ವಿಶೇಷ ಲೇಖನಗಳು

ಹಿಮೋಫಿಲಿಯಾ (ಕುಸುಮ ರೋಗ)

(ನ್ಯೂಸ್ ಕಡಬ) newskadaba.com ಎ.17. ಹಿಮೋಫಿಲಿಯಾ ಎಂಬ ರೋಗ ರಕ್ತ ಹೆಪ್ಪುಗಟ್ಟುವಿಕೆಯಲ್ಲಿನ ಪ್ರಕ್ರಿಯೆಯಲ್ಲಿ ವ್ಯತ್ಯಯವಿರುವ ರೋಗವಾಗಿದ್ದು, ವಂಶವಾಹಿನಿಗಳಲ್ಲಿ ತಾಯಿಯಿಂದ ಮಗನಿಗೆ ಬಳುವಳಿಯಾಗಿ ಬರುವ ಜನ್ಮಧಾರಭ್ಯ ರೋಗವಾಗಿದೆ. “X” ಎಂಬ ವರ್ಣತಂತುಗಳಲ್ಲಿ ಈ ರೋಗ ಸಾಗಿಸಲ್ಪಡುವುದರಿಂದ ಪುರುಷರಿಗೆ ಮಾತ್ರ ಈ ರೋಗ ಸೀಮಿತವಾಗಿರುತ್ತದೆ. ಮಹಿಳೆಯರಲ್ಲಿ ಎರಡು “X” ವರ್ಣತಂತುಗಳಿದ್ದು ಒಂದು ವರ್ಣತಂತುವಿನಲ್ಲಿನ ವೈಫಲ್ಯವನ್ನು ಇನ್ನೊಂದು ಸಹಜ ವರ್ಣತಂತು ಮುಚ್ಚಿಕೊಂಡು, ರೋಗ ಬರುವ ಸಾಧ್ಯತೆ ಬಹಳ ಕಡಮೆ ಇರುತ್ತದೆ. ಪುರಷರಲ್ಲಿ ಒಂದೇ “X” ಎಂಬ ವರ್ಣತಂತುವಿರುವುದರಿಂದ ಈ ವರ್ಣತಂತುವಿನಲ್ಲಿ ವೈಫಲ್ಯವನ್ನು […]

ಹಿಮೋಫಿಲಿಯಾ (ಕುಸುಮ ರೋಗ) Read More »

ಆರೋಗ್ಯ ಮಾಹಿತಿ

ಪಾರ್ಕಿನ್ಸನ್ಸ್‌ ಎಂಬ ನಡುಕದ ಖಾಯಿಲೆ ► ಎಪ್ರಿಲ್ 11 ವಿಶ್ವ ಪಾರ್ಕಿನ್ಸನ್ಸ್‌ ದಿನ

(ನ್ಯೂಸ್ ಕಡಬ) newskadaba.com ಎ.11.  ಪಾರ್ಕಿನ್ಸನ್ಸ್‌ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್ಸನ್ಸ್‌” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸ್ತಿ ಕಂಡು ಬರುವ ಈ ರೋಗ, ಹೆಚ್ಚು 60 ವರ್ಷಗಳ ನಂತರ ಕಂಡು ಬರುತ್ತದೆ. ಹಿರಿಯ ನಾಗರೀಕರಲ್ಲಿ

ಪಾರ್ಕಿನ್ಸನ್ಸ್‌ ಎಂಬ ನಡುಕದ ಖಾಯಿಲೆ ► ಎಪ್ರಿಲ್ 11 ವಿಶ್ವ ಪಾರ್ಕಿನ್ಸನ್ಸ್‌ ದಿನ Read More »

ಆರೋಗ್ಯ ಮಾಹಿತಿ

ಎಪ್ರಿಲ್ 7 – ವಿಶ್ವ ಆರೋಗ್ಯ ದಿನ

(ನ್ಯೂಸ್ ಕಡಬ) newskadaba.com ಎ.7. ಜಾಗತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆ ಎಪ್ರಿಲ್ 7ರಂದು “ವಿಶ್ವ ಆರೋಗ್ಯ ದಿನ” ಎಂದು ಆಚರಿಸುತ್ತದೆ. 1950 ಎಪ್ರಿಲ್ 7ರಂದು ಆರಂಭವಾದ ಈ ಆಚರಣೆ, ಪ್ರತಿ ವರ್ಷ ಯಾವುದಾದರೊಂದು ವಿಶೇಷ ದ್ಯೇಯವಾಕ್ಯ ಇಟ್ಟುಕೊಂಡು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಸುಮಾರು 8 ವಿಶೇಷ ದಿನಗಳನ್ನು, ವಿಶೇಷ ಜಾಗತಿಕ ಆರೋಗ್ಯ ಜಾಗೃತಿಗೆ ಆಯ್ಕೆ ಮಾಡಿದ್ದು, ಅವುಗಳಲ್ಲಿ ವಿಶ್ವ ಆರೋಗ್ಯ ದಿನ ಎಪ್ರಿಲ್ 7 ಕೂಡ ಸೇರಿದೆ. ಉಳಿದ

