ರಾಷ್ಟ್ರೀಯ ನ್ಯೂಸ್

ಓಮೈಕ್ರಾನ್ ನ ಬಿಎಫ್ 7 ಉಪತಳಿ  ➤ ದೇಶದಲ್ಲಿ 4 ಹೊಸ ಪ್ರಕರಣ ಪತ್ತೆ      

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ದೇಶದಲ್ಲಿ ಕೊರೋನಾ ವೈರಸ್ ಓಮೈಕ್ರಾನ್ ನ ಉಪತಳಿ ಬಿಎಫ್7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ ನಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿದೆ. ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣಗಳನ್ನು ಪತ್ತೆ ಮಾಡಿತು. ಎರಡು ಮತ್ತು ಮೂರನೇ ಪ್ರಕರಣವೂ ಗುಜರಾತ್ ನಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣ ಒಡಿಶಾದಲ್ಲಿ ವರದಿಯಾಗಿದೆ. ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಕ್ಕೆ ವೈರಸ್ ನ […]

ಓಮೈಕ್ರಾನ್ ನ ಬಿಎಫ್ 7 ಉಪತಳಿ  ➤ ದೇಶದಲ್ಲಿ 4 ಹೊಸ ಪ್ರಕರಣ ಪತ್ತೆ       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 22. ಮನೆಯಲ್ಲಿ ಆಟವಾಡುತ್ತಾ ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ ಕೇರಳದಲ್ಲಿ ನಡೆದಿದೆ. ಬ್ಯಾಟರಿ ನುಂಗಿದನ್ನು ಗಮನಿಸಿದ ಪೋಷಕರು ತಕ್ಷಣವೇ ಅಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿಯನ್ನು ಹೊರಕ್ಕೆ ತೆಗೆದಿದ್ದಾರೆ.

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ!

(ನ್ಯೂಸ್ ಕಡಬ) newskadaba.com ಕೇರಳ, ಡಿ. 21. ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ. ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.   ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ! Read More »

ರಾಷ್ಟ್ರೀಯ ನ್ಯೂಸ್

ರಾಜ್ಯಗಳಿಗೆ ಕೋಟಿ ರೂ. ಜಿಎಸ್.ಟಿ ಬಾಕಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 21. ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಾಗಿರುವ 17,176 ಕೋಟಿ ರೂ.ವನ್ನು ಬಾಕಿ ಉಳಿಸಿಕೊಂಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್‌ ಚೌಧರಿ ತಿಳಿಸಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿ, ಕೇಂದ್ರವು ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಪಾವತಿಯನ್ನು ಜೂನ್‌ ನಲ್ಲಿ ನಿಲ್ಲಿಸಿದ್ದು, ಬಾಕಿ ಮೊತ್ತವು ಕಳೆದ ಜೂನ್‌ ತಿಂಗಳಿಗೆ ಸಂಬಂಧಿಸಿದ್ದು. ಸಂವಿಧಾನದ ನಿಬಂಧನೆ ಪ್ರಕಾರ 5 ವರ್ಷ ರಾಜ್ಯಗಳಿಗೆ ಜಿಎಸ್‌ಟಿ ಪಾವತಿಸಲು ಕೇಂದ್ರ ಬದ್ಧವಾಗಿದ್ದು, ಈ ಅವಧಿಯು ಜೂನ್‌ 30ಕ್ಕೆ ಕೊನೆಗೊಂಡಿದೆ.

ರಾಜ್ಯಗಳಿಗೆ ಕೋಟಿ ರೂ. ಜಿಎಸ್.ಟಿ ಬಾಕಿ Read More »

ರಾಷ್ಟ್ರೀಯ ನ್ಯೂಸ್

ತಂದೆ ಎದುರೇ ಮಗಳನ್ನು ಕಿಡ್ನಾಪ್ ಮಾಡಿದ ನಾಲ್ವರ ಗ್ಯಾಂಗ್…!

(ನ್ಯೂಸ್ ಕಡಬ) newskadaba.com ತೆಲಂಗಾಣ , ಡಿ 20 :  18 ವರ್ಷದ ಯುವತಿಯನ್ನು ಆಕೆಯ ತಂದೆಯ ಮುಂದೆಯೇ ಕಿಡ್ನಾಪ್ ಮಾಡಿರುವ ಆಘಾತಕಾರಿ ಘಟನೆ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಸಂಭವಿಸಿದೆ. ಬೆಳಗ್ಗೆ ತಂದೆಯೊಂದಿಗೆ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಯುವತಿಯನ್ನು ಅಪಹರಿಸಲಾಗಿದೆ . ಕಾರಿನಲ್ಲಿ ಬಂದ ನಾಲ್ವರು ಯುವಕರು ಯುವತಿಯನ್ನು ಬಲವಂತವಾಗಿ ಹತ್ತಿಸಿಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ವೇಮುಲವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ತಂದೆ ಎದುರೇ ಮಗಳನ್ನು ಕಿಡ್ನಾಪ್ ಮಾಡಿದ ನಾಲ್ವರ ಗ್ಯಾಂಗ್…! Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ವಿವಾಹ ನಿಲ್ಲಿಸಿದ ಕ್ಲಾಸ್ ಮೇಟ್ !

