ಕರ್ನಾಟಕ

ರಾಜ್ಯದಲ್ಲಿ ಆದೇಶ ಹೊರಡಿಸಲು ಮಾತ್ರ ಸರಕಾರವಿರುವುದಲ್ಲ, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕು ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಸುಳ್ಯ,ಮೇ. 08. ರಾಜ್ಯ ಸರ್ಕಾರವು “ಅಘೋಷಿತ ಲಾಕ್ ಡೌನ್” ಬಿಗಿ ಕ್ರಮಗಳ ಮೂಲಕ ಮೇ. 24ರ ವರೆಗೆ ಕೋವಿಡ್ ಕರ್ಫ್ಯೂವನ್ನು ಮುಂದುವರೆಸಿದೆ. ಬಹುತೇಕ ಈ ಹಿಂದಿನ ನಿಯಮಗಳನ್ನೇ ಮುಂದುವರೆಸಿದ್ದು, ಇಲ್ಲಿ ಯಾವುದೇ ಬಿಗಿಕ್ರಮಗಳು ನಮಗೆ ಕಂಡುಬರುವುದಿಲ್ಲ, ರಾಜ್ಯದಲ್ಲಿ ಪ್ರಸ್ತುತ ಆದೇಶಗಳನ್ನು ಹೊರಡಿಸಲು ಮಾತ್ರ ಸರ್ಕಾರವಿದ್ದು, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಇದು ನಾಮಕಾವಸ್ತೆಯ ಸರ್ಕಾರವೆಂದು ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೋವಿಡ್ 19 ನಿರ್ವಹಣೆಯಲ್ಲಿ ಸರ್ಕಾರದಲ್ಲೇ ಸಮನ್ವಯತೆಯಿಲ್ಲ. ಆರೋಗ್ಯ […]

ರಾಜ್ಯದಲ್ಲಿ ಆದೇಶ ಹೊರಡಿಸಲು ಮಾತ್ರ ಸರಕಾರವಿರುವುದಲ್ಲ, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕು ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಂಟೇನರ್ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.08. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆ ಬದಿಯ ಆಳದ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯು ಪೆರಿಯಶಾಂತಿ ಬಳಿ ರಸ್ತೆ ಅಗಲೀಕರಣಕ್ಕೆಂದು ತೆಗೆಯಲಾಗಿದ್ದ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.    

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಂಟೇನರ್ ➤ ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ

ರಾಜ್ಯಾದ್ಯಂತ ಲಾಕ್‍ಡೌನ್ ಇದ್ದರೂ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಅದೇನೆಂದರೆ…‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ರಾಜ್ಯದಲ್ಲಿ ಮೇ 10 ರಿಂದ 24 ರ ವರೆಗೆ ಸಂಪೂರ್ಣ ಲಾಕ್‍ಡೌನ್ ಘೋಷಿಸಿರುವ ರಾಜ್ಯ ಸರಕಾರವು ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯಾದ್ಯಂತ ಬೆಳಿಗ್ಗೆ 06 ಗಂಟೆಯಿಂದ 10 ರ ವರೆಗೆ ಬಾರ್ & ರೆಸ್ಟೋರೆಂಟ್ ಗಳನ್ನು ತೆರೆಯಲು ಸೂಚಿಸಲಾಗಿದ್ದು, ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅನಗತ್ಯ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪಾರ್ಸೆಲ್ ಗೆ ಬರುವವರು ನಡೆದುಕೊಂಡೇ ಬರುವಂತೆ ಸೂಚಿಸಲಾಗಿದೆ. ಕಳೆದ ವರ್ಷದ ಲಾಕ್‍ಡೌನ್ ಅವಧಿಯಲ್ಲಿ ಬಾರ್

ರಾಜ್ಯಾದ್ಯಂತ ಲಾಕ್‍ಡೌನ್ ಇದ್ದರೂ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಅದೇನೆಂದರೆ…‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋಮವಾರದಿಂದ 14 ದಿನಗಳ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ➤ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ‌ಕೈಗೊಂಡಿರುವ ರಾಜ್ಯ ಸರಕಾರವು ಮೇ 10 ಸೋಮವಾರದಿಂದ 14 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿರುವ ಸಿಎಂ ಯಡಿಯೂರಪ್ಪ, ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಶಾಲೆ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರೈಲು ಮತ್ತು ವಿಮಾನ ಯಾನ ಸೇವೆ ಯಥಾಸ್ಥಿತಿ ಇರಲಿದ್ದು, ಹೊಟೇಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ

ಸೋಮವಾರದಿಂದ 14 ದಿನಗಳ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ➤ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆತೂರು: ರಂಝಾನ್ ಕಿಟ್ ವಿತರಣೆ

