ರಾಷ್ಟ್ರೀಯ ನ್ಯೂಸ್

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ದಿಲ್ಲಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಬಂಧನ

ಹೊಸದಿಲ್ಲಿ, ಡಿ.21: ಭಾರೀ ವಿವಾದ ಎಬ್ಬಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದಿಲ್ಲಿಯ ಜಾಮೀಯಾ ಮಸೀದಿಯಲ್ಲಿ ನಡೆದಿದ್ದ ಭಾರೀ ಪ್ರತಿಭಟನೆಗೆ ತನ್ನ ಬೆಂಬಲವನ್ನು ಸೂಚಿಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್‌ರನ್ನು ದಿಲ್ಲಿಯಲ್ಲಿ ಶನಿವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸೂಚನೆಯನ್ನೂ ಧಿಕ್ಕರಿಸಿ ಸಾವಿರಾರು ಪ್ರತಿಭಟನಕಾರರು ದಿಲ್ಲಿಯ ಜಾಮೀಯಾ ಮಸೀದಿಯಿಂದ ಪ್ರತಿಭಟನೆ ಹೊರಟಿದ್ದರು. ಬಳಿಕ ಪೊಲೀಸರು ಪ್ರತಿಭಟನಕಾರರನ್ನು ದಿಲ್ಲಿ ಗೇಟ್ ಬಳಿ ತಡೆಯಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಕಾರರ ನಡುವೆ ಇದ್ದ ಚಂದ್ರಶೇಖರ್ ಆಝಾದ್ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು […]

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ದಿಲ್ಲಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಬಂಧನ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ನಿಯಮದಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ➤ ದಿಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.19. ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರವು ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಾಹಿ ಇಮಾಮ್, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕ ಆಸ್ತಿ –

ಪೌರತ್ವ ನಿಯಮದಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ➤ ದಿಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯಿಸುದಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ, ಡಿ.19: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು  ನಡೆಯುತ್ತಿರುವ ಹಿನ್ನಲೆಯಲ್ಲಿ “ ಈ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟ ಪಡಿಸಿದ್ದಾರೆ . ಟ್ವಿಟರ್‌ ನಲ್ಲಿ ಭಾರತದಲ್ಲಿನ ಪೌರತ್ವ ತಿದ್ದುಪಡಿ  ಕಾಯ್ದೆಗೆ  ಸಂಬಂಧಿಸಿದ ನಿಬಂಧನೆಗಳು ಮತ್ತು ಕಾಯ್ದೆಯ ವಸ್ತುಸ್ಥಿತಿಯ ಕುರಿತು ಗೃಹಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ. ಜನನ, ಮೂಲ, ನೋಂದಣಿ, ನೈಸರ್ಗಿಕೀಕರಣ ಅಥವಾ ಭೂಪ್ರದೇಶದ ಸಂಯೋಜನೆಯಿಂದ ಭಾರತದ ಪೌರತ್ವವನ್ನು ಪಡೆಯಬಹುದು. ಅರ್ಹತೆ ಪಡೆದ ಯಾವುದೇ ವಿದೇಶಿಯನು ತನ್ನ

ಪೌರತ್ವ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯಿಸುದಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ಅಶ್ಲೀಲ ವೆಬ್‌ಸೈಟ್ ಗಳನ್ನು ನಿಷೇಧಿಸಿ.! ➤ ಬೆಳ್ತಂಗಡಿ ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.19. ಯುವ ಜನತೆಯು ಹೆಚ್ಚಾಗಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವುದರಿಂದ ದೇಶದಲ್ಲಿ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಅಶ್ಲೀಲ ವೆಬ್‍ಸೈಟುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ.

ಅಶ್ಲೀಲ ವೆಬ್‌ಸೈಟ್ ಗಳನ್ನು ನಿಷೇಧಿಸಿ.! ➤ ಬೆಳ್ತಂಗಡಿ ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ Read More »

