ರಾಷ್ಟ್ರೀಯ ನ್ಯೂಸ್

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ

(ನ್ಯೂಸ್ ಕಡಬ)newskadaba.com, ಫೆ. 7. ರಾಜ್ಯದ ಬಿಜೆಪಿಯ ನೂತನ ಸಚಿವರಿಗೆ ಮೊದಲ ದಿನವೇ ಬಿಗ್ ಟಾಸ್ಕ್ ನೀಡಲಾಗಿದ್ದು, ರಾಜ್ಯ ಬಿಜೆಪಿ ಕಚೇರಿಯಲ್ಲಿ ವಾರದಲ್ಲಿ ಒಂದು ದಿನ 2 ಗಂಟೆ ಇರಲೇಬೇಕೆಂದು ಸೂಚನೆ ನೀಡಲಾಗಿದೆ. ನಿಮ್ಮ ಕಚೇರಿಗಳಲ್ಲಿಯೂ ಕೆಲಸ ಮಾಡುವಂತೆ ಹಾಗೂ ಪಕ್ಷದ ಕಚೇರಿಗೂ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಬಿಜೆಪಿ ಕಚೇರಿಯಿಂದ ನೂತನ ಸಚಿವರಿಗೆ ಸಂದೇಶ ನೀಡಲಾಗಿದೆ. ಸಚಿವರಾದ ನಾರಾಯಣಗೌಡ, ಶಿವರಾಮ್ ಹೆಬ್ಬಾರ್, ಸುಧಾಕರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ […]

ಪ್ರಮಾಣ ವಚನ ಸ್ವೀಕರಿಸಿದ ದಿನವೇ ಬಿಗ್ ಶಾಕ್ ನೀಡಿದ ಬಿಜೆಪಿ ಸರಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com, ಇಸ್ತಾನ್ ಬುಲ್, ಫೆ.6. ಪಶ್ಚಿಮ ಟರ್ಕಿಯ ಅಜ್ಮೀರ್ ನಿಂದ ಇಸ್ತಾನ್ ಬುಲ್ ನ ಸಬಿಹಾ ಗೋಕ್ಸೆನ್ ನಿಲ್ದಾಣಕ್ಕೆ ಬರುತ್ತಿದ್ದ 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ರನ್ ವೇಯಲ್ಲಿ ಸ್ಕಿಡ್ ಆದ ಪರಿಣಾಮ ತುಂಡು ತುಂಡಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ತುರ್ತು ಭೂ ಸ್ಪರ್ಶ ಮಾಡುವಾಗ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟು, 179 ಜನರು

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಸಂಬಂಧ ಶಂಕೆ: ಪತ್ನಿ, ತಮ್ಮನ ಕೊಲೆ

ಉತ್ತರಪ್ರದೇಶ, ಜ.28: ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಶಂಕೆ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಮತ್ತು ತಮ್ಮನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೌರಂಗಾಬಾದ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಶಬಿಕುನ್ನೀಶ (30) ಮತ್ತು ಮೊಹ್ಸಿನ್(30) ಎಂದು ಗುರುತಿಸಲಾಗಿದೆ. ಶಕೀಲ್ ಎಂಬಾತ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಬಿಡಿಸಲು ಬಂದ ತಾಯಿಗೂ ಸಹ ಶಕೀಲ್ ಹಲ್ಲೆ ಮಾಡಿದ್ದು, ಅವರು ಸಹ ಗಾಯಗೊಂಡಿದ್ದಾರೆ. ಇನ್ನು ಶಕೀಲ್ ಕೃತ್ಯ ಕಂಡ

ಅಕ್ರಮ ಸಂಬಂಧ ಶಂಕೆ: ಪತ್ನಿ, ತಮ್ಮನ ಕೊಲೆ Read More »

ರಾಷ್ಟ್ರೀಯ ನ್ಯೂಸ್

ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ಸರಕಾರ

ಹೊಸದಿಲ್ಲಿ, ಜ.28: ಕೇಂದ್ರ ಸರಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. ಕೇರಳ, ಪಂಜಾಬ್ ಮತ್ತು ರಾಜಸ್ಥಾನಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ,

ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ಸರಕಾರ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಮೃತ್ಯು,13 ಮಂದಿಗೆ ಗಾಯ

ಹೊಸದಿಲ್ಲಿ, ಜ.26: ದಿಲ್ಲಿ ಯ ಭಜನ್ ಪುರ ಪ್ರದೇಶದಲ್ಲಿ ಶನಿವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಶೋಧ ಕಾರ್ಯ ಮುಂದುವರೆದಿದೆ.

