ರಾಷ್ಟ್ರೀಯ ನ್ಯೂಸ್

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು

10 ಮಂದಿಗೆ ಚಾಕು ಇರಿತ ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ಘೋಷಣೆ ಶಿಲ್ಲಾಂಗ್, ಮಾ.1: ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆಯುತ್ತಿದ್ದ ಸಿಎಎ ಪರ-ವಿರೋಧಿ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಂಘರ್ಷದಲ್ಲಿ 10 ಮಂದಿಗೆ ಚಾಕು ಇರಿಯಲಾಗಿದೆ ಎಂದು ತಿಳಿದು ಬಂದಿದೆ. ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿಲ್ಲಾಂಗ್‌ನ ಜಯಾವ್, ಲಾಂಗ್‌ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ […]

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅತ್ಯಾಚಾರ: ಕೇರಳ ಪಾದ್ರಿಯನ್ನು ಉಚ್ಛಾಟಿಸಿದ ಪೋಪ್

ತಿರುವನಂತಪುರಂ, ಮಾ.1: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೈಲುಪಾಲಗಿರುವ ಕೇರಳದ ಪಾದ್ರಿಯನ್ನು ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಉಚ್ಛಾಟಿಸಿರುವುದಾಗಿ ಚರ್ಚ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಲ್ಲಿನ ಮನಾಂತವಾದಿ ಡಯೋಸಿಸ್ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತುಗೊಂಡು ಇದೀಗ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಿರಿಯೋ-ಮಲಬಾರ್ ಚರ್ಚ್ ಧರ್ಮಗುರು ರಾಬಿನ್ ವಡಕ್ಕುಂಶ್ಯೇರಿ ಅವರೇ ವ್ಯಾಟಿಕನ್ ನಿಂದ ಉಚ್ಛಾಟನೆಗೊಳಗಾದವರಾಗಿದ್ದಾರೆ. 2017ರಲ್ಲಿ ಈ ಪ್ರಕರಣ ಬೆಳಕಿಗೆ ಬಂದ ದಿನದಂದೇ

ಬಾಲಕಿಯ ಅತ್ಯಾಚಾರ: ಕೇರಳ ಪಾದ್ರಿಯನ್ನು ಉಚ್ಛಾಟಿಸಿದ ಪೋಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ

ಹೊಸದಿಲ್ಲಿ, ಫೆ.29: ರಾಜಧಾನಿ ದಿಲ್ಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಿಳಿ ಟಿ-ಶರ್ಟ್ ಹಾಗೂ ಕೇಸರಿ ರುಮಾಲುಗಳನ್ನು ಧರಿಸಿದ್ದ ಗುಂಪೊಂದು ‘ದೇಶ್ ಕಿ ಗದ್ದಾರೋಂ ಕೊ, ಗೋಲಿ ಮಾರೋ ಸಾ…ಕೋ” ಎಂಬ ಘೋಷಣೆಗಳನ್ನು ಕೂಗುತ್ತಾ ಅರೆಕ್ಷಣ ಅಲ್ಲಿದ್ದ ಜನರಲ್ಲಿ ಭಯ ಹುಟ್ಟಿಸಿದ ಘಟನೆ ನಡೆದಿದೆ. ಈಶಾನ್ಯ ದಿಲ್ಲಿಯ ಹಿಂಸಾಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿರುವಂತಹ ಸಂದರ್ಭದಲ್ಲಿ ಕೇಳಿ ಬಂದ ಈ ಘೋಷಣೆ ಸಾಕಷ್ಟು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ

ಹೊಸದಿಲ್ಲಿ, ಫೆ.28: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಮೂವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಮಾ.3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ. ಈಗ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕ್ಯುರೇಟಿವ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ

ಸಹಜ ಸ್ಥಿತಿಯತ್ತ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಫೆ.28: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ದಿಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ ದಿಲ್ಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

