ರಾಷ್ಟ್ರೀಯ ನ್ಯೂಸ್

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ . ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. […]

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ

(ನ್ಯೂಸ್‌ ಕಡಬ) newskadaba.com, ಸೆ. 03 ನವದೆಹಲಿ: ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಗೆ ನಿರ್ದೇಶನ ನೀಡಿದೆ. ಡಿಸೆಂಬರ್ 8, 2025 ರಂದು ಕೊನೆಗೊಳ್ಳುವ ಮಾಸ್ಟರ್ ರೈಟ್ಸ್ ಅಗ್ರಿಮೆಂಟ್ (MRA) ಕುರಿತ ಒಪ್ಪಂದವನ್ನು ಒಪ್ಪಿಕೊಳ್ಳಲು AIFF ಮತ್ತು ಫುಟ್ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್ ವಿಫಲವಾಗಿದ್ದು, ಇದರಿಂದಾಗಿ ಇಂಡಿಯನ್ ಸೂಪರ್ ಲೀಗ್ ಅನ್ನು ಜುಲೈ 11 ರಿಂದ ತಡೆಹಿಡಿಯಲಾಗಿದೆ. ಫುಟ್ಬಾಲ್ ಕ್ಯಾಲೆಂಡರ್ ಅನ್ನು

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೆಹಲಿಯ ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಅನ್ನು ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ನಲ್ಲಿ ಅಧಿಕೃತ ಆದೇಶದ ಪ್ರತಿಯೊಂದಿಗೆ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಪವನ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಸೆ.02:ನವದೆಹಲಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್, ರಾಷ್ಟ್ರದ ಮೊದಲ

ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

(ನ್ಯೂಸ್‌ ಕಡಬ)com, ಸೆ.02 ನವದೆಹಲಿ : ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್,

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ;

(ನ್ಯೂಸ್‌ ಕಡಬ) newskadaba.com,  ಸೆ.02ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.   ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ.   ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ

(ನ್ಯೂಸ್‌ ಕಡಬ) newskadaba.com,  ಸೆ.02 ಕೊಲಂಬೊ:ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 80 ಮೀಟರ್‌ಗಳವರೆಗಿನ ಬೌಂಡರಿ ಅಂತರವನ್ನು ಹೊಂದಿರುವ ಹತ್ತು ಸೆಂಟರ್ ವಿಕೆಟ್‌ಗಳನ್ನು ಒಳಗೊಂಡಂತೆ 48 ಎಕರೆಗಳಲ್ಲಿಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತದೆ. 40,000 ಪ್ರೇಕ್ಷಕರ ಸಾಮರ್ಥ್ಯವಿರಲಿದೆ. ಈ ಸ್ಟೇಡಿಯಂನಲ್ಲಿ ಈಜುಕೊಳ, ಮಲ್ಟಿ-ಪಾರ್ಲರ್ ಒಳಾಂಗಣ ಕ್ರೀಡಾಂಗಣ, ಸ್ಟಾರ್ ಕ್ಲಾಸ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಜತೆಗೆ ಶಾಪಿಂಗ್ ಮಾಲ್ ಮತ್ತು ಮನರಂಜನಾ ಸೌಲಭ್ಯಗಳು ಸೇರಿದೆ.  ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಯುದ್ಧಪೀಡಿತ ಜಾಫ್ನಾ ಪ್ರದೇಶದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.02 ಶ್ರೀನಗರ : ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದಿದೆ. ಸೋಮವಾರ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್‌ ಟಾರ್ಚರ್‌

 (ನ್ಯೂಸ್‌ ಕಡಬ) newskadaba.com, ಸೆ.01 ಲಕ್ನೋ: ಉತ್ತರ ಪ್ರದೇಶದ ಲಖನೌದಲ್ಲಿ 13 ವರ್ಷದ ಬಾಲಕಿಯೊಬ್ಬಳನ್ನು ಸಾಮಾಜಿಕ ಮಾಧ್ಯಮದ ಮೂಲಕ ವಂಚಿಸಿ, ಬೆದರಿಕೆ ಹಾಕಿ , ಹಣ ವಸೂಲಿ ಮಾಡಿದ ಆರೋಪದಡಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆರ್ಯನ್ ಸಿಂಗ್ ಎಂಬಾತನ ವಿರುದ್ಧ ಬಾಲಕಿಯ ತಂದೆ ದೂರು ದಾಖಲಿಸಿದ ಬಳಿಕ ಎಫ್‌ಐಆರ್ ದಾಖಲಾಗಿದೆ.   ನಾಕಾ ಹಿಂದೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಆರ್ಯನ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ರಿಕ್ವೆಸ್ಟ್ ಕಳುಹಿಸಿ ಸಂಪರ್ಕಕ್ಕೆ ಬಂದಿದ್ದ. ಬಾಲಕಿಯ ವಿಶ್ವಾಸ

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್‌ ಟಾರ್ಚರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..! Read More »

ರಾಷ್ಟ್ರೀಯ ನ್ಯೂಸ್
Scroll to Top