(ನ್ಯೂಸ್ ಕಡಬ) newskadaba.com  ಕೊಲ್ಕತ್ತ , ಡಿ 20 :  ಅಪ್ರಾಪ್ತ  ವಯಸ್ಸಿನ ಬಾಲಕಿಯೊಬ್ಬಳ ವಿವಾಹವನ್ನು ಆಕೆಯ ಕ್ಲಾಸ್ ಮೇಟ್ ನಿಲ್ಲಿಸಿರುವ ಘಟನೆ ಪಶ್ಚಿಮ  ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದಿದೆ. ತನ್ನ ಕ್ಲಾಸ್ ಮೇಟ್ ಶಾಲೆಗೆ ಗೈರು ಹಾಜರಗಿರಿವುದನ್ನು ಗಮನಿಸಿದ ಗೊಲಾರ್ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಶುಹಿಲಾ, ನಂತರ ಆಕೆಗೆ ಮದುವೆ ನಿಗದಿಯಾಗಿರುವುದು ಗೊತ್ತಾಗಿದೆ. ಆಕೆಯ  ಬಾಲಕಿಯ ಮನೆಗೆ ತೆರಳಿ ಶಾಲೆಗೆ ಕಳಿಸುವಂತೆ ಒತ್ತಾಯಿಸಿದ್ದಾಳೆ . ಆಗ ಬಾಲಕಿಯನ್ನು ಮನೆಯವರು ಹಿಂಬಾಗಿಲಿನಿಂದ ವರನ

ಅಪ್ರಾಪ್ತ ಬಾಲಕಿಯ ವಿವಾಹ ನಿಲ್ಲಿಸಿದ ಕ್ಲಾಸ್ ಮೇಟ್ ! Read More »

ರಾಷ್ಟ್ರೀಯ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….!

(ನ್ಯೂಸ್ ಕಡಬ) newskadaba.com ಚಂಡೀಗಡ , ಡಿ 20 :  ಹರ್ಯಾಣ  ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರು ಪ್ರಯಾಣಿಸಿತ್ತಿದ್ದ ವಾಹವು ಪೊಲೀಸ್ ಜೀಪೊಂದಕ್ಕೆ ಢಿಕ್ಕಿ ಹೊಡೆದ  ಘಟನೆ  ಚೌತಾಲಾ ಆವರು ಬೆಂಗಾವಲು ಪಡೆ ಹಿಸಾರ್ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ  ಅಗ್ರೋಹಾ ಬಳಿ ಸಂಭವಿಸಿದೆ. ದಟ್ಟವಾದ ಮಂಜಿನ ಪರಿಣಾಮವಾಗಿ ಕಡಿಮೆ ಗೋಚಾರತೆಯಿಂದಾಗಿ ರಾಜ್ಯ ಪೊಲೀಸರ ಬೊಲೆರೊ ಕಾರು ಹಠಾತ್ ಬ್ರೇಕ್ ಹಾಕಿದಾಗ ಚೌಟಾಲಾ ಅವರ ಬೆಂಗಾವಲು ಪಡೆಯ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಉಪಮುಖ್ಯಮಂತ್ರಿ ಪ್ರಾಣಾಪಾಯದಿಂಸ ಪಾರಾಗಿದ್ದಾರೆ ಎನ್ನಲಾಗಿದೆ.

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….! Read More »

ರಾಷ್ಟ್ರೀಯ ನ್ಯೂಸ್

ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 20. ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯು ಟ್ವೀಟ್ ಮೂಲಕ ಬಿಗ್ ಶಾಕ್ ನೀಡಿದ್ದು, ಮಾರ್ಚ್ 31, 2023ರ ಒಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡಬೇಕು, ಇಲ್ಲದಿದ್ದಲ್ಲಿ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ. ಪ್ರಸ್ತುತ ದಿನಗಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಅದು ಇಲ್ಲದಿದ್ದರೆ ತೆರಿಗೆ ಇಲಾಖೆಯಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ. ಆದಾಯ ತೆರಿಗೆ ಇಲಾಖೆಯು ಪ್ಯಾನ್

ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top