ರಾಷ್ಟ್ರೀಯ ನ್ಯೂಸ್

ಮಾ. 15 ಹಾಗೂ 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಮಾ.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ಎರಡು ದಿನಗಳ ಕಾಲ ಸ್ಟೇಟ್ ಬ್ಯಾಂಕ್ ಸೇವೆಯಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರವು ಈಗಾಗಲೇ ಎರಡು ಸರ್ಕಾರಿ ಬ್ಯಾಂಕ್​ ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಮಾ. 15ರಂದು ಬ್ಯಾಂಕ್ ನೌಕರರು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ ಎಂದು ಭಾರತೀಯ ಬ್ಯಾಂಕ್​ಗಳ ಸಂಘ (ಐಬಿಎ) […]

ಮಾ. 15 ಹಾಗೂ 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ Read More »

ರಾಷ್ಟ್ರೀಯ ನ್ಯೂಸ್

ಮನೆಯ 4ನೇ ಮಹಡಿಯಿಂದ ಬಿದ್ದು ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ ಜಾರ್ಜ್ ನಿಧನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 07. ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೋಟ್ (71) ರವರು ತನ್ನ ಮನೆಯ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಎಂ.ಜಿ. ಜಾರ್ಜ್ ಮುತ್ತೂಟ್ ಅವರು ಪೂರ್ವ ದಿಲ್ಲಿಯ ಕೈಲಾಸ್ ನಲ್ಲಿರುವ ತನ್ನ ಮನೆಯ 4ನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಯ ವೇಳೆ ಅವರು ಮೃತಪಟ್ಟಿದ್ದರು.

ಮನೆಯ 4ನೇ ಮಹಡಿಯಿಂದ ಬಿದ್ದು ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ ಜಾರ್ಜ್ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಣ್ಣೂರು: ಸ್ಟೀಲ್ ಬಾಂಬ್ ಪತ್ತೆ

(ನ್ಯೂಸ್ ಕಡಬ) newskadaba.com ಕೇರಳ, ಮಾ. 07. ತಲಶ್ಶೇರಿ ಪೊಲೀಸರು ಹಾಗೂ ಬಾಂಬ್‍ ಸ್ಕ್ವಾಡ್ ಜಂಟಿಯಾಗಿ ನಡೆಸಿದ ಆಯುಧ ತಪಾಸಣೆಯ ವೇಳೆ ಸ್ಟೀಲ್ ಬಾಂಬೊಂದು ತಲಶ್ಯೇರಿ ಠಾಣಾ ವ್ಯಾಪ್ತಿಯ ಉಕಂಡನ್ ಪೀಡಿಗ ಸಮೀಪ ಪಿಪಿ ಅನಂತನ್ ರಸ್ತೆಯ ಅಯ್ಯತ್ತಾನ್ ಎಂಬಲ್ಲಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಬಾಂಬ್ ತಯಾರಿಸಲು ಬಳಸುವ 13 ಸ್ಟೀಲ್ ಕಂಟೈನರ್ ಹಾಗೂ ಸಿಡಿಮದ್ದು ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ತಲಶ್ಶೇರಿ ಇನ್ಸ್‌ಪೆಕ್ಟರ್ ಗೋಪಕುಮಾರ್ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್

ಕಣ್ಣೂರು: ಸ್ಟೀಲ್ ಬಾಂಬ್ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಇಬ್ಭಾಗ ➤ ಐವರು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 05. ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿದ ಪರಿಣಾಮ ಐವರು ಮೀನುಗಾರರು ಸಮುದ್ರದಲ್ಲಿ ಸಿಲುಕಿದ ಘಟನೆ ಬೇಕಲ ಸಮುದ್ರದಲ್ಲಿ ನಡೆದಿದೆ. ಸುಮಾರು ಎರಡು ಗಂಟೆಗಳ ಕಾಲ ಜೀವನ್ಮರಣದ ನಡುವೆ ಒದ್ದಾಡುತ್ತಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಹಾಗೂ ಮೀನುಗಾರಿಕಾ ಇಲಾಖೆಯ ರಕ್ಷಣಾ ಪಡೆ ಸಿಬಂದಿಗಳು ರಕ್ಷಿಸಿದ್ದಾರೆ. ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಬಾಗಗೊಂಡಿದ್ದು, ಬೋಟ್ ನ ಒಂದು ಭಾಗದಲ್ಲಿ

