ಕರ್ನಾಟಕ

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಎಂಆರ್​ಪಿಎಲ್​ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆಗಿರುವ ಅನ್ಯಾಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮನೆ-ಮನೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಮನೆಮನೆ ಪ್ರತಿಭಟನೆ ನಡೆಯಿತು.   ತುಳುನಾಡ ಅಭಿವೃದ್ದಿಯಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು. ಸ್ಥಳೀಯರಿಗೆ ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಬೀಗ ಜಡಿಯಿರಿ ಎಂಬ ಫಲಕಗಳೊಂದಿಗೆ ಡಿವೈಎಫ್ಐ, ಎಸ್​ಎಫ್ಐ ಕಾರ್ಯಕರ್ತರು, ಸಿಪಿಎಂ, ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ Read More »

ಕರ್ನಾಟಕ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ಸದ್ಯಕ್ಕೆ 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅತೀ ಶೀಘ್ರದಲ್ಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ  ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಉಚಿತ ದಿನಸಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌ Read More »

ಕರ್ನಾಟಕ

BREAKING: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ..? ➤ ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಹೇಳಿಕೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಕಳೆದ ಹಲವು ಸಮಯಗಳಿಂದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಯು ಮತ್ತೆ ಮುನ್ನೆಲೆಗೆ ಬಂದಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇದುವರೆಗೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಅಲ್ಲಗಳೆಯುತ್ತಿದ್ದ ಯಡಿಯೂರಪ್ಪನವರು ಇಂದು ಮೌನ ಮುರಿದಿದ್ದು, ನನಗೆ ಸಿಎಂ ಸ್ಥಾನ ನೀಡಿರುವುದು ಸಂಘಟನೆ. ಹೈಕಮಾಂಡ್ ಗೆ ನನ್ನ ಬಗ್ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ

BREAKING: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ..? ➤ ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಹೇಳಿಕೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರಿಸರದ ದಿನಾಚರಣೆ ಪ್ರಯುಕ್ತ ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ವತಿಯಿಂದ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಜೂ. 05. ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ “ಉಸಿರಿಗಾಗಿ ಹಸಿರು” ಎಂಬ ಧ್ಯೇಯ ವಾಕ್ಯದೊಂದಿಗೆ ಒಂದು ನೂರಕ್ಕೂ ಮಿಕ್ಕ ವಿವಿಧ ಬಗೆಯ ಸಸಿಗಳನ್ನು ತೆಕ್ಕಾರು ವ್ಯಾಪ್ತಿಯ ಕಾರ್ಯಕರ್ತರ ವಿವಿಧ ಮನೆಗಳಿಗೆ ಇಂದು ಉಚಿತವಾಗಿ ವಿತರಿಸಲಾಯಿತು. ವರ್ಷಂಪ್ರತಿ ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ಇಂತಹ ಸೇವೆಗಳನ್ನು ಮಾಡುತ್ತಿದ್ದು, ತೆಕ್ಕಾರ್ ನ್ನು ಹಚ್ಚ ಹಸಿರಿನ ನಾಡಾಗಿ ಪರಿವರ್ತಿಸುವ ಪಣ ತೊಟ್ಟಿದೆ. ಸ್ವತಃ ಸಂಘಟನಾ ಕಾರ್ಯಕರ್ತರೇ ಮನೆ ಮನೆ ತೆರಳಿ ಗಿಡಗಳನ್ನು

