ರಾಷ್ಟ್ರೀಯ ನ್ಯೂಸ್

ಬಾಬಾ ಸಿದ್ದಿಕ್ ಪುತ್ರ ಅಜಿತ್ ಪವಾರ್ ಪಕ್ಷಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮುಂಬೈ, ಅ.25. ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಇಂದು ಬೆಳಿಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು ಸೇರಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್‌ ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) […]

ಬಾಬಾ ಸಿದ್ದಿಕ್ ಪುತ್ರ ಅಜಿತ್ ಪವಾರ್ ಪಕ್ಷಕ್ಕೆ ಸೇರ್ಪಡೆ Read More »

ರಾಷ್ಟ್ರೀಯ ನ್ಯೂಸ್

ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ನ್ಯಾಯದೇವತೆ ಪ್ರತಿಮೆ ಹಾಗೂ ಲಾಂಛನ ಸೇರಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ಮಾಡಿರುವ ಮಾರ್ಪಾಡುಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ನೇತೃತ್ವದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಈ ಮಾರ್ಪಾಡುಗಳ ಕುರಿತು ತನ್ನನ್ನು ಸಂಪರ್ಕಿಸಿಲ್ಲ ಎಂದು ಆರೋಪಿಸಿದ್ದು, ಈ ಮಾರ್ಪಾಡುಗಳ ಹಿಂದಿರುವ ತರ್ಕವೇನು ಎಂದೂ ಪ್ರಶ್ನಿಸಿದೆ. ಈ ಕುರಿತು ನಿರ್ಣಯ ಕೈಗೊಂಡಿರುವ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ವಕೀಲರಿಗಾಗಿ ಕೋರಿದ್ದ ಕೆಫೆ

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ

(ನ್ಯೂಸ್ ಕಡಬ) newskadaba.com ಅ.24.  ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧೀಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್ ಎಂದು ಗುರುತಿಸಲಾಗಿದೆ. ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸಾಪ್ ನಂಬರ್ ಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಿದ ಪೊಲೀಸರು ಅನೇಕ ತಮಡ ರಚಿಸಿ ವಿವಿಧ ರಾಜ್ಯಗಳಲ್ಲಿ

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಝರ್ ಕಾರ್ಯಾಚರಣೆ ಉಲ್ಲೇಖಿಸಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಗವಾಯಿ ಜೆ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. “ನೀವು ಮೂರನೇ ವ್ಯಕ್ತಿ. ನಿಮ್ಮ ದೂರು ಏನು? ಸಂತ್ರಸ್ತರು ನ್ಯಾಯಾಲಯದ ಮುಂದೆ ಬರಲಿ. ನಾವು ವಿಚಾರಣೆ ಮಾಡುತ್ತೇವೆ. ಇದು ಅರ್ಜಿಗಳಿಗೆ ಅವಕಾಶ ನೀಡಲಿದೆ” ಎಂದು ನ್ಯಾಯಾಧೀಶರು ಅರ್ಜಿದಾರರಿಗೆ ಸೂಚಿಸಿದರು. ರಾಷ್ಟ್ರೀಯ ಮಹಿಳಾ

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..!

(ನ್ಯೂಸ್ ಕಡಬ) newskadaba.com ಅ.24.  ಅಶ್ಲೀಲ ವೀಡಿಯೋ ನೋಡಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯ ಮಾಡಿದ ಪತ್ನಿಗೆ ಪತಿಯೋರ್ವ ವಿಚ್ಛೇದನ ನೀಡಿರುವ ಕುರಿತು ಪಂಜಾಬ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಸೆಕ್ಸಿ ವಿಡಿಯೋ ನೋಡುವ ಚಟಕ್ಕೆ ಬಿದ್ದಿರುವ ಪತ್ನಿಯ ಲೈಂಗಿಕ ಒತ್ತಾಯಕ್ಕೆ ಬೇಸತ್ತು ಕೌಟುಂಬಿಕ ನ್ಯಾಯಾಲಯದ ಮೊರೆ ಹೋದ ಪತಿಗೆ ಅಲ್ಲಿ ನ್ಯಾಯಾಲಯವು ವಿಚ್ಛೇದನ ತೀರ್ಪು ನೀಡಿದ್ದು, ಇದರ ವಿರುದ್ಧ ಪತ್ನಿ ಪಂಜಾಬ್‌-ಹರಿಯಾಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾಳೆ. ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಇದೀಗ

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಪೂರ್ವ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದ ಎಕ್ಸ್‌ ನಲ್ಲಿನ ಪೋಸ್ಟ್ ಹೇಳಿರುವ ಹಾಗೆ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಡಾನಾ ಚಂಡಮಾರುತ: ಅಂತಾರಾಷ್ಟ್ರೀಯ 2 ವಿಮಾನಗಳು ಸ್ಥಗಿತ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಅ. 24. ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ರೂಪುಗೊಂಡಿದ್ದು, ಚಂಡಮಾರುತದ ಮುನ್ಸೂಚನೆಯಿಂದ ನೂರಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳನ್ನು 16 ಗಂಟೆಗಳವರೆಗೆ ಸ್ಥಗಿತಗೊಳಿಸಲಾಗಿದೆ. ಮಂಗಳವಾರ ಸಂಜೆ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಅಕ್ಟೋಬರ್ 25ರ ಮುಂಜಾನೆ ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯನ್ನು ದಾಟಿ 100-110 ಮೈಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮನೆಗಳು, ರಸ್ತೆಗಳು, ಬೆಳೆಗಳು ಮತ್ತು ವಿದ್ಯುತ್ ಮಾರ್ಗಗಳಿಗೆ ಹಾನಿ ಮತ್ತು ಪ್ರವಾಹ

ಡಾನಾ ಚಂಡಮಾರುತ: ಅಂತಾರಾಷ್ಟ್ರೀಯ 2 ವಿಮಾನಗಳು ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಕಜಾನ್‌ನಲ್ಲಿ ನಡೆದ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದರು. ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೇರಿದಂತೆ ಹಲವಾರು ವಿಶ್ವ ನಾಯಕರನ್ನು ಭೇಟಿಯಾದರು. ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್,

ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ವಯನಾಡ್, ಅ.23. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್

ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ Read More »

ರಾಷ್ಟ್ರೀಯ ನ್ಯೂಸ್
Scroll to Top