ಕರ್ನಾಟಕ

ನೆಲ್ಯಾಡಿ: ವಿದ್ಯುತ್ ಆಘಾತಕ್ಕೆ ತಾಯಿ – ಮಗು ಮೃತ್ಯು ➤ ಪಂಪ್ ಆನ್ ಮಾಡಲು ತೆರಳಿದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.30. ವಿದ್ಯುತ್ ಅಘಾತಕ್ಕೆ ಒಳಗಾಗಿ ತಾಯಿ ಹಾಗೂ ಮಗು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರದಂದು ನೆಲ್ಯಾಡಿ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ. ಮೃತರನ್ನು ಪಟ್ರಮೆಯ ಕೋಡಂದೂರು ನಿವಾಸಿ ಹರೀಶ್ ಎಂಬವರ ಪತ್ನಿ ಗೀತಾ(30) ಹಾಗೂ ನಾಲ್ಕೂವರೆ ವರ್ಷದ ಪುತ್ರ ಭವೀಷ್ ಎಂದು ಗುರುತಿಸಲಾಗಿದೆ. ಭಾನುವಾರದಂದು ಗೀತಾರವರು ತನ್ನ ಮಗುವನ್ನು ಹಿಡಿದುಕೊಂಡು ಪಂಪ್ ಸ್ವಿಚ್ ಹಾಕಲು ತೆರಳಿದ್ದ ವೇಳೆ ವಿದ್ಯುತ್ ಅಘಾತಕ್ಕೆ ಒಳಗಾಗಿ ತಾಯಿ ಹಾಗೂ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.      

ನೆಲ್ಯಾಡಿ: ವಿದ್ಯುತ್ ಆಘಾತಕ್ಕೆ ತಾಯಿ – ಮಗು ಮೃತ್ಯು ➤ ಪಂಪ್ ಆನ್ ಮಾಡಲು ತೆರಳಿದ ವೇಳೆ ದುರ್ಘಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಉಡುಪಿ, ಮೇ. 29. ಲಕ್ಷದ್ವೀಪದ ಮೂಲ ನಿವಾಸಿಗಳ ಧಾರ್ಮಿಕ, ಸಾಂಸ್ಕೃತಿಕ, ಭಾಷಿಕ ಅಸ್ಮಿತೆ ಮತ್ತು ನಾಗರಿಕ ಹಕ್ಕುಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ತಾಳುತ್ತಿರುವ ನಡೆಗಳು ಮತ್ತು ಬಿಜೆಪಿ ನಾಯಕ ಮತ್ತು ಮೋದಿಯ ನಿಕಟವರ್ತಿ ಪ್ರಫುಲ್ ಪಟೇಲ್ ರನ್ನು ಅಲ್ಲಿನ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವುದರ ಹಿಂದೆ ಇರುವಂತಹ ದುಷ್ಟ ಉದ್ದೇಶವನ್ನು ಖಂಡಿಸಿ ಮತ್ತು ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಉಡುಪಿ ಜಿಲ್ಲಾದ್ಯಂತ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಬಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಲೋನ್ ಕಂತುಗಳನ್ನು ಕಟ್ಟುವಂತೆ ನಿಮ್ಮನ್ನು ಪೀಡಿಸುತ್ತಿದ್ದಾರಾ..? ➤ ನಿಮಗೆ ಕರೆಮಾಡಿ ಒತ್ತಡ ಹೇರಿದರೆ ಇವರಿಗೆ ದೂರು ನೀಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ಕೊರೋನಾ ನಿಯಂತ್ರಿಸುವ ಸಲುವಾಗಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ನೀಡಿದ್ದಾರೆ.   ಲಾಕ್‍ಡೌನ್ ಕಾರಣದಿಂದಾಗಿ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಪಡೆದಿರುವ ಸಾಲದ ಕಂತು ಮರು ಪಾವತಿಸಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಲ

