ರಾಷ್ಟ್ರೀಯ ನ್ಯೂಸ್

ನಾಲ್ಕು ಹಂತದ ಲಾಕ್‌ಡೌನ್ ವಿಫಲವಾಗಿದೆ, ಮುಂದೇನು?: ರಾಹುಲ್ ಗಾಂಧಿ ಪ್ರಶ್ನೆ

ಹೊಸದಿಲ್ಲಿ, ಮೇ 26: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೋನ ಸೋಂಕು ನಿಯಂತ್ರಣಕ್ಕೆ ಕೇಂದ್ರ ಸರಕಾರದ ಲಾಕ್‌ಡೌನ್ ವಿಫಲವಾಗಿದೆ. ಭಾರತವೀಗ ವಿಫಲವಾದ ಲಾಕ್‌ಡೌನ್‌ನ ಪರಿಣಾಮವನ್ನು ಎದುರಿಸುತ್ತಿದೆ. ದೇಶದಲ್ಲಿ ಕೊರೋನ ಸೋಂಕು ಗಣನೀಯವಾಗಿ ಹಬ್ಬುತ್ತಿದೆ. ಈಗ ನಿಮ್ಮ ಯೋಜನೆ ಏನು ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಂಗಳವಾರ ಬೆಳಗ್ಗೆ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾಲ್ಕು ಹಂತಗಳ ಲಾಕ್‌ಡೌನ್‌ನಿಂದಲೂ ಪ್ರಧಾನಿ ಮೋದಿ ಅವರು ನಿರೀಕ್ಷೆ ಮಾಡಿದಷ್ಟು ಉತ್ತಮವಾದ ಫಲಿತಾಂಶ ಬಂದಿಲ್ಲ […]

ನಾಲ್ಕು ಹಂತದ ಲಾಕ್‌ಡೌನ್ ವಿಫಲವಾಗಿದೆ, ಮುಂದೇನು?: ರಾಹುಲ್ ಗಾಂಧಿ ಪ್ರಶ್ನೆ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಲಾಕ್ ಡೌನ್ ಜಾರಿಯಲ್ಲಿದ್ದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, ವೈರಾಣು ಕೇಸುಗಳಿರುವ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದೆ. ಇದರ ಎಫೆಕ್ಟ್ ಶಾಲಾ ಕಾಲೇಜುಗಳ ಮೇಲೂ ಬೀರಿದೆ.     ಮಾರ್ಚ್ 16ನೇ ತಾರೀಕಿನಿಂದಲೇ ದೇಶದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ದೇಶಾದ್ಯಂತ ಜುಲಾಯಿನಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವಂತೆ ಪ್ರಧಾನಿ

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು Read More »

ರಾಷ್ಟ್ರೀಯ ನ್ಯೂಸ್

ಶ್ರೀನಗರ: ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ. 25, ಜಮ್ಮು-ಕಾಶ್ಮೀರ ಭದ್ರತಾ ಪಡೆಯ ಯೋಧರಿಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಾಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿತ್ತು. ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್‌ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.  

ಶ್ರೀನಗರ: ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ

ಹೊಸದಿಲ್ಲಿ, ಮೇ 23: ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಪುನರಾರಂಭಿಸುವ ಭರವಸೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈಗಲೇ ಯಾವ ದಿನ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲಾಗದು. ಪರಿಸ್ಥಿತಿಯನ್ನು ಅವಲೋಕಿಸಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದೆ ಅವರು ಘೋಷಣೆ ಮಾಡಿದ್ದರು. ಕೊರೋನ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ Read More »

ರಾಷ್ಟ್ರೀಯ ನ್ಯೂಸ್

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ ನೀಡಿದ RBI ➤ ಇನ್ನು ಮೂರು ತಿಂಗಳ ಕಾಲ ಸಾಲದ ಕಂತು‌ ಕಟ್ಟಬೇಕಾಗಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.22. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ಸಾಲದ ಮೇಲಿನ ಇಎಂಐ ಪಾವತಿದಾರರಿಗೆ ಕೊಂಚ ರಿಲ್ಯಾಕ್ಸ್ ನೀಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಗೃಹ ಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. ಸಾಲದ ಇಎಂಐ ಮರು ಪಾವತಿಯನ್ನು ಕಳೆದ ಮಾರ್ಚ್ ನಲ್ಲಿ ಮೂರು

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ ನೀಡಿದ RBI ➤ ಇನ್ನು ಮೂರು ತಿಂಗಳ ಕಾಲ ಸಾಲದ ಕಂತು‌ ಕಟ್ಟಬೇಕಾಗಿಲ್ಲ Read More »

ರಾಷ್ಟ್ರೀಯ ನ್ಯೂಸ್

ಕಡಬ: ವಲಸೆ ಕಾರ್ಮಿಕರು ಊರಿಗೆ ತೆರಳಲು ಸೂಚನೆ, ಮತ್ತೆ ಪ್ರಯಾಣ ರದ್ದು ➤ ಆಕ್ರೋಶಕೊಂಡ ವಲಸೆ ಕಾರ್ಮಿಕರಿಂದ ಊರಿಗೆ ಕಳುಹಿಸುವಂತೆ ಪಟ್ಟು