ರಾಷ್ಟ್ರೀಯ ನ್ಯೂಸ್

ಎಷ್ಟೇ ವಿರೋಧವಿದ್ದರೂ ಪೌರತ್ವ ಕಾಯ್ದೆ ಜಾರಿಗೆ ಶತಸಿದ್ದ: ಅಮಿತ್ ಶಾ

ಹೊಸದಿಲ್ಲಿ, ಡಿ.18: ವಿಪಕ್ಷಗಳು ಎಷ್ಟೇ ವಿರೋಧಿಸಿದರೂ ಪೌರತ್ವ  ಕಾಯ್ದೆ ತಂದೇ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರು ಭಾರತೀಯ ರಾಷ್ಟ್ರೀಯತೆಯನ್ನು ಪಡೆದುಕೊಳ್ಳುವುದು ಮತ್ತು ಗೌರವದಿಂದ ದೇಶದಲ್ಲಿ ವಾಸಿಸುವುದನ್ನು ಮೋದಿ ಸರ್ಕಾರ ಖಚಿತಪಡಿಸುತ್ತದೆ ಎಂದು ಪ್ರತಿಪಾದಿಸಿದರು. ಈ ಹೊಸ ಕಾನೂನಿನ ವಿರುದ್ಧವಾಗಿರುವವರು ಈ ಕಾಯ್ದೆಯನ್ನು ತಮ್ಮಿಂದ ಸಾಧ್ಯವಾದಷ್ಟು ವಿರೋಧಿಸುವಂತೆ ಸವಾಲು ಹಾಕಿದರು. ಏನೇ ಬರಲಿ, ಈ ನಿರಾಶ್ರಿತರಿಗೆ ಭಾರತೀಯ ಪೌರತ್ವ ಸಿಗುತ್ತದೆ ಮತ್ತು

ಎಷ್ಟೇ ವಿರೋಧವಿದ್ದರೂ ಪೌರತ್ವ ಕಾಯ್ದೆ ಜಾರಿಗೆ ಶತಸಿದ್ದ: ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಸಿಎಫ್‌ಐಯಿಂದ ರಸ್ತೆ ತಡೆ

ಮಂಗಳೂರು, ಡಿ.16: ಪೌರತ್ವ ಕಾಯ್ದೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿದ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಸಂಜೆ ನಗರದ ಬಲ್ಮಠದಲ್ಲಿರುವ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು.   ಈ ಸಂದರ್ಭ ಪೊಲೀಸರು ಸುಮಾರು 50ಕ್ಕೂ ಅಧಿಕ ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ತೆಗೆದುಕೊಂಡರು. ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ನಡೆಸಿದ ಕೃತ್ಯ ಖಂಡಿಸಿ ಪ್ರತಿಭಟನೆ

ಮಂಗಳೂರು: ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಸಿಎಫ್‌ಐಯಿಂದ ರಸ್ತೆ ತಡೆ Read More »

ರಾಷ್ಟ್ರೀಯ ನ್ಯೂಸ್

ಉನ್ನಾವೊ ಅತ್ಯಾಚಾರ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲ್‌ದೀಪ್ ಸಿಂಗ್ ದೋಷಿ

ಹೊಸದಿಲ್ಲಿ, ಡಿ.16: ಉನ್ನಾವೊ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರಪ್ರದೇಶ ಬಿಜೆಪಿಯ ಮಾಜಿ ಶಾಸಕ ಕುಲ್ ದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ದಿಲ್ಲಿಯ ತೀಸ್ ಹಜಾರಿ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ. ಎರಡು ವರ್ಷದ ಹಿಂದಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಿಜೆಪಿ ಉಚ್ಛಾಟಿಸಿದ ಶಾಸಕ ಕುಲ್‌ದೀಪ್ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, ಮಂಗಳವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿದೆ. ಅಪ್ರಾಪ್ತೆ ಬಾಲಕಿಯನ್ನು ಕುಲ್‌ದೀಪ್ ಸಿಂಗ್ ಬಳಿ ಕರೆದೊಯ್ದಿದ್ದ

ಉನ್ನಾವೊ ಅತ್ಯಾಚಾರ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲ್‌ದೀಪ್ ಸಿಂಗ್ ದೋಷಿ Read More »