ಎಪ್ರಿಲ್ 7 – ವಿಶ್ವ ಆರೋಗ್ಯ ದಿನ Read More »

ಆರೋಗ್ಯ ಮಾಹಿತಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.24. ವಿಶ್ವದಾದ್ಯಂತ ಮಾರ್ಚ್ 24 ರಂದು “ವಿಶ್ವ ಕ್ಷಯ ರೋಗ ದಿನ” ಎಂದು ಆಚರಿಸಲಾಗುತ್ತಿದೆ. ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ 1982ರಿಂದ ಜಾರಿಗೆ ತಂದಿತು. ಪ್ರತಿ ವರ್ಷ ಯಾವುದಾದರೊಂದು ಧ್ಯೇಯ ಇಟ್ಟುಕೊಂಡು ಈ ಆಚರಣೆ ಮಾಡಲಾಗುತ್ತಿದ್ದು, 2014ರಲ್ಲಿ ಮೂರು ಮಿಲಿಯನ್ ಕ್ಷಯ ರೋಗಿಗಳನ್ನು ತಲುಪುವ ಧ್ಯೇಯವನ್ನು ಹೊಂದಿತ್ತು ಪ್ರತಿ ವರ್ಷ ಸುಮಾರು 9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು,

ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24 Read More »

ಆರೋಗ್ಯ ಮಾಹಿತಿ

ಇಂದು(ಮಾರ್ಚ್ 20) ವಿಶ್ವ ಬಾಯಿ ಆರೋಗ್ಯ ದಿನ ► ಡಾ| ಮುರಲೀ ಮೋಹನ್ ಚೂಂತಾರು ರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಮಾ.20. ಪ್ರತಿ ವರ್ಷ ಮಾರ್ಚ್ 20ರಂದು “ವಿಶ್ವ ಬಾಯಿಯ ಆರೋಗ್ಯ ದಿನ” ಎಂದು ಆಚರಿಸಲಾಗುತ್ತಿದ್ದು, ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು, ಬಾಯಿಯ ಆರೋಗ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಧನಾತ್ಮಕವಾದ ವಿಚಾರಧಾರೆಗಳನ್ನು ಮೂಡಿಸಲು ಮತ್ತು ಬಾಯಿಯ ಆರೋಗ್ಯದಿಂದ, ದೇಹದ ಆರೋಗ್ಯದ ಮತ್ತು ವ್ಯಕ್ತಿಯ ವ್ಯಕ್ತಿತ್ವದ ಮೇಲಾಗುವ ಪರಿಣಾಮಗಳ ಬಗ್ಗೆ ಹೊಸ ಚಿಂತನೆಗಳನ್ನು ಮೂಡಿಸುವ ಸಮದ್ದೇಶವನ್ನು ಈ ಆಚರಣೆ ಹೊಂದಿದೆ. ಈ ಆಚರಣೆ 2007ರಲ್ಲಿ FDI (ಅಂತರಾಷ್ಟ್ರೀಯ ದಂತ ಸಂಘ) ಆಚರಣೆಗೆ ತಂದಿತು. FDI ಇದರ ಜನಕರಾದ

ಇಂದು(ಮಾರ್ಚ್ 20) ವಿಶ್ವ ಬಾಯಿ ಆರೋಗ್ಯ ದಿನ ► ಡಾ| ಮುರಲೀ ಮೋಹನ್ ಚೂಂತಾರು ರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ನೀವು ಅಂತಿಮ ಪರೀಕ್ಷೆ ಬರೆಯಲು ಸಿದ್ಧರಾಗಿದ್ದೀರಾ…? ► ಪರೀಕ್ಷೆಗಾಗಿ ಪೂರ್ವ ಸಿದ್ಧತೆ ಹೇಗೆ ಮತ್ತು ಯಾಕೆ…?