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಕಡಬ ಭಾಗದಿಂದ ಇಂದು ಊರಿಗೆ ತೆರಳಲು ಅಧಿಕಾರಿಗಳ ಸೂಚನೆ ಮೇರೆಗೆ ತಯಾರಾಗಿದ್ದ ಕಾರ್ಮಿಕರಿಗೆ ನಿರಾಸೆಯಾಗಿದೆ. ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದುಗೊಂಡಿದ್ದು ಜಾರ್ಖಂಡ್ ಮೂಲದ ಸುಮಾರು 148 ಕಾರ್ಮಿಕರು ಮಂಗಳವಾರದಂದು ಕಡಬ ತಹಸೀಲ್ದಾರ್ ಕಛೇರಿ ಎದುರು ಜಮಾಯಿಸಿದ್ದು ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ.   ಕಡಬ ಆಸುಪಾಸಿನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ಸುಮಾರು 148 ಕಾರ್ಮಿಕರಿಗೆ ಮೇ.19ರಂದು ಊರಿಗೆ ಹೊರಡಲು ಸಿದ್ದವಾಗುವಂತೆ ಪೋಲಿಸ್ ಇಲಾಖೆಯಿಂದ ಸಂದೇಶ ಬಂದಿತ್ತು, ಈ ಬಗ್ಗೆ ಕಾರ್ಮಿಕರು

ಕಡಬ: ವಲಸೆ ಕಾರ್ಮಿಕರು ಊರಿಗೆ ತೆರಳಲು ಸೂಚನೆ, ಮತ್ತೆ ಪ್ರಯಾಣ ರದ್ದು ➤ ಆಕ್ರೋಶಕೊಂಡ ವಲಸೆ ಕಾರ್ಮಿಕರಿಂದ ಊರಿಗೆ ಕಳುಹಿಸುವಂತೆ ಪಟ್ಟು Read More »

ರಾಷ್ಟ್ರೀಯ ನ್ಯೂಸ್

9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ

ಹೊಸದಿಲ್ಲಿ, ಮೇ 14: ಕೊರೋನ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಫೇಲಾದರೆ ಅವರಿಗೆ ಮತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್‌ಇ ಹೇಳಿದೆ. 9 ಮತ್ತು 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳೇ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪರೀಕ್ಷೆ ನಡೆಸಬೇಕು. ಕೋವಿಡ್-19 ಬಿಕ್ಕಟ್ಟು ಇರುವ ಕಾರಣ ಮಾತ್ರ ಈ ವರ್ಷ ಈ ರೀತಿಯ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಸಿಬಿಎಸ್‌ಇ ಕಂಟ್ರೋಲರ್ ಸನ್ಯಮ್ ಭಾರಧ್ವಜ್ ಹೇಳಿದ್ದಾರೆ.

9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜರಾತ್ ನಿಂದ ಕ್ವಾರಂಟೈನ್ ಇಲ್ಲದೆ ಕಡಬಕ್ಕೆ ಆಗಮಿಸಿದ ಕುಟುಂಬ ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ಮೇ.14. ತಾಲೂಕಿನ ಕುಟ್ರುಪಾಡಿ ಗ್ರಾಮದ ಕುಂಟೋಡಿ ಎಂಬಲ್ಲಿಗೆ ಗುಜರಾತ್ ನಿಂದ ಐವರು ಬಂದಿದ್ದು, ಅವರು ಕುಂಟೋಡಿಯ ಮನೆಯೊಂದರಲ್ಲಿ ಉಳಿದುಕೊಂಡಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಹೊರರಾಜ್ಯದಿಂದ ಬಂದವರಿಗೆ ಪ್ರತ್ಯೇಕ ಕ್ವಾರಂಟೈನ್ ನಲ್ಲಿರುವಂತೆ ಆದೇಶ ನೀಡಿದೆಯಾದರೂ, ಈ ಆದೇಶದ ನಡುವೆಯೂ ಇವರು ಇಲ್ಲಿಗೆ ಹೇಗೆ ಬಂದರು ಎಂಬ ಪ್ರಶ್ನೆ ಉದ್ಬವಿಸಿದೆ. ಅವರ ಮನೆಗೆ ಕಡಬ ಸರಕಾರಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ರಾಜೇಶ್ವರಿ ಹಾಗೂ ಪೊಲೀಸರು ತೆರಳಿ ಹೊರಗಡೆ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ

ಗುಜರಾತ್ ನಿಂದ ಕ್ವಾರಂಟೈನ್ ಇಲ್ಲದೆ ಕಡಬಕ್ಕೆ ಆಗಮಿಸಿದ ಕುಟುಂಬ ➤ ಸಾರ್ವಜನಿಕರಲ್ಲಿ ಆತಂಕ Read More »

ರಾಷ್ಟ್ರೀಯ ನ್ಯೂಸ್

ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಮೇ 13: 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೊರೋನ ವೈರಸ್ ಲಾಕ್‌ಡೌನ್ ಕಾರಣದಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ ಅವರು

ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್
Scroll to Top