ರಾಷ್ಟ್ರೀಯ ನ್ಯೂಸ್

ಇಂದು ಉನ್ನಾವೊ ತೀರ್ಪು ಪ್ರಕಟಿಸಲಿರುವ ದಿಲ್ಲಿ ಕೋರ್ಟ್‌

ಹೊಸದಿಲ್ಲಿ, ಡಿ.16: ಉನ್ನಾವೊನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್‌ ಸೋಮವಾರ ತೀರ್ಪು ಪ್ರಕಟಿಸಲಿದೆ. ಬಿಜೆಪಿಯ ಉಚ್ಚಾಟಿತ ನಾಯಕ ಕುಲದೇಪ್‌ ಸಿಂಗ್‌ ಸೆಂಗಾರ್‌ ವಿರುದ್ಧ 2017ರಲ್ಲಿ ಮಹಿಳೆ ಮೇಲೆ ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಅತ್ಯಾಚಾರ ಎಸಗಿದ ಆರೋಪವಿದೆ. ಸಿಬಿಐ ಮತ್ತು ಇತರರ ವಾದಗಳನ್ನು ಕೋರ್ಟ್‌ ಈಗಾಗಲೇ ಆಲಿಸಿದೆ. ಸೆಂಗಾರ್‌ ನಾಲ್ಕು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಪ್ರಕರಣ ರಾಜಕೀಯವಾಗಿಯೂ ಮಹತ್ವ ಪಡೆದಿದೆ.

ಇಂದು ಉನ್ನಾವೊ ತೀರ್ಪು ಪ್ರಕಟಿಸಲಿರುವ ದಿಲ್ಲಿ ಕೋರ್ಟ್‌ Read More »

ರಾಷ್ಟ್ರೀಯ ನ್ಯೂಸ್

ಮೋದಿ ಸರಕಾರ ದೇಶದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ: ಪ್ರಿಯಾಂಕ ಗಾಂಧಿ ಆರೋಪ

ಹೊಸದಿಲ್ಲಿ, ಡಿ.16: ದೇಶದ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಮೋದಿ ಸರ್ಕಾರ ಹೇಡಿತನ ಮಾಡುತ್ತಿದೆ. ಅದನ್ನು  ಪ್ರಶ್ನಿಸಿದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ದಬ್ಬಾಳಿಕೆ ತೋರುತ್ತಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ಟ್ವೀಟ್ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿರುವ ಪ್ರಿಯಾಂಕಾ ಗಾಂಧಿ, ಮೋದಿ ಸರ್ಕಾರ ತನ್ನ ಸರ್ವಾಧಿಕಾರದ ಧೋರಣೆಯಿಂದ ದೇಶದ ಯುವಜನತೆಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ವಿಶ್ವವಿದ್ಯಾಲಯಗಳಿಗೆ ಹೋಗಿ ವಿದ್ಯಾರ್ಥಿಗಳಿಗೆ ಹೊಡೆಯಲಾಗುತ್ತಿದೆ. ದೇಶದ ಯುವಜನತೆಯನ್ನು ನಡೆಸಿಕೊಳ್ಳುವ

ಮೋದಿ ಸರಕಾರ ದೇಶದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ: ಪ್ರಿಯಾಂಕ ಗಾಂಧಿ ಆರೋಪ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ಕಾನೂನು ಪರಿಶೀಲನೆಯ ಬಗ್ಗೆ ಅಮಿತ್ ಶಾ ಭರವಸೆ ➤ ಮೇಘಾಲಯ ಸಿಎಂ ಸಾಂಗ್ಮಾ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.15. ಹೊಸದಾಗಿ ಜಾರಿಗೆ ಬಂದ ಪೌರತ್ವ ಕಾನೂನಿಗೆ ಸಂಬಂಧಿಸಿದಂತೆ ಮೇಘಾಲಯದ ಕಳವಳಗಳನ್ನು ಪರಿಶೀಲಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ. ಶಿಲ್ಲಾಂಗ್‌ನಿಂದ 250 ಕಿ.ಮೀ ದೂರದಲ್ಲಿರುವ ವಿಲಿಯಮ್‌ನಗರ ಪಟ್ಟಣದಲ್ಲಿ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಚಾಪರ್‌ನಿಂದ ಇಳಿಯುತ್ತಿದ್ದಾಗ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಾಂಗ್ಮಾ ಅವರನ್ನು ಸುತ್ತುವರಿದಿದ್ದು, ಪೊಲೀಸರು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ. ಈ ವೇಳೆ ಅವರು ಮೇಲಿನಂತೆ ನುಡಿದಿದ್ದಾರೆ. ಮೇಘಾಲಯವು ಈಶಾನ್ಯ ರಾಜ್ಯಗಳಲ್ಲಿ

ಪೌರತ್ವ ಕಾನೂನು ಪರಿಶೀಲನೆಯ ಬಗ್ಗೆ ಅಮಿತ್ ಶಾ ಭರವಸೆ ➤ ಮೇಘಾಲಯ ಸಿಎಂ ಸಾಂಗ್ಮಾ Read More »

ರಾಷ್ಟ್ರೀಯ ನ್ಯೂಸ್
Scroll to Top