ಕರ್ನಾಟಕ

ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸುಬ್ರಹ್ಮಣ್ಯ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 11. ಕನ್ನಡದ ಚಲನಚಿತ್ರ ಕಿಚ್ಚ ಸುದೀಪ್ ಅವರು ಸಂಪುಟ ನರಸಿಂಹ ಸ್ವಾಮಿ‌ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಭೇಟಿ ಆಶೀರ್ವಾದ ಪಡೆದು ಬಳಿಕ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗ ಪ್ರತಿಷ್ಠೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಪ್ರಿಯಾಂಕ ಸುದೀಪ್ ಉಪಸ್ಥಿತರಿದ್ದರು.  

ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸುಬ್ರಹ್ಮಣ್ಯ ಮಠಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 11.ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.  

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 11. ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಗಾಂಧಿ ಪಾರ್ಕ್ ಬಳಿ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರಿಗೆ ಜೀಪೊಂದು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎನ್ನಲಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಸ್ವಲ್ಪ ನಜ್ಜು ಗುಜ್ಜಾಗಿದ್ದು, ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆಯು ಮತಾಂತರಕ್ಕೆ ಯತ್ನಿಸಿದ ಘಟನೆ ದೃಢವಾಗಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರದಂದು ತಿಳಿಸಿದ್ದಾರೆ. ಪತಿ ನಾಗೇಶ್ ಗೆ ಡೈವೋರ್ಸ್ ಕೊಡು, ನಾನು ನಿನಗೆ ಮುಸ್ಲಿಂ ಹುಡುಗನ ಜೊತೆ ಮದುವೆ ಮಾಡುತ್ತೇನೆ ಎಂದು ನೂರ್ ಜಹಾನ್ ಹೇಳಿದ್ದಳು. ಇದಕ್ಕೆ ಸಂಬಂಧಿಸಿ ನೂರ್ ಜಹಾನ್ ಳನ್ನು ಬಂಧಿಸಲಾಗಿದೆ. ನೂರ್ ಜಹಾನ್ ಮುಸ್ಲಿಮರ ಮದುವೆ

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..!

(ನ್ಯೂಸ್ ಕಡಬ) newskadaba.com ಸರಗೂರು, ಡಿ. 11. ಆಸ್ತಿ ವಿಚಾರದ ವೈಷಮ್ಯಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹಾದನೂರು ಗ್ರಾಮದಲ್ಲಿ ನಡೆದಿದೆ.   ಹತ್ಯೆಗೀಡಾಗಿರುವ ಯುವಕನನ್ನು ಸರಗೂರು ತಾಲ್ಲೂಕಿನ ಹಾಸನೂರು ಗ್ರಾಮದ ಸ್ವಾಮಿ(30) ಎಂದು ಗುರುತಿಸಲಾಗಿದೆ. ತಂದೆ ಸಿದ್ದರಾಜು ತನ್ನ ಸ್ವಂತ ಮಗನನ್ನೇ ಕೊಂದ ಆರೋಪಿಯಾಗಿದ್ದಾನೆ. ರಾತ್ರಿ ವೇಳೆ ಮನೆಯಲ್ಲಿ ಸ್ವಾಮಿ ನಿದ್ರಿಸುತ್ತಿದ್ದ ವೇಳೆ ತಂದೆ ಸಿದ್ದರಾಜು ಕಂಠಪೂರ್ತಿ ಕುಡಿದು ಬಂದು ಮರದ ತುಂಡಿನಿಂದ ತನ್ನ ಮಗನ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ ಎಂದು

ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ನಗರದ ಹೊರವಲಯದ ಅಡ್ಯಾರ್ ಪದವಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಹಲ್ಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಮಹಿಳೆಯ ಚಪ್ಪಲಿ ಪತ್ತೆಯಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದೇವೆ, ಆದರೆ ಗಾಯಾಳು ಇದುವರೆಗೆಊ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.  

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೂನಡ್ಕ: ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಡಿ. 11. ಅರಂತೋಡು ತಾಲೂಕು ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಇತೀಚೆಗೆ ಹೆಲಿಕಾಪ್ಟರ್ ಅವಘಡಕ್ಕೀಡಾಗಿ ವೀರ ಮರಣವನ್ನಪ್ಪಿದ ಸಿ.ಡಿ.ಯಸ್ ಬಿಪಿನ್ ರಾವತ್ ರವರಿಗೆ ಶ್ರದ್ಧಾಂಜಲಿ ಸಭೆಯು ಸಜ್ಜನ ಸಭಾ ಭವನದಲ್ಲಿ ನಡೆಯಿತು. ಸಭೆಯಲ್ಲಿ ಹುತಾತ್ಮರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಇದರ ಅಧ್ಯಕ್ಷತೆಯನ್ನು ಸುಳ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ರವರು ಮಾತನಾಡಿ, ವೀರ ಮರಣ ಹೊಂದಿದ ಬಿಪಿನ್ ರಾವತ್

ಗೂನಡ್ಕ: ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 11. ಆಕ್ಟಿವಾ ಹಾಗೂ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಕಲ್ಮಂಜ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ದೊಣ್ಣೆಯಿಂದ ಹೊಡೆದು ಕೊಲೆಯತ್ನ..! ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 11. ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವಂಕಪ್ಪ ಗೌಡ(40) ಎಂಬವರಿಗೆ ಪ್ರಮೋದ್ ಎಂಬಾತ ಮರದ ಕೋಲಿನಿಂದ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಜಮೀನಿನ ವಿಚಾರವಾಗಿ ಆರೋಪಿ ಪ್ರಮೋದ್ ಎಂಬಾತ ವೆಂಕಪ್ಪ ಗೌಡರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮರದ ದೊಣ್ಣೆಯಿಂದ ಹೊಡೆದಿದ್ದು, ಗಂಭೀರ ಗಾಯಗೊಂಡ ವೆಂಕಪ್ಪ ಗೌಡರ ಬೊಬ್ಬೆ ಕೇಳಿ ಸ್ಥಳೀಯರು ಓಡಿಬಂದು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆರೋಪಿ ಈ ಹಿಂದೆ ವೆಂಕಪ್ಪ ಗೌಡ ಹಾಗೂ

ಬೆಳ್ತಂಗಡಿ: ದೊಣ್ಣೆಯಿಂದ ಹೊಡೆದು ಕೊಲೆಯತ್ನ..! ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹವು ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ವಾಮಂಜೂರಿನ ಯೋಗಿಶ್ ಯಾನೆ ಮುನ್ನ ಎಂದು ಗುರುತಿಸಲಾಗಿದೆ. ಈತ ಬುಧವಾರ ಸಂಜೆಯಿಂದ ಕಾಣೆಯಾಗಿದ್ದು, ಗುರುವಾರದಂದು ಬೆಳಗ್ಗೆ ಗುರುಪುರ ನದಿ ಸೇತುವೆಯ ಬಳಿ ಅವರ ಚಪ್ಪಲಿ ಹಾಗೂ ಬೈಕ್ ಪತ್ತೆಯಾಗಿದ್ದು, ಇದರ ಹಿನ್ನೆಲೆ ಅಗ್ನಿಶಾಮಕ ದಳ ಹಾಗು ಬಜ್ಪೆ ಪೊಲೀಸರ ಸ್ಥಳೀಯರ ಸಹಕಾರದಿಂದ ಹುಡುಕಾಟ ನಡೆಸಿದ್ದು, ಎರಡು ದಿನಗಳ

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top