ಕರ್ನಾಟಕ

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

(ನ್ಯೂಸ್ ಕಡಬ) Newskadaba.com ಮೂಡುಬಿದಿರೆ, ಜು. 17. ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಪ್ರಸಿದ್ದಿ ಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ರವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಮುಖಾಂತರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಇದೀಗ ವೈರಲ್ ಆಗಿದೆ. ದೂರವಾಣಿ ಕರೆ ಮೂಲಕ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. […]

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ‌ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) Newskadaba.com ಉಡುಪಿ, ಜು. 17. ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲೇ ಸುಪ್ರಸಿದ್ಧವಾದ ನಮ್ಮ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಉಂಟಾದ ಒತ್ತಡದಿಂದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲಿ ಪ್ರಮುಖ ಆಕ್ಷೇಪವೇನೆಂದರೆ ಡಾ. ಸುಧಾಕರ್ ರವರು ಪರಿಪೂರ್ಣವಾಗಿ

ಖಾಸಗಿ‌ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ➤ ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಕೆಎಸ್ಸಾರ್ಟಿಸಿ ಬಸ್ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ನೆಲ್ಯಾಡಿ ಹೊರಠಾಣಾ ಪೊಲೀಸರು ಗುಂಡ್ಯದಲ್ಲಿ ವಶಪಡಿಸಿಕೊಂಡಿದ್ದಾರೆ. ಸಕಲೇಶಪುರದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅಪರಿಚಿತ ವಾಹನವನ್ನು ಬೆನ್ನಟ್ಟಿದ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಕೆಎಸ್ಸಾರ್ಟಿಸಿ ಬಸ್ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಅಪರಿಚಿತ ವಾಹನವು ಲಾವತ್ತಡ್ಕ ಸಮೀಪ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯ ಪರಿಚಯ ಇನ್ನಷ್ಟೇ ದೊರೆಯಬೇಕಿದೆ. ಗಂಭೀರ ಗಾಯಗೊಂಡಿರುವ ಸಕಲೇಶಪುರ ತಾಲೂಕಿನ

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ವಿವಾದಿತ ಫೇಸ್‍ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ, ಶೀಘ್ರದಲ್ಲೇ ಹರೀಶ್ ಬಂಗೇರ ರವರು ತಾಯ್ನಾಡಿಗೆ ಮರಳಲಿದ್ದಾರೆ ಎಂದಿದ್ದಾರೆ. ಇವರ ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರು ಅಷೋಷಿಯೇಷನ್ ನ

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ಮೀನುಗಾರನೋರ್ವ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಅಳಿವೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ತೋಟಬೆಂಗ್ರೆ ನಿವಾಸಿ ಜಯಪುತ್ರನ್ (55) ಎಂದು ಗುರುತಿಸಲಾಗಿದೆ. ಇವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದ ವೇಳೆ ಭಾರೀ ಗಾಳಿ- ಮಳೆ ಸುರಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇವರ ಕಾಲಿಗೆ ಮೀನು ಹಿಡಿಯುವ ಬಲೆ ಸಿಲುಕಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಒಂದೇ ದಿನ ಪತಿ- ಪತ್ನಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಜು. 16. ಪತಿ ಹಾಗೂ ಪತ್ನಿ ಒಂದೇ ದಿನ ಕೊರೋನಾಗೆ ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ. ಇವರಿಬ್ಬರಿಗೂ ಜೂ. 25ರಂದು ಜ್ವರ ಕಾಣಿಸಿಕೊಂಡಿದ್ದು, ಔಷಧಿ ಪಡೆದು ಗುಣಮುಖರಾಗಿದ್ದರು. ನಂತರ ಮತ್ತೆ ಜ್ವರ ಉಲ್ಭಣಿಸಿದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇವರಿಬ್ಬರ ಪೈಕಿ ಪತ್ನಿ ಗುರುವಾರದಂದು ಮಧ್ಯಾಹ್ನ

ನೆಲ್ಯಾಡಿ: ಒಂದೇ ದಿನ ಪತಿ- ಪತ್ನಿ ಕೊರೋನಾಗೆ ಬಲಿ Read More »

ಕರಾವಳಿ, ಕರ್ನಾಟಕ

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬದ ಯುವತಿಯ ದಾಂಪತ್ಯಕ್ಕೆ ಯುವಕನೋರ್ವ ಹುಳಿ ಹಿಂಡಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಇದೀಗ ಯುವತಿಯ ಗಂಡ ವಿಚ್ಚೇದನಕ್ಕೆ ಮುಂದಾದ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯದ ಯುವಕ ವಿಜೇಶ್ ಹಾಗೂ ಕಡಬದ 26 ವರ್ಷದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದು, 2016 ರಲ್ಲಿ ಆಕೆಯನ್ನು ಸುರತ್ಕಲ್ ನ ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದಲ್ಲದೆ, ಆಕೆಯ ನಗ್ನ ಫೋಟೊ ಹಾಗೂ ವೀಡಿಯೋವನ್ನು ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಯುವತಿಗೆ ಎರಡು ತಿಂಗಳ ಹಿಂದೆ ಬೇರೆ

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ ➤ ಸ್ಥಳದಲ್ಲಿ ಗೃಹರಕ್ಷಕ ದಳ ಹಾಗೂ ಪೊಲೀಸರ ಸರ್ಪಗಾವಲು

(ನ್ಯೂಸ್ ಕಡಬ) Newskadaba.com ಸುಬ್ರಹ್ಮಣ್ಯ, ಜು. 14. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡು ಸ್ನಾನಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿ, ತೋಡು, ಹಳ್ಳಗಳು ತುಂಬಿ ಹರಿಯುತ್ತಿವೆ. ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದರಿಂದಾಗಿ, ಸ್ನಾನ ಘಟ್ಟ ಹಾಗೂ ಸೇತುವೆ ಕೆಳ ಭಾಗದ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸಲು

ಸುಬ್ರಹ್ಮಣ್ಯ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ ➤ ಸ್ಥಳದಲ್ಲಿ ಗೃಹರಕ್ಷಕ ದಳ ಹಾಗೂ ಪೊಲೀಸರ ಸರ್ಪಗಾವಲು Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜು.12. ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಸೋಮವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೇಸಿಐ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top