ರಾಷ್ಟ್ರೀಯ ನ್ಯೂಸ್

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ. ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ Read More »

ರಾಷ್ಟ್ರೀಯ ನ್ಯೂಸ್

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಬೂಲ್ ಅ. 14: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ದಕ್ಷಿಣ ಹೆಲ್‍ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಥುರಾ ಅ. 14: ಬಾಬಾ ರಾಮ್‍ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಇದೀಗಾ, ಯೋಗ ಮಾಡುತ್ತಿರುವಾಗ ಯೋಗ ಗುರು ಬಾಬಾ ರಾಮ್‍ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಮಥುರಾದ ರಾಮನಾರತಿಯ ಗುರು ಶರಣನ್ ಆಶ್ರಮದಲ್ಲಿ ಸಂತರಿಗೆ ಯೋಗ ಕಲಿಸುವಾಗ ಈ ಘಟನೆ ಸಂಭವಿಸಿದೆ. 22 ಸೆಕೆಂಡ್‍ಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆನೆಯ

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com  ಶ್ರೀನಗರ,ಅ. 14:ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ.ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕಿ ಇವರಾಗಿದ್ದರು. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮುಫ್ತಿಯವರು ಬಿಡುಗಡೆಯಾಗಿರುವ ಕುರಿತು ಜಮ್ಮು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.! Read More »

ರಾಷ್ಟ್ರೀಯ ನ್ಯೂಸ್

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಹತ್ರಾಸ್‍ ಅ. 14: 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ.  ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.    

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು “ಪಾರ್ಲೆ -ಜಿ ” ನಿರ್ಧಾರ

(ನ್ಯೂಸ್ ಕಡಬ) newskadaba.com ಮುಂಬೈ  ಅ. 13: ಪಾರ್ಲೆ-ಜಿ ಬಿಸ್ಕೆತ್‌ ತಯಾರಕರಾದ ಪಾರ್ಲೆ ಹಾಗೂ ಬಜಾಜ್ ಸಂಸ್ಥೆಗಳು ವಿಷಕಾರಿ ಚಿಂತನೆಗಳನ್ನು, ಧ್ವೇಷವನ್ನು ಹರಡುವ ಹಾಗೂ ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಭಾರತೀಯ ನ್ಯೂಸ್‌ ಚಾನೆಲ್‌ಗಳಿಗೆ ತಮ್ಮ ಜಾಹಿರಾತನ್ನು ನೀಡದಿರಲು ನಿರ್ಧಾರ ಮಾಡಿದೆ.   ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಹಾಗೂ ಸಮಾಜಕ್ಕೆ ಕೆಟ್ಟ ಸಂದೇಶಗಳನ್ನು, ವಿಚಾರಗಳನ್ನು ಹರಡುವ ನ್ಯೂಸ್‌ ಚಾನೆಲ್‌ಗಳಿಗೆ ಇನ್ನುಮುಂದೆ ಸಂಸ್ಥೆಯು ಜಾಹಿರಾತು ನೀಡುವುದಿಲ್ಲ ಎಂದು ತೀರ್ಮಾನಿಸಿದೆ ಎಂದು ಪಾರ್ಲೆಯ ಹಿರಿಯ ಮುಖ್ಯಸ್ಥ ಕೃಷ್ಣರಾವ್‌ ಬುದ್ದ ಹೇಳಿದ್ದಾರೆ.ಇತರ ಜಾಹಿರಾತುದಾರರು

ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು “ಪಾರ್ಲೆ -ಜಿ ” ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?!

(ನ್ಯೂಸ್ ಕಡಬ) newskadaba.com ವಿಟ್ಲ ಅ. 13:  ಉತ್ತರ ಪ್ರದೇಶದ ನೊಯ್ಡಾದಲ್ಲಿ. ಮದ್ಯಪಾನ ಮಾಡಿ, ಕಾರಿನಲ್ಲಿ ಎ.ಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಸುಂದರ್ ಪಂಡಿತ್ ಎನ್ನುವವರು ಮೃತ ದುರ್ದೈವಿ. ಇವರು ಮೊನ್ನೆ ರಾತ್ರಿ ಮದ್ಯಪಾನ ಮಾಡಿ ಕಾರಿನಲ್ಲಿ ಮಲಗಿದ್ದು, ಕಾರಿ ಕಿಟಕಿಯೆಲ್ಲವೂ ಮುಚ್ಚಿತ್ತು. ಮಾರನೆಯ ದಿನ ನೋಡಿದಾಗ ಅಲ್ಲಿಯೇ ಹೆಣವಾಗಿದ್ದರು.ಸದಾ ಮದ್ಯಪಾನ ಮಾಡುತ್ತಿದ್ದ ಅವರು, ಅಂದು ಕೂಡ ಕುಡಿದುಕೊಂಡೇ ಮನೆಗೆ ಹೋಗಿದ್ದಾರೆ.   ಬೇಸ್‌ಮೆಂಟ್‌ ಅಲ್ಲಿ ಕಾರು ಪಾರ್ಕ್​ ಮಾಡುವಷ್ಟರಲ್ಲಿ ನಿದ್ದೆ ಬಂದಿದೆ. ಎ.ಸಿ.

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?! Read More »

ರಾಷ್ಟ್ರೀಯ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 13: ಪ್ರೀತಿ ನಿರಾಕರಿಸಿದ್ದ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.   ಹನುಮಾನ್ ಪೇಟೆಯಲ್ಲಿ ನಾಗಭೂಷಣ್ ಎಂಬ ಪಾಗಲ್ ಪ್ರೇಮಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿನ್ನಾರಿ ಎಂಬ ಯುವತಿಯನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆದರೆ ಯುವತಿ ಒಪ್ಪಿರಲಿಲ್ಲ. ನಾಗಭೂಷಣ್ ಕಾಟ ತಡೆಯಲಾಗದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ನಾಗಭೂಷಣ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.ಅಕ್ಟೋಬರ್

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12: ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಗೆ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಇದೀಗ ಗುಡ್ ನ್ಯೂಸ್ ಕೊಟ್ಟಿದೆ. ಕೋವಿಡ್ 19 ಸೋಂಕಿನಿಂದ ಅಥವಾ ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಮಾಡುವ ಕಾರಣದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14 ರಂದು ನೀಟ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.     ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್

ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?! Read More »

ರಾಷ್ಟ್ರೀಯ ನ್ಯೂಸ್

ಶ್ರೀನಗರದಲ್ಲಿ ಎನ್ಕೌಂಟರ್ ➤ ಎಲ್‌ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ.12: ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ.     ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್’ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇದೀಗ ಎಲ್‌ಇಟಿ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.ಕಾರ್ಯಾಚರಣೆಯನ್ನು

ಶ್ರೀನಗರದಲ್ಲಿ ಎನ್ಕೌಂಟರ್ ➤ ಎಲ್‌ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ Read More »

ರಾಷ್ಟ್ರೀಯ ನ್ಯೂಸ್
Scroll to Top