ಕರ್ನಾಟಕ

ಕಾಲೇಜಿನಲ್ಲೇ ಹೃದಯಾಘಾತ- ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ನ. 02. ವಿದ್ಯಾರ್ಥಿಯೋರ್ವ ಕಾಲೇಜಿನಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಕಾಶ್(17) ಎಂದು ಗುರುತಿಸಲಾಗಿದೆ. ಈತ ಕಾಲೇಜಿನಲ್ಲೇ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಮಾಡಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಎಂದಿನಂತೆ ಕಾಲೇಜಿಗೆ ಬಂದಿದ್ದ ಈತ ಆಯಾಸವೆಂದು ಕುಳಿತುಕೊಂಡಿದ್ದ. ತಕ್ಷಣ ಶಿಕ್ಷಕರು ಮನೆಯವರಿಗೆ ತಿಳಿಸಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಆದರೆ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಆತ […]

ಕಾಲೇಜಿನಲ್ಲೇ ಹೃದಯಾಘಾತ- ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೆಂಗಿನಮರದಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 02. ತೆಂಗಿನಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಳ್ಳಿ ಗ್ರಾಮದ ಮಹಾಕಾಳಿ ಮಠದಲ್ಲಿ ನಡೆದಿದೆ. ಮೃತರನ್ನು ಮಹಾಕಾಳಿ ಮಠ ನಿವಾಸಿ ನಿತ್ಯಾನಂದ ಪ್ರಭು (41) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ತೆಂಗಿನ ಮರಕ್ಕೆ ತೆಂಗಿನಕಾಯಿ ಕೊಯ್ಯಲೆಂದು ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ತೆಂಗಿನಮರದಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಾಣಿ ಕಾಲೇಜು ವಿದ್ಯಾರ್ಥಿಯ ಡಿಬಾರ್ ಪ್ರಕರಣ ➤ ಸಂಘಟನೆ ಹೆಸರು ದುರ್ಬಳಕೆ ಮಾಡಿದ ಪ್ರಾಂಶುಪಾಲರ ನಡೆಗೆ ಪಾಪ್ಯುಲರ್ ಫ್ರಂಟ್ ಖಂಡನೆ ➤➤ ದೂರು ದಾಖಲಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 02. ಇಲ್ಲಿನ ವಾಣಿ ಕಾಲೇಜಿನ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ವಿಚಾರಕ್ಕೆ ಸಂಬಂಧಿಸಿ ಕಾಲೇಜಿನ ಪ್ರಾಂಶುಪಾಲರು ಮಾಧ್ಯಮಕ್ಕೆ ಮಾಹಿತಿ ನೀಡುವ ವೇಳೆ ಪಿಎಫ್ಐ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿ ಪೂರ್ವಾಗ್ರಹಪೀಡಿತರಾಗಿ ವರ್ತಿಸಿರುವುದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಮುಸ್ತಫಾ ಜಿ.ಕೆ ತೀವ್ರವಾಗಿ ಖಂಡಿಸಿದ್ದಾರೆ. ಈ ಮಧ್ಯೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಎಂಬ ವಿದ್ಯಾರ್ಥಿ ಸಂಘಟನೆಯಲ್ಲಿ ಸದಸ್ಯತ್ವ ಪಡೆದಿದ್ದಾನೆ ಎಂಬ ಕಾರಣಕ್ಕಾಗಿ ವಿದ್ಯಾರ್ಥಿಯನ್ನು ಡಿಬಾರ್ ಮಾಡಿರುವುದು ಸಂವಿಧಾನ ವಿರೋಧಿ.

ವಾಣಿ ಕಾಲೇಜು ವಿದ್ಯಾರ್ಥಿಯ ಡಿಬಾರ್ ಪ್ರಕರಣ ➤ ಸಂಘಟನೆ ಹೆಸರು ದುರ್ಬಳಕೆ ಮಾಡಿದ ಪ್ರಾಂಶುಪಾಲರ ನಡೆಗೆ ಪಾಪ್ಯುಲರ್ ಫ್ರಂಟ್ ಖಂಡನೆ ➤➤ ದೂರು ದಾಖಲಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ

