ಕರ್ನಾಟಕ

ವೀಕೆಂಡ್ ಕರ್ಫ್ಯೂ ವೇಳೆ ವ್ಯಾಪಾರ ನಡೆಸಿದರೆ ಕಟ್ಟುನಿಟ್ಟಿನ ಕ್ರಮ ➤ ಪುತ್ತೂರು ಸಹಾಯಕ ಆಯುಕ್ತರ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.03. ವೀಕೆಂಡ್ ಕರ್ಫ್ಯೂ ವೇಳೆ ಅಂಗಡಿ ಮುಂಗಟ್ಟು ತೆರೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮಿಷನರ್ ಅವರು ಉಪ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂನಿಂದ ವ್ಯಾಪಾರ ವ್ಯವಹಾರಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವುದರಿಂದ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂವನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ಪುತ್ತೂರು ವರ್ತಕರ ಸಂಘ ಸೇರಿದಂತೆ ಹಲವು ಸಂಘಟನೆಯವರು ಜಿಲ್ಲಾಡಳಿತದ ಆದೇಶಕ್ಕೆ ಸೆಡ್ಡು […]

ವೀಕೆಂಡ್ ಕರ್ಫ್ಯೂ ವೇಳೆ ವ್ಯಾಪಾರ ನಡೆಸಿದರೆ ಕಟ್ಟುನಿಟ್ಟಿನ ಕ್ರಮ ➤ ಪುತ್ತೂರು ಸಹಾಯಕ ಆಯುಕ್ತರ ಖಡಕ್ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಾತ್ರಿಯಾದರೂ ಸಿಗದ ನೀರುಪಾಲಾದ ಯುವಕನ ಸುಳಿವು ➤ ಶೋಧ ಕಾರ್ಯ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ನದಿ ನೀರಿನ ಸೆಳೆತಕ್ಕೆ ನೀರುಪಾಲಾದ ಯುವಕನ ಬಗ್ಗೆ ರಾತ್ರಿಯಾದರೂ ಸುಳಿವು ದೊರೆತಿಲ್ಲ. ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.  

ಕಡಬ: ರಾತ್ರಿಯಾದರೂ ಸಿಗದ ನೀರುಪಾಲಾದ ಯುವಕನ ಸುಳಿವು ➤ ಶೋಧ ಕಾರ್ಯ ಸ್ಥಗಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೆಡಿಎಸ್ ಗೆ ಬಿಗ್ ಶಾಕ್ ➤ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟಪಡಿಸಿದ ಸಿದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇತ್ತೀಚೆಗೆ ಕಾಗ್ರೆಸ್ ಸೇರುವ ಬಗ್ಗೆ ಹೇಳಿಕೆ ನೀಡಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ’ ಎಂದವರು ಪ್ರತಿಕ್ರಿಯಿಸಿದ್ದಾರೆ.    

ಜೆಡಿಎಸ್ ಗೆ ಬಿಗ್ ಶಾಕ್ ➤ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟಪಡಿಸಿದ ಸಿದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ(ಸೆ.01) ಸಿಎಂ ಬಸವರಾಜ ಬೊಮ್ಮಾಯಿ ಸವಣೂರಿಗೆ ಭೇಟಿ ➤ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಹಾವೇರಿ, ಆ.31. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಸೆ.1) ಶಿಗ್ಗಾವಿ ಹಾಗೂ ಸವಣೂರು ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಪ್ರವಾಸಿ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಶಂಕು‌ಸ್ಥಾಪನೆ ನೆರವೇರಿಸಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಶಿಗ್ಗಾವಿ ಏತ ನೀರಾವರಿ ಯೋಜನೆಯಡಿ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಅಟಲ್‌ ಬಿಹಾರಿ

ನಾಳೆ(ಸೆ.01) ಸಿಎಂ ಬಸವರಾಜ ಬೊಮ್ಮಾಯಿ ಸವಣೂರಿಗೆ ಭೇಟಿ ➤ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ Read More »

ಕರ್ನಾಟಕ

ಶಿರಾಡಿ ಘಾಟ್ ನಲ್ಲಿ ಮತ್ತೆ ಸಂಚಾರ ಬಂದ್ ➤ ಹಾಸನ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ಮತ್ತೆ ನಿರ್ಬಂಧ ವಿಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಕಲೇಶಪುರ ಸಮೀಪದ ದೋಣಿಗಲ್ ಬಳಿ ತಿಂಗಳ ಹಿಂದೆ ರಸ್ತೆಯ ಒಂದು ಭಾಗದಲ್ಲಿ ಭೂ ಕುಸಿತವುಂಟಾಗಿದ್ದರಿಂದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆ ದುರಸ್ತಿಯಾಗಿದ್ದರಿಂದ 20 ಟನ್ ಸರಕು ಸಾಗಾಣೆಯ ಲಾರಿಗಳು, ಟ್ಯಾಂಕರ್‌ಗಳು ಸೇರಿದಂತೆ ಎಲ್ಲ ವಾಹನಗಳ ಸಂಚಾರಕ್ಕೆ ಆಗಸ್ಟ್ 16 ರಿಂದ ಅನುಮತಿ ನೀಡಲಾಗಿತ್ತು. ಆದರೆ ಈಗ