ಪರಿಸರದ ದಿನಾಚರಣೆ ಪ್ರಯುಕ್ತ ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ವತಿಯಿಂದ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ ಸೀನಿಯರ್ ಛೇಂಬರ್ ವತಿಯಿಂದ ಪರಿಸರ ದಿನಾಚರಣೆ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಜೂ. 05. ಪರಿಸರ ಸಂರಕ್ಷಣೆ ನಮ್ಮೆಲ್ಲರ ‌ಹೊಣೆಯಾಗಿದೆ. ಇಂದಿನ ಕಾಲಮಾನದಲ್ಲಿ ಪರಿಸರದ ಉಳಿವಿನ ಕಡೆಗೆ ಹೆಚ್ಚು ‌ಹೆಚ್ಚು ಒತ್ತು ನೀಡಬೇಕು. ಪ್ರತಿ ವರ್ಷ ಪರಿಸರ ದಿನದಂದು ಕೇವಲ ಸಂಕೇತವಾಗಿ ಗಿಡನೆಡುವುದು ಆಗಬಾರದು, ನೆಟ್ಟ ಗಿಡಗಳನ್ನು ಪೋಷಿಸಬೇಕು ಆಗ ಮಾತ್ರ ಆಚರಣೆಗೆ ಮಹತ್ವ ಬರುತ್ತದೆ ಎಂದು ನೆಲ್ಯಾಡಿ ಸೀನಿಯರ್ ಛೇಂಬರ್ ನ ವತಿಯಿಂದ ವಿಶ್ವ ಪರಿಸರದ ದಿನಾಚರಣೆಯ ಪ್ರಯುಕ್ತ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿಯಲ್ಲಿ ಹಣ್ಣುಗಳ ಗಿಡಗಳನ್ನು ನೆಡುವ ಮತ್ತು

ನೆಲ್ಯಾಡಿ ಸೀನಿಯರ್ ಛೇಂಬರ್ ವತಿಯಿಂದ ಪರಿಸರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ಅಪರ ತಹಶೀಲ್ದಾರರಿಗೆ ಮನವಿ

(ನ್ಯೂಸ್ ಕಡಬ) Newskadaba.com ಪುತ್ತೂರು, ಜೂ. 05. ರಾಜ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಂದ ವರ್ಷಾನುವರ್ಷ ಬಹುದೊಡ್ಡ ಸಂಖ್ಯೆಯಲ್ಲಿ ಅರೆವೈದ್ಯಕೀಯ ಪದವಿಯನ್ನು ಪಡೆದು ತೇರ್ಗಡೆಯಾಗುತ್ತಾರೆ. ಆದರೆ, ಸರಕಾರದಿಂದ ಅಂಗೀಕೃತವಾದ ಅಧಿಕೃತ ಅರೆವೈದ್ಯಕೀಯ ಮಂಡಳಿ ಇಲ್ಲದ ಕಾರಣ ವಿದ್ಯಾರ್ಥಿಗಳು ಕೆಲಸಕ್ಕಾಗಿ ಪರದಾಡುವಂತಾಗಿದೆ. ತಕ್ಷಣ ರಾಜ್ಯ ಸರಕಾರವು ವಿದ್ಯಾರ್ಥಿಗಳಿಗೆ, ಪದವೀಧರರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸಬೇಕೆಂದು ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಅಪರ ತಹಶೀಲ್ದಾರರಿಗೆ ಮನವಿ

ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ಅಪರ ತಹಶೀಲ್ದಾರರಿಗೆ ಮನವಿ Read More »

ಕರಾವಳಿ, ಕರ್ನಾಟಕ

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.05:ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕವನ್ನು ವಾಮದಪದವು ಸಮುದಾಯ ಬಂಟ್ವಾಳದ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಮಾಡಲಾಯಿತು.     ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.ಬಂಟ್ವಾಳದಲ್ಲಿ ಕೊರೊನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.  

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!?

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.   ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!? Read More »

ಕರ್ನಾಟಕ

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.05: ಊಟ ಕೇಳಿದ 82 ವರ್ಷದ ತಾಯಿಯನ್ನು ಮಗ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿ ಕ್ರೂರತ್ವ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.   ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿ 82 ವರ್ಷದ ಯಶೋಧ ಹಾಗೂ ಮಗ ದಾಮೋದರನೊಂದಿಗೆ ವಾಸವಾಗಿದ್ದರು. ತಾಯಿ ಹಸಿವಿನಿಂದ ಮಗನಲ್ಲಿ ಊಟ ಕೇಳಿದ್ದಾರೆ. ಈ ವೇಳೆ ಕೋಪಗೊಂಡ ಮಗ ದಾಮೋದರ ಊಟ ನೀಡದೇ, ಎದ್ದು ನಿಲ್ಲಲು ಆಗದ ವೃದ್ಧೆ ತಾಯಿಯನ್ನು ಹೊಡೆದು ಮನೆಯಿಂದ ಹೊರಗೆ ಹಾಕಿದ್ದಾನೆ ಎನ್ನಲಾಗಿದೆ.

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ Read More »

ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.     ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ
Scroll to Top