(ನ್ಯೂಸ್ ಕಡಬ) Newskadaba.com ಆತೂರು, ಮೇ. 07. ಆತೂರು ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ವತಿಯಿಂದ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಇದರ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಅಧ್ಯಾಪಕರ ವೃಂದದವರಿಗೆ ರಮಳಾನ್ ಕಿಟ್ ನೀಡಲಾಯಿತು. ಆತೂರು ಬದ್ರಿಯಾ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರೇಂಜ್ ಮ್ಯಾನೇಜ್ ಮೆಂಟ್ ಅಧ್ಯಕ್ಷರಾದ ಬಿ.ಕೆ.ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು. ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಕೆ.ಯಚ್.ಎಸ್.ಫಾಝಿಲ್ ಹನೀಫಿ ಪ್ರಾರ್ಥನೆಗೆ ನೇತೃತ್ವ ವಹಿಸಿದ್ದರು. ಮಜೀದ್ ದಾರಿಮಿ, ಮುನೀರ್ ಅನ್ವರಿ, ಇಬ್ರಾಹಿಂ ಕೌಸರಿ,

ಆತೂರು: ರಂಝಾನ್ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ಬೆಳಿಗ್ಗೆ 9 ಗಂಟೆಯ ನಂತರ ಪೇಟೆಗೆ ಬಂದವರಿಗೆ ಕಾದಿದೆ ಆಪತ್ತು ➤ ಕೊರೋನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿದಿಂದ ಕಠಿಣ ರೂಲ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ನಾಳೆಯಿಂದ (ಮೇ.07) ಜಾರಿಗೆ ಬರುವಂತೆ ಹೊಸ ಕಾನೂನನ್ನು ಹೊರತಂದಿದೆ. ನಾಳೆಯಿಂದ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, 1 0 ಗಂಟೆಯ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕಾಗಿದೆ. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೇ ಹೋಗಬೇಕಾಗಿದ್ದು, ವಾಹನಗಳಲ್ಲಿ ಬೇರೆ ಕಡೆ ಹೋದರೆ ವಾಹನಗಳನ್ನು ಸೀಜ್ ಮಾಡುವಂತೆ

ನಾಳೆಯಿಂದ ಬೆಳಿಗ್ಗೆ 9 ಗಂಟೆಯ ನಂತರ ಪೇಟೆಗೆ ಬಂದವರಿಗೆ ಕಾದಿದೆ ಆಪತ್ತು ➤ ಕೊರೋನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿದಿಂದ ಕಠಿಣ ರೂಲ್ಸ್ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.05. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದು ದಿನದಲ್ಲಿ 50112 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 346 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ಕೊರೋನಾ ಎರಡನೇ ಅಲೆಯು ಭೀಕರವಾಗಿದ್ದು, ಮನೆಯಿಂದ ಹೊರಬರದೆ ಇದ್ದರೆ ಮಾತ್ರ ಸೋಂಕು ಮುಕ್ತರಾಗಿ ಇರಬಹುದಾಗಿದೆ.    

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮೇ.05. ಕೊರೋನಾದಿಂದಾ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ಇದೀಗ ಮತ್ತೆ ಸದ್ದು ಮಾಡಿದೆ. ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ಪರ ವಕೀಲರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದು, ಈ ಬಗ್ಗೆ ತನಿಖಾಧಿಕಾರಿಗೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಕೇಸ್ ಹಿಂಪಡೆದರೆ ಕೋಟ್ಯಾಂತರ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.      

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಮೇಳೈಸುತ್ತಿರುವ ಹಿನ್ನೆಲೆ ➤ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ | ಪ್ರಥಮ ಪಿಯು ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.03. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೇ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.    

ರಾಜ್ಯದಲ್ಲಿ ಕೊರೋನಾ ಮೇಳೈಸುತ್ತಿರುವ ಹಿನ್ನೆಲೆ ➤ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ | ಪ್ರಥಮ ಪಿಯು ಪರೀಕ್ಷೆ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಲೈಮ್ಯಾಕ್ಸ್ ಗೆ ತೆರೆ ಎಳೆದ ಅಂಗಡಿ ➤ ರೋಚಕ ಕದನದಲ್ಲಿ ಮಂಗಳಾ ಅಂಗಡಿ ಜಯಭೇರಿ

ಬೆಳಗ್ಗೆಯಿಂದಲೂ ರೋಚಕತೆಯನ್ನು ಸೃಷ್ಟಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಗೆಲುವಿನ ನಗೆ ಬೀರಿದ್ದಾರೆ. ಮಾಜಿ ಸಂಸದ ದಿ. ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಅವರ ಪತ್ನಿ ಮಂಗಳಾ ಅಂಗಡಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್ ನ ಸತೀಶ್ ಜಾರಕೀಹೊಳಿಯವರ ವಿರುದ್ಧ ಜಯ ಸಾಧಿಸಿದ್ದಾರೆ. ಈ ಮೂಲಕ ಬೆಳಗ್ಗಿನಿಂದ ನಡೆಯುತ್ತಿದ್ದ ರೋಚಕ ಕದನಕ್ಕೆ ಅಂತಿಮ ತೆರೆ ಬಿದ್ದಿದೆ.      

ಕ್ಲೈಮ್ಯಾಕ್ಸ್ ಗೆ ತೆರೆ ಎಳೆದ ಅಂಗಡಿ ➤ ರೋಚಕ ಕದನದಲ್ಲಿ ಮಂಗಳಾ ಅಂಗಡಿ ಜಯಭೇರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top