ಶಿರಾಡಿ ಘಾಟ್ ನಲ್ಲಿ ಮತ್ತೆ ಸಂಚಾರ ಬಂದ್ ➤ ಹಾಸನ ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ➤ ಸೋಮವಾರದಿಂದಲೇ ಶಾಲೆ ತೆರೆಯಲು ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ರಾಜ್ಯದಲ್ಲಿ 6ರ ಮೇಲಿನ ತರಗತಿಯನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಯನ್ನು ತೆರೆಯಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ➤ ಸೋಮವಾರದಿಂದಲೇ ಶಾಲೆ ತೆರೆಯಲು ಗ್ರೀನ್ ಸಿಗ್ನಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರಿನಲ್ಲಿ ಕೆಎಸ್ಸಾರ್ಟಿಸಿ ಬಸ್ – ಇನ್ನೋವಾ ನಡುವೆ ಢಿಕ್ಕಿ ➤ ಬಂಟ್ವಾಳದ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮೈಸೂರು, ಆ.24. ಸರಕಾರಿ ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬಂಟ್ವಾಳ ತಾಲೂಕಿನ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರದಂದು ಪಿರಿಯಾಪಟ್ಟಣದಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಬಂಟ್ವಾಳ ಕೆಳಗಿನಪೇಟೆಯ ನಿವಾಸಿ ಶಂಸುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂದು ಗುರುತಿಸಲಾಗಿದೆ. ಗಾಯಳುಗಳು ತೆರಳುತ್ತಿದ್ದ ಇನ್ನೋವ ಕಾರು ಹಾಗೂ ಸರಕಾರಿ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ.      

ಮೈಸೂರಿನಲ್ಲಿ ಕೆಎಸ್ಸಾರ್ಟಿಸಿ ಬಸ್ – ಇನ್ನೋವಾ ನಡುವೆ ಢಿಕ್ಕಿ ➤ ಬಂಟ್ವಾಳದ ಇಬ್ಬರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

24 ಗಂಟೆಗಳಲ್ಲಿ 134 ಕಿಮೀ ಮ್ಯಾರಥಾನ್ ಓಡಿದ ಕಡಬದ ಹರೀಶ್ ಕರ್ಕೇರ ➤ ದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಓಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ಏಜೀಸ್ ಫೆಡರಲ್ ಲೈಫ್ ಇನ್ಸೂರೆನ್ಸ್ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 24 ಗಂಟೆಗಳ ಸ್ಟೇಡಿಯಂ ಓಟವನ್ನು ಪೂರ್ತಿಗೊಳಿಸಿ ಕಡಬದ ಹರೀಶ್ ಕರ್ಕೇರ ಅವರು ನವದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಮ್ಯಾರಥಾನ್ ಓಟಕ್ಕೆ ಆಯ್ಕೆಯಾಗಿದ್ದಾರೆ. ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಮುಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ – ಮೋಹಿನಿ ದಂಪತಿಯ ಪುತ್ರನಾಗಿರುವ ಹರೀಶ್ ಕರ್ಕೇರ ಅವರು 24 ಗಂಟೆಗಳಲ್ಲಿ 134 ಕಿಲೋಮೀಟರ್ ಓಟವನ್ನು ಪೂರ್ಣಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರು ಬೆಂಗಳೂರಿನ

24 ಗಂಟೆಗಳಲ್ಲಿ 134 ಕಿಮೀ ಮ್ಯಾರಥಾನ್ ಓಡಿದ ಕಡಬದ ಹರೀಶ್ ಕರ್ಕೇರ ➤ ದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಓಟಕ್ಕೆ ಆಯ್ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಮಹಿಳೆಯರಿಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.21. ಬೀಡಿ ಬ್ರ್ಯಾಂಚ್ ಗೆ ತೆರಳುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜೆಪ್ಪು ಮಹಾಕಾಳಿಪಡ್ಪು ದೇವಸ್ಥಾನದ ಬಳಿ ಶನಿವಾರದಂದು ನಡೆದಿದೆ. ಮೃತರನ್ನು ಜೆಪ್ಪು ನಿವಾಸಿಗಳಾದ ವಸಂತಿ (50) ಹಾಗೂ ಪ್ರೇಮಾ (48) ಎಂದು ಗುರುತಿಸಲಾಗಿದೆ. ಮಹಾಕಾಳಿಪಡ್ಪು ಎಂಬಲ್ಲಿರುವ ಬೀಡಿ ತೆಗೆದುಕೊಂಡು ತೆರಳುತ್ತಿದ್ದ ವೇಳೆ ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಮಹಿಳೆಯರಿಬ್ಬರ ದುರ್ಮರಣ Read More »

ಕರ್ನಾಟಕ

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ.19. ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗ್ಯಾಂಗ್ ವೊಂದನ್ನು ಜನನಬಂಧಿಸಿರುವ ಚಿಕ್ಕಮಗಳೂರು ಪೊಲೀಸರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವರ್ಗದವರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ ತಂಡ ಆ ಬಳಿಕ ಮನೆಗೆ ಕರೆಸಿ ಮೋಸದ ಬಲೆಗೆ ಬೀಳಿಸಿ ನಗ್ನ ವಿಡಿಯೋ ಮಾಡಿಕೊಂಡು ಯಾಮಾರಿಸುತ್ತಿದ್ದರು. ತಾಯಿ, ಮಗಳು ಸೇರಿದಂತೆ 6 ಮಹಿಳೆಯರು ಹಾಗೂ ಏಳು ಪುರುಷರು ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಂದ ಮೋಸ

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top