ಲೋನ್ ಕಂತುಗಳನ್ನು ಕಟ್ಟುವಂತೆ ನಿಮ್ಮನ್ನು ಪೀಡಿಸುತ್ತಿದ್ದಾರಾ..? ➤ ನಿಮಗೆ ಕರೆಮಾಡಿ ಒತ್ತಡ ಹೇರಿದರೆ ಇವರಿಗೆ ದೂರು ನೀಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ‌. 27. ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಬಿದ್ದ ಘಟನೆ ಪಂಪ್‌ವೆಲ್ ಫ್ಲೈಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಪರಿಣಾಮ ದ್ವಿಚಕ್ರ ಸವಾರನಿಗೆ ಗಂಭೀರ ಗಾಯಗಳಾಗಿವೆ. ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದಾನೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ

ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟ ಹಿನ್ನೆಲೆ ➤ ಅತ್ತೆಯ ಮೇಲೆಯೇ ಮೆಣಸಿನಹುಡಿ ಮಿಶ್ರಿತ ಬಿಸಿನೀರು ಎರಚಿದ ಪಾಪಿ ಸೊಸೆ..

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ‌ 27. ತನ್ನ ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟರು ಎಂಬ ನೆಪದಲ್ಲಿ ಕೋಪಗೊಂಡ ಸೊಸೆಯೋರ್ವಳು ತನ್ನ ಅತ್ತೆಯ ಮೇಲೆಯೇ ಮೆಣಸಿನ ಹುಡಿ ಮಿಶ್ರಿತ ಬಿಸಿನೀರನ್ನು ಎರಚಿದ ಅಮಾನವೀಯ ಘಟನೆ ಸುಳ್ಯದ ಪೈಚಾರ್ ಎಂಬಲ್ಲಿ ನಡೆದಿದೆ. ಪೈಚಾರ್ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಮೈಮೂನ ಎಂಬಾಕೆ ಈ ಕೃತ್ಯ ಎಸಗಿದ್ದಾರೆ. ಈಕೆ ಅತ್ತೆಯ ಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇ. 26ರ ಬುಧವಾರದಂದು

ಸುಳ್ಯ: ಮೊಮ್ಮಕ್ಕಳಿಗೆ ಮಾವಿನಕಾಯಿ ಕೊಯ್ದುಕೊಟ್ಟ ಹಿನ್ನೆಲೆ ➤ ಅತ್ತೆಯ ಮೇಲೆಯೇ ಮೆಣಸಿನಹುಡಿ ಮಿಶ್ರಿತ ಬಿಸಿನೀರು ಎರಚಿದ ಪಾಪಿ ಸೊಸೆ.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಸಾಕ್ಷಿಪ್ರಜ್ಞೆ ಎಚ್.ಎಸ್. ದೊರೆಸ್ವಾಮಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

(ನ್ಯೂಸ್ ಕಡಬ) Newskadaba.com ಮೇ. 26. ಹಿರಿಯ ಸ್ವಾತಂತ್ರ್ಯ ಸೇನಾನಿ, ಜನಪರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತನ್ನನ್ನು ಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು, ಆ ನಂತರವೂ ತನ್ನ ಜೀವನದ ಬಹುಭಾಗವನ್ನು ಸಮಸ್ತ ಕನ್ನಡಿಗರ ಹಿತಕ್ಕಾಗಿ ಮುಡಿಪಾಗಿಟ್ಟಿದ್ದರು. ಕ್ವಿಟ್ ಇಂಡಿಯಾ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ ಮೊದಲಾದವುಗಳಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದರು. ಅದೇ ರೀತಿ ಗಾಂಧಿವಾದದಿಂದ ಪ್ರೇರೇಪಿತರಾಗಿದ್ದ ಅವರು, ಬಡವರಿಗಾಗಿ

ಕರ್ನಾಟಕದ ಸಾಕ್ಷಿಪ್ರಜ್ಞೆ ಎಚ್.ಎಸ್. ದೊರೆಸ್ವಾಮಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಅಡಚಣೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮನವಿ

