ರಾಷ್ಟ್ರೀಯ ನ್ಯೂಸ್

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಡಿ. 24. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿದ ಪರಿಣಾಮ ವಾಹನಗಳು, ಹಣ್ಣು, ತರಕಾರಿ ತುಂಬಿದ್ದ ಚೀಲಗಳು ಮಣ್ಣಿನಡಿ ಸಿಲುಕಿಕೊಂಡ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ ನಲ್ಲಿ ನಡೆದಿದೆ.   ಪೊಲೀಸರ ಪ್ರಕಾರ, ಗೋಶಾಮಹಲ್ ಪ್ರದೇಶದಲ್ಲಿ ಚರಂಡಿಯ ಮೇಲೆ ರಸ್ತೆ ನಿರ್ಮಿಸಲಾಗಿದ್ದು, ಹಣ್ಣು ಮತ್ತು ತರಕಾರಿಗಳ ಮಾರಾಟ ಮಾಡುತ್ತಿದ್ದ ಜನರು ಈ ಭೂಕುಸಿತದಿಂದಾಗಿ ನೆಲಕ್ಕೆ ಬಿದ್ದಿದ್ದಾರೆ. ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಸಿಕೊಂಡಿದ್ದು ರಸ್ತೆ ಮಧ್ಯೆ ಒಡೆದುಹೋಗಿದೆ. ಹಣ್ಣುಗಳು ಮತ್ತು ತರಕಾರಿಗಳನ್ನು ತುಂಬಿದ […]

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ

(ನ್ಯೂಸ್ ಕಡಬ) newskadaba.com ಭೋಜ್‌ಪುರ, ಡಿ. 24. ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.   ಭೋಜ್‌ಪುರದ ಚಾಂಡಿ ಗ್ರಾಮದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಆಟದಲ್ಲಿ ಜಯಗಳಿಸಿದ ಗುಂಪೊಂದು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ಈ ವೀಡಿಯೋ ಇದೀಗ ವೈರಲ್ ಆಗಿದೆ. ವೀಡಿಯೋದಲ್ಲಿ ಟ್ರೋಫಿಯನ್ನು ಇಬ್ಬರು ಹಿಡಿದುಕೊಂಡಿದ್ದು, ಕೆಲವು ಯುವಕರು ಪಾಕ್ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ವೀಡಿಯೋವನ್ನು ಸಾಕ್ಷ್ಯವಾಗಿಟ್ಟುಕೊಂಡು ಐವರನ್ನು ಬಂಧಿಸುವಲ್ಲಿ

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ➤ RBI ಮಾಜಿ ಮುಖ್ಯಸ್ಥ ಸಿ.ರಂಗರಾಜನ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಭಾರತ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಮುಖ್ಯಸ್ಥ ಮಾಜಿ ಗವರ್ನರ್ ಸಿ ರಂಗರಾಜನ್ ಹೇಳಿದ್ದಾರೆ ಎಂದು ವರದಿಯಾಗಿದೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯು ಅಲ್ಪಾವಧಿಯ “ಆಕಾಂಕ್ಷೆಯ ಗುರಿಯಾಗಿದೆ” ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಸಿ ರಂಗರಾಜನ್ ಹೇಳಿದ್ದಾರೆ. ಅದರ ನಂತರವೂ ಭಾರತವು ತಲಾ ಆದಾಯ USD 3472ದೊಂದಿಗೆ ಇನ್ನೂ

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ➤ RBI ಮಾಜಿ ಮುಖ್ಯಸ್ಥ ಸಿ.ರಂಗರಾಜನ್ Read More »

