ರಾಷ್ಟ್ರೀಯ ನ್ಯೂಸ್

ದಿಲ್ಲಿ: ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ

ಹೊಸದಿಲ್ಲಿ, ಡಿ.15: ಮನೆಯೊಂದಕ್ಕೆ  ಬೆಂಕಿ ತಗುಲಿದ ಪರಿಣಾಮ ಮೂವರು ಮಹಿಳೆಯರು ಸಜೀವ ದಹನವಾಗಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಾಲಿಮಾರ್ ಭಾಗ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಮೃತರನ್ನು ಕಾಂತ (75), ಕಿರಣ್ ಶರ್ಮಾ (65) ಸೋಮ್ ವತಿ(42) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಲಜ್ ವಂತಿ, ಈನಾ, ಅಕ್ಷಿತ್ ಮತ್ತು ವನ್ಸಿಕಾ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ  6 ಗಂಟೆ ವೇಳೆಗೆ  ಬೆಂಕಿ ಅವಘಡವಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ  ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮನೆಯಲ್ಲಿದ್ದ 7 […]

ದಿಲ್ಲಿ: ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ

ಗುವಾಹಟಿ, ಡಿ.14: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಅಲ್ಪ ಕಡಿಮೆಯಾಗಿದ್ದು, ಹೀಗಾಗಿ ಇಂದು ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ. ಅಸ್ಸಾಂನ ಅತೀ ದೊಡ್ಡ ನಗರವಾದ ಗುವಾಹಟಿಯಲ್ಲಿ ಕಳೆದ ಕೆಲ ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶನಿವಾರ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಸಂಜೆ ನಾಲ್ಕರವರೆಗೆ ಸಡಿಲಿಸಲಾಗಿದೆ. ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದ್ದವು. ಗುರುವಾರ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ ಸಡಿಲಿಕೆ Read More »

ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಚಿನ್ನ ಕದ್ದು ಕಡಬದ ಚಿನ್ನದಂಗಡಿಗೆ ಮಾರಾಟ ➤ ಆರೋಪಿಯೊಂದಿಗೆ ಕಡಬಕ್ಕೆ ಆಗಮಿಸಿದ ಕೇರಳ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಕೇರಳದಲ್ಲಿ ಚಿನ್ನಾಭರಣ ಕಳವು ನಡೆಸಿದ ಅಲ್ಲಿಯ ವ್ಯಕ್ತಿಯೋರ್ವ ಕಡಬದಲ್ಲಿ ವಾಸವಿರುವ ಆತನ ಸಹೋದರನ ಮೂಲಕ ಕಡಬದ ಜ್ಯುವೆಲ್ಲರ್ಸ್ ಮಳಿಗೆಯೊಂದಕ್ಕೆ ಚಿನ್ನವನ್ನು ಮಾರಾಟ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕೇರಳ ಮೂಲದ ಖಾದರ್ ಎಂಬಾತನನ್ನು ಕಡಬಕ್ಕೆ ಕರೆತಂದ ಕೇರಳ ಪೊಲೀಸರು ಕಡಬದ ಜ್ಯುವೆಲ್ಲರಿ ಅಂಗಡಿಗೆ ತೆರಳಿ ಚಿನ್ನವನ್ನು ಮಾರಾಟ ಮಾಡಿರುವ ಬಗ್ಗೆ ಶುಕ್ರವಾರದಂದು ತನಿಖೆ ನಡೆಸಿದ್ದಾರೆ. ಕೇರಳ ನಿವಾಸಿ ಖಾದರ್ ಎಂಬಾತ ಚಿನ್ನವನ್ನು ಕಳವುಗೈದು ಸ್ವಲ್ಪ ಚಿನ್ನವನ್ನು ಕಡಬದ ಕೇಪು ನಿವಾಸಿ

ಕೇರಳದಲ್ಲಿ ಚಿನ್ನ ಕದ್ದು ಕಡಬದ ಚಿನ್ನದಂಗಡಿಗೆ ಮಾರಾಟ ➤ ಆರೋಪಿಯೊಂದಿಗೆ ಕಡಬಕ್ಕೆ ಆಗಮಿಸಿದ ಕೇರಳ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್

ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ

ಕೋಲ್ಕತಾ, ಡಿ.13: ತೀವ್ರ  ಚರ್ಚೆಗೆ  ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ನಿನ್ನೆಯಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಾವು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು

ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿಯಲ್ಲಿ ಭಾರೀ ಮಳೆ: ಸುಧಾರಿಸಿದ ವಾತಾವರಣ

ಹೊಸದಿಲ್ಲಿ, ಡಿ.13: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ದಿಲ್ಲಿ, ನೋಯ್ಡಾ, ಗಾಝಿಯಾಬಾದ್, ಗುರುಗ್ರಾಮ್ ಗಳಲ್ಲಿ ಗರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಇದರಿಂದಾಗಿ ಶುಕ್ರವಾರ ಬೆಳಗ್ಗೆ ವಾಯು ಗುಣಮಟ್ಟ ಸ್ವಲ್ಪ ಚೇತರಿಕೆಯಾಗಿದೆ. ಕಳೆದ ಅಕ್ಟೋಬರ್ ನಿಂದ ರಾಷ್ಟ್ರ ರಾಜಧಾನಿಯ ಜನತೆ ವಾಯುಮಾಲಿನ್ಯದಿಂದ ಬಳಲುತ್ತಿದ್ದು, ಮುಂದೆ ಉತ್ತಮ ನಿರೀಕ್ಷೆಯಲ್ಲಿದ್ದಾರೆ

