ರಾಷ್ಟ್ರೀಯ ನ್ಯೂಸ್

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ದೆಹಲಿಯಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್ ಳನ್ನು ಹತ್ಯೆಗೈದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲ ವಿರುದ್ದ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ. ಫೋರೆನ್ಸಿಕ್ ಸಾಕ್ಷ್ಯಗಳು, 100ಕ್ಕೂ ಅಧಿಕ ಸಾಕ್ಷಿ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚಾರ್ಜ್‌ಶೀಟ್‌ನಲ್ಲಿದೆ. ಅಫ್ತಾಬ್ ತಪ್ಪೊಪ್ಪಿಗೆ, ನಾರ್ಕೋ ಪರೀಕ್ಷೆಯ ಫಲಿತಾಂಶ, ಫೊರೆನ್ಸಿಕ್ ವರದಿಯನ್ನೂ ಉಲ್ಲೇಖಿಸಲಾಗಿದೆ. ಕಾನೂನು ತಜ್ಞರು ಇದನ್ನು ಪರಿಶೀಲಿಸುತ್ತಿದ್ದಾರೆ. ಅಫ್ತಾಬ್ ಮತ್ತು ಶ್ರದ್ದಾ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಪೊಲೀಸರಿಗೆ […]

ಶ್ರದ್ದಾ ವಾಕರ್ ಹತ್ಯೆ ಪ್ರಕರಣ ➤ 3,000 ಪುಟಗಳ ಚಾರ್ಜ್‌ಶೀಟ್ ಸಿದ್ಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.23. ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ಸಂಭವಿಸಿದೆ ಎನ್ನಲಾಗಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ..

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ        

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಅರಬ್ ರಿಪಬ್ಲಿಕ್ ದೇಶ ಈಜಿಪ್ಟ್ ನ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಈಜಿಪ್ಟ್ ಸೇನೆಯ ಮಿಲಿಟರಿ ಪಡೆ ಸಹ ಭಾರತದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಲಿದೆ ಎಂದು ಹೇಳಿದೆ.

ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ         Read More »

ರಾಷ್ಟ್ರೀಯ ನ್ಯೂಸ್

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ

(ನ್ಯೂಸ್ ಕಡಬ)newskadaba.com  ಮಧ್ಯಪ್ರದೇಶ, ಜ.21. ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸಾವಿನ ಸುದ್ದಿಯನ್ನು ಅವರ

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ಕೇಂದ್ರ ಸರ್ಕಾರವು 2021-2022ರ ಕೇಂದ್ರ ಬಜೆಟ್ ನಲ್ಲಿ ಸಾರ್ವಜನಿಕರಿಗೆ ಅನೇಕ ಭರವಸೆಗಳನ್ನ ನೀಡಿತ್ತು, ಅದ್ರಲ್ಲಿ ಹಲವು ಈಡೇರಿಸಿದೆ. ಅದ್ರಂತೆ, ಬಜೆಟ್ ನಲ್ಲಿ ಮೋದಿ ಸರ್ಕಾರವು ಅಸಂಘಟಿತ ವಲಯದ ಕೋಟ್ಯಂತರ ಜನರಿಗೆ ಇ-ಕಾರ್ಮಿಕರಿಗಾಗಿ ಪೋರ್ಟಲ್ ತರುವುದಾಗಿ ಭರವಸೆ ನೀಡಿತ್ತು. ಇದನ್ನ ಸರ್ಕಾರವು ಆಗಸ್ಟ್ 2022ರಲ್ಲಿಯೇ ಪೂರ್ಣಗೊಳಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಇಂತಹ ಹಲವು ಭರವಸೆಗಳನ್ನ ನೀಡಿದ್ದರು, ಅದರ ಮೇಲೆ ಸರ್ಕಾರ ಈಗ ತನ್ನ ಪ್ರಗತಿಯನ್ನ ಹೇಳುತ್ತಿದೆ.  

‘ಕೇಂದ್ರ ಸರ್ಕಾರ’ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ ➤ ‘ಹೊಸ ಯೋಜನೆ’ಗಳ ಆರಂಭಕ್ಕೆ ‘ಇ-ಲೇಬರ್ ಪೋರ್ಟಲ್’ ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ ➤ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜ.21. ದೇಶದ ಭದ್ರತಾಸಂಸ್ಥೆಗಳು ತಮ್ಮ ಕಾರ್ಯವೈಖರಿಯಲ್ಲಿ ಪಾರಮ್ಯ ಮೆರೆದಿದ್ದು, ಇಂದಿಗೆ ಭಾರತವನ್ನು ಯಾರಿಗೂ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ನಿರ್ಲಕ್ಷಿಸಲೂ ಕೂಡ ಆಸ್ಪದವಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಡಿಜಿಪಿ ಹಾಗೂ ಐಜಿಪಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಿಂದೆಂದಿಗಿಂತ ಸುರಕ್ಷಿತ, ಸದೃಢ ಹಾಗೂ ಉತ್ತಮ ಸ್ಥಾನದಲ್ಲಿದೆ ಎಂದಿದ್ದಾರೆ. ಅಲ್ಲದೇ, ಮೋದಿ ಅವರ ಆಡಳಿತದಲ್ಲಿ ಭದ್ರತಾ ಸಂಸ್ಥೆಗಳು ಸ್ವತಂತ್ರವಾಗಿದ್ದು, ದೇಶ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ

ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ ➤ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ

(ನ್ಯೂಸ್ ಕಡಬ)newskadaba.com  ಸೂರತ್‌, ಜ.21. ಇತ್ತೀಚೆಗೆ ಜರುಗಿದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್‌ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್‌ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ Read More »

ರಾಷ್ಟ್ರೀಯ ನ್ಯೂಸ್

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com  ಲಂಡನ್​, ಜ.21. ಸೀಟ್​ ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣ ಬೆಳೆಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಸಾಮಾಜಿಕ ಜಾಲತಾಣಕ್ಕಾಗಿ ವಿಡಿಯೋ ಮಾಡುವಾಗ ಸೀಟ್​ ಬೆಲ್ಟ್ ಧರಿಸದೇ​ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ರಿಷಿ ಪ್ರಯಾಣ ಮಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಬ್ರಿಟನ್​ ಪೊಲೀಸರು ದಂಡವನ್ನು ವಿಧಿಸಿದ್ದು, ಇದರಿಂದ ರಿಷಿ ಅವರು ಮುಜುಗರ ಅನುಭವಿಸಿದ್ದಾರೆ. ಈ ಬಗ್ಗೆ ರಿಷಿ ಸುನಕ್​ ಪ್ರತಿಕ್ರಿಯೆ

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 30 ಲಕ್ಷ ರೂ. ದಂಡ ಹಾಗೂ ಪೈಲೆಟ್ ಲೈಸೆನ್ಸ್ 3 ತಿಂಗಳು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ವರ್ಷ ಶಂಕರ್ ಮಿಶ್ರಾ ಎಂಬ ವ್ಯಕ್ತಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಏರ್ ಇಂಡಿಯಾ ಈಗಾಗಲೇ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿರ್ಬಂಧ ವಿಧಿಸಿದೆ.

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು Read More »

ರಾಷ್ಟ್ರೀಯ ನ್ಯೂಸ್

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.21. ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ  ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.  

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top