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಇಬ್ಭಾಗ ➤ ಐವರು ಮೀನುಗಾರರ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೈಲ್ಸ್ & ಸ್ಯಾನಿಟರಿವೇರ್ ಗೆ ಐಟಿ ದಾಳಿ ➤ 220 ಕೋಟಿ ರೂ. ಕಪ್ಪು ಹಣ ಪತ್ತೆ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 28. ಇಲ್ಲಿನ ಪ್ರಮುಖ ಟೈಲ್ಸ್ ಹಾಗೂ ಸ್ಯಾನಿಟರಿವೇರ್ ಉತ್ಪಾದನಾ ಕಂಪೆನಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 200 ಕೋಟಿ ರೂ. ಕಪ್ಪು ಹಣವನ್ನು ಪತ್ತೆ ಮಾಡಿದೆ ಎಂದು ನೇರ ತೆರಿಗೆಯ ಕೇಂದ್ರ ಮಂಡಳಿ ತಿಳಿಸಿದೆ. ಫೆಬ್ರವರಿ 26ರಂದು ದಾಳಿ ನಡೆಸಲಾಗಿದ್ದು, ತಮಿಳುನಾಡು, ಗುಜರಾತ್ ಹಾಗೂ ಕೋಲ್ಕತಾದ ಒಟ್ಟು 20 ಕಟ್ಟಡಗಳಲ್ಲಿ ಶೋಧ ಹಾಗೂ ಸರ್ವೆ ಕಾರ್ಯ ನಡೆಸಲಾಗಿದ್ದು, ಟೈಲ್ಸ್ ಹಾಗೂ ಸ್ಯಾನಿಟರಿವೇರ್‌ ಉತ್ಪಾದನೆ ಹಾಗೂ ಮಾರಾಟದ ವ್ಯವಹಾರದಲ್ಲಿ

ಟೈಲ್ಸ್ & ಸ್ಯಾನಿಟರಿವೇರ್ ಗೆ ಐಟಿ ದಾಳಿ ➤ 220 ಕೋಟಿ ರೂ. ಕಪ್ಪು ಹಣ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನ್ನನ್ನೇ ಗುಂಡಿಕ್ಕಿ ಹತ್ಯೆಗೈಯ್ಯುವ ವಿಡಿಯೋ ಚಿತ್ರೀಕರಿಸಿದ ಯುವಕ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮುಝಾಫರ್ ನಗರ, ಫೆ. 27. ತನ್ನನ್ನು ತಾನೇ ಗುಂಡಿಕ್ಕಿ ಹತ್ಯೆ ಮಾಡುವ ಸನ್ನಿವೇಶವನ್ನು ಸ್ವತಃ ಮೃತ ವ್ಯಕ್ತಿಯೇ ಸ್ವಯಂ ಚಿತ್ರೀಕರಿಸಿಕೊಂಡ ಘಟನೆ ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ನಡೆದಿದೆ. ಗುಂಡೇಟು ತಗುಲಿದ ಯುವಕನ ಕೈಯಿಂದ ಮೊಬೈಲ್ ಜಾರಿ ಕೆಳಕ್ಕೆ ಬಿದ್ದು, ದೃಶ್ಯಗಳು ಕಾಣಿಸುತ್ತಿರಲಿಲ್ಲ. ಆದರೆ ನೋವಿನಿಂದ ನರಳುವ ಆರ್ತನಾದ ಕೇಳಿ ಬರುತ್ತಿದ್ದ 30 ಸೆಕೆಂಡ್ ಗಳ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಹತ್ಯೆಗೀಡಾದ ವ್ಯಕ್ತಿ ಮತ್ತು ಆರೋಪಿಯ ಹೊರತಾಗಿ ಮತ್ತಿಬ್ಬರು