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.12.  ಪರೀಕ್ಷೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಘಟ್ಟದಲ್ಲಿ ಮಹತ್ತರವಾದ ಮೈಲುಗಲ್ಲು. ಪ್ರತಿಯೊಬ್ಬ ಹೆತ್ತವರೂ ತಮ್ಮ ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲಿ ಎಂದು ಆಶಿಸುವುದು ಸಹಜ. ಜೀವನದ ಪರೀಕ್ಷೆಯಲ್ಲಿ ಈಜಾಡಿ ಜಯಿಸಬೇಕಾದರೆ, ವಿದ್ಯಾಭ್ಯಾಸದ ಹಂತದ ಎಸ್.ಎಲ್.ಎಲ್.ಸಿ. ಮತ್ತು ಪಿ.ಯು.ಸಿ  ಪರೀಕ್ಷೆಯನ್ನು ವಿದ್ಯಾರ್ಥಿಗಳು ಚೆನ್ನಾಗಿ ಮಾಡಲೇಬೇಕಾದ ಅನಿವಾರ್ಯತೆ ಇದೆ. ಚೆನ್ನಾಗಿ ಮಾಡುವುದು ಎಂದರೆ ಬರೀ ಹೆಚ್ಚು ಮಾರ್ಕ್ ತೆಗೆದುಕೊಳ್ಳುವುದು ಎಂದಲ್ಲ. ಯಾವರೀತಿ ತನ್ನನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಪರೀಕ್ಷೆಯ ಸಮಯದಲ್ಲಿ ತೊಡಗಿಸಿಕೊಳ್ಳುತ್ತಾನೆ

ನೀವು ಅಂತಿಮ ಪರೀಕ್ಷೆ ಬರೆಯಲು ಸಿದ್ಧರಾಗಿದ್ದೀರಾ…? ► ಪರೀಕ್ಷೆಗಾಗಿ ಪೂರ್ವ ಸಿದ್ಧತೆ ಹೇಗೆ ಮತ್ತು ಯಾಕೆ…? Read More »

ವಿಶೇಷ ಲೇಖನಗಳು

ವಿಶ್ವ ಕಿಡ್ನಿ ದಿನಾಚರಣೆ – ಮಾರ್ಚ್ 10 ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.12. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು. 2008ರಲ್ಲಿ 88 ದೇಶಗಳು ಈ ಆಚರಣೆಯಲ್ಲಿ ಭಾಗಿಯಾದರು. 2015ರಲ್ಲಿ ಸುಮಾರು 150ಕ್ಕೂ

ವಿಶ್ವ ಕಿಡ್ನಿ ದಿನಾಚರಣೆ – ಮಾರ್ಚ್ 10 ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಬಣ್ಣಗಳ ಹಬ್ಬ ಹೋಳಿ ಆಚರಣೆ ► ಹೇಗೆ ಮುಂಜಾಗರೂಕತೆ ವಹಿಸಬೇಕು..?

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಫೆ.27. ಚಳಿಗಾಲ ಮುಗಿದು ವಸಂತ ಕಾಲ ಕಾಲಿಡುವ ಸಮಯದಲ್ಲಿ ಬರುವ ಬಣ್ಣಗಳ ಹಬ್ಬ ಹೋಳಿ. ಗಂಡು, ಹೆಣ್ಣು, ಮಕ್ಕಳು, ಮುದುಕರು, ಬಡವ ಬಲ್ಲಿದ, ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದಬಾವವಿಲ್ಲದೆ ಪರಸ್ಪರ ಬಣ್ಣದ ಓಕುಳಿಯನ್ನು ಎರಚಿಕೊಂಡು ಮನರಂಜನೆಯ ಉತ್ತುಂಗಕ್ಕೇರಿ, ದ್ವೇಷ, ಕ್ರೋಧ, ಮದ ಮತ್ಸರಗಳಿಗೆ ಇತಿಶ್ರೀ ಹಾಡಿ ಪ್ರೀತಿ ಪ್ರೇಮ, ಮಮತೆ, ಗೌರವದಿಂದ ಎಲ್ಲವನ್ನು ಮರೆತು ಸ್ನೇಹ ಹಸ್ತ ಚಾಚುವ ಒಂದು ವಿಶಿಷ್ಠ ಹಬ್ಬವೇ ಹೋಳಿ. ಹೆಚ್ಚಾಗಿ ಉತ್ತರ ಭಾರತದಲ್ಲಿ

ಬಣ್ಣಗಳ ಹಬ್ಬ ಹೋಳಿ ಆಚರಣೆ ► ಹೇಗೆ ಮುಂಜಾಗರೂಕತೆ ವಹಿಸಬೇಕು..? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top