶ್ ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಮನೀಶ್‌ ಸಿಸೋಡಿಯಾ ಅವರು ಸಿಬಿಐ ವಿಚಾರಣೆಗೆ ಆಗಮಿಸಬೇಕಿತ್ತು. ವಿಚಾರಣೆಗೆ ಬರುವಂತೆ ಸಿಬಿಐಯು ಇವರನ್ನು

➤ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ! Read More »

ರಾಷ್ಟ್ರೀಯ ನ್ಯೂಸ್

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ

(ನ್ಯೂಸ್ ಕಡಬ) newskadaba.com. ಹೈದರಾಬಾದ್. ಫೆ.27.  ತನ್ನ ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕಾಗಿ ಮತ್ತು ಕರೆ ಮಾಡಿದ ಎಂಬ ಕಾರಣಕ್ಕಾಗಿ  ತನ್ನ ಸ್ನೇಹಿತನನ್ನು ಕ್ರೂರವಾಗಿ ಕೊಂದ ಘಟನೆ  ಹೈದರಾಬಾದ್ ನಲ್ಲಿ ನಡೆದಿದೆ. ಇಲ್ಲಿ ನವೀನ್ (22) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹರಿಹರ ಕೃಷ್ಣಾ ಎಂಬಾತ ಕೃತ್ಯವನ್ನು ನಡೆಸಿದ್ದಾನೆ ಎನ್ನಲಾಗಿದೆ.   ನವೀನ್ ನನ್ನು ಕೊಲೆ ಮಾಡಿ, ಆತನ ತಲೆ ಕಡಿದು,ಆತನ ಹೃದಯ ಮತ್ತು ಖಾಸಗಿ ಭಾಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿ, ನಂತರ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆಂದು ಹೇಳಾಗಿದೆ. ಆರೋಪಿಯ ಹೇಳಿಕೆ

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ

(ನ್ಯೂಸ್ ಕಡಬ) newskadaba.com. ನವದೆಹಲಿ .ಫೆ.27.  ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆಯು  ಅತಿಕ್ರಮಣ ವಿರೋಧಿ ಅಭಿಯಾನದ ಭಾಗವಾಗಿ ಮಧ್ಯ ದೆಹಲಿಯ ಕಾಲುದಾರಿಯಲ್ಲಿದ್ದ ಮಸೀದಿ ಮತ್ತು ದೇವಾಲಯ ಸೇರಿದಂತೆ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಪಾದಚಾರಿ ಮಾರ್ಗದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಮತ್ತು ಅವುಗಳನ್ನು ಕೆಡವಲು ನ್ಯಾಯಾಲಯ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ಮಾತನಾಡಿ, ಪಾದಚಾರಿ ಮಾರ್ಗದಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಚಾಲನೆ ನೀಡಲಾಗುತ್ತಿದೆ, ಈ ಕುರಿತು ನ್ಯಾಯಾಲಯದ ಆದೇಶವಿದೆ

ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ Read More »

ರಾಷ್ಟ್ರೀಯ ನ್ಯೂಸ್

ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ ಯುವಕ ಇಂದು ಡಿಸಿ ಕಾರು ಚಾಲಕ

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.25. ಕುರ್ಟಾಲಂ ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ್ದ ವಿಜಯ ಕುಮಾರ್​ಗೆ ತೂತುಕುಡಿ ಜಿಲ್ಲಾಧಿಕಾರಿಗಳ ಕಾರು ಚಾಲಕನಾಗಿ ತಾತ್ಕಾಲಿಕವಾಗಿ ಕೆಲಸ ನೀಡಲಾಗಿದೆ. ತೂತುಕುಡಿ ಸಮೀಪದ ವಿಲತ್ತಿಕುಲಂ ನಿವಾಸಿಯಾದ ವಿಜಯ ಕುಮಾರ್​, ಆ ಪ್ರದೇಶದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕುರ್ಟಾಲಂ ಜಲಪಾತಕ್ಕೆ ಹೋಗಿದ್ದ. ಆ ವೇಳೆ ಅಲ್ಲಿಗೆ ಕೇರಳ ರಾಜ್ಯದ ಪಾಲಕ್ಕಾಡ್‌ನ ಹರಿಣಿ ಎಂಬ ಮಗು ತನ್ನ ಕುಟುಂಬ ಸಮೇತ ಪ್ರವಾಸ ಬಂದಿದ್ದರು.  

ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ ಯುವಕ ಇಂದು ಡಿಸಿ ಕಾರು ಚಾಲಕ Read More »

ರಾಷ್ಟ್ರೀಯ ನ್ಯೂಸ್

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ

(ನ್ಯೂಸ್ ಕಡಬ) newskadaba.com. ದೆಹಲಿ. ಫೆ.25.  ಭಾರತ್ ಜೋಡೊ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ತಿರುವು ನೀಡಲಿದೆ ಎಂದಿದ್ದಾರೆ.

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top