ಹೊಸದಿಲ್ಲಿ, ಫೆ.27: ದಿಲ್ಲಿ ಈಶಾನ್ಯ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮತ್ತು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಹಾಗೂ ದೊಂಬಿಯಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ರಕ್ತಸಂಬಂಧಿಗಳಿಗೆ ತಲಾ 1 ಲಕ್ಷ ರೂ. ನಗದು ಪರಿಹಾರವನ್ನು ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಅಪ್ರಾಪ್ತರ ಕುಟುಂಬಗಳಿಗೆ ತಲಾ 5ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣವಾಗಿ

ದಿಲ್ಲಿ ಹಿಂಸಾಚಾರ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 21ಕ್ಕೇರಿಕೆ

ಚರಂಡಿಯಲ್ಲಿ ಗುಪ್ತಚಾರ ಇಲಾಖೆಯ ಸಿಬ್ಬಂದಿಯ ಶವ ಪತ್ತೆ ಹೊಸದಿಲ್ಲಿ, ಫೆ.26: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ಭುಗಿಲೆದಿದ್ದು, ಈಗಾಗಲೇ 21ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ಧಾರೆ. ಈ ನಡುವೆ ಚಾಂದ್ ಬಾಗ್ ಪ್ರದೇಶದ ಚರಂಡಿಯೊಂದರಲ್ಲಿ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರ ಶವ ಪತ್ತೆಯಾಗಿದೆ. ಮೃತ ಅಧಿಕಾರಿಯನ್ನು ಅಂಕಿತ್ ಶರ್ಮಾ (26) ಎಂದು ಗುರುತಿಸಲಾಗಿದೆ. ಅಂಕಿತ್ ಶರ್ಮಾ ಕರ್ತವ್ಯ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭ ಅವರ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ಸಂದರ್ಭ ಗುಂಡಿಕ್ಕಿ ಹತ್ಯೆಗೈದು ಚರಂಡಿಗೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.

ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 21ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ

ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ತಾರಕ್ಕೇರಿದ್ದು, ಸಾವಿನ ಸಂಖ್ಯೆ 10ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸುನೀಲ್ ಕುಮಾರ್ ತಿಳಿಸಿದ್ದಾರೆ. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದಿಲ್ಲಿಯಲ್ಲಿ ಅರೆಸೇನಾ ಪಡೆಗಳ

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ

ಪತ್ರಕರ್ತರ ಮೇಲೆ ಗುಂಡಿನ ದಾಳಿ ಮುಸ್ಲಿಮರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ 150ಕ್ಕೂ ಅಧಿಕ ಮಂದಿ ಗಾಯಾಳು ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಪತ್ರಕರ್ತರೊಬ್ಬರಿಗೆ ದುರ್ಷ್ಕಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೆ ಕಬೀರ್ ನಗರದಲ್ಲಿ ಮುಸ್ಲಿಮರ ಮನೆಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಮಧ್ಯೆ ನಿನ್ನೆಯ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಮಡಿದವರ ಸಂಖ್ಯೆ 9ಕ್ಕೇರಿದೆ. 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೌಜ್‌ಪುರದಲ್ಲಿ ಪತ್ರಕರ್ತ

ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು

ಹೊತ್ತಿ ಉರಿಯುತ್ತಿರುವ ದಿಲ್ಲಿಯ ಬೀದಿಗಳು 60 ಕ್ಕೂ ಅಧಿಕ ಮಂದಿಗೆ ಗಾಯ ತಾರಕ್ಕೇರಿದ ಹಿಂಸಾಚಾರ ಹೊಸದಿಲ್ಲಿ, ಫೆ.25:  ದಿಲ್ಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನಕಾರರ ನಡುವೆ ನಡೆದ ಹಿಂಸಾಚಾರದ ಪರಿಣಾಮ ಪೊಲೀಸ್ ಪೇದೆ ಮತ್ತು ನಾಲ್ವರು ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರವಿವಾರ ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ದುಷ್ಕರ್ಮಿಯೊಬ್ಬ ಪೊಲೀಸರ ಎದುರಲ್ಲೇ ಗುಂಡು ಹಾರಿಸಿದ್ದ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇನ್ನೂ ದಿಲ್ಲಿಯ ಬೀದಿಗಳು ಹೊತ್ತಿ ಉರಿಯುತ್ತಿದ್ದು, ಪರ-ವಿರೋಧಿಗಳ

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top