ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು !

(ನ್ಯೂಸ್ ಕಡಬ) newskadaba.com ದೆಹಲಿ, ಅ.19: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ […]

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು ! Read More »

ರಾಷ್ಟ್ರೀಯ ನ್ಯೂಸ್

ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 06. ಭಾರತದಲ್ಲಿ ಉತ್ಪಾದಿಸಲಾದ ಕೆಮ್ಮು, ಶೀತಕ್ಕೆ ನೀಡುವ ಸಿರಪ್ ಸೇವಿಸಿ ಆಫ್ರಿಕಾದ ಗ್ಯಾಂಬಿಯಾದಲ್ಲಿ 66ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಎಚ್ಚರಿಕೆ ನೀಡಿದಲ್ಲದೇ ತಕ್ಷಣವೇ ತನಿಖೆ ನಡೆಸಲು ಕೇಂದ್ರ ಔಷಧ ನಿಯಂತ್ರಕ ಮಂಡಳಿ(ಸಿಡಿಎಸ್​ಸಿಒ)ಗೆ ಸೂಚಿಸಿದೆ. ಕೆಮ್ಮು ಮತ್ತು ಶೀತಕ್ಕೆ ಬಳಸುವ ಈ ನಾಲ್ಕು ಸಿರಪ್‌ಗಳು ಭಾರತದ ಹರಿಯಾಣದಲ್ಲಿನ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ ಕಂಪನಿಯಲ್ಲಿ ಉತ್ಪಾದಿಸಲ್ಪಟ್ಟಿವೆ ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೋಸ್

ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ 27. ದಲಿತ ವಿದ್ಯಾರ್ಥಿಯೋರ್ವ ಪರೀಕ್ಷೆಯಲ್ಲಿ ತಪ್ಪಾಗಿ ಬರೆದಿದ್ದಾನೆ ಎಂದು ಕೋಪಗೊಂಡ ಶಿಕ್ಷಕನೋರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಖಿತ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎನ್ನಲಾಗಿದೆ. ನಿಖಿತ್ ಕುಮಾರ್ ಸಮಾಜ ವಿಜ್ಞಾನ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕಾಗುಣಿತ ದೋಷ ಮಾಡಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ

ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ. 01ರಂದು ಭಾರತದಲ್ಲಿ 5G ಸೇವೆಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 24. ಅಕ್ಟೋಬರ್ 1 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲಿದ್ದಾರೆ(5G Services To Be Launched) ಎಂದು ಸರಕಾರದ ರಾಷ್ಟ್ರೀಯ ಬ್ರಾಡ್‌ಬ್ಯಾಂಡ್ ಮಿಷನ್ ಇಂದು ಟ್ವೀಟ್ ಮಾಡಿದೆ. “ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು , ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನ ಇಂಡಿಯಾ ಮೊಬೈಲ್ ಕಾಂಗ್ರೆಸ್ ನಲ್ಲಿ ಭಾರತದಲ್ಲಿ

ಅ. 01ರಂದು ಭಾರತದಲ್ಲಿ 5G ಸೇವೆಗೆ ಪ್ರಧಾನಿ ಮೋದಿ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಟರಿ ಗೆದ್ದ ಬಳಿಕ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ➤‌ 25 ಕೋಟಿ ರೂ. ವಿಜೇತ ಆಟೋ ಚಾಲಕನ ಅಳಲು

(ನ್ಯೂಸ್ ಕಡಬ) newskadaba.com ಕೇರಳ, ಸೆ. 24. ಕೇರಳ ಸರ್ಕಾರದ ಮೆಗಾ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಟೋರಿಕ್ಷಾ ಚಾಲಕ ಅನೂಪ್, ಲಾಟರಿ ವಿಜೇತನೆಂದು ಘೋಷಿಸಲ್ಪಟ್ಟ ಕೇವಲ ಐದು ದಿನಗಳಲ್ಲಿ ನನ್ನ ಜೀವನದಲ್ಲಾದ ಈ ಅನಾಹುತಕ್ಕೆ ವಿಷಾದಿಸುತ್ತೇನೆ, ಲಾಟರಿ ಗೆದ್ದ ಬಳಿಕ ನಾನು ನನ್ನ ಮನಸ್ಸಿನ ಎಲ್ಲಾ ನೆಮ್ಮದಿಯನ್ನು ಕಳೆದುಕೊಂಡಿದ್ದೇನೆ ಮತ್ತು ನಾನು ನನ್ನ ಸ್ವಂತ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ಎಂದು ಮಾಧ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಏಕೆಂದರೆ ನಾನು ಮೊದಲ

ಲಾಟರಿ ಗೆದ್ದ ಬಳಿಕ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ➤‌ 25 ಕೋಟಿ ರೂ. ವಿಜೇತ ಆಟೋ ಚಾಲಕನ ಅಳಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಲ ತೀರಿಸಿಲ್ಲವೆಂದು ಗರ್ಭಿಣಿ ಮಹಿಳೆಯ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ಫೈನಾನ್ಸ್ ಸಿಬ್ಬಂದಿ..

