ರಾಷ್ಟ್ರೀಯ ನ್ಯೂಸ್

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02) : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): – ಭಾರತದಿಂದ ಅಮೇರಿಕಾಗೆ ತೆರಳುವ ಪ್ರವಾಸಿಗರು, ನುರಿತ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಹೆಚ್ಚುವರಿ 2.50 ಲಕ್ಷ ವೀಸಾ ನೇಮಕಾತಿಗಳನ್ನು ತೆರೆದಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ಹೇಳಿದೆ. ಕಳೆದ ವರ್ಷ 1.4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿತ್ತು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದರು. ಇದರ ಬೆನ್ನಲ್ಲೇ ಭಾರತದಿಂದ ಅಮೆರಿಕಾಕ್ಕೆ ಪ್ರವಾಸ ಹಾಗೂ ವ್ಯಪಾರ ವಹಿವಾಟು, ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ 3000 ಹುದ್ದೆ- ಅ.4 ಅರ್ಜಿ ಸಲ್ಲಿಸಲು ಕೊನೆ ದಿನ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 01. ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ  3000 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅ.4 ಕೊನೆಯ ದಿನವಾಗಿದೆ. ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 21ರಿಂದ ಅಕ್ಟೋಬರ್ 4 ರವರೆಗೆ ಕೆನರಾ ಬ್ಯಾಂಕಿನ ಅಧಿಕೃತ ವೆಬ್ಸೈಟ್ www.canarabank.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಅಪ್ರೆಂಟಿಸ್ಶಿಪ್ ಪೋರ್ಟಲ್‌ಗೆ ಪ್ರವೇಶಿಸಬೇಕು. (www.nats.education.gov.in) ಅಲ್ಲಿ ನೋಂದಣಿ

ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ 3000 ಹುದ್ದೆ- ಅ.4 ಅರ್ಜಿ ಸಲ್ಲಿಸಲು ಕೊನೆ ದಿನ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌- ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 01. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ 70 ವರ್ಷ ಮೇಲಿನ ಹಿರಿಯ ನಾಗರಿಕರ  5 ಲಕ್ಷ ರೂ.ವರೆಗಿನ ಪ್ರತ್ಯೇಕ ವಿಮಾ ಸೌಲಭ್ಯದ ನೋಂದಣಿ ಇಂದಿನಿಂದ ಆರಂಭವಾಗಲಿದೆ. ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಪ್ರಜೆಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ

ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌- ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ Read More »

ರಾಷ್ಟ್ರೀಯ ನ್ಯೂಸ್

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 01. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ.30. ಎಸ್ ಪ್ಲನೇಡ್ ನಿಂದ ಮೈದಾನದವರೆಗಿನ ಟ್ರಾಮ್ ರೈಲು ಸಂಚಾರವನ್ನು ಹೊರತುಪಡಿಸಿ, ಕೋಲ್ಕತ್ತಾದಲ್ಲಿನ ಎಲ್ಲ ಮಾರ್ಗಗಳ ಟ್ರಾಮ್ ರೈಲು ಸೇವೆಯನ್ನು ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ ಸರಕಾರ ನಿರ್ಧರಿಸಿದೆ ಎಂದು ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೋಲ್ಕತ್ತಾದಲ್ಲಿನ ಟ್ರಾಮ್ ರೈಲು ಸೇವೆಗೆ 150 ವರ್ಷಗಳ ಇತಿಹಾಸವಿದೆ. ಸಾರಿಗೆ ಸಚಿವರ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು, ರಸ್ತೆಗಳಲ್ಲಿನ ವಾಹನ ದಟ್ಟಣೆಗೆ ಟ್ರಾಮ್ ರೈಲುಗಳನ್ನು ದೂಷಿಸಲಾಗದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸ್ಸು ಕರೆತರಲು ಗೊತ್ತುಪಡಿಸಿದ ಸ್ಪೇಸ್ಎಕ್ಸ್ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಯಲ್ಲಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ. ಸ್ಪೇಸೆಕ್ಸ್ ಬಾಹ್ಯಾಕಾಶ ನೌಕೆ ರವಿವಾರ 5:30ಕ್ಕೆ ಬಾಹ್ಯಾಕಾಶದಲ್ಲಿ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಜೊತೆ ಸಂಪರ್ಕವನ್ನು ಸಾಧಿಸಿದೆ. ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಬಂದ ಹೊಸ ಒಡನಾಡಿಗಳಿಗೆ ಸ್ವಾಗತವನ್ನು ಕೋರಿದ್ದಾರೆ.    

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ Read More »

ರಾಷ್ಟ್ರೀಯ ನ್ಯೂಸ್
Scroll to Top