(ನ್ಯೂಸ್ ಕಡಬ) newskadaba.com ಜು. 25. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾದ ಸಂಸದರು, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ ತೀರಾ ಹದಗೆಟ್ಟಿದ್ದು, ಈ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟಕ (SPV)ವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ (NHLML) ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ವಾಹನ ಸಂಚಾರ ದುಸ್ತರವಾಗುತ್ತದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಈ ಗಂಭೀರ ಸಮಸ್ಯೆ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುರತ್ಕಲ್ -ಬಿ.ಸಿ. ರೋಡ್ ಹೆದ್ದಾರಿಯನ್ನು ಎನ್ ಹೆಚ್ಎಐ ವ್ಯಾಪ್ತಿಗೆ ತಂದು ನವೀಕರಣ