ನೆಲ್ಯಾಡಿ: ವಿಷ ಪದಾರ್ಥ ಸೇವಿಸಿ ಪತಿ-ಪತ್ನಿ ಅಸ್ವಸ್ಥ; ಪತ್ನಿ ಮೃತ್ಯು ➤ ವಿಷಯ ತಿಳಿಯುತ್ತಲೇ ಪತಿ ಆಸ್ಪತ್ರೆಯಿಂದ ಎಸ್ಕೇಪ್..!
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 13. ಕೆಲ ದಿನಗಳ ಹಿಂದೆ ವಿಷ ಸೇವನೆ ಮಾಡಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಇಚ್ಲಂಪಾಡಿಯ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಇಚ್ಚಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ (36) ಎಂದು ಗುರುತಿಸಲಾಗಿದೆ. ಗೋಳಿಯಡ್ಕದ ಬೀಜದ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸೌಮ್ಯ, ನ. 09ರಂದು ಸಂಜೆ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಇದರ ಬೆನ್ನಲ್ಲೇ ಆಕೆಯ ಪತಿ ವೆಂಕಟೇಶ್ […]