ದಿಲ್ಲಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಮೃತ್ಯು,13 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲೂ ಕೊರೋನಾ ವೈರಸ್ ಆತಂಕ: ಕೇರಳ 7 ಮಂದಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊಚ್ಚಿ, ಜ.25: ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಚೀನಾದಿಂದ ಬಂದಿರುವ 11 ಮಂದಿಯ ಪೈಕಿ 7 ಮಂದಿಯಲ್ಲಿ ಕೊರೋನಾ ವೈರಸ್’ನ ಗುಣಲಕ್ಷಣಗಳು ಕಂಡು ಬಂದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಕೆಲ ದಿನಗಳಿಂದ ಚೀನಾ ರಾಷ್ಟ್ರದಿಂದ ಭಾರತಕ್ಕೆ ಆಗಮಿಸಿರುವವರ ಪೈಕಿ ಹಲವು ಜನರಲ್ಲಿ ಸೋಂಕು ತಗುಲಿರುವ ಶಂಕೆಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದ ವಿವಿಧ ಆಸ್ಪತ್ರೆಗಳಲ್ಲಿ 7, ಮುಂಬೈನಲ್ಲಿ ಇಬ್ಬರು, ಬೆಂಗಳೂರು ಮತ್ತು ಹೈದ್ರಾಬಾದ್ ನಲ್ಲಿ

ಭಾರತದಲ್ಲೂ ಕೊರೋನಾ ವೈರಸ್ ಆತಂಕ: ಕೇರಳ 7 ಮಂದಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು

ತಿರುವನಂತಪುರಂ, ಜ.24: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಸರಬರಾಜನ್ನು ತಡೆ ಹಿಡಿದಿದೆ ಎಂದು ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿಸೆಕ್ಷನ್ 153 (ಎ) ಅಡಿಯಲ್ಲಿ ಸಂಸದೆ ಶೋಭಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ಕೆ.ಆರ್. ಅವರ ದೂರಿನ ಆಧಾರದ

ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ

(ನ್ಯೂಸ್ ಕಡಬ) Newskadaba.com ಕಡಬ. ಜ.24. ಫೆಬ್ರವರಿ 08ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಿಂದ ಆಯ್ಕೆಯಾದ ಹತ್ತು ಜನರ ಪೈಕಿ ಮರ್ಧಾಳದ ಅಬ್ದುಲ್ ರಝಾಕ್ ಸೇರಿದ್ದಾರೆ. ಜನವರಿ 24ರಿಂದ ಫೆಬ್ರವರಿ 04ರ ವರೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಇವರು ಈ ಬಾರಿಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಇದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರಿನ ಸಂತ ಫಿಲೋಮಿನಾ

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಲ್ಲು ಶಿಕ್ಷೆಯ ಅಪರಾಧಿಗಳ ಅರ್ಜಿ ಸಲ್ಲಿಕೆಗೆ ಕಾಲ ಮಿತಿ ನಿಗದಿಪಡಿಸಿ: ಸುಪ್ರೀಂ ಗೆ ಕೇಂದ್ರ ಮನವಿ

ಹೊಸದಿಲ್ಲಿ, ಜ.23: ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳಿಗೆ ಏಳು ದಿನಗಳ ಒಳಗಾಗಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಕೆಗೆ ಸಮಯ ಮಿತಿ ವಿಧಿಸುವಂತೆ ಇರಬೇಕು. ಇದರ ಜತೆಗೆ ತೀರ್ಪಿನ ಮರು ಪರಿಶೀಲನಾ ಅರ್ಜಿ ಮತ್ತು ಕ್ಯುರೇಟಿವ್‌ ಪಿಟಿಷನ್‌ ಸಲ್ಲಿಕೆಯ ಬಗ್ಗೆ ಕೂಡ ಸಮಯ ನಿಗದಿ ಮಾಡಬೇಕು ಎಂದು ಬುಧವಾರ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದೆ. ಕೇಂದ್ರ ಗೃಹ ಖಾತೆ ವತಿಯಿಂದಲೇ ಈ ಕೋರಿಕೆ ಮಂಡನೆಯಾಗಿದೆ. 2012ರ ನಿರ್ಭಯಾ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಈಗಾಗಲೇ ಘೋಷಣೆಯಾಗಿರುವ ಗಲ್ಲು ಶಿಕ್ಷೆ

ಗಲ್ಲು ಶಿಕ್ಷೆಯ ಅಪರಾಧಿಗಳ ಅರ್ಜಿ ಸಲ್ಲಿಕೆಗೆ ಕಾಲ ಮಿತಿ ನಿಗದಿಪಡಿಸಿ: ಸುಪ್ರೀಂ ಗೆ ಕೇಂದ್ರ ಮನವಿ Read More »

ರಾಷ್ಟ್ರೀಯ ನ್ಯೂಸ್

ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ

ಹೊಸದಿಲ್ಲಿ, ಜ.22: ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಸಲ್ಲಿಸಲಾಗಿರುವ 144 ಅರ್ಜಿಗಳನ್ನು ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕಾಂಗ್ರೆಸ್ ನಾಯಕ ಜೈರಾಮ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ 142 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಆಲಿಸಲಿದೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್
Scroll to Top