ದಿಲ್ಲಿಯಲ್ಲಿ ಭಾರೀ ಮಳೆ: ಸುಧಾರಿಸಿದ ವಾತಾವರಣ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ 

ಹೊಸದಿಲ್ಲಿ, ಡಿ.13: ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ  ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಬಯಸಿ ಡಿಸೆಂಬರ್ 31, 2014ರವರೆಗೆ ಬಂದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ  Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನಾಕಾರರಿಂದ ಕೇಂದ್ರ ಸಚಿವರ ಮನೆ ಮೇಲೆ ದಾಳಿ

 ಅಸ್ಸಾಂ, ಡಿ.12: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವ ರಾಮೇಶ್ವರ್ ತೇಲಿ  ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಅಸ್ಸಾಂ ದಿಬ್ರುಗಢ್ ನ ದುಲಿಯಾಜನ್ ಪ್ರದೇಶದಲ್ಲಿರುವ ಸಂಸದ ಮತ್ತು ಕೇಂದ್ರ ಆಹಾರ ಸಂಸ್ಕರಣಾ ರಾಜ್ಯ ಸಚಿವರಾದ ರಾಮೇಶ್ವರ್ ತೇಲಿ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ಮಾಡಿದ್ದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಮನೆ ಅವರಣದಲ್ಲಿ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಅದೃಷ್ಟವಶಾತ್

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನಾಕಾರರಿಂದ ಕೇಂದ್ರ ಸಚಿವರ ಮನೆ ಮೇಲೆ ದಾಳಿ Read More »

ರಾಷ್ಟ್ರೀಯ ನ್ಯೂಸ್

ನಿಮ್ಮ ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಅಸ್ಸಾಂ ಜನತೆಗೆ ಮೋದಿ ಭರವಸೆ

ಹೊಸದಿಲ್ಲಿ, ಡಿ.12: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುತ್ತಿರುವ ಅಸ್ಸಾಂ ಜನರಲ್ಲಿ ಪ್ರತಿಭಟನೆ ಕೈಬಿಡುವಂತೆ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇದೇ ಸಂದರ್ಭ ಅಸ್ಸಾಂ ಜನರ ಅಧಿಕಾರ, ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಸ್ಸಾಂ ಜನರ ಸಂಸ್ಕೃತಿ, ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದು, ಮತ್ತೊಂದೆಡೆ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಇಂದು

ನಿಮ್ಮ ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಅಸ್ಸಾಂ ಜನತೆಗೆ ಮೋದಿ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಜಾರ್ಖಂಡ್ ವಿಧಾನಸಭೆ ಚುನಾವಣೆ: ಮೂರನೇ ಹಂತದ ಮತದಾನ ಆರಂಭ

(ನ್ಯೂಸ್ ಕಡಬ) newskadaba.com ರಾಂಚಿ, ಡಿ.12: ಜಾರ್ಖಂಡ್ ವಿಧಾನಸಭೆಗೆ ಮೂರನೇ ಹಂತದ ಮತದಾನ ಆರಂಭವಾಗಿದ್ದು, ಜಾರ್ಖಂಡ್ ನ ಒಟ್ಟು 17 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೂರನೇ ಹಂತದಲ್ಲಿ ಜಾರ್ಖಂಡ್ ನ ಕೋಡರ್ಮಾ, ಬರ್ಕಾಥಾ, ಬಾರ್ಹಿ, ಬಾರ್ಕಗಾಂವ್, ರಾಮ್‌ಘಡ್, ಮಾಂಡು, ಹಜಾರಿಬಾಗ್, ಸಿಮರಿಯಾ (ಎಸ್‌ಸಿ), ಧನ್ವಾರ್, ಗೋಮಿಯಾ, ಬೆರ್ಮೊ, ಇಚಗ, ಸಿಲ್ಲಿ, ಖಿಜ್ರಿ, ರಾಂಚಿ, ಹತಿಯಾ ಮತ್ತು ಕಾಂಕೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣೆ: ಮೂರನೇ ಹಂತದ ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಹಿರಿಯ ಐಪಿಎಸ್ ಅಧಿಕಾರಿ ರಹ್ಮಾನ್ ರಾಜೀನಾಮೆ

ಹೊಸದಿಲ್ಲಿ, ಡಿ.12:  ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದನ್ನು ವಿರೋಧಿಸಿ   ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುರ್ರಹ್ಮಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ವರದಿಯಾಗಿದೆ. ರಾಜ್ಯಸಭೆಯಲ್ಲಿ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ರಹ್ಮಾನ್ ತನ್ನ ರಾಜೀನಾಮೆಯನ್ನು ಘೋಷಿಸಿದ್ದರು. “ಇದೊಂದು ಮತೀಯವಾದದ್ದು ಹಾಗೂ ಸಂವಿಧಾನದ ಮೂಲಭೂತ ಆಶಯಕ್ಕೆ ವಿರುದ್ಧವಾಗಿದೆ ಎಂದು ರಹಮಾನ್ ಅಭಿಪ್ರಾಯವ್ಯಕ್ತಪಡಿಸಿದ್ದು, ಗುರುವಾರದಿಂದ ತಾನು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಹಿರಿಯ ಐಪಿಎಸ್ ಅಧಿಕಾರಿ ರಹ್ಮಾನ್ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್
Scroll to Top