ತನ್ನನ್ನೇ ಗುಂಡಿಕ್ಕಿ ಹತ್ಯೆಗೈಯ್ಯುವ ವಿಡಿಯೋ ಚಿತ್ರೀಕರಿಸಿದ ಯುವಕ ➤ ವಿಡಿಯೋ ವೈರಲ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರ್ಚ್ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಸಂಚಾರ ನಿರ್ಬಂಧವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಪರಿಷ್ಕೃತ ಸುತ್ತೋಲೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಂತರಾಷ್ಟ್ರೀಯ ವಾಣಿಜ್ಯಕ್ಕೆ ಸಂಬಂಧಿಸಿದಂತೆ ಭಾರತದಿಂದ ತೆರಳುವ ಮತ್ತು ಆಗಮಿಸುವ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು 2021ರ ಮಾರ್ಚ್ 31ವರೆಗೆ ನಿಷೇಧಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಆದರೆ ನಿಗದಿತ ಮಾರ್ಗಗಳಲ್ಲಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಜೊತೆಗೆ

ಮಾರ್ಚ್ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ Read More »

ರಾಷ್ಟ್ರೀಯ ನ್ಯೂಸ್

ಈ ರಾಜ್ಯದಲ್ಲಿ 9, 10 ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರಿಕ್ಷೆಯಿಲ್ಲದೇ ಪಾಸ್..❗➤ ಮುಖ್ಯಮಂತ್ರಿಯಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ. 25. ಕಳೆದ ವರ್ಷ ಕೊರೋನಾ ವೈರಸ್ ಭೀತಿಯಿಂದಾಗಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸದೆ ಹಾಗೆಯೇ ಪಾಸು ಮಾಡಲಾಗಿತ್ತು. ಇದೀಗ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ತಮಿಳುನಾಡು ರಾಜ್ಯ ಸರ್ಕಾರವು ಕೊರೋನಾ ಭೀತಿ ಹೆಚ್ಚಿರುವುದರಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿನ 9, 10 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೆ ಪಾಸು ಮಾಡಲು ಮುಂದಾಗಿದೆ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಈ ಕುರಿತು

ಈ ರಾಜ್ಯದಲ್ಲಿ 9, 10 ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರಿಕ್ಷೆಯಿಲ್ಲದೇ ಪಾಸ್..❗➤ ಮುಖ್ಯಮಂತ್ರಿಯಿಂದ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಆರೆಸ್ಸೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25.‌ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐನ 8 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಚೆರ್ತಲಾ ಸಮೀಪದ ನಾಗಂಕುಲಂಗರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ನಂದು(23) ಎಂಬಾತ ಮೃತಪಟ್ಟಿದ್ದು, ಅಲ್ಲದೇ ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಲಪ್ಪುಳ ಹಾಗೂ ಎರ್ನಾಕುಲಂನ ವಿವಿಧ ಆಸ್ಪತ್ರೆಗಳಲ್ಲಿ ಸೇರಿಸಲಾಗಿದೆ. ಆರ್ ಎಸ್ ಎಸ್ ಸಂಘಟನೆಗೆ ಸೇರಿದ ಓರ್ವ ಕಾರ್ಯಕರ್ತನ

ಆರೆಸ್ಸೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ 8 ಮಂದಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ➤ ಓರ್ವ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25. ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನೋರ್ವನ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಆಳಪ್ಪುಝ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಆರೆಸ್ಸೆಸ್ ಕಾರ್ಯಕರ್ತ ನಂದು ಎಂದು ಗುರುತಿಸಲಾಗಿದೆ. ಆರೆಸ್ಸೆಸ್ ಹಾಗೂ ಎಸ್ಡಿಪಿಐ ಕಾರ್ಯಕರ್ತರ ನಡುವೆ ಈ ಘರ್ಷಣೆ ನಡೆದಿದ್ದು, ಪರಿಣಾಮ ಓರ್ವ ಆರೆಸ್ಸೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನು ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಇತರ ಕಾರ್ಯಕರ್ತರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ

ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ➤ ಓರ್ವ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top