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 18. ಸಾಲ ಪಾವತಿ ಮಾಡಿಲ್ಲವೆಂದು ಸಾಲ ವಸೂಲಾತಿಗೆ ಬಂದ ಸಿಬ್ಬಂದಿಗಳು ಮನೆಯಲ್ಲಿದ್ದ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದ ಘಟನೆ ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಇಚ್ಚಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೃಷಿ ಮಾಡಲೆಂದು ಖಾಸಗಿ ಫೈನಾನ್ಸ್ ವೊಂದರಲ್ಲಿ ಸಾಲ ಪಡೆದುಕೊಂಡಿದ್ದ ರೈತ ಕುಟುಂಬವೊಂದು, ಬಳಿಕ ಸಾಲ ಕಟ್ಟದೇ ಇದ್ದುದರಿಂದ ಸಾಲ ವಸೂಲಾತಿಗೆಂದು ಮನೆಗೆ ಬಂದ ಖಾಸಗಿ ಫೈನಾನ್ಸ್ ಕಂಪನಿ ಏಜೆಂಟರು ಹಾಗೂ ರೈತನ ನಡುವೆ ವಾಗ್ವಾದ

ಸಾಲ ತೀರಿಸಿಲ್ಲವೆಂದು ಗರ್ಭಿಣಿ ಮಹಿಳೆಯ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ಫೈನಾನ್ಸ್ ಸಿಬ್ಬಂದಿ.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡೂ ಕಿಡ್ನಿ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com ಪಾಟ್ನಾ, ಸೆ. 12. ಹೊಟ್ಟೆನೋವಿನ ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ ದಾಖಲಾಗಿದ್ದ ಮಹಿಳೆಯ ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ವೈದ್ಯರು ಕದ್ದಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮಹಿಳೆಯ ಎರಡೂ ಕಿಡ್ನಿಗಳನ್ನು ತೆಗೆದಿರುವುದು ಬೆಳಕಿಗೆ ಬಂದಿದೆ. ಇನ್ನು ಈ ಮಹಿಳೆಯ ಕುಟುಂಬಸ್ಥರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ

ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡೂ ಕಿಡ್ನಿ ಕದ್ದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 09. ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟ ಘಟನೆ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರದಂದು ನಡೆದಿದೆ. ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಗ್ಗೆ ಸುಮಾರು 8.50ರ ಹೊತ್ತಿಗೆ ಕಟ್ಟಡ ಕುಸಿದು ಬಿದ್ದಿದ್ದು, ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜಪಥ್ ಇನ್ಮುಂದೆ “ಕರ್ತವ್ಯ ಪಥ್” ಎಂದು ನಾಮಕರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 06. ದೆಹಲಿಯ ಸುಪ್ರಸಿದ್ದವಾದ ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ತಾದ ಹುಲ್ಲುಹಾಸನ್ನು ’ಕರ್ತವ್ಯ ಪಥ್’ ಎಂದು ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ಟಾಗೆ ಮರು ನಾಮಕರಣ ಮಾಡಿದ ನಂತರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯಿಂದ ರಾಷ್ಟ್ರಪತಿ ಭವನದವರೆಗಿನ ಸಂಪೂರ್ಣ ಪ್ರದೇಶವನ್ನು ಈಗ ‘ಕರ್ತವ್ಯ ಪಥ್’ ಎಂದು ಕರೆಯಲಾಗುವುದು. ರಾಜ ಎಂದಿರುವುದನ್ನು ಕರ್ತವ್ಯ ಎಂದು ಬದಲಿಸುವ ಮೂಲಕ ಕೇಂದ್ರವು ಇದು ಆಳ್ವಿಕೆ

ರಾಜಪಥ್ ಇನ್ಮುಂದೆ “ಕರ್ತವ್ಯ ಪಥ್” ಎಂದು ನಾಮಕರಣ Read More »

ರಾಷ್ಟ್ರೀಯ ನ್ಯೂಸ್

ಕಾರಿನಲ್ಲೇ ಹೃದಯಾಘಾತ- ಬಿಜೆಪಿ ಶಾಸಕ ನಿಧನ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 06. ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರವಿಂದ್ ಗಿರಿ(65) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಅವರು ಇಂದು ಬೆಳಗ್ಗೆ ಲಕ್ನೋ ಗೆ ತೆರಳುತ್ತಿದ್ದ ವೇಳೆ ತಮ್ಮ ಕಾರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅರವಿಂದ್ ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಶಾಸಕ ಅರವಿಂದ್ ನಿಧನಕ್ಕೆ ಮುಖ್ಯಮಂತ್ರಿ

ಕಾರಿನಲ್ಲೇ ಹೃದಯಾಘಾತ- ಬಿಜೆಪಿ ಶಾಸಕ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top