ರಾಷ್ಟ್ರೀಯ ನ್ಯೂಸ್

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟಿಸುತ್ತಿದ್ದು, ಸಾವಿರಾರು ಜನರು ಸಾವನಪ್ಪುತ್ತಿದ್ದಾರೆ. ರೂಪಾಂತರಿ ಕೊರೊನಾ ಭಾರತಕ್ಕೂ ಕಾಲಿಡುತ್ತಿದೆ. ಇದರ ಮಧ್ಯೆ ಕ್ರಿಸ್​ಮಸ್ ಹಾಗೂ ಹೊಸ ವರ್ಷ ಬರುತ್ತಿದ್ದು, ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ಅದರಲ್ಲೂ ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣಿಟ್ಟಿದೆ.   ಹೊಸ ವರ್ಷಾಚರಣೆ ನೆಪದಲ್ಲಿ ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಈ ವರ್ಷ ಇವುಗಳಿಗೆ ಬ್ರೇಕ್​

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅಲಹಾಬಾದ್, ಡಿ. 24. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರು ಎರಡು ವರ್ಷಗಳ ಬಳಿಕ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.   ಕಪ್ಪನ್ ವರದಿಗಾರ ಮತ್ತು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್(ಕೆಯುಡಬ್ಲ್ಯುಜೆ)ನ ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದ ಇವರು, 2020ರ ಅಕ್ಟೋಬರ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆಯ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿತ್ತು. ಇಡಿ ಪ್ರಕರಣದಲ್ಲಿ ಲಖನೌ ನ್ಯಾಯಾಲಯವು

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್

ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..!

(ನ್ಯೂಸ್ ಕಡಬ) newskadaba. com ನವದೆಹಲಿ, ಡಿ. 24. ಐಸಿಐಸಿಐ ಬ್ಯಾಂಕ್ ನಿಂದ ಮಂಜೂರಾದ ಸಾಲ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ.   ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪ ಇವರ ಮೇಲಿದ್ದು, ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್,

ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮಾದಕ ದ್ರವ್ಯ ಸಾಗಾಟ  ➤ 17 ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 24. ಪಾಕಿಸ್ತಾನದಿಂದ ಅಕ್ರಮವಾಗಿ ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದ ಬೃಹತ್‌ ಜಾಲವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ್ದು, ಐವರು ಪೊಲೀಸರು ಸೇರಿ 17 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಗಡಿ ಮೂಲಕ ಮಾದಕ ದ್ರವ್ಯ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡವು ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದೆ. ಮಾದಕ ದ್ರವ್ಯ

ಅಕ್ರಮ ಮಾದಕ ದ್ರವ್ಯ ಸಾಗಾಟ  ➤ 17 ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟ್ನಾ ಡಿ. 24. ಇಟ್ಟಿಗೆ ಭಟ್ಟಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನರೀರ್ ಗಿರ್ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟಿರುವುದರಲ್ಲಿ ಇಟ್ಟಿಗೆ ಭಟ್ಟಿಯ ಮಾಲೀಕ ಮೊಹ್ಮದ್ ಇರ್ಷಾದ್ ಒಬ್ಬರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆ ಎಲ್ಲ

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..!

(ನ್ಯೂಸ್ ಕಡಬ) newskadaba.com ಅರುಣಾಚಲ ಪ್ರದೇಶ, ಡಿ 23 : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ಮೃತ್ಯುಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಎಂದು ಗುರುತಿಸಲಾಗಿದೆ. ತವಾಂಗ್ ಬಳಿ   ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!  

(ನ್ಯೂಸ್ ಕಡಬ) newskadaba.com  ಸಿಕ್ಕಿಂ, ಡಿ.23  ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ 16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.  ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷರ್ ಅಧಿಕಾರಿಗಳು ಮತ್ತು 13 ಯೋಧರು ಸೇರಿದ್ದಾರೆ.  ಯೋಧರ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್‌ಟಾಕ್‌ನ ಸರ್ಕಾರಿ ಎಸ್‌ಟಿಎನ್‌ಎಂ

ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!   Read More »

ರಾಷ್ಟ್ರೀಯ ನ್ಯೂಸ್
Scroll to Top