ಕರ್ನಾಟಕ

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ. ➤ ಇಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.02. ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂಲತಃ ಕಡಬ ನಿವಾಸಿ ಪ್ರಸ್ತುತ ಉಪ್ಪಿನಂಗಡಿಯಲ್ಲಿ ವಾಸವಿರುವ ಸೈಮನ್ ಸಿ.ಎ. ಸೋಮವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕಡಬದ ಹಳೇಸ್ಟೇಷನ್ ನಿವಾಸಿಯಾಗಿದ್ದ ಇವರು ಬಳಿಕ ಉಪ್ಪಿನಂಗಡಿಯ 34 ನೇ ನೆಕ್ಕಿಲಾಡಿಯಲ್ಲಿ ವಾಸ ಮಾಡುತ್ತಿದ್ದಾರೆ. ಉಪ್ಪಿನಂಗಡಿಯಲ್ಲಿ ತನ್ನ ವ್ಯಾಸಂಗವನ್ನು ಆರಂಭಿಸಿದ ಇವರು, ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಪೂರೈಸಿ ಮಂಗಳೂರಿನ ಎಸ್ಡಿಎಂ ಕಾಲೇಜಿನಲ್ಲಿ […]

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ. ➤ ಇಂದು ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತನ್ನ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಾರ ಪೂರ್ತಿಯಾಗುವುದರ ಮೊದಲೇ ಬಿಜೆಪಿಯ ಬ್ಯಾನರ್‌ಗಳಿಂದಲೂ ಅವರ ಫೋಟೊ ತೆರವಾಗಿರುವುದು ಪಕ್ಷದ ಕಾರ್ಯಕರ್ತರನ್ನು ಆಕ್ರೋಶಭರಿತರನ್ನಾಗಿಸಿದೆ. ಬೆಂಗಳೂರಿನ ಯಶವಂತಪುರ ಮಂಡಲ ಮಹಿಳಾ ಮೋರ್ಚಾ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಶನಿವಾರದಂದು ಪ್ರತ್ಯೇಕವಾಗಿ ನಡೆದಿದ್ದು, ಎರಡೂ ಸಭೆಗಳ ವೇದಿಕೆಯಲ್ಲಿ ಅಳವಡಿಸಿದ್ದ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ನಾಪತ್ತೆಯಾಗಿತ್ತು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಆದೇಶದಂತೆ ವಿಮಾನ/ರೈಲು/ರಸ್ತೆ (ಬಸ್ ಮತ್ತಿತರ ಖಾಸಗಿ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಕೇರಳ ಮತ್ತು

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜು. 30. ರೈಲ್ವೆ ಹಳಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ 11 ಗಂಟೆಯವರೆಗೆ ಮನೆಗೆ ಬಾರದಿರುವ ಹಿನ್ನೆಲೆ ಮನೆಯವರು ಆತನಿಗಾಗಿ ಹುಡುಕಾಟ ಆರಂಭಿಸಿದ್ದರು. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಕುರಿತು

ಬಂಟ್ವಾಳ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಹೆಸರು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆ ಕಸರತ್ತು ನಡೆದಿದ್ದು, ಬಸವರಾಜ್ ಬೊಮ್ಮಾಯಿಯವರ ಹೆಸರು ಅಂತಿಮವಾಗಿರುವುದಾಗಿ ಪ್ರಮುಖ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.        

BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Nalin Kumar kateel

Breaking: ನೂತನ ಮುಖ್ಯಮಂತ್ರಿಯಾಗಿ ನಳಿನ್ ಕುಮಾರ್ ಕಟೀಲ್..??

(ನ್ಯೂಸ್ ಕಡಬ) newskadaba.com ನವದೆಹಲಿ, ಜು.26. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಆ ಸ್ಥಾನಕ್ಕೆ ಕರಾವಳಿಯ ಪ್ರಭಾವಿ ಮುಖಂಡರ ಹೆಸರು ಕೇಳಿ ಬರುತ್ತಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿ ಬಂದಿದೆ. ಯಡಿಯೂರಪ್ಪ ರವರು ರಾಜೀನಾಮೆ ನೀಡುವ ಮಾಹಿತಿಯಿದ್ದ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರದಂದು ದಿಢೀರ್ ಆಗಿ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ

Breaking: ನೂತನ ಮುಖ್ಯಮಂತ್ರಿಯಾಗಿ ನಳಿನ್ ಕುಮಾರ್ ಕಟೀಲ್..?? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು‌‌..? ➤ ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ರಾಜಕೀಯ ಏಳು ಬೀಳುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ಈ ಬಗ್ಗೆ ನಾನು ಯಾರ ಹೆಸರನ್ನು ಕೂಡಾ ಸೂಚಿಸಿಲ್ಲ. ಮುಂದಿನ ಮುಖ್ಯಮಂತ್ರಿಯ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು‌‌..? ➤ ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ➤ ಹಲವು ದಿನಗಳ ರಾಜಕೀಯ ಪ್ರಹಸನಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ರಾಜಕೀಯ ಏಳು ಬೀಳುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು – ಬೀಳುಗಳ ಜೊತೆಗೆ ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿ ಭಾವುಕರಾದರು. ಅಪರಾಹ್ನ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.      

ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ➤ ಹಲವು ದಿನಗಳ ರಾಜಕೀಯ ಪ್ರಹಸನಕ್ಕೆ ತೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡದ ಖ್ಯಾತ ಹಿರಿಯ ನಟಿ ಜಯಂತಿ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ(76) ಅವರು ರವಿವಾರ ರಾತ್ರಿ ನಿಧನರಾಗಿದ್ದಾರೆ. 1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ನಟಿ ಜಯಂತಿ ಅವರು ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್ ಮುಂತಾದ ನಟರ ಜೊತೆ ಅಭಿನಯಿಸಿದ್ದಾರೆ. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು. ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ಅಭಿನಯ ಶಾರದೆ ಎಂಬ ಬಿರುದಿಗೆ ಪಾತ್ರರಾಗಿದ್ದರು.      

ಕನ್ನಡದ ಖ್ಯಾತ ಹಿರಿಯ ನಟಿ ಜಯಂತಿ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top