ಎಸ್ ವೈಎಸ್ ಮಾಣಿ ವತಿಯಿಂದ ಬೃಹತ್ ಮಾದರಿ ಮೌಲಿದ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಾಣಿ, ನ. 02. ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ.) ಎಸ್‌ವೈಎಸ್ ಮಾಣಿ ಸೆಂಟರ್ ವತಿಯಿಂದ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ.ಅ.) ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಬೃಹತ್ ಮಾದರಿ ಮೌಲಿದ್ ಮಜ್ಲಿಸ್ ಸೋಮವಾರದಂದು ಮಾಣಿ ದಾರುಲ್ ಇರ್ಶಾದ್ ಸಮುಚ್ಚಯದ ರಹ್ಮಾನಿಯಾ ಜುಮಾ ಮಸ್ಜಿದ್ ನಲ್ಲಿ ನಡೆಯಿತು. ಅಸ್ಸಯ್ಯಿದ್ ಹಂಝ ಹಾದಿ ತಂಙಲ್ ಪಾಟ್ರಕೋಡಿರವರು ದುಆಃ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಖಾಝಿ

ಎಸ್ ವೈಎಸ್ ಮಾಣಿ ವತಿಯಿಂದ ಬೃಹತ್ ಮಾದರಿ ಮೌಲಿದ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ 12 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 02. ಮನೆಯಲ್ಲಿ ಯಾರೂ ಇಲ್ಲದ್ದ ಸಂದರ್ಭವನ್ನು ಖಚಿತಪಡಿಸಿಕೊಂಡ ಕಳ್ಳರ ತಂಡವೊಂದು ಹಗಲು ಹೊತ್ತಿನಲ್ಲೇ ಮಹಮ್ಮದ್ ಎಂಬವರ ಮನೆಯೊಂದಕ್ಕೆ ನುಗ್ಗಿ ಲಾಕರ್ ಒಡೆದು ಅಪಾರ ಪ್ರಮಾಣದ ಚಿನ್ನಾಭರಣ ಕಳವುಗೈದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಎಂಬಲ್ಲಿ ನಡೆದಿದೆ. ಭಾನುವಾರದಂದು ಮನೆಯವರೆಲ್ಲ ನಿಶ್ಚಿತಾರ್ಥಕ್ಕೆ ತೆರಳಿದ್ದು, ಮಹಮ್ಮದ್ ರವರು ಸಮೀಪದ ಅಡಿಕೆ ತೋಟಕ್ಕೆ ಹೋಗಿದ್ದರು. ನಿಶ್ಚಿತಾರ್ಥ ಮುಗಿಸಿಕೊಂಡು ಪತ್ನಿ ಸಂಜೆ ಮನೆಗೆ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. 5,200ರೂ ನಗದು,

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ 12 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಟುಂಬದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಪ್ರೀತಿ ವಾತ್ಸಲ್ಯದಿಂದ ಇರಲು ಈ ನಿಯಮವನ್ನು ಅನುಸರಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯ ಗೋಡೆಯ ಮೇಲೆ ಇಡುವಂತಹ ಕೆಲವು ಫೋಟೋಗಳು ಮನೆಯ ಸದಸ್ಯರ ಮೇಲೆ ಸಕಾರಾತ್ಮಕ ಹಾಗೂ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ಹೇಳಲಾಗುತ್ತದೆ, ಕೆಲವು ಫೋಟೋಗಳು ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುತ್ತವೆ

ಕುಟುಂಬದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಪ್ರೀತಿ ವಾತ್ಸಲ್ಯದಿಂದ ಇರಲು ಈ ನಿಯಮವನ್ನು ಅನುಸರಿಸಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ ➤ ಆರೋಗ್ಯ ಸಚಿವ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ. 02. ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳಲ್ಲಿ ಮಾರ್ಗಸೂಚಿ ತರುವುದರ ಕುರಿತು ಖ್ಯಾತ ಹೃದಯ ತಜ್ಞರೊಂದಿಗೆ ಚರ್ಚಿಸಿ ಕೂಡಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಹೃದಯಾಘಾತದಿಂದ ನಟ ಪುನೀತ್ ರಾಜಕುಮಾರ್ ಅವರು ಮೃತಪಟ್ಟ ಹಿನ್ನೆಲೆ, ಜಿಮ್‌ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ಆರೋಗ್ಯದ ಹಿತದೃಷ್ಟಿಯಿಂದ ವ್ಯಾಯಾಮ ಮಾಡಬೇಕಾಗುತ್ತದೆ. ಜಿಮ್‌ನಿಂದ ಆರೋಗ್ಯಕ್ಕೆ ಸಮಸ್ಯೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಬೇಡ. ಜಿಮ್,

ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ ➤ ಆರೋಗ್ಯ ಸಚಿವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುನೀತ್ ರಾಜ್ ಕುಮಾರ್ ಗೆ ಅವಮಾನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ನ. 02. ಪ್ರತಿಭಾನ್ವಿತ ನಟ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ನಾಲ್ಕು ದಿನಗಳಾಗಿದ್ದರೂ, ಅವರು ನಮ್ಮ ಜೊತೆಗೆ ಇಲ್ಲ ಎಂಬುದನ್ನು ನಂಬುವುದೂ ಕೂಡ ಅಸಾಧ್ಯವೆನಿಸುತ್ತಿರುವ ಈ ಸಂದರ್ಭದಲ್ಲಿ ಕಿಡಿಗೇಡಿಯೋರ್ವ ಅಪ್ಪು ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಿತ್ವಿಕ್ ಎಂದು ಗುರುತಿಸಲಾಗಿದೆ. ಡಾ. ರಾಜ್ ಕುಮಾರ್ ಮೃತಪಟ್ಟ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳು ಮತ್ತೆ ನಡೆಯಬಾರದು, ಅಭಿಮಾನಿಗಳು ಮದ್ಯ ಸೇವಿಸಿ ಅಚಾತುರ್ಯಗಳನ್ನು ಮಾಡಬಹುದೆಂಬ ಮುನ್ನೆಚ್ಚರಿಕೆಯಿಂದ

ಪುನೀತ್ ರಾಜ್ ಕುಮಾರ್ ಗೆ ಅವಮಾನ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನೆಲಕ್ಕೆ ಬಿದ್ದ ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು..! ➤ ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 02. ಕೋವಿಯೊಂದು ನೆಲಕ್ಕೆ ಬಿದ್ದ ಸಂದರ್ಭ ಆಕಸ್ಮತ್ತಾಗಿ ಗುಂಡು ಸಿಡಿದು ವ್ಯಕ್ತಿಯೋರ್ವರ ಕಾಲಿಗೆ ತಾಗಿರುವ ಘಟನೆ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಮಾರಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ಮಾಯಿಲೋಡಿಯ ವಿಶ್ವನಾಥ ನಾಯ್ಕ್ ಎಂಬವರು ತನ್ನ ಜಮೀನಿಗೆ ಬರುವ ಕಾಡುಪ್ರಾಣಿಗಳನ್ನು ಓಡಿಸಲೆಂದು ಪರವಾನಿಗೆ ಹೊಂದಿರುವ ಕೋವಿಯನ್ನು ಉಪಯೋಗಿಸುವ ಸಂದರ್ಭದಲ್ಲಿ ಅಜಾಗರೂಕತೆ ತೋರಿದ ಪರಿಣಾಮ ಕೋವಿ ನೆಲಕ್ಕೆ ಬಿದ್ದು ಆಕಸ್ಮಿಕವಾಗಿ ಗುಂಡು ಸಿಡಿದು ಪಕ್ಕದಲ್ಲಿ ನಿಂತಿದ್ದ ಕುಮಾರಯ್ಯ ನಾಯ್ಕ

ಬೆಳ್ತಂಗಡಿ: ನೆಲಕ್ಕೆ ಬಿದ್ದ ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು..! ➤ ವ್ಯಕ್ತಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ ವೈಎಸ್ ಕಡಬ ಸೆಂಟರ್ ಪುನರ್ ರಚನೆ ➤ ಅಧ್ಯಕ್ಷರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಕಾರ್ಯದರ್ಶಿಯಾಗಿ ಬಶೀರ್ ಚೆನ್ನಾರ್ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ. 02. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ರಿ.) ಎಸ್‌ವೈಎಸ್ ಕಡಬ ಸೆಂಟರ್‌ ಇದರ ಪುನರ್ ರಚನಾ ಸಭೆಯು ಸೋಮವಾರದಂದು ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯಿತು. ಸಯ್ಯಿದ್ ಸಾದಾತ್ ತಂಙಳ್ ಕರ್ವೇಲು ದುಆ ನೆರೆವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸೆಂಟರ್ ಅಧ್ಯಕ್ಷರಾದ ಉಮರ್ ಮುಸ್ಲಿಯಾರ್ ಮರ್ಧಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾದ್ಯಕ್ಷರಾದ ಅಬೂಬಕ್ಕರ್ ಸಅದಿ ಮಜೂರ್ ಉದ್ಘಾಟಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಚೆನ್ನಾರ್ ರವರು ವರದಿ ವಾಚಿಸಿದರು. ಕೋಶಾಧಿಕಾರಿ

ಎಸ್ ವೈಎಸ್ ಕಡಬ ಸೆಂಟರ್ ಪುನರ್ ರಚನೆ ➤ ಅಧ್ಯಕ್ಷರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಕಾರ್ಯದರ್ಶಿಯಾಗಿ ಬಶೀರ್ ಚೆನ್ನಾರ್ ಪುನರಾಯ್ಕೆ Read More »

ಕರಾವಳಿ, ಕರ್ನಾಟಕ
Scroll to Top