(ನ್ಯೂಸ್ ಕಡಬ) Newskadaba.com ಉಡುಪಿ, ಮೇ. 26. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯುನಿಟ್ ಮತ್ತು ಹೊನ್ನಾಳ ಯುನಿಟ್ ವತಿಯಿಂದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಲಾಕ್‌ಡೌನ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್‌ಲೈನ್ ತರಗತಿಗೆ

ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಅಡಚಣೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮನವಿ Read More »

ಕರ್ನಾಟಕ

ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕರಾಳ ದಿನ ಆಚರಣೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಮೇ. 26. ದೇಶದಾದ್ಯಂತ ರೈತರು ತಮ್ಮ ನ್ಯಾಯಬದ್ಧವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಪ್ರತಿಭಟನೆ ಕಳೆದ ಆರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿದೆ. ಆದರೆ ದೇಶದ ಆಡಳಿತಾರೂಢ ಪಕ್ಷವು ರೈತರ ಬೇಡಿಕೆಯನ್ನು ಈಡೇರಿಸಲು ವಿಫಲವಾಗಿದೆ ಮಾತ್ರವಲ್ಲ ಹಲವಾರು ತಂತ್ರಗಳನ್ನು ಹೂಡಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದ್ದಾರೆ. ಇಂದು ದೇಶದಾದ್ಯಂತ ರೈತರು ನಡೆಸುತ್ತಿರುವ “ಪ್ರಜಾಪ್ರಭುತ್ವದ ಕರಾಳ ದಿನ” ಪ್ರತಿಭಟನೆಯನ್ನು ಬೆಂಬಲಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 20

ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕರಾಳ ದಿನ ಆಚರಣೆ Read More »

ಕರಾವಳಿ, ಕರ್ನಾಟಕ

ತನ್ನ ವಾರ್ಡ್‌ನ ಆಶಾಕಾರ್ಯಕರ್ತರ ಕೆಲಸದ ಬಗ್ಗೆ ಮೆಚ್ಚುಗೆ ➤ ತನಗೆ ಸಿಕ್ಕಿದ ಗೌರವ ಧನವನ್ನು ನೀಡಿದ ಮರ್ಧಾಳ ಗ್ರಾ.ಪಂ. ಸದಸ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಗ್ರಾಮ ಪಂಚಾಯತ್ ಸದಸ್ಯರೋರ್ವರು ತನಗೆ ಸರಕಾರದಿಂದ ಸಿಗುವ ಗೌರವ ಧನವನ್ನು ತನ್ನ ಗ್ರಾಮದ ಆಶಾ ಕಾರ್ಯಕರ್ತರಿಗೆ ನೀಡಿದ್ದಾರೆ. ಮರ್ದಾಳ ಗ್ರಾಮ ಪಂಚಾಯತ್ 102 ನೆಕ್ಕಿಲಾಡಿ ಗ್ರಾಮದ ವಾರ್ಡ್ 1ರ ಸದಸ್ಯ ಶಾಕಿರ್ ಬಡಕ್ಕೋಡಿ ಎಂಬವರಿಗೆ ಪಂಚಾಯತ್ ನಿಂದ ಸಿಗುವ ಗೌರವಧನವನ್ನು ತಮ್ಮ ವಾರ್ಡಿನ ಆಶಾ ಕಾರ್ಯಕರ್ತರಿಗೆ ನೀಡಿ ಅವರ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.    

ತನ್ನ ವಾರ್ಡ್‌ನ ಆಶಾಕಾರ್ಯಕರ್ತರ ಕೆಲಸದ ಬಗ್ಗೆ ಮೆಚ್ಚುಗೆ ➤ ತನಗೆ ಸಿಕ್ಕಿದ ಗೌರವ ಧನವನ್ನು ನೀಡಿದ ಮರ್ಧಾಳ ಗ್ರಾ.ಪಂ. ಸದಸ್ಯ Read More »

ಕರ್ನಾಟಕ
Scroll to Top